ಕರಾಚಿ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಆಡಲು ಪಾಕಿಸ್ತಾನ ತಂಡಕ್ಕೆ ಅಲ್ಲಿನ ಸರ್ಕಾರದಿಂದ ಇನ್ನಷ್ಟೇ ಅನುಮತಿ ಸಿಗಬೇಕಿದ್ದು, ಅದಕ್ಕೂ ಮುನ್ನ ಪಾಕ್ ನಿಯೋಗ ಭಾರತದಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಆಗಮಿಸಲಿದೆ. ಪಾಕ್ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಶೀಘ್ರವೇ ನೂತನ ಮುಖ್ಯಸ್ಥರ ನೇಮಕವಾಗಲಿದ್ದು, ಬಳಿಕ ಪಿಸಿಬಿ ಪ್ರತಿನಿಧಿಯನ್ನೊಳಗೊಂಡ ಭದ್ರತಾ ಅಧಿಕಾರಿಗಳ ನಿಯೋಗ ಭಾರತಕ್ಕೆ ಆಗಮಿಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದೆ. ಪಾಕ್‌ನ ಪಂದ್ಯ ನಡೆಯಲಿರುವ ಬೆಂಗಳೂರು, ಚೆನ್ನೈ, ಅಹಮದಾಬಾದ್, ಕೋಲ್ಕತಾ, ಹೈದರಾಬಾದ್ ಕ್ರೀಡಾಂಗಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಅವಲೋಕಿಸಿ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಬಳಿಕ ಸರ್ಕಾರ ವಿಶ್ವಕಪ್‌ಗೆ ಅನುಮತಿ ಬಗ್ಗೆ ನಿರ್ಧರಿಸಲಿದೆ. ಪಾಕ್ ಮನವಿ ತಿರಸ್ಕೃತ ಟೂರ್ನಿಯ ತನ್ನ ಕೆಲ ಪಂದ್ಯಗಳ ಸ್ಥಳ ಬದಲಾವಣೆ ಮಾಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾಡಿದ್ದ ಮನವಿಯನ್ನು ಐಸಿಸಿ, ಬಿಸಿಸಿಐ ತಿರಸ್ಕರಿಸಿದೆ. ಅಹಮದಾಬಾದ್ ಜೊತೆಗೆ ಇತರ 4 ಕ್ರೀಡಾಂಗಣಗಳಲ್ಲೂ ಪಾಕ್ ತನ್ನ ಪಂದ್ಯಗಳನ್ನಾಡಲಿದೆ. ಈ ಪೈಕಿ ಆಸ್ಟ್ರೇಲಿಯಾ(ಅ.20) ಹಾಗೂ ನ್ಯೂಜಿಲೆಂಡ್(ನ.04) ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಡಲಿದ್ದು, ಕೋಲ್ಕತಾ, ಹೈದರಾಬಾದ್, ಚೆನ್ನೈನಲ್ಲೂ ತಲಾ 2…
Author: Prajatv Kannada
ಸದ್ಯದಲ್ಲೇ ಹಸೆಮಣೆ ಏರಲಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಯುವ ರಾಜಕಾರಣಿ ರಾಘವ್ ಚಡ್ಡಾಇದೀಗ ಅಮೃತ ಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿರುವ ಜೋಡಿ ಆ ಬೆನ್ನಲ್ಲೆ ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಇದೀಗ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಕಾರಣಿ ರಾಘವ್ ಚಡ್ಡಾ ಜೊತೆ ಪರಿಣಿತಿ ಚೋಪ್ರಾ ಪ್ರೀತಿಸಿ ಇದೀಗ ಹೊಸ ಕಾಲಿಡಲು ಸಜ್ಜಾಗುತ್ತಿದ್ದಾರೆ. ಮೇ 13ರಂದು ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸದ್ಯದಲ್ಲೇ ಹಸೆಮಣೆಗೆ ಏರಲಿದ್ದಾರೆ. ಈ ಬೆನ್ನಲ್ಲೇ ಅಮೃತಸರ ಗೋಲ್ಡನ್ ಟೆಂಪಲ್ ಭೇಟಿ ನೀಡಿದ್ದು ಈ ವೇಳೆ ದೇವಸ್ಥಾನದಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ್ದಾರೆ. ಮದುವೆಗೂ ಮೊದಲು ಪರಿಣಿತಿ ಮತ್ತು ರಾಘವ್ ಚಡ್ಡಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. ಸದ್ಯ ವೈರಲ್ ಆಗಿರುವ ಹೊಸ ವಿಡಿಯೋದಲ್ಲಿ ಪರಿಣೀತಿ ಮತ್ತು ರಾಘವ್ ಇಬ್ಬರೂ ಪಾತ್ರೆಗಳನ್ನು ತೊಳೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಪಾತ್ರೆ ತೊಳೆಯುವ…
‘ಅಲ ವೈಕುಂಠಪುರಮುಲೋ’ ಸಿನಿಮಾದ ಮೂಲಕ ಹಿಟ್ ಜೋಡಿ ಎಂದೇ ಹೆಸರು ಮಾಡಿದ್ದ ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ತ್ರಿವಿಕ್ರಮ್ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಶುಭ ಸುದ್ದಿಯನ್ನು ಗುರು ಪೂರ್ಣಿಮೆ ದಿನದಂದು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನಟ ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕಂಪ್ಲೀಟ್ ಆದ ಬಳಿಕ ತ್ರಿವಿಕ್ರಮ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ಬಾಲಿವುಡ್ ನಟ ರಣವೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳನ್ನು ನೀಡಿರುವ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಇದೀಗ ನಾಲ್ಕನೇ ಭಾರಿಗೆ ಒಂದಾಗುತ್ತಿದ್ದಾರೆ. ಬಹಳ ದಿನಗಳಿಂದಲೂ ಅಲ್ಲು-ತ್ರಿವಿಕ್ರಮ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ…
ಮಣಿಪುರದ ಜನಾಂಗೀಯ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕಿಡಿಕಾರಿದ್ದಾರೆ. ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತಿ ಸರಳ, ಕಾಮನ್ ಸೆನ್ಸ್ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್ 2023 ರಲ್ಲಿ ಮಣಿಪುರ, ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ಮರೆವಿಲ್ಲ, ನೆನಪಿರಲಿ” ಎಂದು ಎಂದಿದ್ದಾರೆ. ಮಣಿಪುರದ ಸಿಎಂ ಬಿರೇನ್ ಸಿಂಗ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೇ, ಬಿರೇನ್ ಸಿಂಗ್ ಸ್ವತಃ ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದರು. ಬಳಿಕ ಆ ನಿರ್ಧಾರವನ್ನು ಅವರು ಹಿಂಪಡೆದಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮಣಿಪುರಕ್ಕೆ…
