ಇಂದು ಆಷಾಢ ಮಾಸದ ಗುರುಪೂರ್ಣಿಮಾ ಹಿನ್ನೆಲೆ ಮಂತ್ರಾಲಯದ ರಾಯರ ಮಠದಲ್ಲಿ ಗುರು ಪೂರ್ಣಿಮಾ ಸಂಭ್ರಮ ಜೋರಾಗಿದೆ. ಇಂದು ರಾಯರ ಮೂಲ ಬೃಂದಾವನಕ್ಕೆ ತಿರುಪತಿ ತಿರುಮಲ ದೇವಸ್ಥಾನದ ಶ್ರೀವಾರಿ ವಸ್ತ್ರ ಸಮರ್ಪಿಸಲಾಗಿದೆ. ಬಳಿಕ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯ & ಹೊರರಾಜ್ಯಗಳಿಂದ ಸಹಸ್ರಾರು ಭಕ್ತರು ರಾಯರ ದರ್ಶನಕ್ಕೆ ಆಗಮನಿಸುತ್ತಿದ್ದಾರೆ.
Author: Prajatv Kannada
ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ಅವರ ತಾಯಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪಾಪಮ್ಮ ಅವರು ಇಂದು ಬೆಳಗ್ಗೆ ಸತೀಶ್ ರೆಡ್ಡಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಹೊಂಗಸಂದ್ರದ ಶಾಸಕರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೊಂಗಸಂದ್ರದ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧಕ್ಕೆ ರಾಜ್ಯಪಾಲರನ್ನು ಸ್ವಾಗತಿಸಲು ಸ್ಪೆಷಲ್ ಮ್ಯೂಸಿಕ್ ಏರ್ಪಡಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಶುರು ಮಾಡಿದ್ದಾರೆ. ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದ್ದೇವೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರು ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಮೂಲಕ ಸರ್ಕಾರ ಹಸಿವು ಮುಕ್ತ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತೆ ಎಂದರು. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಹಣ ನೀಡಲಾಗುತ್ತೆ. ನಿರುದ್ಯೋಗಿ ಡಿಪ್ಲೋಮಾದಾರರ ಖಾತೆಗೆ ತಿಂಗಳಿಗೆ 1,500 ರೂ. ಹಾಕಲಾಗುತ್ತೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ವರೆಗೆ…
ಬೆಂಗಳೂರು: ಇಂದಿನಿಂದ 10 ದಿನ ವಿಧಾನಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ. 2 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತಿಭಟನೆ, ಱಲಿ, ಧರಣಿ ನಡೆಸುವಂತಿಲ್ಲ. ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಮೂವರು ಡಿಸಿಪಿ, 15 ಎಸಿಪಿ, 80 ಇನ್ಸ್ಪೆಕ್ಟರ್ಗಳು ಸೇರಿದಂತೆ ವಿಧಾನಸೌಧ ಸುತ್ತಮುತ್ತ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಗುರುತು ಸಿಗದ ಮೃತದೇಹಗಳು ಪತ್ತೆಯಾಗುತ್ತಿವೆ. ಹಂತಕರ ಪತ್ತೆಗೂ ಮುನ್ನ ಹತ್ಯೆಯಾದವರ ಗುರುತು ಪತ್ತೆಹಚ್ಚುವುದೇ ಸವಾಲಾಗಿದ್ದು