Author: Prajatv Kannada

ಚಿಕ್ಕನಾಯಕನಹಳ್ಳಿ: ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡ್ತಾರೆ ಅಂದುಕೊಂಡಿದ್ದೆ. ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಚುನಾವಣೆ ಬಳಿಕ ಮೊದಲ ಬಾರಿ ಜೆ.ಸಿ.ಮಾಧುಸ್ವಾಮಿ ಮೌನ ಮುರಿದಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಜೆ.ಸಿ.ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಬೇಸರ ಹೊರ ಹಾಕಿದ್ದಾರೆ.

Read More

ಹುಬ್ಬಳ್ಳಿ: ಹಾವಿನೊಂದಿಗೆ ಹುಚ್ಚಾಟ ಆಡಲು ಹೋಗಿ ವ್ಯಕ್ತಿಯೊಬ್ಬ ನಾಗರಹಾವು ಕಚ್ಚಿಸಿಕೊಂಡು ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗಾಯಾಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ. ಸಿದ್ದಪ್ಪ ಎಂಬ ವ್ಯಕ್ತಿ ನಾಗರಹಾವಿನೊಂದಿಗೆ ಹುಚ್ಚಾಟ ಆಡುತ್ತಿದ್ದು, ನಾಗರಹಾವಿನ ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾಗರಹಾವು ಕಚ್ಚಿದ್ದ ತಕ್ಷಣ ನರಗುಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಆದರೇ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಚಾಮರಾಜನಗರದಲ್ಲಿ ಆಷಾಡಮಾಸದಲ್ಲಿ ನಡೆಯುವಂತಹ  ಇತಿಹಾಸ ಪ್ರಸಿದ್ದ  ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವವು ಕೆಂಪನಂಜಾಂಬಸಮೇತಚಾಮರಾಜೇಶ್ವರಸ್ವಾಮಿ ಜಾತ್ರಾ ರಥೋತ್ಸವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಮಧ್ಯಾಹ್ನ 12‌‌.30  ಗಂಟೆಯ ಶುಭ ಲಗ್ನದಲ್ಲಿ ರಥೋತ್ಸವ ನೆರವೇರಿತು. ರಥವು ದೇವಸ್ಥಾನದ ಮುಂಭಾಗದಿಂದ ದಕ್ಷಿಣಾಭಿಮುಖವಾಗಿ ಚಲಿಸಿ, ಎಸ್.ಬಿ.ಎಂ. ರಸ್ತೆಯಲ್ಲಿ ಸಾಗಿ ವೀರಭದ್ರೇಶ್ವರಸ್ವಾಮಿ ದೇವಾಲಯದ ವೃತ್ತದಿಂದ ಮಾರಮ್ಮ ದೇವಸ್ಥಾನದ ರಸ್ತೆಯ ಮೂಲಕ ಹಳೆ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಹಾದು ದೇವಸ್ಥಾನದ ಮೂಲಸ್ಥಾನ ತಲುಪಿತು.

Read More

ಯಾದಗಿರಿ: ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಉರಗಗಳ ಸರಸ ಸಲ್ಲಾಪ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದ ಜಮಿನೊಂದರಲ್ಲಿ ಘಟನೆ. ಆರೇಳು ನಿಮಿಷಗಳ ಕಾಲ ಸರಸ ಸಲ್ಲಾಪದಲ್ಲಿ ತೊಡಗಿದ್ದ ಕೇರೆ ಹಾವುಗಳು. ಹಾವುಗಳ ಸರಸ ಸಲ್ಲಾಪದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ವೈದ್ಯ ಕಿರಣ ಜಕರಡ್ಡಿ. ಜನರು ನಿಂತು ನೋಡುತ್ತಿದ್ರೂ ಸರಸ ಸಲ್ಲಾಪದಲ್ಲಿ ತೊಡಗಿದ್ದ ಉರಗಗಳು

Read More

ಬೀದರ್:  ಬಸವಕಲ್ಯಾಣ ನಗರದ ಹಿರೇಮಠ ಕಾಲೋನಿಯಲ್ಲಿ ಗೋಹತ್ಯೆ ಪ್ರಕರಣ ಬಯಲಿಗೆ ಬಂದಿದ್ದು, ಇಬ್ಬರ ವಿರುದ್ಧ ದೂರು ದಾಖಲಾದ ಘಟನೆ ನಡೆದಿದೆ ನಗರದ ಹಿರೇಮಠ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಬಗೋವು ಹತ್ಯೆ ಮಾಡಲಾಗಿದೆ ಎಂದು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯ ಬೆನಲ್ಲಿ ಯೇ ಪೊಲೀಸರು ಪಶು ವೈದ್ಯಾಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣ ಪಿ ಎಸ ಐ ರೇಣುಕಾ ಅವರ ದೂರಿನ ಮೇರೆಗೆ ನಗರದ ಠಾಣೆಯಲ್ಲಿ ಹಿರೇಮಠ  ಕಾಲೋನಿಯ ನಿವಾಸಿ ಇನಾಮುಲ್ಲಾ‌ ಖಾನ.ಹಾಗೂ ಮಝರ್ ಖಾನ್ ಎಂಬುವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯ ತಡೆ ಮತ್ತು ಸಂರಕ್ಷಣೆ ಕಾಯ್ದೆ 2020ರ ಅಡಿ ದೂರ ದಾಖಲಿಸಿ ವಿಚಾರಣೆ ನಡೆಸಲಾಗಿದೆ.

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಾದ್ಯಂತ ಎಲ್ಲೆಡೆ ಸೋಮವಾರ ಗುರುಪೂರ್ಣಿಮೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬಾಗೇಪಲ್ಲಿ ಪಟ್ಟಣದ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಲಾಯಿತು. ವಿಶೇಷವಾಗಿ ಶಿರಡಿ ಸಾಯಿಬಾಬಾ ಅವರಿಗೆ ಮುಂಜಾನೆಯಿಂದಲೇ ಗುರುವಿನ ಆರಾಧನೆ ನಡೆಯಿತು. ಭಜನೆ, ಪ್ರಾರ್ಥನೆ, ಸತ್ಯನಾರಾಯಣ ವ್ರತ ಮತ್ತಿತರೆ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು. ಸಾಯಿಬಾಬಾ ಅವರಿಗೆ ಅಭಿಷೇಕ–ಅಲಂಕಾರಗಳನ್ನು ಮಾಡಿ, ಭಕ್ತರು ಭಕ್ತಿಭಾವ ಮೆರೆದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವಿವಿಧೆಡೆಗಳಿಂದ ಮಂದಿರಕ್ಕೆ ಆಗಮಿಸಿದ ಭಕ್ತರು ಬಾಬಾ ದರ್ಶನ ಪಡೆದು ಧನ್ಯರಾದರು. ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟ್ ವತಿಯಿಂದ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟ್ ಅಧ್ಯಕ್ಷ ಬಾಬೂರೆಡ್ಡಿ ಸೇರಿದಂತೆ ಟ್ರಸ್ಟ್ ಸದಸ್ಯರು ಇತರರು ಭಾಗವಹಿಸಿದರು.

Read More

ಮೈಸೂರು: ಪ್ರೀತಿಸು ಅಂತ ಪೀಡಿಸುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ. ಯುವತಿ ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಹರ್ಷಿತಾ ಪೋಷಕರು ಆರೋಪಿಸಿದ್ದಾರೆ. ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್‌ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಶಿವು ಮನವಿಯನ್ನು ಹರ್ಷಿತಾ ತಿರಸ್ಕರಿಸುತ್ತಿದ್ದಳು. ಈ ಮಧ್ಯೆ ಮನೆಯವರು ಹರ್ಷಿತಾಗೆ ಮದುವೆ (Marriage) ನಿಶ್ಚಯ ಮಾಡಿ ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಈ ವಿಷಯ ತಿಳಿದ ನಂತರ ತನ್ನನ್ನು ಮದುವೆಯಾಗುವಂತೆ ಇನ್ನಷ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳನ್ನ ಸ್ವಚ್ಛಗೊಳಿಸಲು ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ…

