ಬೆಂಗಳೂರು: ನಗರದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ನೇರಳೆ ಮಾರ್ಗದ (Purple Line) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣದಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆ ಕೆಂಗೇರಿಯಿಂದ ಬೈಯಪ್ಪನಹಳ್ಳಿಗೆ ತೆರಳುವ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ನಮ್ಮ ಮೆಟ್ರೋ, ಸಿಗ್ನಲ್ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಗ್ನಲ್ ಸರಿ ಮಾಡೋ ಪ್ರಯತ್ನದಲ್ಲಿದ್ದೇವೆ. ಆಗಿರೋ ಸಮಸ್ಯೆಯನ್ನು ಬಗೆಹರಿಸೋ ನಿಟ್ಟಿನಲ್ಲಿ ಟೆಕ್ನಿಕಲ್ ಟೀಮ್ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.
Author: Prajatv Kannada
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತಾವು ಮಾಡಿದ್ದ ಲಂಚದ ಆರೋಪಕ್ಕೆ ಸೂಕ್ತವಾದ ದಾಖಲೆಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಮಾಡಿರುವ ಆರೋಪಗಳಿಗೆ ಪೂರಕವಾಗಿ ದಾಖಲೆಗಳು ನನ್ನ ಬಳಿ ಇವೆ. ಅವು ಸಚಿವರೊಬ್ಬರ ಲಂಚಗುಳಿತನಕ್ಕೆ ಸಂಬಂಧಿಸಿದ ದಾಖಲೆಗಳು. ನಾನು ಆ ದಾಖಲೆಗಳನ್ನು ಬಿಡುಗಡೆ ಮಾಡಲು ಸಿದ್ಧ. ಆದರೆ, ಆ ದಾಖಲೆಗಳನ್ನು ನೋಡಿದ ನಂತರ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುವಿರಾ’’ ಎಂದು ಅವರು ಪ್ರತಿಸವಾಲು ಹಾಕಿದ್ದಾರೆ. ನನ್ನ ಬಳಿಯಿರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ನಿಮ್ಮ (ಕಾಂಗ್ರೆಸ್) ಸರ್ಕಾರ ಇರುತ್ತಾ ಎಂಬುದನ್ನು ಯೋಚನೆ ಮಾಡಿ. ಇನ್ನೂ ಹೊಸದಾಗಿ ಸರ್ಕಾರ ರಚಿಸಿದ್ದಾರೆ, ಸ್ವಲ್ಪ ದಿನ ಈ ಸರ್ಕಾರ ಕೆಲಸ ಮಾಡಲಿ ಎಂಬ ಉದ್ದೇಶದಿಂದ ನಾನು ದಾಖಲೆಗಳನ್ನು ಬಿಡುಗಡೆ ಮಾಡಿರಲಿಲ್ಲ’’ ಎಂದೂ ಸಹ ಅವರು ಗುಡುಗಿದ್ದಾರೆ
ಬೆಂಗಳೂರು: ನ್ಯೂಯಾರ್ಕ್ನ ಪೌರಾಣಿಕ ಕಾರ್ನೆಗೀ ಹಾಲ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಡ್ಯಾನ್ಸ್ ಫೆಸ್ಟಿವಲ್ ನಲ್ಲಿ ಬೆಂಗಳೂರಿನ ರಶ್ಮಿ ಶಶಿ ಅವರ 30 ವಿಧ್ಯಾರ್ಥಿಗಳ ನೃತ್ಯ ಕಲಾರಸಿಕರ ಮನ ಸೆಳೆಯಿತು. ಡ್ಯಾನ್ಸ್ ಫೆಸ್ಟಿವಲ್ ನಲ್ಲಿ 10 ಆಯ್ದ ನೃತ್ಯ ಶಾಲೆಗಳು ಪಾಲ್ಗೊಂಡಿದ್ದು, ಬೆಂಗಳೂರು ಮೂಲದ ಗುರು ರಶ್ಮಿಯವರ ತಂಡ ಭಾರತೀಯ ಶಾಸ್ತ್ರೀಯ ನೃತ್ಯವನ್ನ ( Indian Classical Dance) ಪ್ರದರ್ಶಿಸಿತು. ಟೆಕ್ಸಾಸ್ ಲ್ಯಾಂಡ್‍ನಲ್ಲಿರುವ ಸ್ಟುಡಿಯೋ ಮುದ್ರಾ ಸ್ಕೂಲ್ ಆಫ್ ಡ್ಯಾನ್ಸ್‍ನ ಕಲಾತ್ಮಕ ನಿರ್ದೇಶಕರಾಗಿರುವ ಗುರು ರಶ್ಮಿ ಶಶಿಯವರು ಬೆಂಗಳೂರಿನವರು. ಭರತನಾಟ್ಯ, ಜಾನಪದ ಮತ್ತು ಭಾರತದ ಇತರ ಸಮಕಾಲೀನ ನೃತ್ಯಗಳ ಕಲಾಕ್ಷೇತ್ರ ಶೈಲಿಯನ್ನು ಕಲಿಸುವಲ್ಲಿ ಗುರು ರಶ್ಮಿ ಪರಿಣತಿ ಹೊಂದಿದ್ದಾರೆ. ಯುಎಸ್‍ಎ ಮತ್ತು ಭಾರತದಾದ್ಯಂತ ಹಲವಾರು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಿದ್ದಾರೆ. ದಶಾವತಾರ, ರಾಮಾಯಣ, ಮಾಯಾ – ಸಮಕಾಲೀನ ನೃತ್ಯ ನಾಟಕ, ಪುಣ್ಯಕೋಟಿ, ರಘುವೀರ ಮತ್ತು ನಾರಿ ಪ್ರದರ್ಶನಗಳು ಗುರುತಿಸಲ್ಪಟ್ಟಿವೆ. ಪ್ರಮುಖ ಕಾರ್ಯಕ್ರಮಗಳಲ್ಲಿ ಅವರ ಅಭಿನಯಕ್ಕಾಗಿ ಹಲವು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರು: ಯಶವಂತಪುರದಲ್ಲಿ ಮೂರು ಎಕರೆ ಪ್ರದೇಶದಲ್ಲಿ ನೂತನ ವಕ್ಫ್ ಭವನ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಕ್ಫ್ ಮಂಡಳಿಯ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಆದಷ್ಟು ಬೇಗ ಸರ್ಕಾರದ ನೆರವು ಪಡೆದು ಕಾಮಗಾರಿ ಪ್ರಾರಂಭಿಸಲಾಗುತ್ತದೆ. ವಕ್ಫ್ ಮಂಡಳಿಯ ಮೂರು ಎಕರೆ ಜಾಗ ಯಶವಂತಪುರದಲ್ಲಿದೆ. ಈ ಜಾಗದಲ್ಲಿ ಒಂದು ಎಕರೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ. ಹಜ್ ಸಚಿವ ರಹೀಮ್ ಖಾನ್, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರು, ಜಮೀರ್ ಅಹಮದ್ ಅವರ ಸಮಯದಲ್ಲಿ ನೂತನ ವಕ್ಫ್ ಭವನ ನಿರ್ಮಾಣ ಆಗಲಿ. ಇದಕ್ಕೆ ನಮ್ಮೆಲ್ಲರ ಬೆಂಬಲ ಇರುತ್ತದೆ ಎಂದಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆಯ ನಂತರ ಆಡಳಿತ ಮತ್ತು ಪ್ರತಿಪಕ್ಷದ ಸ್ಥಾನಗಳು ಅದಲು ಬದಲಾಗುವುದು ಸಹಜ. ಇದರಲ್ಲಿ ಹೊಸತೇನಿಲ್ಲ ಆದರೆ ಈಗ ಮೇಲ್ಮನೆಯಲ್ಲಿ ಪ್ರತಿಪಕ್ಷದಲ್ಲಿದ್ದಾಗ ಮುಂದಿನ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದವರು ಈಗ ಆಡಳಿತ ಪಕ್ಷದ ಕೊನೆಯ ಸಾಲಿಗೆ ಬಂದಿದ್ದಾರೆ ಹಾಗೆ ಆಡಳಿತ ಪಕ್ಷದಲ್ಲಿದ್ದಾಗ ಎರಡು-ಮೂರನೇ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದವರು ಈಗ ಪ್ರತಿಪಕ್ಷದಲ್ಲಿ ‘ಮುಂಬಡ್ತಿ’ ಪಡೆದು ಮೊದಲ ಸಾಲಿನಲ್ಲಿ ಕುಳಿತುಕೊಂಡಿರುವುದನ್ನು ನಾವು ನೋಡಬಹುದು. ಪ್ರತಿಪಕ್ಷದ ನಾಯಕರಾಗಿ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದ ಬಿ.ಕೆ.ಹರಿಪ್ರಸಾದ್ ಈಗ ಕೊನೆ ಸಾಲಿನಲ್ಲಿ ಕುಳಿತುಕೊಂಡಿದ್ದರು. ಲಕ್ಷ್ಮಣ ಸವದಿ ಕುಳಿತುಕೊಳ್ಳುತ್ತಿದ್ದ ಸ್ಥಾನದಲ್ಲಿ ಜಗದೀಶ್ ಶೆಟ್ಟರ್ ಪ್ರತ್ಯಕ್ಷರಾಗಿದ್ದಾರೆ. ಅದೇ ರೀತಿ ಆಡಳಿತ ಪಕ್ಷದಲ್ಲಿದ್ದಾಗ ಎರಡನೇ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದ ಬಿಜೆಪಿಯ ಶಶೀಲ್ ನಮೋಶಿ ಈಗ ಮುಂಬಡ್ತಿ ಪಡೆದು ಮೊದಲ ಸಾಲಿಗೆ ಬಂದಿದ್ದಾರೆ. ಎರಡನೇ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದ ಜೆಡಿಎಸ್‌ನ ಟಿ.ಎ. ಶರವಣ ಅವರು ಈಗ ಮೊದಲ ಸಾಲಿಗೆ ಮುಂಬಡ್ತಿ ಪಡೆದು ಕುಳಿತುಕೊಂಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಮಗ ಯತೀಂದ್ರ ಸಿದ್ದರಾಮಯ್ಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದಿದ್ದಕ್ಕೆ ಕುಮಾರಸ್ವಾಮಿ ಹತಾಷರಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ಮಾಡುತ್ತಿರುವ ಆರೋಪಗಳೆಲ್ಲ ಸತ್ಯಕ್ಕೆ ದೂರ, ಲಂಚುಗಳಿತನದಿಂದ ತಮ್ಮ ಸರ್ಕಾರ ಬಹಳ ದೂರ ಎಂದು ಶಿವಕುಮಾರ್ ಹೇಳಿದರು. ಭ್ರಷ್ಟಾಚಾರ ನಡೆದಿರುವ ಬಗ್ಗೆ ಕುಮಾರಸ್ವಾಮಿಯವರಲ್ಲಿ ದಾಖಲೆ, ಪುರಾವೆಗಳಿದ್ದರೆ ಸರ್ಕಾರವೇ ರಚಿಸಿದ ಲೋಕಾಯುಕ್ತ ಇದೆ, ಅಲ್ಲಿಗೆ ಹೋಗಿ ದೂರು ಸಲ್ಲಿಸಲಿ ಎಂದು ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಕಂಡಿಶನ್ಯಿಲ್ಲದೇ ತರಬೇಕು, ಗೋ ಹತ್ಯೆ ಕಾಯಿದೆ ಬದಲಾವಣೆ ಮಾಡಬಾರದು, ಈ ಕುರಿತಾಗಿ ಇಂದು(ಜು.4) ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಇನ್ನು ಇದೇ ವೇಳೆ ಮಾತನಾಡಿದ ಅವರು ‘ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ ಎಂದರು. ಗ್ಯಾರಂಟಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಡಿವಿಎಸ್, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, N.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್. ಇದೀಗ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳಿದ್ದಾರೆ. ನಿನ್ನೆ(ಜು.3) ಮೃತಪಟ್ಟ ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ಯಾರಂಟಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಡಿವಿಎಸ್, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, N.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರ ಗಲಾಟೆ ಶುರು ಮಾಡಿದ್ದು, ಗ್ಯಾರಂಟಿ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡುವಂತೆ ಬಿಜೆಪಿಯವರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಯಾಗಿ ‘ಈ ಮೊಂಡಾಟ ಬಿಡಿ, ಮೊಂಡಾಟದಿಂದ ಏನೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮತ್ತೆ ಇದೇ ಮೊಂಡಾಟ ಪದಕ್ಕೆ ಬಿಜೆಪಿ ಗದ್ದಲ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ‘ಮೊಂಡಾಟ ಅಸಂವಿಧಾನ ಪದವಾ?, ಯಾವುದೇ ಪ್ರಶ್ನೆಗೆ ಉತ್ತರ ನೀಡಲು ನಾವು ತಯಾರು. ವಿಪಕ್ಷಗಳ ಮಾತಿಗೆ ಹೆದರಿಕೊಂಡು ಓಡಿ ಹೋಗಲ್ಲ ಎಂದರು.
ಬೆಂಗಳೂರು: ಬೀದಿ ಬದಿ ಸೊಪ್ಪು ಮಾರೋ ವೃದ್ಧೆ ಮೇಲೆ ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಕಳೆದ ಶನಿವಾರ ಜಯನಗರದ 26ನೇ ಕ್ರಾಸ್ ನಲ್ಲಿರು ಬಾಲಜಿ ಮೆಡಿಕಲ್ ಬಳಿ ಘಟನೆ ನಡೆದಿದೆ. ವೃದ್ಧೆ ಚಂದ್ರಮ್ಮ ಬಾಲಜಿ ಮೆಡಿಕಲ್ ಬಳಿ ಫುಟ್ ಬಾತ್ ನಲ್ಲಿ ಕಳೆದ ಕೆಲ ವರ್ಷಗಳಿಂದ ಸೊಪ್ಪಿನ ವ್ಯಾಪಾರಾ ಮಾಡ್ತಿದ್ರು. ಶನಿವಾರ ಸಂಜೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಂದ್ರಮ್ಮ ತಲೆಗೆ ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದಾರೆ. ಆದರೆ ವೃದ್ಧೆ ಚಂದ್ರಮ್ಮ ತಲೆಗೆ ತೀವ್ರ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.