ಬೆಂಗಳೂರು ;- ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾಗೊಳಿಸಿದೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜಿ. ಬಸವರಾಜ ಅವರಿದ್ದ ನ್ಯಾಯಪೀಠ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ ಆರ್ಜಿದಾರರು ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆ ಸದಸ್ಯನಾಗಿದ್ದಾನೆಯೇ ಇಲ್ಲವೇ ಎಂಬುದರ ಕುರಿತು ಈ ಹಂತದಲ್ಲಿ ಪರಿಗಣಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಯುಎಪಿಎ ಕಾಯಿದೆಯಡಿ ಮಾಡಲಾದ ಆರೋಪಗಳು ನಿಸ್ಸಂದೇಹವಾಗಿ ರಾಷ್ಟ್ರದ ವಿರುದ್ಧದ ಅಪರಾಧಗಳಾಗಿದ್ದು, ದೇಶದ ಏಕತೆ, ಸಮಗ್ರತೆ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುತ್ತವೆ ಎಂದಿದೆ. ಜೊತೆಗೆ, ಇದು ಸಮಾಜದ ವಿರುದ್ಧದ ಅಪರಾಧವೂ ಹೌದು. ಈ ಪ್ರಕರಣದ ವಾಸ್ತವಾಂಶಗಳು ವಿವರಿಸುವಂತೆ ಕೋಮುವಾದಿಗಳಂತೆ ಕಂಡುಬರುವ ಎಲ್ಲ ಆರೋಪಿಗಳಿಗೆ ಮೃತ ಹರ್ಷನ ಬಗ್ಗೆ ಯಾವುದೇ ವೈಯಕ್ತಿಕ ದ್ವೇಷ ಇರಲಿಲ್ಲ. ಹಿಂದೂಗಳಲ್ಲಿ ಭಯ ಬಿತ್ತುವ ಉದ್ದೇಶದಿಂದ ಹತ್ಯೆಗೆ ಹರ್ಷನನ್ನು ಆಯ್ದುಕೊಳ್ಳಲಾಗಿದೆ. ಹೀಗಾಗಿ ಮೇಲ್ಮನವಿದಾರನ ವಯಸ್ಸು ಚಿಕ್ಕದು, ಅತನಿಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬುದು ಆತನಿಗೆ…
Author: Prajatv Kannada
ಬೆಂಗಳೂರು ;- ಕಾಂಗ್ರೆಸ್ ಸರ್ಕಾರದ ಮೇಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ವೈಎಸ್ಟಿ ಮತ್ತು ವಿಎಸ್ಟಿ ಟ್ಯಾಕ್ಸ್ ಬಗ್ಗೆ ಸಾಕ್ಷಿಗಳು ಇದ್ದರೆ ಕೊಡಿ. ಅದರ ಬಗ್ಗೆ ನಾವು ತನಿಖೆ ಮಾಡುತ್ತೇವೆ. ವೈಎಸ್ಟಿ ಅಂದ್ರೆ ಏನು ಅನ್ನೋದರ ಬಗ್ಗೆ ಮೊದಲು ಹೇಳಿ. ಹೆಚ್ ಡಿ ಕುಮಾರಸ್ವಾಮಿ ಹಿರಿಯರಿದ್ದಾರೆ ನೋಡಿಕೊಂಡು ಮಾತನಾಡಬೇಕು. ಸುಮ್ಮನೆ ಹಿಟ್ ಅಂಡ್ ರನ್ ಬೇಡ ಎಂದು ಕಿಡಿಕಾರಿದರು. ರಾಜ್ಯದ ಮೇಲೆ ಭ್ರಷ್ಟಾಚಾರದ ಆರೋಪ ಇದೆ. ಅದನ್ನು ತೊಳೆಯುವ ಕೆಲಸ ನಾವು ಮಾಡ್ತಿದ್ದೇವೆ. ಶೇ 40ರಷ್ಟು ಕಮಿಷನ್ ಬಗ್ಗೆ ಕೂಡ ತನಿಖೆ ನಡೆಸುತ್ತಿದ್ದೇವೆ. ಹಿಂದಿನ ಸರ್ಕಾರದ ಮೇಲೆ ನಾವು ಭ್ರಷ್ಟಾಚಾರ ಆರೋಪ ಮಾಡಿದ್ವಿ. ಅದರ ದಾಖಲೆ ಇಟ್ಟುಕೊಂಡು ನಾವು ಮಾತನಾಡಿದ್ದೇವೆ. ಕುಮಾರಸ್ವಾಮಿ ಅವರ ಬಳಿ ದಾಖಲೆ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.
