ತುಮಕೂರು ;- ಬಡ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಂಪನಿ ಪಂಗನಾಮ ಹಾಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಗುಬ್ಬಿ ಗೇಟ್ ಬಳಿ ಇರುವ ಕೇಸರಿ ಟೆಕ್ಸ್ ಗಾರ್ಮೆಂಟ್ಸ್ ಕಂಪನಿಯು ಬಡ ಕಾರ್ಮಿಕರು, ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ಸಂಬಳ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಹೀಗಾಗಿ ಸಂಬಳ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ದ ರೊಚ್ಚಿಗೆದ್ದ ನೌಕರರು ಕಂಪನಿ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಸುಮಾರು 130ರಿಂದ 150 ಮಂದಿ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್ ಕಂಪನಿ ಇದಾಗಿದೆ. ಆದ್ರೆ, ಕಳೆದ ಮೂರು ತಿಂಗಳಿನಿಂದ ನೌಕರರಿಗೆ ಸಂಬಳ ನೀಡಿಲ್ಲ. ಒಬ್ಬೊಬ್ಬರಿಗೆ ಅಂದಾಜು 40ರಿಂದ 50 ಸಾವಿರ ರೂಪಾಯಿ ಸಂಬಳ ಬಾಕಿ ಇರಿಸಿಕೊಂಡಿದೆ. ಈ ಕುರಿತು ಕೇಳಿದಾಗ ‘ನನ್ನನ್ನ ನಂಬಿ ನಿಮ್ಮ ಸಂಬಳ ಕೊಟ್ಟೇ ಕೊಡುತ್ತೇನೆ ಎಂದು ಮಾಲೀಕ ಪ್ರಕಾಶ್ ಹೇಳುತ್ತಿದ್ದನಂತೆ. ಮಾಲೀಕನನ್ನ ನಂಬಿ ಕೆಲಸ ಮಾಡಿದವರಿಗೆ ಇದೀಗ ಪಂಗನಾಮ ಹಾಕಿದ್ದು, ಈಗ ಸಂಬಳವನ್ನೂ ನೀಡದೇ, ಫೋನ್ ಕೂಡ ರಿಸೀವ್ ಮಾಡದೇ ತಲೆ ಮರೆಸಿಕೊಂಡಿದ್ದಾನೆ ಇನ್ನು ಈ ಕುರಿತು ಕಾರ್ಮಿಕ…
Author: Prajatv Kannada
ಶಿವಮೊಗ್ಗ: ಐದು ಗ್ಯಾರಂಟಿಗಳಿಗೆ ಜನರು ಮರಳಾಗಿಲ್ಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraja Bommai)ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮನ್ನಣೆ ಅಂತೂ ಕೊಟ್ಟಿದ್ದಾರೆ. ಈ ಐದು ಗ್ಯಾರಂಟಿಗಳ ಮೇಲೆ ಜನರು ಬಹಳ ನಂಬಿಕೆ ಇಟ್ಟಿದ್ದಾರೆ. ನಿಮ್ಮ ಪ್ರತಿ ಮಾತಿನ ಮೇಲೂ ರಾಜ್ಯದ ಜನರು ವಿಶ್ವಾಸವಿಟ್ಟಿದ್ದಾರೆ. ಮೊದಲ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಿ ಅನುಷ್ಠಾನ ಅಂದಿದ್ದರು. ಮೊದಲ ಸಂಪುಟದಲ್ಲೇ ತಾತ್ವಿಕವಾಗಿ ಒಪ್ಪಿಗೆ ಪಡೆದು ಜಾರಿ ಮಾಡಿದ್ದಾರೆ. ನಂತರ ಒಂದೊಂದೇ ಕಂಡಿಷನ್ ಹಾಕುತ್ತಾ ಬಂದರು. ಹೇಳಿದ್ದಕ್ಕೂ, ಅನುಷ್ಠಾನ ಮಾಡೋದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಗ್ಯಾರಂಟಿಗಳಿಂದ ಜನರ ಮೇಲೆ ಯಾವುದೇ ತೆರಿಗೆ ಹಾಕಬೇಡಿ ಎಂದರು.
ಮೈಸೂರು :ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆ ಮಾಡಿದೆ. ಅಧಿದೇವತೆ ಚಾಮುಂಡಿ ಸನ್ನಧಿಯಲ್ಲಿ ಮೂರನೇ ಆಷಾಢ ಶುಕ್ರವಾರದ ವಿಶೇಷ ಪುಜೆ ಪುರಸ್ಕಾರ ಮುಂಜಾನೆಯಿಂದಲೇ ಆರಂಭವಾಗಿದೆ. ಆಷಾಢದಲ್ಲಿ ಲಕ್ಷ್ಮೀ, ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ಚಾಮುಂಡೇಶ್ವರಿ ದೇವಿಗೂ ವಿಶೇಷ ಪೂಜೆ ನಡೆದಿದೆ. ಮೂರನೇ ಶುಕ್ರವಾರ ಹಿನ್ನಲೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಆಷಾಡ ಮಾಸದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಹರಿದು ಬರುತ್ತಿದ್ದಾರೆ.ಎಂದಿನಂತೆ ಮುಂಜಾನೆ 3.30 ಕ್ಕೆ ಪೂಜಾ ಕೈಂಕರ್ಯಗಳು ಆರಂಭವಾಗಿದ್ಷು,ಮಹಾ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರಗಳನ್ನು ಮಾಡಲಾಗಿದೆ. ಭಕ್ತರು ಸರತಿಸಾಲಿನಲ್ಲಿ ನಿಂತು ದೇವರ ದರ್ಶನ ಮಾಡುತ್ತಿದ್ಷಾರೆ.
