ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಟೀಸರ್ ಇಂದು ಮುಂಜಾನೆ ರಿಲೀಸ್ ಆಗಿದೆ. ರಗಡ್ ಲುಕ್‌ನಲ್ಲಿ ಪ್ರಭಾಸ್ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪಾತ್ರ ಕೂಡ ಗಮನ ಸೆಳೆದಿದೆ. ಚಿತ್ರದಲ್ಲಿ ಬರುವ ಸೆಟ್ಗಳು ‘ಕೆಜಿಎಫ್’ ಸಿನಿಮಾವನ್ನು ನೆನೆಪಿಸುವಂತಿದೆ. ಮೇಕಿಂಗ್, ಮ್ಯೂಸಿಕ್ ಸಹ ಭರ್ಜರಿಯಾಗಿದೆ. ಟೀಸರ್‌ನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಲುಕ್ ನೋಡುಗರಿಗೆ ರಸದೌತಣವನ್ನು ನೀಡಿದೆ. ಈ ಸಿನಿಮಾವು ಒಂದು ಭರ್ಜರಿ ಆಕ್ಷನ್ ಎಂಟರ್‌ಟೇನರ್ ಆಗಿರಲಿದೆ ಎಂಬುದಕ್ಕೆ ಬಿಡುಗಡೆಯಾಗಿರುವ ಟೀಸರ್ ಸಾಕ್ಷಿಯಾಗಿದೆ ಸಲಾರ್’ ಎರಡು ಭಾಗದಲ್ಲಿ ರಿಲೀಸ್ ಆಗಲಿದೆ ಎಂಬುದು ಈ ಮೊದಲೇ ಸುದ್ದಿ ಆಗಿತ್ತು. ಇದೀಗ ಅದು ಟೀಸರ್‌ನಲ್ಲಿ ಖಚಿತವಾಗಿದೆ. ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವ ವಿಚಾರವನ್ನು ತಂಡದವರು ಖಚಿತಪಡಿಸಿದ್ದಾರೆ. ಈ ಮೂಲಕ ದೊಡ್ಡ ಸೀಕ್ರೆಟ್ ರಿವೀಲ್ ಆಗಿದೆ. ಮೊದಲ ಪಾರ್ಟ್ಗೆ ‘ಸಲಾರ್: ಸೀಸ್ಫೈರ್’ ಎಂದು ಹೆಸರು ಇಡಲಾಗಿದೆ. ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದಾರೆ. ಶ್ರುತಿ ಹಾಸನ್…
Author: Prajatv Kannada
ಪ್ರಭಾಸ್ ನಟನೆಯ, ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದ ಮೊದಲ ಟೀಸರ್ ಇಂದು ಬೆಳಗ್ಗೆ ರಿಲೀಸ್ ಆಗಿದ್ದು ಟೀಸರ್ ನೋಡಿದ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ. ಸದ್ಯ ಬಿಡುಗಡೆ ಆಗಿರುವ 1.46 ನಿಮಿಷಗಳ ಟೀಸರ್‌ನಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಬಾಲಿವುಡ್‌ನ ಹಿರಿಯ ನಟ ಟಿನು ಆನಂದ್ ಅವರನ್ನು ಮಾತ್ರವೇ ಹೈಲೈಟ್ ಮಾಡಲಾಗಿದ್ದು, ಇಂದೊಂದು ಭರ್ಜರಿ ಆ್ಯಕ್ಷನ್ ಎಂಟರ್‌ಟೇನರ್ ಆಗಿರಲಿದೆ ಎಂಬುದಕ್ಕೆ ಈ ಟೀಸರ್ ಸಾಕ್ಷಿಯಾಗಿದೆ. ‘ಸಲಾರ್’ ಸಿನಿಮಾ ಆರಂಭವಾದಾಗಿನಿಂದಲೂ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಇದುವರೆಗೂ ಚಿತ್ರತಂಡ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಇದೀಗ ರಿಲೀಸ್ ಆಗಿರುವ ಟೀಸರ್‌ನಲ್ಲಿ ಆ ಕುತೂಹಲಕ್ಕೆ ತೆರೆಬಿದ್ದಿದೆ. ಸೆಪ್ಟೆಂಬರ್ 28ರಂದು ‘ಸಲಾರ್’ ಚಿತ್ರದ ಮೊದಲ ಭಾಗ ತೆರೆಗೆ ಬರಲಿದ್ದು, ಸದ್ಯ ಆಗಲಿರುವ ಭಾಗ 1ಕ್ಕೆ ‘ಕದನವಿರಾಮ’ ಎಂದು ಹೆಸರು ಇಡಲಾಗಿದೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ‘ಕೆಜಿಎಫ್’ ಸಿನಿಮಾದ ಜತೆಗೆ ‘ಸಲಾರ್’ಗೆ…
ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ನಟ ನಿಖಿಲ್ ಕುಮಾರಸ್ವಾಮಿ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಚುನಾವಣೆ ಆರಂಭಕ್ಕೂ ಮುನ್ನ ನಿಖಿಲ್ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆದರೆ ಎರಡು ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ತಮ್ಮನ್ನು ಸಂಪೂರ್ಣವಾಗಿ ಪಕ್ಷ ಸಂಘಟಿಸಲು ನಿಯೋಜಿಸಿಕೊಂಡಿದ್ದು ನಿಖಿಲ್ ಇದೀಗ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ. 