ಬೆಂಗಳೂರು ;- ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಪ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು. ಅದಕ್ಕೆ 30 ಲಕ್ಷ ಕೇಳಿದ್ದಾರೆ, ಅಲ್ಲಿ ಕೋಟ್ಯಂತರ ರೂಪಾಯಿ ಕೇಳುತ್ತಿದ್ದಾರೆ. ಈ ಹಿಂದೆ ನಮ್ಮ ವಿರುದ್ಧ ಆರೋಪ ಮಾಡಿದಾಗ ಅದಕ್ಕೆ ಎಲ್ಲದಕ್ಕೂ ದಾಖಲೆ ಕೊಡೋಕೆ ಆಗುತ್ತಾ ಅಂತಿದ್ರು. ಈಗ ಯಾಕೆ ದಾಖಲೆ ಕೇಳ್ತಾ ಇದ್ದಾರೆ. 40%, 40% ಅಂತಿದ್ರಲ್ವಾ, ಈಗ 40% ಇಲ್ವಲ್ಲ. ಈಗ ಕೆಲಸ ಮಾಡಿ ತೋರಿಸಲಿ ಎಂದು ಬೊಮ್ಮಾಯಿ ಸವಾಲು ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರಿ ಪ್ರಾಮಾಣಿಕತೆಯ ಬಗ್ಗೆ ಮಾತಾನಾಡುತ್ತ ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಾಗ ಮಾತ್ರ ಈಗ ಹೊರಗಡೆ ಬರಲು ಸಾಧ್ಯ. ಎಲ್ಲಾ ಕಾಮಗಾರಿಗಳಲ್ಲಿ 40% ರೆಡ್ಯೂಸ್ ಮಾಡಿ ಕಾಮಗಾರಿ ಮಾಡಿ. ಕಾಂಟ್ರ್ಯಾಕ್ಟರ್ ಕೂಡ ಅದೇ ದರಕ್ಕೆ ಒಪ್ಪಿಕೊಳ್ಳಬೇಕು. ಈಗ ದುಡ್ಡು ಕಡಿಮೆಯಾಗಬೇಕಲ್ಲ. ನಮ್ಮಲ್ಲಿ 40% ಇತ್ತು…
ಬೆಂಗಳೂರು ;– ಹೆಚ್ ಡಿಕೆ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ, ಅವರ ಆರೋಪ ಹಾಸ್ಯಾಸ್ಪದ ಎಂದು ಸಚಿವ ಬಿ ನಾಗೇಂದ್ರ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಮೇಲೆ ಭ್ರಷ್ಟಾಚಾರ ಆರೋಪ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವರು, ವದಂತಿ ಮಾತನ್ನು ಅವರು ಹೇಳುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಗೌರವ ತರಲ್ಲ. ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಈ ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಈಗಲೂ ಅದನ್ನು ಅವರು ಮುಂದುವರಿಸುತ್ತಿದ್ದಾರೆ. ಹೀಗೆ ಅವರು ಮುಂದುವರಿದರೆ ಲೋಕಸಭೆಯಲ್ಲಿ ಜನರು ಪಾಠ ಕಲಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟವಾದ ಆಡಳಿತ ಕೊಡುತ್ತಿದ್ದಾರೆ. ಯಾವುದೇ ಭ್ರಷ್ಟಾಚಾರ ನಡೆಯುತ್ತಿಲ್ಲ. ಉತ್ತಮ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಪಟು ಹಾಗೂ ಕೋಚ್ ಹೆಂಡತಿ ನಡುವೆ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಇಬ್ಬರ ಗಲಾಟೆಯನ್ನು ಮಾಧ್ಯಮಗಳ ಮೂಲಕ ನೋಡಿದೆ. ಅವರಿಬ್ಬರೂ ನಮ್ಮ ಇಲಾಖೆ ಅಡಿಯಲ್ಲಿ ಬರುವವರಲ್ಲ. ಮಕ್ಕಳ ಕ್ರೀಡೆಗೆ…
ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಉದ್ಘಾಟಿಸಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 (T2) ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಸಂಚಾರ ಆರಂಭವಾಗಿದೆ. ಹೌದು ಟರ್ಮಿನಲ್ 2 ನಿಂದ ಬಿಎಂಟಿಸಿಯ ವಾಯು ವಜ್ರ ಬಸ್‌ಗಳು ಕಾರ್ಯಾರಂಭ ಮಾಡಿವೆ. ಸುರಕ್ಷಿತ, ಆರಾಮದಾಯಕ ಮತ್ತು ಕೈಗೆಟುಕುವ ಪ್ರಯಾಣಕ್ಕಾಗಿ ಬಿಎಂಟಿಸಿ ಸೇವೆಗಳನ್ನು ಆರಿಸಿಕೊಳ್ಳಿ. ನಿಮ್ಮ ಮನೆ ಬಾಗಿಲಿಗೆ ನಮ್ಮ ಸೇವೆಯನ್ನು ತರುತ್ತಿದ್ದೇವೆ ಎಂದು ಬಿಎಂಟಿಸಿ ಭಾನುವಾರ ಟ್ವಿಟ್ ಮಾಡಿದೆ. ಟರ್ಮಿನಲ್ 2ನಿಂದ ಜನವರಿ 15, 2023 ರಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಪ್ರಾರಂಭವಾಯಿತು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ಟರ್ಮಿನಲ್ 1ನಿಂದ ಟರ್ಮಿನಲ್ 2ಗೆ ಸ್ಥಳಾಂತರಿಸಲಾಗುವುದು. ಇನ್ನು ಟರ್ಮಿನಲ್ 1ನಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಆರಂಭಿಸುತ್ತವೆ
ಬೆಂಗಳೂರು ;- ಸಂವಿಧಾನ ಇಲ್ಲದಿದ್ದರೆ ನಾನು ಎಮ್ಮೆ ಕಾಯುತ್ತಿರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದರೆ ನಾನು ಇಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಸಂವಿಧಾನ ಇಲ್ಲದಿದ್ದರೆ ನಾನು ಎಮ್ಮೆ ಕಾಯುತ್ತಿರುತ್ತಿದೆ. ಸಚಿವ ಶಿವರಾಜ್ ತಂಗಡಗಿ ಅವರು ಕಲ್ಲು ಒಡೆಯುತ್ತಿದ್ದರು ಎಂದರು. ನಾವು ಮನುಷ್ಯರಾಗಿ ಬದುಕಿ ಸಮಾಜದಲ್ಲಿ ಪರಿವರ್ತನೆ ತರಬೇಕು. ಬಸವಣ್ಣನವರು ಕೆಳವರ್ಗದ ಜನರ ಪರವಾಗಿ ಕೆಲಸ ಮಾಡಿದ್ದರು. ಅಸಮಾನತೆ ಇದ್ದರೆ ಸಮಾಜದಲ್ಲಿ ಸಾಮರಸ್ಯ ಇರುವುದಿಲ್ಲ. ಹೀಗಾಗಿ ಬಸವಣ್ಣ ಅನುಭವ ಮಂಟಪ ನಿರ್ಮಾಣ ಮಾಡಿದರು ಎಂದರು.