ಈಗ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ ನೋಡಿ. ಇಂದು ಬೆಳಗ್ಗೆ ಸುಮಾರು 6 ಗಂಟೆ ಸಮಯ, ಬೆಂಗಳೂರಿನ ಚಿಕ್ಕ ಬಿದರಕಲ್ಲು ಸಮೀಪದ ಚನ್ನನಾಯಕನಪಾಳ್ಯದ ಕೆಲವು ಜನ ನಿದ್ದೆಯಿಂದೆದ್ದು ವಾಕಿಂಗ್ ಅಂತ ಹೋಗಿದ್ರು. ಅಲ್ಲಿನ ಚನ್ನನಾಯಕನಪಾಳ್ಯ ಬಯಲು ಎಂದೇ ಕರೆಯಲ್ಪಡುವ ಸ್ಥಳದಲ್ಲಿ ಗಿಡಗಳ ಬಳಿ ಬೆಂಕಿ ಉರಿಯುತ್ತಿದ್ದು, ಹೊಗೆಯಾಡುತ್ತಿತ್ತು. ಏನೋ ಹೋಗೆಯಾಡ್ತಿದೆಯಲ್ಲಾ ಅಂತ ಹತ್ತಿರ ಹೋಗಿ ನೋಡಿದ್ರೆ ನಿಗಿ-ನಿಗಿ ಕೆಂಡದಲ್ಲಿ, ಕಸದ ರಾಶಿಯ ಮೇಲಿನ ಬೆಂಕಿಯಲ್ಲಿ ವ್ಯಕ್ತಿಯೊಬ್ಬನ ಶವ ಸುಡುತ್ತಾ ಇತ್ತು.ಕೂಡಲೇ ಗಾಬರಿಗೊಂಡ ಸ್ಥಳೀಯರು ಪೀಣ್ಯಾ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಪೀಣ್ಯ ಪೊಲೀಸ್ರು ಬೆಂಕಿ ನಂದಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು. ಅಷ್ಟರಲ್ಲಿ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಸಿಗುತ್ತ ಅಂತ ಸ್ಥಳೀಯರನ್ನ ವಿಚಾರಸಿದ್ರೆ ಮೃತನ ಗುರುತನ್ನ ಯಾರು ಹೇಳಲಿಲ್ಲ.…
ಬೆಂಗಳೂರು: ಇತ್ತೀಚಿಗೆ ಅಂತೂ ಸರ್ಕಾರಿ ಬಸ್ ಗಳು ಸಿಕ್ಕಪಟ್ಟೆ ಕೆಟ್ಟು ನಿಲ್ಲುತ್ತಾ ಇದೆ..ಹೀಗಾಗಿ ಪ್ರಯಾಣಿಕರಿಗೆ ಸಾಕಷ್ಟು ಕಿರಿಕಿರಿ ಆಗ್ತಿದೆ.ಇದರಿಂದ ನಿಗಮಕ್ಕೂ ಕೂಡ ಕೆಟ್ಟ ಹೆಸರು ಬರುತ್ತಿದೆ ಆದ್ರೆ ಇದೀಗ.ಇದನ್ನು ನಿಲ್ಲಿಸೋದಕ್ಕೆ ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಪ್ರೀಮಿಯಂ ಆಧಾರಿತ ಬಸ್ ಗಳನ್ನ ಖರೀದಿಸಲು ಸರ್ಕಾರ ಮುಂದಾಗಿದೆ. ರಾಜ್ಯ ಸಾರಿಗೆ ನಿಗಮಗಳು ಜನ್ರ ನಾಡಿಮಿಡಿತ. ವರ್ಷಕ್ಕೆರೆಡು ರಾಷ್ಟ್ರಮಟ್ಟದ ಪ್ರಶಸ್ತಿ ,ಬೆಸ್ಟ್ ಸಾರ್ವಜನಿಕ ಸಾರಿಗೆ ಅನ್ನೋ ಗರಿ ಇದೆ.ಹೀಗಿದ್ದು ಇತ್ತೀಚಿಗೆ ಕೆಟ್ಟ ದಿನಗಳನ್ನು ಎದುರಿಸುತ್ತಾ ಇದೆ.ಬಸ್ ಗಳು ಫಿಟ್ ಇಲ್ಲ. ಆಕ್ಸಿಡೆಂಟ್ ಗಳು ಜಾಸ್ತಿ ಆಗ್ತಿತ್ತಿವೆ..ಸದ್ಯ ನಿಗಮದ ಹಲವು ಬಸ್ ಗಳು 9 ಲಕ್ಷ ದಾಟಿದ ಬಸ್ ಗಳೇ ಆಗಿವೆ.ಇದರಿಂದ ಸಾಕಷ್ಟು ಕಿರಿಕಿರಿ ಅನುಭವಿಸುತ್ತಿದ್ದ ನಿಗಮ ಇದೀಗ ಹೊಸ ಬಸ್ ಖರೀದಿನತ್ತ ಮುಖ ಮಾಡಿದೆ.ಈಗಾಗಲೇ ಎಲೆಕ್ಟ್ರಿಕ್ ಬಸ್ ಗಳನ್ನ ಖರೀದಿ ಮಾಡ್ತಾ ಇರೋ ನಿಗಮ, ಇದೀಗ ಶಕ್ತಿ ಯೋಜನೆಯಿಂದ ಬಸ್ ಗಳ ಬೇಡಿಕೆ ಬಂದ ಬೆನ್ನಲ್ಲೇ ಹೊಸ ಬಸ್ ಖರೀದಿ, ಸಿಬ್ಬಂದಿ ನೇಮಕ ಜತೆ ಆದಾಯ ಹೆಚ್ಚಳ…
