Author: Prajatv Kannada

ಇಸ್ಲಾಮಾಬಾದ್‌: ಆರ್ಥಿಕ ಹಿಂಜರಿಕೆಯಿಂದ ಕಂಗೆಟ್ಟಿರುವ ಪಾಕಿಸ್ತಾನ ಮುಂದಿನ 9 ತಿಂಗಳುಗಳಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯಿಂದ 300 ಕೋಟಿ ಡಾಲರ್‌ ಸಾಲ ಪಡೆಯಲಿದೆ. ಈ ಮೂಲಕ ಐಎಂಎೆಫ್ ನಿಂದ ಅತೀ ಹೆಚ್ಚು ಸಾಲ ಪಡೆದ ಜಗತ್ತಿನ ನಾಲ್ಕನೇ ರಾಷ್ಟ್ರವಾಗಿ ಪಾಖಿಸ್ತಾನ ಹೊರಹೊಮ್ಮಲಿದೆ. ಅನೇಕ ವರ್ಷಗಳಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ಥಾನ, ಪ್ರಸ್ತುತ ಅತೀ ಹೆಚ್ಚು ಸಾಲ ಪಡೆದ ಜಗತ್ತಿನ ಐದನೇ ರಾಷ್ಟ್ರವಾಗಿದೆ. ಕಳೆದ 8 ತಿಂಗಳುಗಳಿಂದ ಪಾಕಿಸ್ಥಾನದ ಸರಣಿ ಮನವಿಗಳ ಅನಂತರ 300 ಕೋಟಿ ಡಾಲರ್‌ ಸಾಲ ನೀಡುವ ಘೋಷಣೆಯನ್ನು ಐಎಂಎಫ್ ಮಾಡಿತು. ಹಂತ- ಹಂತವಾಗಿ ಈ ಮೊತ್ತವನ್ನು ಮುಂದಿನ 9 ತಿಂಗಳಲ್ಲಿ ಬಿಡುಗಡೆ ಗೊಳಿಸಲಿದೆ. ಈ ಮೊದಲು, ಐಎಂಎಫ್ನಿಂದ ಅತೀ ಹೆಚ್ಚು ಸಾಲ ಪಡೆದ ರಾಷ್ಟ್ರಗಳ ಪೈಕಿ ಕ್ರಮವಾಗಿ ಅರ್ಜೆಂಟೀನಾ (4600 ಕೋಟಿ ಡಾಲರ್‌), ಈಜಿಪ್ಟ್ (1800 ಕೋಟಿ ಡಾಲರ್‌), ಉಕ್ರೇನ್‌(1220 ಕೋಟಿ ಡಾಲರ್‌), ಈಕ್ವೆಡಾರ್‌(820 ಕೋಟಿ ಡಾಲರ್‌) ಮತ್ತು ಪಾಕಿಸ್ಥಾನ(740 ಕೋಟಿ ಡಾಲರ್‌) ಇತ್ತು. ಇದೀಗ ಈಕ್ವೆಡಾರ್‌ಗಿಂತ ಹೆಚ್ಚು ಸಾಲ…

Read More

ಮುಂಬೈ: ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆ ಒಡೆಯಲು ಕಾರಣಕರ್ತರಾದ 16 ಶಾಸಕರು ಶೀಘ್ರದಲ್ಲೇ ಅನರ್ಹಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕೂಡ ಬದಲಾಗಲಿದೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆಯವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಯಲಿದ್ದಾರೆ. ಏಕನಾಥ್ ಶಿಂಧೆ ಮತ್ತು 16 ಮಂದಿ ಶಾಸಕರು ಅನರ್ಹೊಳ್ಳಲಿದ್ದಾರೆಂಬುದನ್ನು ನಾನು ಸ್ಪಷ್ಟವಾಗಿ ಹೇಳುತ್ತೇನೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ “ಒಗ್ಗಟ್ಟಾಗಿ” ಹೋರಾಡಲಿವೆ  ತಿಳಿಸಿದ್ದಾರೆ. ಬಿಜೆಪಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಡೆಯುತ್ತಿದೆ. ಆದರೆ, ಇದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ, ಮಹಾರಾಷ್ಟ್ರದಲ್ಲಿ ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆಂದು ಹೇಳಿದರು.

Read More

ನವದೆಹಲಿ: ಬಿಜೆಪಿ (BJP) ವಿರೋಧ ಪಕ್ಷಗಳ ಸರ್ಕಾರ ಉರುಳಿಸುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಮಧ್ಯಪ್ರವೇಶ ಮಾಡಬೇಕು ಎಂದು ಟ್ವೀಟ್‌ ಮಾಡಿ ಹಿರಿಯ ವಕೀಲ ಕಪಿಲ್‌ ಸಿಬಲ್‌ (Kapil Sibal) ಒತ್ತಾಯಿಸಿದ್ದಾರೆ. ಬಿಜೆಪಿ ಚುನಾಯಿತ ಪ್ರತಿಪಕ್ಷ ಸರ್ಕಾರಗಳನ್ನು ಅಸ್ಥಿರಗೊಳಿಸುತ್ತಿದೆ. ಉತ್ತರಾಖಂಡ, ಅರುಣಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸರ್ಕಾರಗಳನ್ನು ಅಸ್ಥಿರಗೊಳಿಸಿದೆ. ಕಾನೂನು ಇದಕ್ಕೆ ಅವಕಾಶ ನೀಡುತ್ತದೆಯೇ? ಸುಪ್ರೀಂ ಕೋರ್ಟ್ ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ಮಂದಿ ಸೇರ್ಪಡೆಗೊಂಡ ನಂತರ ಸಿಬಲ್‌, ಸುಪ್ರೀಂ ಕೋರ್ಟ್‌ಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಶರದ್‌ ಪವಾರ್‌ ನಿಲುವುಗಳ ವಿರುದ್ಧ ಬಂಡಾಯವೆದ್ದು, ಎನ್‌ಸಿಪಿ ಅಜಿತ್‌ ಪವಾರ್‌ ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ನೀಡಿದರು. ಬಂಡಾಯ ಶಾಸಕರ ಜೊತೆಗೂಡಿ ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನಾ ಸರ್ಕಾರದ ಜೊತೆ ಕೈ ಜೋಡಿಸಿದರು. ಬಳಿಕ ಸರ್ಕಾರದ ಉಪ ಮುಖ್ಯಮಂತ್ರಿ…

Read More

ಮುಂಬೈ: ಮಹಾರಾಷ್ಟ್ರದ (Maharashtra) ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಟ್ರಕ್‌ವೊಂದು (Truck) ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕೇ ದಿನಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗಷ್ಟೇ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಎಕ್ಸ್‌ಪ್ರೆಸ್‌ವೇಯಲ್ಲಿ (Maharashtra Expressway)  ನಡೆದಿತ್ತು. ಆ ನಂತರ ಇದು ಈ ತಿಂಗಳ ಆರಂಭದಲ್ಲೇ ನಡೆದ 2ನೇ ದುರಂತವಾಗಿದೆ. ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಬೆಳಗ್ಗೆ 10.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದರಿಂದ ನಿಯಂತ್ರಣ ಕಳೆದುಕೊಂಡಿದೆ. ಇದರಿಂದ ಅತೀ ವೇಗದಲ್ಲಿ ಚಲಿಸುತ್ತಿದ್ದ ಟ್ರಕ್‌ ಹಿಂಬದಿಯಿಂದ ಎರಡು ದ್ವಿಚಕ್ರವಾಹನ, https://twitter.com/ANI/status/1676136424419246080?ref_src=twsrc%5Etfw%7Ctwcamp%5Etweetembed%7Ctwterm%5E1676136424419246080%7Ctwgr%5E345ab0278c2b4e12f45067f3dd7284adf58b3970%7Ctwcon%5Es1_&ref_url=https%3A%2F%2Fpublictv.in%2Fmassive-road-accident-claims-10-lives-while-more-than-20-injured-in-dhule%2F ಒಂದು ಕಾರು ಹಾಗೂ ಇನ್ನೊಂದು ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಕ್…