Read More

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ವಸತಿ ಯೋಜನೆ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸುಳ್ಳು ಅಭಿಯಾನ ಆರಂಭ ಮಾಡಿದ್ದಾರೆ. ಸುಳ್ಳು ಪ್ರಚಾರದಿಂದ ಗೆದ್ದ ಮೇಲೆ ಅಭಿವೃದ್ಧಿ ಮೇಲೆ ಲಕ್ಷ್ಯ ಕೊಡ್ತಾರೆ ಎಂದು ಭಾವಿಸಿದ್ದೆ. ಆದರೆ ಶಾಸಕ ಪ್ರದೀಪ್ ಈಶ್ವರ್‌ಗೆ ಸುಳ್ಳೆ ಮನೆ ದೇವರಾಗಿದೆ ಎಂದು ಮಾಜಿ ಸಚಿವ ಸುಧಾಕರ್ (K Sudhakar) ಕಿಡಿಕಾರಿದ್ದಾರೆ. ಕ್ಷೇತ್ರದಲ್ಲಿ ನಿವೇಶನಗಳು ಆಗೇ ಇಲ್ಲ ಎನ್ನುವ ಹಾಗೆ ಬಡವರ ಆಸೆಗೆ ತಣ್ಣೀರು ಎರಚುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಸುಳ್ಳಿನ ಯೋಜನೆ ತಂದಿಲ್ಲ. ಕಣ್ಣಿಗೆ ಕಂಡಿರುವ ಯೋಜನೆ ತಂದಿದ್ದೇನೆ. ರಾಜ್ಯದಲ್ಲೇ 20,000ಕ್ಕೂ ಹೆಚ್ಚು ನಿವೇಶನ ತಂದ ಏಕೈಕ ವ್ಯಕ್ತಿ ನಾನು. ಇದನ್ನು ತಿಳಿದುಕೊಳ್ಳಲಿ ಎಂದರು. ಎಲ್ಲದಕ್ಕೂ ಆದೇಶ ಪತ್ರಗಳಿವೆ. 555 ಎಕರೆ ಜಮೀನು ಮಂಜೂರಾತಿ ಆಗಿದೆ. ನಾನೇ ಖುದ್ದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಫಲಾನುಭವಿಗಳ ಆಯ್ಕೆ ಮಾಡಿದ್ದೇನೆ. ಆಗ ಆಧಿಕಾರಿಗಳು ಏನು ಮಾಡುತ್ತಿದ್ದರು? ಶಾಸಕ ಪ್ರದೀಪ್ ಈಶ್ವರ್ ಹಕ್ಕು ಪತ್ರ ಯಾವುದು, ಮಂಜೂರಾತಿ ಪತ್ರ ಯಾವುದು ಎಂಬುದು ಏನು ಅಂತನೇ…

Read More

ಬೆಂಗಳೂರು: ಬಿಜೆಪಿ ಬಳ್ಳಾರಿ ವಿಭಾಗ ಉಸ್ತುವಾರಿ ಸಿದ್ಧೇಶ್ ಯಾದವ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದ್ದ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಂಡಿದ್ದ ಯಾದವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Read More

ಬೆಂಗಳೂರು – ʻ*ಈಶ್ವರ ಅಲ್ಲಾ, ನೀನೇ ಎಲ್ಲಾ*’ ಎಂದು ಬೋಧಿಸಿ, ಅದನ್ನು ಆಚರಣೆಯಲ್ಲಿ ತಂದವರು ಕಳಸದ ಗುರು ಗೋವಿಂದ ಭಟ್ಟರು ಹಾಗೂ ಅವರ ಶಿಷ್ಯರಾದ ಕರ್ನಾಟಕದ ಕಬೀರ, ಸಂತ ಶಿಶುನಾಳ ಶರೀಫರು. ಮಂದಿರ-ಮಸೀದಿ, ಪುರಾಣ-ಕುರಾನ, ನಮನ-ನಮಾಜ್, ಅಲ್ಲಮ-ಅಲ್ಲಾ, ಜಂಗಮ-ಫಕೀರ, ಇವೆಲ್ಲಾ ಒಂದೇ, ಭಗವಂತನ ದರ್ಶನಕ್ಕೆ ನಾವು ಹಾಕಿಕೊಂಡ ವಿವಿಧ ಹಾದಿಗಳು ಎಂದು ತೋರಿಸಿದಂತಹ ದಾರ್ಶನಿಕರ ಪೈಕಿ ಶಿಶುನಾಳ ಶರೀಫರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಹೇಳಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡ ಸಂತ ಶಿಶುನಾಳ ಶರೀಫರ, ಹಡಪದ ಅಪ್ಪಣ್ಣನವರ ಹಾಗೂ ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಳಸದ ಗುರು ಗೋವಿಂದ ಭಟ್ಟರು ಹಾಗೂ ಸಂತ ಶಿಶುನಾಳ ಶರೀಫರು ಹಿಂದೂ ಹಾಗೂ ಇಸ್ಲಾಂ ಧರ್ಮಗಳ ಸಮಾನತೆ, ಸಮನ್ವಯ ಹಾಗೂ ಸಮಭಾವನ್ನು, ಸಮಚಿತ್ತ ಹಾಗೂ ಸಮದೃಷ್ಟಿಯಿಂದ ನೋಡಿದ ‘ಸಮಾನತೆಯ ಹರಿಕಾರರು‘ ಕಳಸದ…

Read More