ಬೆಂಗಳೂರು: ತಲಘಟ್ಟಪುರದಲ್ಲಿ ಜೂ.28ರಂದು ನಡೆದಿದ್ದ ಅರುಣ್ ಕುಮಾರ್ ಎನ್ನುವ ವ್ಯಕ್ತಿ ಕೊಲೆ ಪ್ರಕರಣವನ್ನು ಪೊಲೀಸರು 40 ಗಂಟೆಗಳಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರುಣ್ ಕುಮಾರ್ನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ತಾಳಿ ಕಟ್ಟಿದ ಹೆಂಡತಿನೇ. ಪತ್ನಿ ರಂಜಿತಾ ಎನ್ನುವಾಕೆ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿ ಅರುಣ್ ಕುಮಾರ್ನನ್ನು ಕೊಲೆ ಮಾಡಿದ್ದಾಳೆ. ಈ ಸಂಬಂಧ ಇದೀಗ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ರಂಜಿತಾ, ಪ್ರಿಯಕರ ಗಣೇಶ್, ಶರತ್ ಶಿವಾನಂದ, ದೀಪು ಬಂಧಿತ ಆರೋಪಿಗಳು. ಆರೋಪಿ ಗಣೇಶ್, ರಂಜಿತಾ ನಡುವೆ ಅಕ್ರಮ ಸಂಬಂಧ ಇತ್ತು. ಆದ್ರೆ, ತಮ್ಮಿಬ್ಬರ ಲವ್ವಿಡವ್ವಿಗೆ ಪತಿ ಅರುಣ್ ಕುಮಾರ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ರಂಜಿತಾ ಜೂ.28ರಂದು ಪ್ರಿಯಕರ ಜತೆ ಸೇರಿ ಪತಿ ಅರುಣ್ನನ್ನು ಕೊಲೆ ಮಾಡಿಸಿದ್ದಳು ಎಂದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ. ಜೂ.28ರಂದು ಅರುಣ್ ಕುಮಾರ್ ಕೊಲೆಯಾಗಿತ್ತು. ಈ ಬಗ್ಗೆ ಬೆಂಗಳೂರಿನ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೆನ್ನತ್ತಿದ್ದ ಪೊಲೀಸರಿಗೆ ಕೊಲೆಯಾದ ವ್ಯಕ್ತಿಯ ಪತ್ನಿ…
Author: Prajatv Kannada
ಬೆಂಗಳೂರು: ವಿಧಾನಸಭೆ, ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ವಿಪಕ್ಷ ನಾಯಕರ ಆಯ್ಕೆ ಆಗಲಿದೆ. ನನ್ನ ಪ್ರಕಾರ ವೀಕ್ಷಕರು ಈಗಾಗಲೇ ಬಂದಿದ್ದಾರೆ. ನಾಳೆಗೆ ಎಲ್ಲಾವೂ ಸರಿಯಾಗುತ್ತೆ, ಯಾವುದೇ ಗೊಂದಲ ಇಲ್ಲ. ರಾಜ್ಯಪಾಲರ ಭಾಷಣ ನೋಡಿಲ್ಲ, ನೋಡಿದ ಬಳಿಕ ಮಾತಾಡುತ್ತೇನೆ ಎಂದರು. ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ಎಂಬ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಧ್ವನಿಗೂಡಿಸಿದ ಮಾಜಿ ಸಿಎಂ, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ಕೇಳಿದ್ದಾರೆ,ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ ಎಂದರು.