Read More

ಮುಂಬೈ: ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೆಲವು ಗುಂಪುಗಳು ರಾಜ್ಯ ಮತ್ತು ದೇಶದಲ್ಲಿ ಜನರ ನಡುವೆ ಬಿರುಕು ಮೂಡಿಸುವ ಪ್ರಯತ್ನ ಮಾಡುತ್ತಿವೆ. ಮಹಾರಾಷ್ಟ್ರದ (Maharashtra) ಜನರು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಬಲಿಯಾಗುವುದಿಲ್ಲ ಎಂದು ಎನ್‌ಸಿಪಿ (NCP) ನಾಯಕ ಶರದ್ ಪವಾರ್ (Sharad Pawar) ಹೇಳಿದ್ದಾರೆ. ಕರಡದಲ್ಲಿ (Karada) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದೆವು. ಆದರೆ ನಮ್ಮ ಸರ್ಕಾರವನ್ನು ಕೆಲವರು ಪತನಗೊಳಿಸಿದರು. ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ದಾಳಿ ನಡೆಸಲಾಗುತ್ತಿದೆ. ದೆಹಲಿ, ಪಂಜಾಬ್‌ನಲ್ಲೂ ಇದೇ ಆಗುತ್ತಿದೆ ಎಂದರು. ಇಂದು ಮಹಾರಾಷ್ಟ್ರಮತ್ತು ದೇಶದಲ್ಲಿ ಕೆಲವು ಗುಂಪುಗಳಿಂದ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಬಿರುಕು ಮೂಡಿಸಲಾಗುತ್ತಿದೆ. ನಾವು ಬಿಜೆಪಿ ವಿರುದ್ಧ ನಿಲ್ಲಲು ಪ್ರಯತ್ನಿಸಿದ್ದೇವೆ. ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ ಕೆಲವರು ಅದಕ್ಕೆ ಬಲಿಯಾದರು ಎಂದು ತಮ್ಮ ಸಹೋದರ ಸಂಬಂಧಿ ಅಜಿತ್ ಪವಾರ್ ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ (Delhi High Court) ನಿರಾಕರಿಸಿದೆ. ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನಲೆ ಜಾಮೀನು (Bail) ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಮನೀಶ್ ಸಿಸೋಡಿಯಾ, ರಾಜಕೀಯ ಸ್ಥಾನಮಾನಗಳು ಹೊಂದಿರುವ ಕಾರಣದಿಂದ ಸಾಕ್ಷಿಗಳನ್ನು ತಿರುಚುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಸಾಕ್ಷ್ಯಗಳ ನಾಶವಾಗದಂತೆ ಕಾಪಾಡಬೇಕಾದ ಹಿನ್ನೆಲೆ ರಾಜಕೀಯ ಹಸ್ತಕ್ಷೇಪದಿಂದ ಉಳಿಸಿಕೊಳ್ಳಲು ಜಾಮೀನು ನಿರಾಕರಿಸಿದೆ ಎಂದು ಕೋರ್ಟ್ ಹೇಳಿದೆ. ಇದೇ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ…

Read More

ನವದೆಹಲಿ: ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Abrogation of Article 370) ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಜುಲೈ 11 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ನಾಲ್ಕು ವರ್ಷಗಳ ನಂತರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಸಂವಿಧಾನ ಪೀಠವು 20 ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್​​​ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು  ಒಳಗೊಂಡ 5 ನ್ಯಾಯಮೂರ್ತಿಗಳಿರುವ ಪೀಠ ವಿಚಾರಣೆ ನಡೆಸಲಿದೆ. 2019ರ ಆಗಸ್ಟ್‌ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್‍ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ರದ್ದು ಮಾಡಿದ್ದನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು…

Read More

ಮುಂಬಯಿ: ರಾಜ್ಯ ರಾಜಕೀಯದಲ್ಲಿ ಬದಲಾದ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬಿಜೆಪಿ-ಶಿವಸೇನೆ ಮೈತ್ರಿಕೂಟದೊಂದಿಗೆ ಏಕೆ ಕೈಜೋಡಿಸಿದರು ಎಂಬುದನ್ನು ವಿವರಿಸಿದರು. ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಪ್ರಗತಿಯತ್ತ ಕೊಂಡೊಯ್ದಿದ್ದಾರೆ. ಅವರ ಮೇಲೆ ನಂಬಿಕೆ ಇಟ್ಟ ನಾನು ಹಾಗೂ ಇತರ ಬಂಡಾಯ ಎನ್‌ಸಿಪಿ ನಾಯಕರು ಶಿಂಧೆ ಸರ್ಕಾರವನ್ನು ಸೇರಿಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ದೇಶದ ಅಭಿವೃದ್ಧಿಯತ್ತ ವಿಪಕ್ಷಗಳಿಗಿಲ್ಲ ಗಮನ ಇದೇ ಸಂದರ್ಭದಲ್ಲಿ ಅಜಿತ್ ಪವಾರ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಾ, ವಿಪಕ್ಷಗಳು ದೇಶವನ್ನು ಮುಂದಕ್ಕೆ ಕೊಂಡೊಯ್ಯಲು ಯಾವುದೇ ಆಸಕ್ತಿ ಹೊಂದಿಲ್ಲ ಎಂದರು. ಕೆಲದಿನಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಏಕತೆಯ ಸಭೆಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಮತ್ತು ಮೈತ್ರಿ ಮಾಡಿಕೊಳ್ಳಲು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಏಕಪಕ್ಷೀಯ ನಿರ್ಧಾರದಿಂದ ಎನ್‌ಸಿಪಿ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಉಲ್ಲೇಖಿಸಿದರು. ಮಹಾ ಬೆಳವಣಿಗೆಯಲ್ಲಿ, ಅಜಿತ್ ಪವಾರ್ ಅವರು ಮುಂಬೈನಲ್ಲಿರುವ…