2021ರಲ್ಲಿ ತೆರೆಕಂಡ ರೈಡರ್ ಸಿನಿಮಾದ ಬಳಿಕ ನಿಖಿಲ್ ಯಾವುದೇ ಸಿನಿಮಾಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಆದರೆ ಧನುಷ್ ಹಾಗೂ ಯದುವೀರ ಹೆಸರಿನ ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಇದೀಗ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ನಿಖಿಲ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆ ಮುಗಿದಿದ್ದು ಚಿತ್ರದಲ್ಲಿ ನಟಿಸಲು ನಿಖಿಲ್ ಗ್ರೀನ್…
ಬೆಂಗಳೂರು ;- ಮಹದೇವಪುರ ವಲಯ ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರು ವಿವಿಧ ಜಾತಿಯ 15 ಸಸಿಗಳನ್ನು ನೆಟ್ಟು, ಅದನ್ನು ಪೋಷಿಸುವ ಜವಾಬ್ದಾರಿಯನ್ನು ಆಸ್ಪತ್ರೆಯ ಸಿಬ್ಬಂದಿಯಾದ ಚೇತನ್ ಎಂಬುವರಿಗೆ ವಹಿಸಿದ್ದಾರೆ. ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿಯವರಾದ ಶ್ರೀ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಇಂದು ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟು ವೃಕ್ಷ ಕವಚ(Tree Guard) ಅಳವಡಿಸಿ ಸಸಿಗಳನ್ನು ಪೋಷಿಸಿ ಅವುಗಳು ಬೆಳೆಯುವವರೆಗೆ ಅದರ ಜವಾಬ್ದಾರಿಯನ್ನು ನಾಲ್ಕನೇ ದರ್ಜೆಯ ನೌಕರರಾದ ಚೇತನ್ ರವರಿಗೆ ಜವಾಬ್ದಾರಿ ನೀಡಲಾಗಿದೆ. ನೆಟ್ಟಿರುವ ಎಲ್ಲಾ ಸಸಿಗಳಿಗೆ ಚೇತನ್ ಹೆಸರಿನ ನಾಮಫಲಕಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ವರ್ಚ್ಯುಯಲ್ ಕ್ಲಿನಿಕ್ ಪರಿವೀಕ್ಷಣೆ: ಮಾರತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಮಾರ್ಟ್ ವರ್ಚ್ಯುಯಲ್ ಕ್ಲಿನಿಕ್ ತೆರೆಯಲಾಗಿದ್ದು, ಆನ್ ಲೈನ್ ಮೂಲಕ ನೇತ್ರ ಪರೀಕ್ಷೆ ಹಾಗೂ ಚರ್ಮ ರೋಗದ ಪರೀಕ್ಷೆ ನಡೆಸಲಾಗುತ್ತಿದ್ದು, ವಲು ಜಂಟಿ ಆಯುಕ್ತರು ಸ್ಥಳಕ್ಕೆ ಭೇಟಿ…
ಬೆಂಗಳೂರು ;- ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ಅಧಿಕಾರ ಇಲ್ಲ. ಅದಕ್ಕಾಗಿ ಏನೇನೋ ಮಾತನಾಡ್ತಾ ಇದ್ದಾರೆ. ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಆತನನ್ನು ಬೇರೆ ಯಾವುದೋ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿರಲಿಲ್ಲ. ನಾಗಮಂಗಲದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೇವಲ 30 ಕಿ.ಮೀ. ದೂರ ವರ್ಗಾವಣೆ ಮಾಡಿರೋದು. ಆತನ ಜೀವಕ್ಕೆ ಏನಾದ್ರೂ ಹೆಚ್ಚು ಕಮ್ಮಿ ಆದ್ರೆ ಕುಮಾರಸ್ವಾಮಿ ನೇರ ಹೊಣೆ” ಎಂದು ಕಿಡಿ ಕಾರಿದರು. ಇನ್ನೂ ವರ್ಗಾವಣೆ ದಂಧೆ ವಿಚಾರವಾಗಿ ಮಾತನಾಡಿದ ಅವರು, ”ಕುಮಾರಸ್ವಾಮಿಯವರು ಹೊಸದಾಗಿ ಪ್ರಸ್ತಾಪ ಮಾಡ್ತಿಲ್ಲ. ವರ್ಗಾವಣೆ ವಿಚಾರದಲ್ಲಿ ನಾನು ಯಾವುದೇ ಪತ್ರ ಕೊಟ್ಟಿಲ್ಲ. ಸದನದಲ್ಲಿ ಕುಮಾರಸ್ವಾಮಿಗೆ ನಮ್ಮ ಮಂತ್ರಿಗಳನ್ನು, ಮುಖ್ಯಮಂತ್ರಿಗಳನ್ನು ನೋಡಲು ಆಗ್ತಿಲ್ಲ. ದೇವರು ಕುಮಾರಸ್ವಾಮಿಯವರಿಗೆ ಸಮಾಧಾನ ನೀಡಲಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ವರ್ಗಾವಣೆ ಮಾಡುದ್ರು ಕೇಳಿ” ಎಂದು ಟೀಕಿಸಿದರು.