ಸ್ವಚ್ಛತೆಗಾಗಿ, ಪಾನೀಯಕ್ಕಾಗಿ, ಔಷಧೀಯ ಪ್ರಯೋಜನಕ್ಕಾಗಿ ಹಾಗೂ ಸೌಂದರ್ಯ ಕ್ಕಾಗಿ ಬಳಕೆಯಾಗುವ ನಿಂಬೆ ಹಣ್ಣನ್ನು ಫ್ರಿಜ್ ನಲ್ಲಿ ಇಡುವಾಗ ಹೀಗೆ ಮಾಡಿ. ಅಂಗಡಿಯಿಂದ ತಂದ ನಿಂಬೆಹಣ್ಣನ್ನು ಸ್ವಚ್ಛವಾಗಿ ತೊಳೆದು ತೇವಾಂಶ ಹೋಗುವಂತೆ ಒರೆಸಿ. ಬಳಿಕ ಗಾಳಿಯಾಡದ ಕವರ್ ನಲ್ಲಿ ಹಾಕಿ ಫ್ರಿಜ್ ನಲ್ಲಿಡಿ. ಫ್ರೀಜರ್ ನಲ್ಲಿಟ್ಟರೆ ಬಹುಕಾಲ ತಾಜಾ ಆಗಿ ಹಾಳಾಗದೆ ಉಳಿಯುತ್ತದೆ. ನಿಂಬೆ ಹೋಳುಗಳನ್ನು ತೆಳುವಾಗಿ ಕತ್ತರಿಸಿದ್ದು, ಇವುಗಳನ್ನೇ ಸಂಗ್ರಹಿಸಿ ಇಡಬೇಕಾದರೆ ಗಾಳಿಯಾಡದ ಪ್ಲಾಸ್ಟಿಕ್ ಕವರ್ ನಲ್ಲೇ ಹಾಕಿಡಬಹುದು. ನಿಂಬೆ ಹಿಂಡಿದ ಬಳಿಕ ಉಳಿಯುವ ಭಾಗವನ್ನು ಸಣ್ಣ ಹೋಳುಗಳಾಗಿ ಕತ್ತರಿಸಿ ಉಪ್ಪು ಹಾಕಿಟ್ಟರೆ ಬೇಕಿದ್ದಾಗ ಉಪ್ಪಿನಕಾಯಿಯಾಗಿ ಮಾಡಿಕೊಳ್ಳಬಹುದು. ನಿಂಬೆ ಹಿಂಡಿದ ಬಳಿಕ ಉಳಿಯುವ ಸಿಪ್ಪೆಯನ್ನು ಕಂಕುಳ ಅಡಿ ಭಾಗ ಕಪ್ಪಾಗಿದ್ದರೂ ಇದನ್ನು ಉಜ್ಜಬಹುದು. ದೇವರಿಗೆ ಬಳಸುವ ಹಿತ್ತಾಳೆ ಪಾತ್ರೆಗಳನ್ನು ಪಳ ಪಳನೆ ಹೊಳೆಯುವಂತೆ ಮಾಡಬೇಕಿದ್ದರೆ ನಿಂಬೆಸಿಪ್ಪೆಯಿಂದ ತಿಕ್ಕಿ ನೋಡಿ.
ಇಂಫಾಲ: ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರನ ನಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಮೂವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದು, ಆ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಉಳಿದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. . ಈ ನಡುವೆ ಕುಕಿ ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಹಾಗೂ ಕುಕಿ ನ್ಯಾಷನಲ್ ಆರ್ಗನೈಸೇಶನ್ 2 ತಿಂಗಳ ಬಳಿಕ ಮಣಿಪುರದ ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 2 ರಲ್ಲಿ ರಸ್ತೆ ತಡೆಯನ್ನು ಹಿಂತೆಗೆದುಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿ…
ಬ್ಯಾಂಕಾಕ್: ಬಾಡಿ ಬಿಲ್ಡಿಂಗ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದ ಬ್ಯಾಂಕಾಕ್ ನ ಖ್ಯಾತ ಬಾಡಿ ಬಿಲ್ಡರ್ ಜೋ ಲಿಂಡ್ನರ್ 30ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ಲಿಂಡ್ನರ್ ನಿಧನದ ಸುದ್ದಿಯನ್ನು ಗೆಳತಿ ನಿಚಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಲಿಂಡ್ನರ್ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಗಿ ನಿಚಾ ಹೇಳಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜೋ ಲಿಂಡ್ನರ್ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್ ಕುರಿತ ವಿಡಿಯೋ ಹಂಚಿಕೊಂಡಿದ್ದರು ಎಂಬುದಾಗಿ ತಿಳಿಸಿದ್ದಾರೆ. ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ ಮೂಲಕ ಲೆಜೆಂಡ್ ಎಂದೇ ಗುರುತಿಸಿಕೊಂಡಿದ್ದ ಜೋ ಲಿಂಡ್ನರ್ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಫಿಟ್ನೆಸ್ ಟಿಪ್ಸ್ ನೀಡುತ್ತಿದ್ದರು. ಜೊತೆಗೆ ಲಿಂಡ್ನರ್ ತಮ್ಮದೇ ಯುಟ್ಯೂಬ್ ಚಾನೆಲ್ ಆರಂಭಿಸಿ ತಾನು ಅಭ್ಯಾಸ ಮಾಡುವ ವೇಳೆ ಫಿಟ್ನೆಸ್ ಸಲಹೆಗಳನ್ನುಅದರಲ್ಲಿ ಹಂಚಿಕೊಳ್ಳುತ್ತಿದ್ದರು. ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದ ಲಿಂಡ್ನರ್ ಯುಟ್ಯೂಬ್‌ನಲ್ಲಿ 940,000 ಚಂದಾದಾರರು ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ 8.5 ದಶಲಕ್ಷ ಫಾಲೋವರ್ಸ್‌ಗಳನ್ನ ಹೊಂದಿದ್ದರು. ಪ್ರತಿದಿನ ಯುಟ್ಯೂಬ್‌ನಲ್ಲಿ ಫಿಟ್ನೆಸ್…
ನವದೆಹಲಿ ;- ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಮೇಲೆ ಅನಧಿಕೃತವಾಗಿ ಡ್ರೋನ್ ಹಾರಿದ್ದು, ತನಿಖೆಗೆ ಆದೇಶಿಸಲಾಗಿದೆ. ಇಂದು ಬೆಳಗ್ಗೆ ನವದೆಹಲಿಯಲ್ಲಿ ಇಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಹಾರಾಡಿದೆ ಎನ್ನಲಾದ ಡ್ರೋನ್ ಒಂದನ್ನು ದೆಹಲಿ ಪೊಲೀಸರು ಹುಡುಕುತ್ತಿದ್ದಾರೆ. ಪ್ರಧಾನಿಯನ್ನು ರಕ್ಷಿಸುವ ವಿಶೇಷ ರಕ್ಷಣಾ ಗುಂಪಿನ ಅಧಿಕಾರಿಗಳು ಡ್ರೋನ್ ಹಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ರಕ್ಷಣಾ ಪಡೆಗಳ ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ ಇನ್ನೂ ಡ್ರೋನ್ ಪತ್ತೆಯಾಗಿಲ್ಲ. ಪಿಎಂ ಮೋದಿ ಅವರ ನಿವಾಸವು ರೆಡ್ ಝೋನ್ ಅಥವಾ ನೋ ಡ್ರೋನ್ ಫ್ಲೈ ಝೋನ್ ಅಡಿಯಲ್ಲಿ ಬರುತ್ತದೆ.
