ಬೆಂಗಳೂರು: ಏಷ್ಯನ್ ಮೆಡಲಿಸ್ಟ್ ಬಿಂದುರಾಣಿ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಇಂದು ಕಂಠೀರವ ಸ್ಟೇಡಿಯಂ ನಲ್ಲಿ ಸೀನಿಯರ್ ಕೋಚ್ ಯತೀಶ್ ಎಂಬುವವರ ಪತ್ನಿ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ ಬಿಂದುರಾಣಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಂಠೀರವ ಸ್ಟೇಡಿಯಂ ನಲ್ಲಿಂದು ಟೆಡ್ ಎಕ್ಸ್ ಇನ್ಸ್ ಫಿರೇಷನಲ್ ಶೋ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಶೋನಲ್ಲಿ ಬಾಲಿವುಡ್ ನಟ ಅಮೀರ್ ಖಾನ್, ವಿರಾಟ್ ಕೊಹ್ಲಿ ಸೇರಿದಂತೆ ದೊಡ್ಡ ದೊಡ್ಡ ಸೆಲಬ್ರೆಟಿಗಳು ಭಾಗಿಯಾಗಿದ್ರು. ಜೊತೆಗೆ ಬಿಂದು ರಾಣಿಗೂ ಸಹ ಭಾಗಿಯಾಗುವ ಅವಕಾಶ ಸಿಕ್ಕಿತ್ತು. ಆದರೆ ಟೆಡ್ ಎಕ್ಸ್ ಇನ್ಸ್ ಫಿರೇಷನಲ್ ಕಾರ್ಯಕ್ರಮಕ್ಕೆ ಭಾಗಿಯಾಗಿರುವ ಹಿನ್ನಲೆ ಬಿಂದುರಾಣಿ ಮೇಲೆ ನಿಂದನೆ ಜೊತೆಗೆ ಹಲ್ಲೆ ನಡೆದಿದೆ. ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ಕೊಟ್ಟು ಅವಕಾಶ ಗಿಟ್ಟಿಸಿರೋದಾಗಿ ನಿಂದಿಸಿ ಸೀನಿಯರ್ ಕೋಚ್ ಯತೀಶ್ ಪತ್ನಿ ಹಲ್ಲೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಯತೀಶ್ ಪತ್ನಿ ಬಿಂದುರಾಣಿಗೆ ಚಪ್ಪಳಿ ತೋರಿಸಿರುವ ಚಿತ್ರಣ ವೈರಲ್ ಆಗುತ್ತಿದೆ. ಅನೇಕರು ಈ ಚಿತ್ರಣವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಸಂಪಗಿರಾಮ…
Author: Prajatv Kannada
ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೆ. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ. ಸರ್ಕಾರ ಆಧುನಿಕ ಕರ್ನಾಟಕ ನಿರ್ಮಾಣ ಮಾಡಲು ಉದ್ದೇಶಿಸಿದೆ. ಶಾಲಾ ಶಿಕ್ಷಣವು ಸಮಾಜದ ಅಡಿಪಾಯವೆಂದು ಗುರುತಿಸಲ್ಪಟ್ಟಿದೆ. ಪ್ರತಿ ಮಗುವಿನ ಮೂಲಭೂತ ಹಕ್ಕನ್ನು ಸಂರಕ್ಷಿಸಲು ಸರ್ಕಾರ ಬದ್ಧ. ಶಿಕ್ಷಣ ಜತೆಗೆ ಮಕ್ಕಳ ಆರೋಗ್ಯ ರಕ್ಷಣೆಯೂ ಸರ್ಕಾರದ ಜವಾಬ್ದಾರಿ. ಉನ್ನತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ನಾವು ಸಿದ್ಧರಾಗಿದ್ದೇವೆ. ಬಡತನ ರೇಖೆಗಿಂತ ಕೆಳಗಿರುವ ಎಲ್ಲರಿಗೂ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತೆ. ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ, ಶಿಕ್ಷಣ ಸೇವೆ ಒದಗಿಸಲು ನೆರವು ಎಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣದಲ್ಲಿ ತಿಳಿಸಿದರು. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಸೋಮವಾರ ಅಧಿವೇಶನಕ್ಕೆ…
ನವದೆಹಲಿ: ಪ್ರಧಾನಿ ನರೆಂದ್ರ ಮೋದಿ (Narendra Modi) ಅವರ ನಿವಾಸದ (Residence) ಮೇಲೆ ಡ್ರೋನ್ (Drone) ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು (Delhi Police) ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. ಮೋದಿಯವರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾರ್ಯವನ್ನು ನಿರ್ವಹಿಸುವ ವಿಶೇಷ ರಕ್ಷಣಾ ತಂಡ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