ಪ್ರಭಾಸ್ ನಟನೆಯ ಆದಿ ಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಹಾಗೂ ನವೀನ್ ಧವನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನಡೆಸಿದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾನ್ ಮತ್ತು ಪ್ರಕಾಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ ಜುಲೈ 27ಕ್ಕೆ ಸಿನಿಮಾದ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ಬರಹಗಾರ ಮನೋಜ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದಿಪುರುಷ್ ಸಿನಿಮಾವೂ ಸಾರ್ವಜನಿಕರ ಭಾವನೆಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಿದ ಐವರು ಸದಸ್ಯರಿರುವ ಸಮಿತಿಯನ್ನು ನೇಮಿಸಬೇಕು ಎಂದು ಸರಕಾರಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣಪತ್ರವನ್ನು ಮರುಪರಿಶೀಲಿಸಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಆರಂಭದಿಂದಲೂ ವಿವಾದದ ಮೂಲಕವೇ ತೆರೆಗೆ ಬಂದ ಆದಿಪುರುಷ್ ಸಿನಿಮಾ ವಾರದಲ್ಲೇ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿತ್ತು. ಈಗಾಗಲೇ ಸಾಕಷ್ಟು ಕಡೆಗಳಲ್ಲಿ ಆದಿಪುರುಷ್ ಸಿನಿಮಾವನ್ನು ಎತ್ತಂಗಡಿ ಮಾಡಲಾಗಿದೆ. ಆದರೂ ಈ ಸಿನಿಮಾದ ಮೇಲಿನ ಚರ್ಚೆಗಳು ಮಾತ್ರ ಇನ್ನೂ ನಿಂತಿಲ್ಲ. ಚಿತ್ರದ ಕುರಿತು ಸಾಕಷ್ಟು…
ತುಮಕೂರು ;- ಕಾಂಗ್ರೆಸ್ ಉಚಿತ ಭಾಗ್ಯದ ಎದುರು ನಮ್ಮೆಲ್ಲಾ ಕೆಲಸ ಕೊಚ್ಚಿಹೊಯ್ತು ಎಂದು ಹೇಳುವ ಮೂಲಕ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮೌನವಹಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಕೆಲಸ ಮಾಡಿದಕ್ಕೆ ಪ್ರತಿಫಲ ಸಿಗದೇ ಇರೋದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರ ಸೀಮಿತವಲ್ಲ, ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ನಾಯಕರು ಸೋತಿದ್ದಾರೆ. ಯಾಕಂದರೆ ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸ ಅನಿಸಲೇ ಇಲ್ಲ, ಅವರು ಕೊಡುವ ಅಕ್ಕಿ, ಅವರು ಕೊಡುವ ದುಡ್ಡೇ ಶ್ರೇಷ್ಠ ಅನಿಸಿತು. ಅವರ ಉಚಿತ ಭಾಗ್ಯಗಳ ಮುಂದೆ ನಮ್ಮ ಎಲ್ಲಾ ಕೆಲಸ ಕೊಚ್ಚಿಕೊಂಡು ಹೋಯಿತು ಎಂದರು. ನಾವು ಯಾವ ನೀರು ಕುಡಿದಿದ್ದಿವಿ, ಯಾವ ರಸ್ತೆಯಲ್ಲಿ ಓಡಾಡುತಿದ್ದೀವಿ ಅನ್ನೋದನ್ನು ಜನರು ಮರೆತರು, ಇದೇ ರೀತಿ ಉಚಿತ ಭಾಗ್ಯ ಮುಂದುವರೆದರೆ ಮುಂದೆ ಚುನಾವಣೆ ಮಾಡೋದು ತುಂಬಾ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ವಜಾಗೊಳಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಆರೋಪಿಸಿದ್ದಾರೆ. ಚಿಮುಲ್ ಮರು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಸರ್ಕಾರ ಚಿಕ್ಕಬಳ್ಳಾಪುರ ರೈತರಿಗೆ ಪೆಟ್ಟು ನೀಡಿದೆ ಎಂದರು. ಚುನಾವಣೆಯಲ್ಲಿ ಸೋತಿದ್ದೇನೆ ಆದರೆ ಸತ್ತಿಲ್ಲ. ಟಾರ್ಗೆಟ್ ಮಾಡಿಕೊಂಡು ಏನು ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಆಕ್ಸಿಜನ್ ದುರಂತ ತನಿಖೆಯಲ್ಲಿ ಯಾರು ಟಾರ್ಗೆಟ್ ಎಂಬುದು ಗೊತ್ತು. ಮುಂದಿನ 6 ತಿಂಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಲ್ಲ ಎಂದರು.
