Author: Prajatv Kannada

ಸಿಡ್ನಿ: ಭಾರತೀಯ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಮಾಜಿ ಪ್ರಿಯಕರ ಕೈಕಾಲು ಕಟ್ಟಿ ಜೀವಂತ ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆಸ್ಟ್ರೇಲಿಯಾ ನ್ಯಾಯಾಲಯ ನಡೆಸಿದ್ದು, ʼಸೇಡಿನ ಹಿನ್ನಲೆಯಲ್ಲಿʼ ಯುವತಿಯನ್ನು ಹತ್ಯೆಗೈದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. 2021ರ ಮಾರ್ಚ್‌ ತಿಂಗಳಲ್ಲಿ 21 ವರ್ಷದ ಜಾಸ್ಮೀನ್ ಕೌರ್ ಎಂಬ ಯುವತಿಯನ್ನು ಆಕೆಯ ಮಾಜಿ ಗೆಳೆಯ ತಾರಿಕ್‌ ಜೋತ್‌ ಸಿಂಗ್‌ ಅಪಹರಿಸಿದ್ದ. ಬಳಿಕ ಆಕೆಯನ್ನು ಕೇಬಲ್‌ಗಳಿಂದ ಕಟ್ಟಿ, ಗುಂಡಿ ತೋಡಿ ಜೀವಂತ ಸಮಾಧಿ ಮಾಡಿದ್ದ. ತನ್ನೊಂದಿಗೆ ಸಂಬಂಧ ಕಡಿದುಕೊಂಡಿರುವ ದ್ವೇಷದಲ್ಲಿ ಆರೋಪಿ ಈ ಬರ್ಬರ ಕೃತ್ಯ ಎಸಗಿದ್ದ ಎಂದು ಪ್ರಾಸಿಕ್ಯೂಟರ್‌ ಕಾರ್ಮೆನ್ ಮ್ಯಾಟಿಯೊ ಹೇಳಿದ್ದಾರೆ. ಸಂತ್ರಸ್ತ ಯುವತಿ ಹಾಗೂ ಆರೋಪಿಯ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದ್ದ ಹಿನ್ನೆಲೆಯಲ್ಲಿ ಯುವತಿ ಆತನಿಂದ ದೂರವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ತಾರಿಕ್‌ ಜೋತ್‌ ಸಿಂಗ್ ಆಕೆಯನ್ನು ಅಪಹರಿಸಿ ಕೊಂದಿದ್ದಾನೆ ಎಂದು ಪ್ರಾಸಿಕ್ಯೂಟರ್‌ ತಿಳಿಸಿದ್ದಾರೆ. ಕೌರ್‌ ಳನ್ನು ಆಕೆಯ ಕೆಲಸದ ಸ್ಥಳದಿಂದ ಅಪಹರಿಸಿದ್ದ ಹಂತಕ, ಕಾರಿನ ಬೂಟಿನಲ್ಲಿ ಆಕೆಯನ್ನು ಕಟ್ಟಿ ಹಾಕಿ…

Read More

ಭೋಪಾಲ್: ಆದಿವಾಸಿ ಸಮುದಾಯದ (Tribal Community Man) ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ (MP Urination Case) ತೀವ್ರ ಖಂಡನೆ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಅವರು ಸಂತ್ರಸ್ತನ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಭೋಪಾಲ್‌ನ ತಮ್ಮ ನಿವಾಸಕ್ಕೆ ಸಂತ್ರಸ್ತನನ್ನು ಕರೆದು ಆತನ ಕಾಲು ತೊಳೆದು, ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ.  ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ವೀಡಿಯೋ ನೋಡಿ ನನಗೆ ನೋವಾಯಿತು. ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಂತ್ರಸ್ತ ದಶಮತ್‌ ರಾವತ್‌ ಬಳಿ ಕ್ಷಮೆಯಾಚಿಸಿದ್ದಾರೆ. ಪ್ರವೇಶ್‌ ಶುಕ್ಲಾ ಎಂಬಾತ ಬುಡಕಟ್ಟು ಸಮುದಾಯದ ರಾವತ್‌ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನ ಅಕ್ರಮ ಕಟ್ಟಡವನ್ನು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್‌ ಮೂಲಕ ನೆಲಸಮಗೊಳಿಸುವ ಕ್ರಮಕೈಗೊಂಡಿತು.