ಭುವನೇಶ್ವರ: 288 ಜನರನ್ನು ಬಲಿ ಪಡೆದಿದ್ದ ಒಡಿಶಾ ರೈಲು ದುರಂತಕ್ಕೆ (Odisha Train Accident) ಸಿಗ್ನಲಿಂಗ್ (Signalling) ಮತ್ತು ಟ್ರಾಫಿಕ್ ಕಂಟ್ರೋಲ್ (Traffic Operations) ವಿಭಾಗಗಳನ್ನು ಹೊಣೆ ಮಾಡಲಾಗಿದೆ. ರೈಲ್ವೇ (Railway) ಸಿಗ್ನಲ್ ಹಾಗೂ ಇಂಟರ್‌ಲಾಕ್ ರಿಪೇರಿ ಮಾಡಿಸುವಂತೆ ಸ್ಟೇಷನ್ ಮಾಸ್ಟರ್‌ಗೆ ಸೂಚಿಸಲಾಗಿತ್ತು. ಸಿಗ್ನಲ್ ರಿಪೇರಿಯ ಬಳಿಕ ರೈಲು ಸಂಚರಿಸುವ ಮುನ್ನ ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸುವ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿಲ್ಲ. ಅಲ್ಲದೇ ರೈಲ್ವೇ ಮರುಸಂಪರ್ಕಕ್ಕೆ ಸೂಚನೆ ನೀಡಿದ ನಂತರವೂ ಸಿಗ್ನಲಿಂಗ್ ಸಿಬ್ಬಂದಿ ಕೆಲಸವನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅಪಘಾತಕ್ಕೆ ಸಿಗ್ನಲ್ ನಿರ್ವಹಣೆ ಹಾಗೂ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿ ಜವಾಬ್ದಾರರಾಗಿದ್ದಾರೆ ಎಂದು ಸಿಆರ್‍ಎಸ್ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಗ್ನಲಿಂಗ್ ಸಿಬ್ಬಂದಿ ಮತ್ತು ಸ್ಟೇಷನ್ ಮಾಸ್ಟರ್ ಇಬ್ಬರೂ ಜವಾಬ್ದಾರರಾಗಿರುವ ಇಂಟರ್‌ಲಾಕಿಂಗ್ ಸಿಗ್ನಲಿಂಗ್ ಸಿಸ್ಟಮ್‍ನ ಕೇಂದ್ರ ಕೊಠಡಿಯಲ್ಲೂ ಲೋಪಗಳಾಗಿವೆ. ಇದಾದ ಬಳಿಕ ರೈಲ್ವೆ ಇಲಾಖೆ ಖರಗ್‍ಪುರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶುಜತ್ ಹಶ್ಮಿ ಮತ್ತು ಆಗ್ನೇಯ ರೈಲ್ವೆ ಸುರಕ್ಷತಾ ಸಿಗ್ನಲ್ ಭದ್ರತಾ ಸಿಬ್ಬಂದಿಯನ್ನು ಬೇರೆಡೆಗೆ…
ಹಾಸನ: ಹಾಸನ ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಉಂಟಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆಯಿಂದ ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕೋಣೆಯೊಳಗೆ ಹೊಗೆ ತುಂಬಿಕೊಂಡಿದ್ದು, ಆಸ್ಪತ್ರೆ ಸಿಬ್ಬಂದಿ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ರಕ್ಷಿಸಿದ್ದಾರೆ. ಐಸಿಯುನಿಂದ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಬಳಿಕ ನವಜಾತ ಶಿಶುಗಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಐಸಿಯುನಲ್ಲಿದ್ದ ಎಲ್ಲಾ 24 ನವಜಾತ ಶಿಶುಗಳು ಸುರಕ್ಷಿತವಾಗಿದ್ದು, ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿದ್ದಾರೆ. ಅಲ್ಲದೇ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಹಾವೇರಿ: ಬಸ್ ಡಿಪೋದ ಆವರಣದಲ್ಲಿಯೇ ಸಾರಿಗೆ ನೌಕರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಬಸ್ ಡಿಪೋದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಚಾಲಕ ಕಂ ನಿರ್ವಾಹಕನನ್ನ ಮಲ್ಲಿಕಾರ್ಜುನ ಬಡಿಗೇರ (49) ಎಂದು ಗುರುತಿಸಲಾಗಿದೆ. ಮೂಲತಃ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದ ನಿವಾಸಿಯಾಗಿದ್ದ ಇವರು, ಕಳೆದ ಹತ್ತು ವರ್ಷದಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಹೃದಯ ಆಪರೇಷನ್ ಸಹ ಆಗಿತ್ತು. ಕಳೆದ ಒಂದು ವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