ಬೆಂಗಳೂರು ;- ಮುಂಗಾರು ಮಳೆ ಕೊರತೆ ಮುಂದುವರಿದರೆ, ಬರಪೀಡಿತ ಪ್ರದೇಶಗಳ ಘೋಷಣೆಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಜೂನ್ ತಿಂಗಳಿನಲ್ಲಿ ಮಳೆಯ ಕೊರತೆ ಇತ್ತು. ಕಳೆದ 10 ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಒಳನಾಡಿನಲ್ಲಿ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ವಿವರಿಸಿದರು. ಪ್ರಕೃತಿ ವಿಕೋಪ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕಳೆದ ಮಂಗಳವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿದ್ದು, ಎಲ್ಲೆಲ್ಲಿ ಮಳೆ ಕೊರತೆ ಇದೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ಹೋಬಳಿ ಮಟ್ಟದಲ್ಲೂ ಮಳೆಯ ವ್ಯತ್ಯಾಸವಾಗುತ್ತಿದೆ. ಆದರೆ ಸರಾಸರಿ ಮಳೆಯ ಪ್ರಮಾಣ ಸುಧಾರಣೆಯಾಗುತ್ತಿದೆ. ಈ ತಿಂಗಳ 15ರ ವರೆಗೂ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಬರಪೀಡಿತ ಪ್ರದೇಶಗಳ ಘೋಷಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು. ರಾಜ್ಯದಲ್ಲಿ 193 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಇದೆ. 339 ಬೋರ್ವೆಲ್ಗಳನ್ನು ಬಾಡಿಗೆ ಪಡೆದು ಟ್ಯಾಂಕರ್ ಮೂಲಕ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮ…
ಬೆಂಗಳೂರು ;- ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಿ ಕಾಯಕಲ್ಪ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು. ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞವೈದರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿ ಕೊರತೆ ನೀಗಿಸಲು ಪ್ರಾಮಾಣೀಕ ಪ್ರಯತ್ನ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಲವು ಕಡೆಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಗಳಿವೆ. ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಲ್ಲ. ಅಂತಹ ಕಡೆಗಳಲ್ಲಿ ವೈದ್ಯರು, ಸಿಬ್ಬಂದಿಯನ್ನು ನೇಮಕ ಮಾಡಿ ಒಳ್ಳೆ ರೀತಿಯಲ್ಲಿ ನಿರ್ವಹಣೆ ಮಾಡುವುದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏಳು ಹಳೆಯ ತಾಲೂಕುಗಳಲ್ಲಿ ಇರುವ ಆಸ್ಪತ್ರೆಗಳನ್ನು ನೂರು ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕಿದೆ. ಆನಂತರ ಹೊಸ ತಾಲ್ಲೂಕುಗಳಲ್ಲಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಡ್ಯ :- ಜಿಲ್ಲಾ ಹಾಲು ಒಕ್ಕೂಟದ ಉಳಿದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಬೋರೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ಹೆಚ್.