Read More

ನವದೆಹಲಿ ;– NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳುವ ಮೂಲಕ ಭಿನ್ನಮತಿಯರ ವಿರುದ್ಧ ಶರದ್ ಪವಾರ್ ಗುಡುಗಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿರುವ ಶರದ್ ಪವಾರ್, ನಮ್ಮದೇ ನಿಜವಾದ ಎನ್ ಸಿ ಪಿ. ನಾನೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿದ್ದಾರಲ್ಲದೆ ಬಂಡಾಯ ಸಾರಿರುವ ಅಜಿತ್ ಪವಾರ್ ಸೇರಿದಂತೆ ಭಿನ್ನಮತಿಯರ ವಿರುದ್ಧ ಗುಡುಗಿದ್ದಾರೆ. ಅಜಿತ್ ಪವಾರ್ ಹಾಗೂ ಅವರ ಜೊತೆ ಕೈಜೋಡಿಸಿರುವ 8 ಬಂಡಾಯ ಶಾಸಕರು ಮತ್ತು ಇಬ್ಬರು ಸಂಸದರನ್ನು ಪಕ್ಷದಿಂದ ವಜಾಗೊಳಿಸಲಾಗಿದ್ದು, ಅಜಿತ್ ಬಂಡಾಯದ ವಿರುದ್ಧ ಕಾನೂನು ಹೋರಾಟ ನಡೆಸುವುದರ ಜೊತೆಗೆ ಚುನಾವಣಾ ಆಯೋಗಕ್ಕೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದ ನಂತರ ಎನ್ ಸಿ ಪಿ ಗೆ ನಾಯಕ ಯಾರೆಂಬ ಕುರಿತು ಪೈಪೋಟಿ ನಡೆದಿದೆ. ಪಕ್ಷದ ಈ ರಾಜಕಾರಣ ಈಗ ರಾಷ್ಟ್ರ ರಾಜಧಾನಿಯನ್ನು ತಲುಪಿದ್ದು, ಹಿರಿಯ ನಾಯಕ ಶರದ್ ಪವಾರ್ ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಿದ್ದಾರೆ.

Read More

ಲಕ್ನೋ: ಇಟ್ಟಿಗೆಯಿಂದ (Bricks) ಜಜ್ಜಿ ಗರ್ಭಿಣಿ (Pregnant) ಹತ್ಯೆಗೈದ ಘಟನೆ ಉತ್ತರಪ್ರದೇಶದ (Uttara Pradesh) ಮೀರತ್‌ನಲ್ಲಿ (Meerut) ನಡೆದಿದ್ದು, ಕೊಲೆಯಲ್ಲಿ (Murder) ಭಾಗಿಯಾದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಂಬಿರಿ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಗಳಾದ ಮಹಿಳೆಯ ಪ್ರಿಯಕರ ಆದೇಶ್ ಮತ್ತು ಆತನ ಗೆಳೆಯರಾದ ದೀಪಕ್, ಆರ್ಯನ್, ಸಂದೀಪ್ ಮತ್ತು ರೋಹಿತ್‌ನನ್ನು ಬಂಧಿಸಲಾಗಿದೆ. ರಾಂಬಿರಿ 2015ರಲ್ಲಿ ವಿನೋದ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಒಂದು ವರ್ಷದ ಬಳಿಕ ರಾಂಬಿರಿ ಆಕೆಯ ಗಂಡನಿಂದ ಬೇರೆಯಾಗಿ ತನ್ನ ತಂದೆಯ ಮನೆಯಲ್ಲಿ ವಾಸವಿದ್ದಳು. ಬಳಿಕ ಆದೇಶ್ ಎಂಬಾತನ ಪರಿಚಯವಾಗಿದ್ದು, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿದೆ. ರಾಂಬಿರಿ ಆದೇಶ್‌ನಿಂದ ಗರ್ಭವತಿಯಾದ ಬಳಿಕ ತನ್ನನ್ನು ಮದುವೆಯಾಗುವಂತೆ ಆದೇಶ್‌ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಆದೇಶ್ ಆಕೆಯನ್ನು ಕೊಲ್ಲುವಂತೆ ತನ್ನ ಸ್ನೇಹಿತರಿಗೆ ಹೇಳಿದ್ದಾನೆ. ಬಳಿಕ ಜೂನ್ 2ರಂದು ಆಕೆಗೆ ಕರೆ ಮಾಡಿ ತನ್ನ ಮನೆಗೆ ಬರುವಂತೆ ಆದೇಶ್ ಹೇಳಿದ್ದಾನೆ. ಆಕೆ ಮನೆಗೆ ಬಂದ ಬಳಿಕ ಆದೇಶ್ ಮತ್ತು ಆತನ ಸ್ನೇಹಿತರು ಸೇರಿಕೊಂಡು ಇಟ್ಟಿಗೆಯಿಂದ ಜಜ್ಜಿ ಹತ್ಯೆಗೈದು…