ಹಾವೇರಿ: ಕಾರು (Car) ಮತ್ತು ಲಾರಿ (Lorry) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ (Medical Student) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾಂವಿ (Shiggavi) ತಾಲೂಕಿನ ಬಂಕಾಪುರ (Bankapura) ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಖಿಲ್ ಕುಂಬಾರ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಅಖಿಲ್ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ಬೆಳಗಾವಿಯಲ್ಲಿ ಎಂಬಿಬಿಎಸ್ ಮುಗಿಸಿದ್ದು, ಎಂ.ಡಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ
ಇಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಭೇಟಿ ಹಿನ್ನೆಲೆ ಮುದ್ದೇನಹಳ್ಳಿ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ನೇತೃತ್ವದಲ್ಲಿ ಮೂವರು ಎಸ್ಪಿ, 10 ಡಿವೈಎಸ್ಪಿ, 28 ಇನ್ಸ್ಪೆಕ್ಟರ್ಗಳು, 60 ಸಬ್ ಇನ್ಸ್ಪೆಕ್ಟರ್, 7 ಡಿಎಆರ್ ತುಕಡಿ, 3 KSRP ತುಕಡಿ ಸೇರಿ ಭದ್ರತೆಗೆ ಒಟ್ಟು 700 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಖಾಸಗಿ ವಿವಿ ಘಟಿಕೋತ್ಸದಲ್ಲಿ ಭಾಗಿಯಾಗಲಿದ್ದಾರೆ. ವಿಜ್ಞಾನ & ತಂತ್ರಜ್ಞಾನ ವಿಭಾಗದಲ್ಲಿ ಪ್ರೊ.ಅಜಯ್ ಕೆ.ಸೂದ್, ಸಂಗೀತ & ಕಲೆ ವಿಭಾಗದಲ್ಲಿ ಡಾ.ಆರ್.ಕೆ.ಪದ್ಮನಾಭ, ಕ್ರೀಡೆ & ದಾರ್ಢ್ಯತೆ ವಿಭಾಗದಲ್ಲಿ ಪುಲ್ಲೇಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಡಾ.ಪ್ರತಿಮಾ ಮೂರ್ತಿ, ಶಿಕ್ಷಣ ವಿಭಾಗದಲ್ಲಿ ಪ್ರೊ.ವಿಜಯ್ ಶಂಕರ್ ಶುಕ್ಲಾ, ಸಮಾಜಸೇವೆ ವಿಭಾಗದಲ್ಲಿ ತುಳಸಿಗೌಡಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಮೈಸೂರು: ಕೇರಳದ ವಯನಾಡು ಭಾಗದಲ್ಲಿ ಕೊಂಚ ಮಳೆ ಪ್ರಮಾಣ ಹೆಚ್ಚಾಗಿದ್ದು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 52.26 ಅಡಿ ಇದೆ. ಪ್ರತಿ ಬಾರಿಗಿಂತ ಈ ಬಾರಿ ಜಲಾಶಯದ ನೀರಿನ ಮಟ್ಟ ತೀರಾ ಕಡಿಮೆಯಾಗಿತ್ತು. ಕೇವಲ 2 ಟಿಎಂಸಿ ಅಡಿ ಮಾತ್ರ ನೀರು ಸಂಗ್ರಹವಾಗಿತ್ತು, ಕಾವೇರಿ ನದಿ ಪಾತ್ರದ ನಗರ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಮುಂಗಾರು ವಿಳಂಬವಾಗಬಹುದೆಂಬ ಹಿನ್ನೆಲೆಯಲ್ಲಿ ನೀರಾವರಿ ಅಧಿಕಾರಿಗಳು ನೀರಿನ ಸಂಗ್ರಹ ಮಾಡಿದ್ದರು. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಒಳಹರಿವು ಹೆಚ್ಚಿದೆ, ಹೀಗಾಗಿ ಕಬಿನಿ ಜಲಾಶಯ ನೀರಿನ ಮಟ್ಟ ಏರಿಕೆಯಾಗಿದೆ.
ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಮೊದಲ ಗುರು ಪೂರ್ಣಿಮೆ ಆಚರಿಸಲಾಗಿದೆ. ವಿಜಯಪುರ ನಗರದ ಆಶ್ರಮದಲ್ಲಿ ಇಂದು ಬೆಳಗ್ಗೆ 4:30ರಿಂದ 6:30ರವರೆಗೆ ಮಹಾಜಪಯೋಗ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 7:30ರಿಂದ ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ ಧ್ವನಿಮುದ್ರಿತ ಪ್ರವಚನ ಪ್ರಸಾರ ಮಾಡಲಾಯಿತು. ಬಳಿಕ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಕರ್ತೃ ಗದ್ದುಗೆಗೆ ಮಹಾಪೂಜೆ ಸಲ್ಲಿಸಿ ಆಶ್ರಮ ಆವರಣದಲ್ಲಿ ಸಾವಿರಾರು ಭಕ್ತರಿಗೆ ಪ್ರಸಾದ ನೀಡಲಾಯಿತು.