ಟಿ.ಮಂಜು, ರಘುನಂದನ್ ಹಾಗೂ ಬಾಲಕೃಷ್ಣ ಅವರುಗಳು ಬೆಳಿಗ್ಗೆ ನಾಮಪತ್ರ ಸಲ್ಲಿಸಿ ಚುನಾವಣೆ ವೇಳೆಗೆ ನಾಲ್ವರು ನಾಪತ್ತೆಯಾದ ಘಟನೆ ಜರುಗಿತು. ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಒಕ್ಕೂಟದ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭಗೊಂಡು ಕಾಂಗ್ರೆಸ್ ಪಕ್ಷದಿಂದ ಬೋರೇಗೌಡ ಜೆಡಿಎಸ್ ಪಕ್ಷದಿಂದ ಹೆಚ್.ಟಿ.ಮಂಜು, ರಘುನಂದನ್ ಹಾಗೂ ಬಾಲಕೃಷ್ಣ ಅವರುಗಳು ಚುನಾವಣಾಧಿಕಾರಿ ಡಾ. ಹೆಚ್.ಎಲ್. ನಾಗರಾಜ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಗೆ ನಿಗದಿಯಾಗಿದ್ದ ಚುನಾವಣೆಗೆ ಯಾವುದೇ ನಿರ್ದೇಶಕರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿ ಕಾರಿಗಳು ಸಹಕಾರ ಸಂಘಗಳ ಕಾಯ್ದೆ ಅನ್ವಯ 1 ಗಂಟೆಗಳ ಕಾಲ ಚುನಾವಣೆ ಪ್ರಕ್ರಿಯೆಗಳನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಮಧ್ಯಾಹ್ನ 1 ಗಂಟೆಯ ಬಳಿಕ ನಿರ್ದೇಶಕ ಡಾಲು ರವಿ ಅವರನ್ನು ಹೊರತು ಪಡಿಸಿ ಉಳಿದ ನಿರ್ದೇಶಕರು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ…
ಗದಗ: ಪರಿಹಾರಕ್ಕಾಗಿ ಒತ್ತಾಯಿಸಿ ಗದಗ ತಾಲೂಕಿನ ನಾಗಾವಿ ಸೇರಿದಂತೆ ಜಿಲ್ಲೆಯ ಗ್ರಾಮಸ್ಥರಿಂದ ಧರಣಿ ನಡೆಸಲಾಯಿತು. ಗದಗ ಜಿಲ್ಲಾಡಳಿತ ಭವನದ ಎದುರಿಗೆ ಪೆಂಡಾಲ್ ಹಾಕಿ ಆಕ್ರೋಶ ವ್ಯಕ್ತಪಡಿದರು. ಉತ್ತರ ಕರ್ನಾಟಕ ಮಹಾಸಭಾ ಹಾಗೂ ಅರಣ್ಯ ಹಕ್ಕು ಹೋರಾಟ ಸಮಿತಿ ಮತ್ತು ಬಗರ್ ಹುಕುಂ ಸಮಿತಿ ನೇತೃತ್ವದಲ್ಲಿ ಧರಣಿ ಮಾಡಲಾಗಿದ್ದು, ರೈತರಿಗೆ ಪರಿಹಾರ ನೀಡದೇ ಒಕ್ಕಲೆಬ್ಬಿಸಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಿರ್ಮಿಸಿದ್ದಾರೆ ಅನ್ನೋದು ರೈತರ ಆರೋಪವಾಗಿದೆ. ಸುಮಾರು ಮೂರ್ನಾಲ್ಕು ತಲೆಮಾರುಗಳಿಂದ ಅನೇಕ ರೈತ ಕುಟುಂಬಗಳಿಂದ ಭೂಮಿ ಉಳುಮೆ ಮಾಡಲು ಹಕ್ಕುಪತ್ರ ನೀಡಲು ಮನವಿ ಮಾಡಿದ್ದೇವೆ. ಆದ್ರೆ ಜಿಲ್ಲಾಡಳಿತ ಕ್ಯಾರೆ ಅಂದಿಲ್ಲ. ನಮ್ಮ ಉಳುಮೆ ಮಾಡುವ ಭೂಮಿಯಲ್ಲಿ ಆರ್ ಡಿ ಪಿ ಆರ್ ವಿವಿ ಸ್ಥಾಪನೆ ಆಗಿದೆ. ಅದಕ್ಕೆ ನಮಗೆ ಪರಿಹಾರ ಮಾತ್ರ ನೀಡಿಲ್ಲ ಎಂದು ಪರಿಹಾರ ಸಿಗೋವರೆಗೂ ಗದಗ ಜಿಲ್ಲಾಡಳಿತ ಭವನದ ಮುಂದೆಯೇ ಅಡುಗೆ ಮಾಡಿ ಧರಣಿಗೆ ಮುಂದಾಗಿರೋ ರೈತರು.
ಹಾವೇರಿ: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಉಚ್ಛಾಟನೆಯನ್ನು ಕಾಂಗ್ರೆಸ್ ಹಿಂಪಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದಕ್ಕೆ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಆದ್ರೆ ಈಗ ಕಾಂಗ್ರೆಸ್ ಶಿಸ್ತು ಸಮಿತಿ ಮತ್ತೆ ಖಾದ್ರಿ ಉಚ್ಚಾಟನೆ ಹಿಂಪಡೆದಿದೆ.