ಚಿಕ್ಕಬಳ್ಳಾಫುರ: ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ (CN Ashwath Narayan) ಅವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಫೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ವಿವಿಗಳಲ್ಲಿ ಮೂಲಭೂತ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕ್ಕೆ ಆಗ್ರಹ ಮಾಡಿದ್ದೇನೆ ಎಂದು ಹೇಳಿದ್ದಾರೆ. ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ ಎಂದು ಮೊಯ್ಲಿ ಕಿಡಿ ಕಾರಿದ್ದಾರೆ. ವಿಧಾನಮಂಡಲ ಅಧಿವೇಶನ ನಂತರ ನಿಗಮ ಮಂಡಳಿಗಳ ನೇಮಕ ಆಗಲಿದೆ. ಪಕ್ಷಕ್ಕೆ…
ಬಾಗಲಕೋಟೆ: ದೂರು ಕೊಡಲು ಗುಬ್ಬಚ್ಚಿ (sparrow) ಮರಿಯೊಂದು ಪೊಲೀಸ್ ಸ್ಟೇಷನ್ ಗೆ ಬಂದ ಅಪರೂಪದ ಘಟನೆ ಬಾಗಲಕೋಟೆ ನವನಗರದ ಟ್ರಾಫಿಕ್ ಸ್ಟೇಷನ್ (traffic police station) ನಲ್ಲಿ ನಡೆದಿದೆ. ನೇರವಾಗಿ ಪೊಲೀಸ್ ಠಾಣೆ ಒಳಗೆ ಬಂದು, ಸಿನಿಯರ್ ಹೆಡ್ ಕಾನ್ಸ್‌ಟೇಬಲ್ ಟೇಬಲ್ ಬಳಿ ಗುಬ್ಬಚ್ಚಿ ಮರಿ ಬಂದು ಕುಳಿತಿತ್ತು. ಆ ವೇಳೆ ಮಹಿಳಾ ಕಾನ್ಸ್‌ಟೇಬಲ್ ಗುಬ್ಬಿ ಮರಿ ಜೊತೆ ಕ್ಯೂಟ್ ಆಗಿ ಮಾತಾಡಿದರು. ಯಾರ ಮೇಲೆ ದೂರು ಕೊಡಲು ಬಂದಿದ್ದೀಯಾ ಎಂದು ಪೊಲೀಸ್ ಹೆಡ್ಡ್ ಕಾನ್ಸ್‌ಟೇಬಲ್ ಗುಬ್ಬಚ್ಚಿ ಮರಿಗೆ ಪ್ರಶ್ನೆಮಾಡಿದರು. ಒಂದು ಗಂಟೆ ಕಾಲ ಪೊಲೀಸ್ ಠಾಣೆಯಲ್ಲಿ ಕುಳಿತಿದ್ದ ಗುಬ್ಬಚ್ಚಿ ಮರಿ ಅಲ್ಲಿಂದ ಪುರ್ ಅಂತಾ ಹೊರಗೆ ಹಾರಿಹೋಯಿತು. ಠಾಣೆಗೆ ಬಂದ ಗುಬ್ಬಚ್ಚಿ ಮರಿ ಕಂಡು ಪೊಲೀಸರು ಅಚ್ಚರಿ ವ್ಯಕ್ತಪಡಿಸಿದರು.
ಮೈಸೂರು : ನಾಗಮಂಗಲದಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಜಾಗೊಳಿಸುವಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರ್ಕಾರ ಬಂದು ಒಂದು ತಿಂಗಳಾಗುವಷ್ಟರಲ್ಲೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕೂಡಲೇ ಸಚಿವ ಚಲುವರಾಯಸ್ವಾಮಿಯನ್ನು ವಜಾ ಮಾಡಿ, ಪ್ರಕರಣದ ತನಿಖೆ ಮಾಡುವಂತೆ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮಂತ್ರಿಗಳು ಹದ್ದುಬಸ್ತಿನಲ್ಲಿ ಕೆಲಸ ಮಾಡುವಂತೆ ಮಾಡಿ, ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಒಂದು ವರ್ಗಾವಣೆ ಮಾಡಿಲ್ಲ. ರಾಜ್ಯದಲ್ಲಿ ಎಲ್ಲಾ ಕಡೆ ದ್ವೇಷದ ರಾಜಕಾರಣ ಶುರುವಾಗಿಬಿಟ್ಟಿದೆ. ಕಾಂಗ್ರೆಸ್ ಶಾಸಕರ ಹಣೆ ಬರಹ ಏನಾಗಿದೆ ಅಂತಲೂ ಗೊತ್ತು. ಹಣ ಕೊಡದಿದ್ದರೇ ಅವರ ಕೆಲಸವೂ ಆಗುತ್ತಿಲ್ಲ. ದುಡ್ಡು ಬೇಕಾದರೆ ಮಾಡಿಕೊಳ್ಳಲಿ, ಜೀವದ ಜೊತೆ ಚೆಲ್ಲಾಟವಾಡುವುದು ಬೇಡ ಸದನದಲ್ಲಿ ಇದೇ ವಿಚಾರ ಇಟ್ಟು ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದುಡ್ಡು ತೆಗೆದುಕೊಂಡು ವರ್ಗಾವಣೆ ಅವರ ಛಾಳಿ, ಅದು ಅವರ ಹಣೆಬರಹ. ಆದರೆ, ರಾಜಕೀಯ ಕಾರಣಕ್ಕಾಗಿ ಈ…
ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಬಂಜಾರ ಸಮುದಾಯದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೆ ದೊಡ್ಡ ಹುದ್ದೆಯೊಂದು ಹುಡುಕಿಕೊಂಡು ಬಂದಿದೆ. ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಮೂರು ಬಾರಿಯ ಶಾಸಕ ರುದ್ರಪ್ಪ ಲಮಾಣಿ ಈಗ ವಿಧಾನಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬ್ಯಾಡಗಿಯಿಂದ ಒಂದು ಬಾರಿ, ಹಾವೇರಿಯಿಂದ ಎರಡು ಬಾರಿ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಜವಳಿ ಹಾಗೂ ಮುಜರಾಯಿ ಖಾತೆ ಸಚಿವರಾಗಿದ್ದರು. ಜೂನ್ 01, 1959ರಂದು ಜನಿಸಿರುವ ರುದ್ರಪ್ಪ ಲಮಾಣಿ ಬಿಎ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. 1980ರಲ್ಲಿ ರಾಜಕೀಯಕ್ಕೆ ಧುಮುಕಿದ ರುದ್ರಪ್ಪ ಮಾನಪ್ಪ ಲಮಾಣಿ, 1985 ರಿಂದ 89ರವರೆಗೆ ಜಿಲ್ಲಾ ಪರಿಷತ್‌ನ ಸದಸ್ಯರಾಗಿ ಆಯ್ಕೆಯಾಗಿದ್ದರು. 1990 ರಿಂದ 1994ರವರೆಗೂ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿ ದುಡಿದ ರುದ್ರಪ್ಪ 1994ರಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ ಅದೃಷ್ಟದ ಪರೀಕ್ಷೆಗೆ ಇಳಿದಿದ್ದರು. ಆದರೆ, ತಾವೂ ಸ್ಪರ್ಧಿಸಿದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ರುದ್ರಪ್ಪ ಲಮಾಣಿಗೆ ಸೋಲಾಯಿತು. 1999ರಲ್ಲಿ ಮತ್ತೆ ಬ್ಯಾಡಗಿ ಕ್ಷೇತ್ರದಲ್ಲಿ ಸ್ಪರ್ಧಿಸಿದ…
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾರವಾರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ(Friday is a holiday for schools and colleges) ಘೋಷಿಸಲಾಗಿದೆ. ಸತತ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರೆಯುವ ಸೂಚನೆ ಇದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಹೊನ್ನಾವರ, ಅಂಕೋಲ ಮತ್ತು ಭಟ್ಕಳ ತಾಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭು ಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಎಸ್ ಸಿ,ಘಟಕದ ವತಿಯಿಂದ ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭಾರತದ ಮಾಜಿ ಉಪ ಪ್ರಧಾನಿ ಹಸಿರು ಕ್ರಾಂತಿ ಹರಿಕಾರ ದಿ. ಡಾ. ಬಾಬು ಜಗಜೀವನ ರಾಮ್ ಅವರ ಪರಿ ನಿರ್ವಾಣ ದಿನವಾದ ಮಹಾನಗರ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಸದಾನಂದ ಡಂಗನವರ, ಜಿಲ್ಲಾಧ್ಯಕ್ಷರಾದ ಬಸವರಾಜ ಬೆಣಕಲ್, ಬ್ಲಾಕ್ ಅಧ್ಯಕ್ಷರುಗಳಾದ ಮಹೇಶ್ ಹಂಜಗಿ, ಸುರೇಶ್ ದಿಡ್ಡಿಮನಿ, ಅನಿಲ್ ಬುನಿಯನ್ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು. ಜೊತೆಗೆ ಅನುದಾನ ವಿಚಾರವಾಗಿ 8 ತಿಂಗಳು ಶಾಸಕರು ಸಹಕಾರ ನೀಡಬೇಕು ಎಂದು ಸಿಎಂ ಕಿವಿಮಾತು ಹೇಳಿದರು.