Read More

ಗಂಗಾವತಿ : ನಗರದ ವಿವಿಧ ವಸತಿ ನಿಲಯಗಳಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಂಗಳವಾರ ಭೇಟಿ ನೀಡಿ ಮೂಲಸೌಲಭ್ಯಗಳ ಪರಿಶೀಲನೆ ನಡೆಸಿದರು. ಮೊದಲು ಕಲ್ಯಾಣ ನಗರದ ಶ್ರೀ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಶ್ರೀ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿ ಸೌಲಭ್ಯಗಳ ಪರಿಶೀಲಿಸಿದರು. ನಿಲಯದ ಮಕ್ಕಳ ಸಂಖ್ಯೆ, ಹಾಸ್ಟೆಲ್ ಸಿಬ್ಬಂದಿಗಳ ಕಾರ್ಯವೈಖರಿ, ಹಾಸ್ಟೆಲ್ ನಿಂದ ಸಿಗುವ ಸೌಲಭ್ಯಗಳು, ಕುಡಿವ ನೀರು, ಕ್ರೀಡಾ ಸಾಮಗ್ರಿ, ಕಂಪ್ಯೂಟರ್ ಶಿಕ್ಷಣ, ಗ್ರಂಥಾಲಯ, ಊಟ- ಉಪಾಹಾರದ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ದವಸ ಧಾನ್ಯಗಳ ಕುರಿತು ಜಿಪಂ ಸಿಇಓ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ರಿಜಿಸ್ಟರ್ ಗಳ ಪರಿಶೀಲಿಸಿದರು. ಹಾಸ್ಟೆಲ್ ಮಕ್ಕಳೊಂದಿಗೆ ಸಂವಾದ ನಡೆಸಿ, “ವಿದ್ಯಾರ್ಥಿಗಳು ಮೊಬೈಲು ಗೀಳು ಬೆಳೆಸಿಕೊಳ್ಳದೇ, ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಬೇಕು. ನಿತ್ಯ ಪತ್ರಿಕೆ, ಹಾಗೂ ಗ್ರಂಥಾಲಯದ ಪುಸ್ತಕಗಳನ್ನು ಓದಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.…

Read More

ಕೂಡ್ಲಿಗಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ದೊಡ್ಡಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 34ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಾಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಇವರನ್ನು ದಾಖಲಿಸಲಾಗಿತ್ತು. ಈ ಪೈಕಿ, 14 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ರಾತ್ರಿ ಮತ್ತು ಭಾನುವಾರ 10 ಜನರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ 2ऺ ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಪೈಪ್‌ಲೈನ್‌ 3-4 ಕಡೆ ಒಡೆದಿದೆ. ಇತ್ತೀಚೆಗೆ ಮಳೆ ಬಂದಿದ್ದರಿಂದ ಒಡೆದಿರುವ ಪೈಪ್‌ನಲ್ಲಿ ಕಲ್ಮಶ ಸೇರಿಕೊಂಡು ಕಲುಷಿತ ನೀರು ಸರಬರಾಜಾಗುತ್ತಿದೆ. ಈ ನೀರು ಸೇವನೆಯಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮಕ್ಕೆ ಪೂರೈಸಲಾಗಿರುವ ನೀರನ್ನು ಬಳ್ಳಾರಿಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ, ಈ ನೀರು ಕುಡಿಯಲು ಯೋಗ್ಯವಾಗಿದೆಯೋ?, ಇಲ್ಲವೋ? ಎಂದು ಹೇಳಬಹುದಾಗಿದೆ ಎಂದು ತಾಲೂಕಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Read More