ಬೆಂಗಳೂರು: ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆ ಅಡಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ. ಗಾಂಧಿ ಪ್ರತಿಮೆ ಬಳಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಮಾಡಿದ್ರೆ, ಸದನದ ಒಳಗೆ ಹೋರಾಟ ನಡೆಸಲು ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಹಾಗೂ ಫ್ರೀಡಂಪಾರ್ಕ್ನಲ್ಲಿ ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡೋದಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿದ್ದತೆಯಲ್ಲಿದ್ದಾರೆ. ಗ್ಯಾರಂಟಿ ಘೊಷಣೆ ಜಾರಿ ಮಾಡೋದಕ್ಕೆ ಬಜೆಟ್ ಮಂಡನೆಗೆ ಸಭೆ ಮೇಲೆ ಸಭೆ ಮಾಡಿರೋ ಸಿಎಂ ಸಿದ್ದರಾಮಯ್ಯ ಗೆ ಗ್ಯಾರಂಟಿಗೆ ಹಣ ಹೊಂದಿಸೋದು ಸವಾಲಾಗಿದೆ. ಹೀಗಾಗಿ ಪ್ರಮುಖ ಇಲಾಖೆಗಳಿಗೆ ಅನುಧಾನ ಕಡಿತ ನಿಚ್ಚಳ ಎನ್ನಲಾಗ್ತಿದೆ. ಅಧಿವೇಶನದ ಸಿದ್ಧತೆಗಳನ್ನ ಸ್ಪೀಕರ್ ಖಾದರ್ ಪರಿಶೀಲನೆ ನಡೆಸಿ ಫೈನಲ್ ಟಚ್ ನೀಡಿದ್ರು…. ಎಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಪ್ರಮುಖ ಇಲಾಖೆಗಳ ಅನುದಾನ ಕಡಿತಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ. ಯಾಕಂದ್ರೆ ಚುನಾವಣಾ ಪೂರ್ವದಲ್ಲಿ ನೀಡಿರೋ ಗ್ಯಾರಂಟಿಗಳ ಜಾರಿ ಈ ಸರಕಾರದ ಆದ್ಯತೆಯಾಗಿದ್ದು ಇದಕ್ಕೆ ಸಾಕಷ್ಟು ಅನುಧಾನ ಬೇಕಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ 50 ರಿಂದ 60 ಸಾವಿರ ಕೋಟಿ ಅನುಧಾನ ಬೇಕಾಗಿದ್ದು ಇಷ್ಟು ಹಣವನ್ನು ಹೊಂದಿಸಬೇಕಾಗಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಬೊಮ್ಮಾಯಿ ಬಜೆಟ್ ಮಂಡಿಸಿದ್ದು ಅಲ್ಲಿಂದ ಇಲ್ಲಿಯವರೆಗೆ ಹಣಕಾಸು ವಿಚಾರದಲ್ಲಿ ಬಹುದೊಡ್ಡ ಸುಧಾರಣೆ ಏನು ಆಗಿಲ್ಲ.…
ಬೆಂಗಳೂರು: ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ.” ಬಸವಣ್ಣನವರು 12ನೇ ಶತಮಾನದಲ್ಲೇ ಇಂಥಾ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ. ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು.…
ಬೆಂಗಳೂರು: ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಇಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ಎಷ್ಟು ವಿಧೇಯಕ ಮಂಡನೆ ಆಗಲಿದೆ ಎಂದು ಗೊತ್ತಾಗಲಿದೆ. ಸೌಹಾರ್ದಯುತವಾಗಿ ಅಧಿವೇಶನ ನಡೆಸಬೇಕೆಂದು ಸ್ಪೀಕರ್ ಮನವಿ ಮಾಡಿದ್ದಾರೆ. ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು(Legislature Session) ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್ ಮಂಡಿಸಲಿದ್ದಾರೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ(Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.