Read More

ಗುವಾಹಟಿ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ (Assam CM Himath Biswa) ಘೋಷಿಸಿದ್ದಾರೆ. ಜುಲೈ 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಲ್ಲಿ 60% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗಿಯರು ಮತ್ತು 75% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗರು ಈ ಉಚಿತ ಸ್ಕೂಟರ್ (Free Scooter) ಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದಿದ್ದಾರೆ. ಈ ಸಂಬಂಧ ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಪ್ರತಿಕ್ರಿಯಿಸಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸಲು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತ್ತಮ ಪ್ರವೇಶ ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಮತ್ತು ಪ್ರಾಂತೀಯ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ 167 ಕೋಟಿ ರೂ. ಮೀಸಲಿಡಲಾಗಿದೆ. ಇದಲ್ಲದೇ ಸೆಪ್ಟೆಂಬರ್‍ನಿಂದ…

Read More

ಗುಜರಾತ್ ;- ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮನವಿಗೆ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಹಿಂದಿನ ಸಂದರ್ಭದಲ್ಲಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದ ನ್ಯಾಯಾಲಯವು ಅವರ ಮನವಿಯನ್ನು ಪರಿಗಣನೆಯಲ್ಲಿ ಕಾಯ್ದಿರಿಸಿತ್ತು. ಒಂದು ವೇಳೆ ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದರೆ, ಅವರ ಅನರ್ಹತೆಯನ್ನು ರದ್ದುಗೊಳಿಸಬಹುದು. ಅವರ ಅಮಾನತಿಗೆ ತಡೆ ನೀಡದಿದ್ದರೆ, ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್‌ನ ಉನ್ನತ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವ ಆಯ್ಕೆಯನ್ನು ಹೊಂದಿರುತ್ತಾರೆ. ಪ್ರಸ್ತುತ, ರಾಹುಲ್ ಗಾಂಧಿ ಸಂಸತ್ ಸದಸ್ಯರಾಗಿ ಎರಡು ಮತ್ತು ಆರು ವರ್ಷಗಳ ಕಾಲ ಅಮಾನತುಗೊಂಡಿದ್ದಾರೆ.