ಬೆಂಗಳೂರು: ವಿಧಾನಸೌಧ ಕೆಂಗಲ್ ಗೇಟ್ ಬಳಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲರ ಭಾಷಣ ನಾನು ಕಂಡಂತೆ ಸಪ್ಪೆ ಭಾಷಣ. ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿರುವ ಸರ್ಕಾರ. ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ ಎಂದರು. ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ಎಂಬ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಧ್ವನಿಗೂಡಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ಕೇಳಿದ್ದಾರೆ,ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಇದೀಗ ಎಲ್ಲಡೆ ಗ್ಯಾರಂಟಿಗಳ್ದೇ ಚರ್ಚೆ.ಈಗಾಗಲೇ ಜಾರಿಯಾಗಿರೋ ಗ್ಯಾರಂಟಿಗಳಿಗೆ ಅಂತೂ ಭರ್ಜರಿ ರೆಸ್ಪಾನ್ಸ್ ಸಿಗ್ತಿದೆ.ಉಚಿತ ಪ್ರಯಾಣ ಶುರುವಾದ್ಮೇಲೆ ಅಂತೂ ಮಹಿಳೆಯರ ಕಾಲು ಮನೆಯಲ್ಲಿ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ಸಾರಿಗೆ ಬಸ್ ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗ್ತಿದ್ರೆ ಇತ್ತ ಗೃಹಜ್ಯೋತಿ ನೋಂದಾಣಿ ಸಂಖ್ಯೆ ಬರೋಬ್ಬರಿ 1 ಕೋಟಿ ಸನಿಹಕ್ಕೆ ಬಂದು ನಿಂತುಬಿಟ್ಟಿದೆ. ಶಕ್ತಿ ಯೋಜನೆ ಸ್ತ್ರೀಯರ ಪ್ರಯಾಣಕ್ಕೆ ಬಲ ತುಂಬಿದ ಯೋಜನೆ.ಈ ಯೋಜನೆ ಆರಂಭವಾದ ಜೂನ್ 11ರಿಂದ ಬಸ್ಗಳು ಈಗಲೂ ರಶ್ ಆಗಿಯೇ ಓಡಾಡ್ತಿವೆ..ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಸ್ತ್ರೀಯರು ಸಾರಿಗೆ ಬಸ್ಗೆ ಶಕ್ತಿ ತುಂಬಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಅವಕಾಶ ನೀಡಿದ ಪರಿಣಾಮ ಬಸ್ ಗಳೆಲ್ಲಾ ಫುಲ್ ರಶ್ ಆಗ್ತಿದೆ.ವಾರದಿಂದ ವಾರಕ್ಕೆ ಬಸ್ ಗಳಲ್ಲಿ ಓಡಾಟ ಮಾಡುವರ ಸಂಖ್ಯೆ ಹೆಚ್ಚಾಗ್ತಿದೆ. ಹೌದು.. ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಇವತ್ತಿಗೆ ಮೂರು ವಾರ ಆಯ್ತು. ಈ ಮೂರು ವಾರದಲ್ಲಿ…
ಬೆಂಗಳೂರು: ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಾಯಕರು ವರ್ಗಾವಣೆ ದಂಧೆ ಶುರು ಮಾಡಿದ್ದಾರೆ. ನಾಯಕರ ಆಧಾರಿತ ಸರ್ಕಾರವಿದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಜನರಿಗೆ ಗ್ಯಾರಂಟಿಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಎಂದಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಸದನದ ಹೊರಗಡೆ ಮತ್ತು ಒಳಗಡೆ ಹೋರಾಟ ಮಾಡಲಿದ್ದೇವೆ. ಸದನದ ಹೊರಗಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಜು.4ರಂದು ಫ್ರೀಡಂಪಾರ್ಕ್ನಲ್ಲಿ ಹೋರಾಟ ಮಾಡುತ್ತಾರೆ ಎಂದು ಹೇಳಿದರು. ಷರತ್ತು ಇಲ್ಲದೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಈಗ ನೋಡಿದ್ರೆ ಗ್ಯಾರಂಟಿಗಳಿಗೆ ಸರ್ಕಾರ ಕಂಡಿಷನ್ ಹಾಕುತ್ತಿದೆ. 10 ಕೆಜಿ ಅಕ್ಕಿಯನ್ನು ಕಾಂಗ್ರೆಸ್ ಸರ್ಕಾರ ಕೊಡಬೇಕು. ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡಬೇಕು. 200 ಯುನಿಟ್ ವಿದ್ಯುತ್ ಫ್ರೀ ಕೊಡುತ್ತೇವೆ ಎಂದು ಹೇಳಿದ್ದರು. ಆದ್ರೆ 200 ಯುನೈಟೆಡ್ ವಿದ್ಯುತ್…
ಬೆಂಗಳೂರು: ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ ಪರಿಷತ್ ಸದಸ್ಯ ಟಿ.ಎ.ಶರವಣ ಕೂಡ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಹಣ ತರುವಂತೆ ಬೇಡಿಕೆ ಇಡುತ್ತಾರೆ. ಶಾಸಕರ ಶಿಫಾರಸು ತಂದ್ರೆ ಸಾಲದು 30 ಲಕ್ಷ ದುಡ್ಡು ತನ್ನಿ ಅಂತಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಏನು ಭರವಸೆ ಕೊಟ್ರಿ. ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟ್ಟಿದ್ದೀರಿ. ಈ ಸರ್ಕಾರ ICUಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು…
ಬೆಂಗಳೂರು: ಇಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದು ಖಾಸಗಿ ವಿವಿ ಘಟಿಕೋತ್ಸದಲ್ಲಿ ಭಾಗಿಯಾಗಲಿದ್ದಾರೆ. ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಅ ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು.