ಬಳ್ಳಾರಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದಕ್ಕೆ ಯುವತಿಯೊಬ್ಬಳು ಕಳೆದ ನಾಲ್ಕು ದಿನಗಳ ಹಿಂದೆ, ಆತ್ಮಹತ್ಯೆಗೆ ಯತ್ನ ಮಾಡಿದ್ದು, ಇಂದು ಚಿಕಿತ್ಸೆ ಸ್ಪಂದಿಸದ ಕಾರಣ ಯುವತಿ ಇಂದು ಅಸುನೀಗಿದ್ದಾಳೆ. ನಾಲ್ಕು ದಿನಗಳ ಕಾಲ ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದ ಬಳ್ಳಾರಿಯ ಅಮೃತ ಇಂದು ಸಾವಿಗೀಡಾಗಿದ್ದಾಳೆ. ಪ್ರೀತಿಸಿದ್ದ ಯುವಕ ಸುನೀಲ್ ಅಮೃತಾಳನ್ನ ಎಲ್ಲ ರೀತಿಯಲ್ಲೂ ಬಳಸಿಕೊಂಡು ಬಳಿಕ ಮದುವೆ ತಿರಸ್ಕರಿದ್ದ. ಅಮೃತಾ ಆತ್ಮಹತ್ಯೆಗೂ ಮುನ್ನ ತನಗೆ ಕೈ ಕೊಟ್ಟ ಪ್ರೇಮಿಯ ಮೋಸದ ಕತೆಯ ಪತ್ರದ ಮೂಲಕ ಬರೆದಿಟ್ಟಿದ್ದಳು. ಅಮೃತ ಪಿಯುಸಿ ಮುಗಿದ ಬಳಿಕ ಸ್ನೇಹಿತೆಯ ಗಂಡನ ಸಹೋದರನ ಸುನೀಲ್ ಜೊತೆ ಪರಿಚಯವಾಗಿತ್ತು. ಪರಿಚಯದ ಬಳಿಕ ಪ್ರೀತಿ ಪ್ರೇಮ ಪ್ರಣಯ ಎಲ್ಲ ನಡೆದ ಬಳಿಕ ಮದುವೆ ಯಾಗಲು ಜಾತಿ ಬೇರೆ ಎಂದು ಸುನೀಲ್ ನಿರಾಸಕರಿಸಿದ್ದ. ಮದುವೆ ನಿರಾಕರಣೆ ಮಾಡಿದ ಹಿನ್ನಲೆ ನೇಣಿಗೆ ಶರಣಾಗಿದ್ದ ಅಮೃತ, ಕೊನೆಯ ಕ್ಷಣದಲ್ಲಿ ನೇಣಿನಿಂದ ಇಳಿಸಿ ಬದುಕಿಸಲು ಸಾಕಷ್ಟು ಪ್ರಯತ್ನ ಮಾಡಿದ್ರು ಕೊನೆಗೆ ಸಾವನ್ನಪ್ಪಿದ್ದಾಳೆ. ಅಮೃತ (ವಡ್ಡರ) ತಳ ಸಮುದಾಯಕ್ಕೆ…