Author: Prajatv Kannada

ರಾಯಚೂರು: ಪಿಎಂಜಿಕೆವೈ ಯೋಜನೆಯಲ್ಲಿ ಭಾರಿ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರ ಹೋರಾಟ ನಡೆಸಿದರು. ರಾಯಚೂರ ಜಿಲ್ಲೆಯ ಹಲವೆಡೆ ಪ್ರಿಮಿಯಮ್ ಹಣ ಪಾವತಿಸಿದ ರೈತರಿಗೆ ಪಂಗನಾಮ ಹಾಕಿದ್ದು, ಸಿರವಾರ ತಾಲೂಕಿನ ವ್ಯಾಪ್ತಿಯಲ್ಲಿ‌ ಸಾವಿರಾರು ರೂಪಾಯಿ ಬೇರೆಯವರ ಖಾತೆಗೆ ವರ್ಗಾವಣೆಯಾಗಿದೆ. ಖಾಸಗಿ ಏಜೆನ್ಸಿ ಮೂಲಕ ಕೋಟ್ಯಾಂತರ ರೂಪಾಯಿ ರೈತರಿಗೆ ಮೋಸ ಆಗಿದೆ ಎಂದು ರೈತ ಸಂಘದ ಮುಖಂಡ ಚಾಮರಸ ಪಾಟೇಲ್ ಆರೋಪ ಮಾಡಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಚಾಮರಸ ಪಾಟೀಲ್ ಆಗ್ರಹ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

Read More

ಹುಬ್ಬಳ್ಳಿ: ಒಂದೇ ದಿನದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇ ಹೊರಡಿಸಿದೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಈಶ್ವರ ಉಳ್ಳಾಗಡ್ಡಿ  ನೇಮಕ ಮಾಡಿದ್ದು, ಪಾಲಿಕೆ ಆಯುಕ್ತರಾಗಿದ್ದ ಡಾ.ಬಿ.ಗೋಪಾಲಕೃಷ್ಣ ಅವರು ವರ್ಗಾವಣೆಯಾಗಿದ್ದರು. ಖಾಲಿಯಾದ  ಸ್ಥಾನಕ್ಕೆ ಭರತ್ ಎಸ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಭರತ್ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮತ್ತೇ ಪಾಲಿಕೆ ಆಯುಕ್ತರ ಬದಲಾವಣೆ ಮಾಡಿದ ಸರ್ಕಾರ ಈಶ್ವರ ಉಳ್ಳಾಗಡ್ಡಿ  ನೇಮಕ ಮಾಡಿದೆ.

Read More

ಮಂಡ್ಯ: ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಪ್ರಯತ್ನಿಸಿರುವ (Suicide Attempt) ಘಟನೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಪ್ರಯಿಕ್ರಿಯೆ ನೀಡಿದ್ದಾರೆ. ಮಂಡ್ಯ (Mandya) ಜಿಲ್ಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಲುವರಾಯಸ್ವಾಮಿ, ಕೆಲವರು ಅನಾವಶ್ಯಕವಾಗಿ ಈ ರೀತಿ ರಾಜಕೀಯ ಮಾಡುವುದು ಪರಿಪಾಟಲು. ವರ್ಗಾವಣೆ ಸಹಜ ಪ್ರಕ್ರಿಯೆ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತೆ. ಹಿಂದೆಯೂ ಸಾಕಷ್ಟು ವರ್ಗಾವಣೆ ಆಗಿದೆ. ಹಾಗಂತ ಜೆಡಿಎಸ್‌ನವರೆಲ್ಲರನ್ನೂ ವರ್ಗಾವಣೆ ಮಾಡೋಕಾಗುತ್ತಾ ಎಂದು ಪ್ರಶ್ನಿಸಿದರು. ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ. ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ. ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ರು. ಹೀಗಾಗಿ ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದ್ರೂ ತಪ್ಪಿದ್ರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಅಂತ ಇವರು ನಿನ್ನೆ ಹೋಗಿ ಈ ರೀತಿ…

Read More

ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆತ್ಮಹತ್ಯೆಗೆ ಯತ್ನಿಸಿದ ನಾಗಮಂಗಲ ಡಿಪೋ (Nagamangala Bus Depot) ಸಾರಿಗೆ ನೌಕರ ಜಗದೀಶ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್‌ಡಿಕೆ, ಆತ್ಮಹತ್ಯೆ ಯತ್ನಿಸಿದ KSRTC ನೌಕರ ವೆಂಟಿಲೇಟರ್‌ನಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆ ಐಸಿಯುನಲ್ಲೇ ಇಡಬೇಕಾಗುತ್ತದೆ ಅಂತಾ ವೈದ್ಯರು ಹೇಳಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದು 50 ದಿನ ಆಗಿಲ್ಲ. ಆಗಲೇ ಇಷ್ಟು ದ್ವೇಷದ ರಾಜಕಾರಣ ಶುರುವಾಗಿದೆ. ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡ್ತಿದ್ದಾರೆ. ಚುನಾವಣೆಗೆ ಖರ್ಚು ಮಾಡಿದ ಹಣ ಮತ್ತೆ ವಾಪಸ್ ಪಡೆಯೋದಕ್ಕೆ ವರ್ಗಾವಣೆ ದಂಧೆ ಶುರುಮಾಡಿದ್ದಾರೆ. ಆದ್ರೆ ಜೀವಗಳ ಜೊತೆ ಚೆಲ್ಲಾಟ ಆಡುವ ಇಂತಹ ಚಿಲ್ಲರೆ ರಾಜಕಾರಣ ಮಾಡೋದು ಸರಿಯಲ್ಲ. ಇದನ್ನ ಸುಮ್ಮನೆ ಬಿಡಲ್ಲ. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರಿಂದ ಒತ್ತಡ: ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಕುಟುಂಬ JDS ನಿಷ್ಠಾವಂತ ಕಾರ್ಯಕರ್ತ. ಜಗದೀಶ್ ಪತ್ನಿ ಪಂಚಾಯಿತಿ ಸದಸ್ಯೆ.…