Read More

ಗುರುಗಾಂವ್‍: ಮನೆಮುಂದೆ ಕಾರು ನಿಲ್ಲಿಸಿ ಜೋಡಿಯೊಂದು ಸೆಕ್ಸ್ ಮಾಡುತ್ತಿದ್ದು, ಅದನ್ನು ಪ್ರಶ್ನಿಸಿದ ಮಹಿಳೆಯ ಜೊತೆಗೂ ಅನುಚಿತವಾಗಿ ವರ್ತಿಸಿದ ಘಟನೆ ಬುಧವಾರ ಬೆಳಗ್ಗೆ 5 ಗಂಟೆಗೆ ಹರ್ಯಾಣದ ಗುರುಗಾಂವ್‍ನಲ್ಲಿ ನಡೆದಿದೆ. ಮಹಿಳೆಯೊಬ್ಬರು ಯಾರೆಂದು ನೋಡಲು ಮನೆಯಿಂದ ಹೊರಗೆ ಬಂದಿದ್ದರು. ಆಗ ಮನೆಮುಂದೆಯೇ ಕಾರು ನಿಲ್ಲಿಸಿ ಒಂದು ಜೋಡಿ ಕಾರಿನಲ್ಲಿ ಸೆಕ್ಸ್ ಮಾಡುತ್ತಿದ್ದರು. ಕಾರಿನಲ್ಲಿ ಪಕ್ಕದ್ಮನೆಯ 26 ವರ್ಷದ ಯುವತಿ ಇದ್ದು, ಮಹಿಳೆ ಮೊದಲು ಆಕೆಯನ್ನು ಗುರುತಿಸಲಿಲ್ಲ. ನಂತರ ಅವರ ಹತ್ತಿರ ಹೋಗಿ ಅವರ ಹೆಸರನ್ನು ಕೇಳಿದ್ದಾರೆ. ಆದರೆ ಈ ಜೋಡಿ 52 ವರ್ಷದ ಮಹಿಳೆಯನ್ನು ನಿರ್ಲಕ್ಷಿಸಿದ್ದರು. ಜೋಡಿ ಯಾವುದೇ ಪ್ರತಿಕ್ರಿಯೇ ನೀಡದೇ ಇದ್ದಾಗ ಮಹಿಳೆ ಮತ್ತೆ ಅವರ ಹೆಸರನ್ನು ಕೇಳಿದ್ದಾರೆ. ಆಗ ಜೋಡಿ ಮಹಿಳೆಯನ್ನು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ನೀನು ನಮ್ಮ ಜೊತೆ ಸೇರಿಕೋ. ನೀನು ನಮ್ಮ ಜೊತೆ ಸೇರಿ ಮಜಾ ಮಾಡು ಎಂದು ಯುವಕ ಆಕೆಯ ಕೈ ಹಿಡಿದು, ದುಪ್ಪಟ್ಟಾ ಎಳೆದಾಡಿದ್ದಾನೆ. ಯುವಕ ಕೈ ಹಿಡಿಯುತ್ತಿದ್ದಂತೆ ಮಹಿಳೆ ಜೋರಾಗಿ ಕಿರುಚಿ ಅಕ್ಕಪಕ್ಕದ ಮನೆಯವರನ್ನು…

Read More

ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎಂದು ಹೇಳಲು ನನಗೆ ಹೆಮ್ಮೆಯಿದೆ. ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್‌ರವರೆಗೆ ಈ ನಮ್ಮ ನಾಡಿನಲ್ಲಿ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ತೇರನ್ನು ಜೊತೆಜೊತೆಗೇ ಎಳೆಯಲಾಗಿದೆ. ಈ ಘನ ಪರಂಪರೆಯನ್ನು ನಾನು ಎಂದಿನಂತೆ ಈ ಬಾರಿಯೂ ಮುಂದುವರೆಸಲು ಶ್ರಮಿಸಿದ್ದೇನೆ. ಇದು ನಾನು ಮಂಡಿಸುತ್ತಿರುವ ಹದಿನಾಲ್ಕನೆಯ ಆಯವ್ಯಯ ಪತ್ರ. ಮುಖ್ಯಮಂತ್ರಿಯಾಗಿ, ವಿತ್ತೀಯ ಹೊಣೆಯನ್ನು ಹೊತ್ತು ಮಂಡಿಸುತ್ತಿರುವ ಏಳನೆಯ ಬಜೆಟ್‌. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆರು ಆಯವ್ಯಯ ಪತ್ರಗಳನ್ನು ಮಂಡಿಸಿದ್ದೆ. ನನ್ನ ಇಷ್ಟೂ ಆಯವ್ಯಯ ಪತ್ರಗಳ ಹಿಂದೆ ಯಾವ ಕಲ್ಯಾಣ ರಾಜ್ಯದ ಕನಸನ್ನು ಸಾಕಾರಗೊಳಿಸಲು ಈ ನಾಡಿನ ಶ್ರೇಷ್ಠ ಮನಸ್ಸುಗಳು ಬಯಸಿದ್ದವೋ ಅದನ್ನು ಈಡೇರಿಸಲೇಬೇಕೆನ್ನುವ ಉದ್ದೇಶ, ಬದ್ಧತೆಗಳು ಸ್ಪಷ್ಟವಾಗಿವೆ. ನಮ್ಮ ಪಕ್ಷದ ಧ್ಯೇಯೋದ್ದೇಶವೂ ಸಹ ಇದುವೇ ಆಗಿದೆ. ನನ್ನ ಹಿಂದಿನ ಎಲ್ಲ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಶೃಂಗೇರಿ ಕೊಪ್ಪ ತೀರ್ಥಹಳ್ಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತುಂಗಾ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಬತ್ತಿ ಹೋಗಿದ್ದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲೂ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಹೊಳ ಹರಿವು ಹೆಚ್ಚ ತೊಡಗಿದೆ. ಮಳೆಯಿಂದಾಗಿ ಜೋಗ ಜಲಪಾತದಜ ಸೌಂದರ್ಯ ಕಳೆಕಟ್ಟಿದೆ. ಮಲೆನಾಡಿನಲ್ಲಿ ವರುಣನ ಅಬ್ಬರ ಜೋರಾಗಿದೆ. ತೀರ್ಥಹಳ್ಳಿ ಹೊಸನಗರ ಸಾಗಲ ಸೊರಬ ಶಿಕಾರಿಪುರ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆಯಾಂದಾಗಿ ಜಿಲ್ಲೆಯ ಕಿರಿದಾದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು ಡ್ಯಾಂ ನ ಎರಡು ಕ್ರೆಸ್ಟ್ ಗೇಟ್ ಗಳಿಂದ 7500 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಬತ್ತಿ ಬರಿದಾಗಿದ್ದ ತುಂಗಾ ನದಿಗೆ ಹೊಸ ನೀರು ಹರಿದು ಬರುತ್ತಿದ್ದು, ಪಾಚಿಗಟ್ಟಿದ್ದ ತುಂಗಾ ನದಿ ಶುದ್ದವಾಗಿ ಹರಿಯುವಂತಾಗಿದೆ. ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಲಿಂಗನಮಕ್ಕಿಂ ಡ್ಯಾಂ ಒಂದೇ ದಿನದಲ್ಲಿ ಒಂದುವರೆ ಅಡಿ  ನೀರು…