ಬೆಂಗಳೂರು: ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ವಜಾಗೊಳಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಚಿಮುಲ್ ಮರು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಸರ್ಕಾರದ ವಿರುದ್ಧ ಡಾ.ಸುಧಾಕರ್ ಆಕ್ರೋಶ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಚಿಕ್ಕಬಳ್ಳಾಪುರ ರೈತರಿಗೆ ಪೆಟ್ಟು ನೀಡಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಚುನಾವಣೆಯಲ್ಲಿ ಸೋತಿದ್ದೇನೆ ಆದ್ರೆ ಸತ್ತಿಲ್ಲ. ಟಾರ್ಗೆಟ್ ಮಾಡಿಕೊಂಡು ಏನು ತನಿಖೆ ಮಾಡಿಸ್ತಾರೋ ಮಾಡಿಸಲಿ. ಆಕ್ಸಿಜನ್ ದುರಂತ ತನಿಖೆಯಲ್ಲಿ ಯಾರು ಟಾರ್ಗೆಟ್ ಎಂಬುದು ಗೊತ್ತು. ಮುಂದಿನ 6 ತಿಂಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಲ್ಲ ಎಂದರು.
ಬೆಂಗಳೂರು: ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷ ಬಗ್ಗೆ ಚರ್ಚಿಸ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಏನು ಭರವಸೆ ಕೊಟ್ರಿ. ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟ್ಟಿದ್ದೀರಿ. ಈ ಸರ್ಕಾರ ICUಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬೆಂಗಳೂರು: ಗ್ಯಾರಂಟಿಗಳ ಅನುಷ್ಠಾನ ಬಗೆಗಿನ ಬದ್ಧತೆ ರಾಜ್ಯಪಾಲರು ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತೆ. ಇದನ್ನು ರಾಜ್ಯಪಾಲ ಗೆಹ್ಲೋಟ್ ಭಾಷಣದ ಮೂಲಕ ತಿಳಿಸಿದ್ದಾರೆ. ಸರ್ಕಾರದ ಜನಪರವಾದ ಕಾಳಜಿ ಬಗ್ಗೆ ರಾಜ್ಯಪಾಲರು ಹೇಳಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂದೇಶ ನೀಡಿದ್ದೇವೆ. ಮನಸ್ಸನ್ನು ಕೂಡಿಸುವ ಎಲ್ಲ ವರ್ಗಗಳಿಗೂ ಗೌರವಿಸುವಂಥ ಸಂದೇಶ ನೀಡಿದ್ದೇವೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಬೇಕಾದ ಕರ್ತವ್ಯ, ಆ ಹೆಜ್ಜೆಗಳ ಸೂಕ್ಷ್ಮ ಪರಿಚಯವನ್ನು ರಾಜ್ಯಪಾಲರು ಮಾಡಿದ್ದಾರೆ. ಪ್ರವಾಸೋದ್ಯಮ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಕ್ಕೂ ಮಹತ್ವ ಕೊಟ್ಟಿದ್ದಾರೆ. ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುವಂತಹ ಕಾರ್ಯಕ್ರಮ ಕೊಡುವ ಭರವಸೆಯನ್ನು ನಾವು ನೀಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ರು.