Read More

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್  ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ ಬರುವುದಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ‌ ಐದು ದಿನ ನಿರಂತರ ಮಳೆ ಅಂತ ಹೇಳಿದ್ದಾರೆ. ಆದರೆ, ಎಲ್ಲ ಕಡೆ ನಿರ್ಧಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು. ಅದಕ್ಕಾಗಿ ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಲ್ಲದೇ ಪ್ರತಿ ಜಿಲ್ಲೆಗೂ ತಕ್ಷಣ ಐವತ್ತು ಲಕ್ಷ ರೂ.‌ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Read More

ಬೆಂಗಳೂರು: KSRTC ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಸದನದಲ್ಲಿ ಸ್ಪಷ್ಟನೆ ನೀಡಿದ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವರ್ಗಾವಣೆ ವಿಚಾರವಾಗಿ ನಮ್ಮ ಕಚೇರಿಯಿಂದ ಯಾವ ಪತ್ರ ಹೋಗಿಲ್ಲ. ಜಗದೀಶ್​​ ಸಂಬಂಧಿಕರು ವರ್ಗಾವಣೆ ವಾಪಸ್​ಗೆ ಮನವಿ ಮಾಡಿದ್ದರು. ನಾನು ಕರೆ ಮಾಡಿ ಏನಾಗಿದೆ ಎಂದು ಮಾಹಿತಿ ಪಡೆದಿದ್ದೇನೆ. ತನಿಖೆ ಮಾಡಿ ವರದಿ ಕೊಡುವಂತೆ ಹೇಳಿದ್ದೆ. ನಂತರ KSRTC ಚಾಲಕ ಜಗದೀಶ್​​ ಮಾವ ಮತ್ತೆ ಕರೆ ಮಾಡಿದ್ದರು. ಎರಡು ದಿನ ಬಿಡಿ ಎಂದು ಜಗದೀಶ್​​ ಮಾವನವರಿಗೆ ನಾನೇ ತಿಳಿಸಿದ್ದೆ. ಬಳಿಕ ವರ್ಗಾವಣೆ ಹಿಂಪಡೆಯದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳಿದ್ದಾಗಿ ತಿಳಿದುಬಂದಿದೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಅಥವಾ ಮೈಸೂರಿಗೆ ಶಿಫ್ಟ್ ಮಾಡಬೇಕಿತ್ತು. ಆಗ ಮಾಜಿ ಸಿಎಂ ಕರೆಮಾಡಿ ಬರುವವರೆಗೂ ಸ್ಥಳಾಂತರಿಸಬೇಡಿ ಎಂದಿದ್ದಾರೆ. ನಂತರ ಮಾಜಿ ಶಾಸಕ ಸುರೇಶ್ ಗೌಡ, ಅವರ ಪತ್ನಿ ಹೋಗಿ ತಡೆಯುತ್ತಾರೆ. ನಂತರ ಪೊಲೀಸರ ರಕ್ಷಣೆಯಲ್ಲಿ ಜಗದೀಶ್​ನನ್ನು ಆಸ್ಪತ್ರೆಗೆ ಶಿಫ್ಟ್ ಮಾಡುತ್ತಾರೆ ಎಂದರು.

Read More

ಬೆಂಗಳೂರು: ನಾನು ದೇವೇಗೌಡರು ಕಾಂಗ್ರೆಸ್​ನಿಂದ ಸಿಎಂ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದಾಗ ಕಾಂಗ್ರೆಸ್ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರಿಗೆ ಮಾತಾಡಲು ಅವಕಾಶ ಕೊಡಿ ಎಂದರು. ಹಾಗೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಈಶ್ವರಪ್ಪ ಅವರಿಂದ ಕಿತ್ತೋದ ಕಾಂಗ್ರೆಸ್ಸಿಗರು​​ ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು. ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಪ್ರದರ್ಶನ ಮಾಡ್ತೇನೆ. ಇಲ್ಲೇ ಆಡಿಯೋ ಹಾಕಿಸುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ರು. ಈ ವೇಳೆ ಹೆಚ್​​.ಡಿ.ಕುಮಾರಸ್ವಾಮಿ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದ್ರು.