Read More

ಮಂಡ್ಯ :- ಮದ್ದೂರು ರೋಟರಿ ಸಂಸ್ಥೆಯ 2023 – 24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಂ.ಸಿ ಶಶಿಗೌಡ, ಕಾರ್ಯದರ್ಶಿಯಾಗಿ ಹೆಚ್.ಪಿ ಚನ್ನಂಕೆಗೌಡ ಬುಧವಾರ ಅಧಿಕಾರ ಸ್ವೀಕರಿಸಿದರು. ಮದ್ದೂರು ಪಟ್ಟಣದ ಬಿಂದಾಸ್ ಪಾರ್ಟಿ ಹಾಲ್ ನಲ್ಲಿ ಬುಧವಾರ ಮದ್ದೂರು ರೋಟರಿಯ 2023 – 24ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ರೋ. ಶಶಿಗೌಡ, ಕಾರ್ಯದರ್ಶಿಯಾಗಿ ರೋ.ಹೆಚ್.ಪಿ.ಚನ್ನಂಕೆಗೌಡ, ಖಜಾಂಚಿಯಾಗಿ ಹರೀಶ್ ಬಾಬು ಆಯ್ಕೆಗೊಂಡರು. ಅಧಿಕಾರ ಸ್ವೀಕಾರ ಮಾಡಿದ ನಂತರ ಕಾರ್ಯಕ್ರಮ ಉದ್ದೇಶಿಸಿ ನೂತನ ಅಧ್ಯಕ್ಷ ಶಶಿಗೌಡ ಮಾತನಾಡಿ, ರೋಟರಿ ಸಂಸ್ಥೆಯು ವಿಶ್ವಾದಾಧ್ಯಂತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಟ್ಟ ಕಡೆಯ ವ್ಯಕ್ತಿಗೂ ಅನುಕೂಲ ಕಲ್ಪಿಸುವ ಸೇವೆ ಮಾಡುತ್ತಿದೆ. ಸಂಸ್ಥೆಯೂ ನನ್ನ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮೆಚ್ಚಿ ನನಗೆ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಒಂದು ವರ್ಷಗಳ ಅವಧಿಗೆ ತಾವು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಪರಿಸರ…

Read More