ಗಾಂಧಿನಗರ: ಅನ್ಯ ಜಾತಿಯ ಹುಡುಗನನ್ನ ಪ್ರೀತಿಸಿ ಮದುವೆಯಾಗಿದ್ದಕ್ಕೆ (Marriage) ವ್ಯಕ್ತಿಯೊಬ್ಬ ಬದುಕಿದ್ದಾಗಲೇ ತನ್ನ ಮಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಚಿತ್ರ ಘಟನೆ ಗುಜರಾತಿನ (Gujarat) ದಾಹೋದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಗರ್ಬಡಾ ಗ್ರಾಮದ ನಿವಾಸಿಯೊಬ್ಬರ ಮಗಳು ಒಂದು ತಿಂಗಳ ಹಿಂದೆ ಅನ್ಯಜಾತಿಯ ಯುವಕನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ಈ ವಿಷಯ ತಿಳಿದ ಯುವತಿಯ ತಂದೆ ಬದುಕಿದ್ದಾಗಲೇ ತನ್ನ ಮಗಳ ಅಂತ್ಯಸಂಸ್ಕಾರ ನೆರವೇರಿಸಿದ್ದಾನೆ. ಏನಿದು ಲವ್ ಸ್ಟೋರಿ? ಒಂದು ತಿಂಗಳ ಹಿಂದೆ ತಮ್ಮ ಮಗಳು ಮನೆಯಿಂದ ಹೊರಗೆ ಹೋದವಳು ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಗ್ರಾಮಸ್ಥರಿಗೆಲ್ಲಾ ವಿಷಯ ಮುಟ್ಟಿಸಿ ಹುಡುಕಾಟ ನಡೆಸಿದ್ದರು. ಎಷ್ಟು ಹುಡುಕಾಡಿದರೂ ಸಿಗದಿದ್ದಾಗ ಸ್ಥಳೀಯ ಪೊಲೀಸ್ (Gujarat Police) ಠಾಣೆಗೆ ದೂರು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ (Investigation) ನಡೆಸಿದ್ದ ಪೊಲೀಸರು ಮಗಳನ್ನು ಪತ್ತೆ ಮಾಡಿದಾಗ ಆಕೆ ಅನ್ಯ ಜಾತಿಯ ಹುಡುಗನ್ನ ಪ್ರೀತಿಸಿ ಮದುವೆಯಾಗಿರುವುದು ಕಂಡುಬಂದಿತು. ಪೋಷಕರು ಮಗಳನ್ನು ಪರಿಪರಿಯಾಗಿ ಬೇಡಿಕೊಂಡರೂ ಆಕೆ ಹಿಂದಿರುಗಲು ಒಪ್ಪಲಿಲ್ಲ. ಅಲ್ಲದೇ…
ಭೋಪಾಲ್: ಪುರುಷ ಮತ್ತು ಮಹಿಳೆ ನಡುವಿನ ಸಹಮತದ ಲೈಂಗಿಕ ಸಂಬಂಧಕ್ಕೆ ಅಧಿಕೃತ ವಯಸ್ಸಿನ ಮಿತಿಯನ್ನು ಸದ್ಯ ಇರುವ 18 ವರ್ಷದಿಂದ 16 ವರ್ಷಕ್ಕೆ ಕೇಂದ್ರ ಸರಕಾರವು ಇಳಿಕೆ ಮಾಡುವುದು ಉತ್ತಮ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ವಿಭಾಗೀಯ ಪೀಠವು ಸಲಹೆ ನೀಡಿದೆ. 2020ರ ಜುಲೈನಲ್ಲಿ ಜರುಗಿದ ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರವಾಲ್ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ” ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವ ಹಾಗೂ ಸದಾಕಾಲ ಇಂಟರ್‌ನೆಟ್ ಬಳಕೆಯ ಅನುಕೂಲದಿಂದಾಗಿ ಗಂಡು ಮತ್ತು ಹೆಣ್ಣುಮಕ್ಕಳು 14 ವರ್ಷಕ್ಕೆ ಪ್ರೌಢಾವಸ್ಥೆ ತಲುಪುತ್ತಿದ್ದಾರೆ. ಸದ್ಯದ ಸಾಮಾಜಿಕ ಸ್ಥಿತಿಗತಿಯ ವಾಸ್ತವಾಂಶವಿದು. ಹೀಗಾಗಿ ಸಣ್ಣ ವಯಸ್ಸಿಗೆ ಪ್ರಕೃತಿ ಸಹಜವಾದ ಪುರುಷ ಹಾಗೂ ಮಹಿಳೆ ನಡುವಿನ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಹಾಗಂತ ಎಲ್ಲ ಪ್ರಕರಣಗಳಲ್ಲಿ ಪುರುಷ ಅಥವಾ ಯುವಕನೇ ಅಪರಾಧಿ ಎಂದು ಹೇಳಲಾಗಲ್ಲ. ಹೆಚ್ಚುತ್ತಿರುವ ಅಪ್ರಾಪ್ತ ವಯಸ್ಕರ ಸಂಬಂಧಿತ ಅಪರಾಧ ಪ್ರಕರಣಗಳನ್ನು ಗಮನದಲ್ಲಿ ಇರಿಸಿಕೊಂಡು ಭಾರತೀಯ ದಂಡ ಸಂಹಿತೆಯಲ್ಲಿ ಮಹತ್ವದ ತಿದ್ದುಪಡಿಯ…