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ  ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂಬರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹುದ್ದೆಯಲ್ಲಿ ಅಧಿಕಾರ ಕಡಿಮೆ ಗೌರವ ಜಾಸ್ತಿ, ನೀವು ಸರಳ ಸಜ್ಜನರಿದ್ದೀರಿ, ನಾನು ನಿಮ್ಮ ತಾಂಡಾಕ್ಕೆ, ಮನೆಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾರು ಏನು ಬೇಕಾದರೂ ಆಗಬಹುದು. ರಾಜಕಾರಣದಲ್ಲಿ ಪವರ್ ಪೊಲಿಟಿಕ್ಸ್ ಇಸ್ ವೇಟಿಂಗ್ ಗೇಮ್ ಅಂತ ಈಗ ಅದು ಅವಕಾಶ ಬಂದಾಗ ಅದನ್ನು ಪಡೆದುಕೊಳ್ಳಬೇಕು. ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುವ ಕೆಲಸ ಮಾಡುತ್ತಾರೆ ಎಂದರು ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ ವೀರನೂ ಅಲ್ಲ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ.  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ …

Read More

ಬೆಂಗಳೂರು: ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ ಮುಂದುವರೆದ ಭಾಗವೇ ಡೆವಿಲ್. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಡೆವಿಲ್ ಗ್ಲಿಂಪ್ಸ್ ಭಾರೀ ಸದ್ದು ಮಾಡುತ್ತಿದೆ. 1 ನಿಮಿಷ 2 ಸೆಕೆಂಡ್ ಇರುವ ಝಲಕ್ ನಲ್ಲಿ ಡೆವಿಲ್ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಏಜೆಂಟ್ ಕಥೆ ಅನ್ನೋ ಗೊತ್ತಾಗುತ್ತಿದೆ. ಗೂಢಚಾರಿ ಹೇಗೆ ಇರಬೇಕು ಅನ್ನೋದನ್ನು ವಿವರಿಸುತ್ತಾ ಎಂಟ್ರಿ ಕೊಡುವ ಕಲ್ಯಾಣ್ ರಾಮ್ ಲುಕ್ ಗೆಟಪ್ ಗಮನಸೆಳೆಯುತ್ತದೆ‌. ಕ್ಯಾಮೆರಾ ವರ್ಕ್ ಹಾಗೂ ಹಿನ್ನೆಲೆ ಸಂಗೀತ  ಅದ್ಭುತವಾಗಿ ಮೂಡಿಬಂದಿದೆ. ಕಲ್ಯಾಣ್ ರಾಮ್ ಗೆ ಜೋಡಿಯಾಗಿ ಸಂಯುಕ್ತ ಮೆನನ್ ನಟಿಸಿದ್ದಾರೆ. ಡೆವಿಲ್ ಸಿನಿಮಾವನ್ನು ದೇವಾಂಶ್ ನಾಮಾ ಪ್ರೆಸೆಂಟ್ ಮಾಡುತ್ತಿದ್ದು, ಅಭಿಷೇಕ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಭಿಷೇಕ್ ನಾಮಾ  ನಿರ್ಮಿಸುತ್ತಿದ್ದಾರೆ.  ನವೀನ್ ಮೇಡಾರಂ…

Read More

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಹೆಚ್‌.ಡಿ ಮಾನದಂಡ ಅಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ ತಿಳಿಸಿದೆ. ಈ ಹುದ್ದೆ ನೇಮಕಾತಿಗೆ ಪಿಹೆಚ್‌.ಡಿ ಕಡ್ಡಾಯಗೊಳಿಸುವ ತನ್ನ ನಿರ್ಧಾರವನ್ನು ಯುಜಿಸಿ ಹಿಂತೆಗೆದುಕೊಂಡಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ನೆಟ್‌, ಸೆಟ್‌, ಸ್ಲೆಟ್‌ನಂತಹ ಪರೀಕ್ಷೆಗಳು ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಮೂಲಗಳು ತಿಳಿಸಿವೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಗೆ ಇನ್ಮುಂದೆ ಪಿಎಚ್‌ಡಿ ಅರ್ಹತೆ ಐಚ್ಛಿಕವಾಗಿರುತ್ತದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್), ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಇಟಿ) ಮತ್ತು ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯು ಹುದ್ದೆಯ ನೇರ ನೇಮಕಾತಿಗೆ ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೇಶ್ ಕುಮಾರ್ ಹೇಳಿದ್ದಾರೆ. ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ 2018 ರಲ್ಲಿ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿತ್ತು. ಅಭ್ಯರ್ಥಿಗಳು ತಮ್ಮ ಪಿಹೆಚ್‌.ಡಿ ಪೂರ್ಣಗೊಳಿಸಲು 3 ವರ್ಷಗಳ ಕಾಲಾವಕಾಶ ನೀಡಿತ್ತು. 2021-22ರ ಶೈಕ್ಷಣಿಕ ಅವಧಿಯಿಂದ ನೇಮಕಾತಿಗಾಗಿ ಹೊಸ…

Read More