ಬೆಂಗಳೂರು ;- ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು ಎಂದು ತಿಳಿಸಿದರು. ಎಲ್ಲರಿಗೂ ಶಿಕ್ಷಣ ದೊರೆತರೆ ಜಾತಿ ವ್ಯವಸ್ಥೆ ಹೋಗುತ್ತದೆ ಎಂದುಕೊಂಡಿದ್ದೆ. ಆದರೆ ಅದು ಆಗುತ್ತಿಲ್ಲ. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ. ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಬಹಳ ಆಳವಾಗಿ ಬೇರುಬಿಟ್ಟಿದೆ. ಯಾವ ಸಮಾಜದಲ್ಲಿ ಚಲನೆಯಿರುವುದಿಲ್ಲವೋ ಆಗ ವ್ಯವಸ್ಥೆ ಬದಲಾವಣೆಯಾಗುವುದಿಲ್ಲ. ಇಂದು ವಿದ್ಯಾವಂತರೂ ಜಾತಿ ವ್ಯವಸ್ಥೆಗೆ ಈಡಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ವಿದ್ಯೆ ಜ್ಞಾನದ ವಿಕಾಸಕ್ಕೆ ಕಾರಣವಾಗಬೇಕು. ಆದರೆ ಸಂಕುಚಿತ ಭಾವನೆ ಹೆಚ್ಚಾಗುತ್ತಿದೆ. ಕುವೆಂಪು ಅವರು ಹೇಳಿದಂತೆ…
Author: Prajatv Kannada
ಬೆಂಗಳೂರು ;- ಲವ್ ಮಾಡುವಾಗ ಮದುವೆ ಆಗುವುದಾಗಿ ಹೇಳಿ ಬಳಿಕ ಮದುವೆ ಆಗದಿದ್ದರೆ ಅದು ವಂಚನೆ ಅಲ್ಲ ಎಂದು ಬೆಂಗಳೂರಿನ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣದಲ್ಲಿ ಆರೋಪಿಯು ಸಂತ್ರಸ್ತೆ ಎಂದಿರುವವರಿಗೆ ಪ್ರೀತಿಸುವ ಸಂದರ್ಭದಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಸಂಬಂಧ ದೂರವಾಗಿದೆ. ಈ ಪ್ರಕ್ರಿಯೆಯನ್ನು ವಂಚನೆ ಆರೋಪದಲ್ಲಿ ವ್ಯಾಪ್ತಿಗೆ ತರಲಾಗುವುದಿಲ್ಲ. ಅಲ್ಲದೆ, ಅರ್ಜಿದಾರರನ್ನು ವಂಚನೆ ಆರೋಪದಲ್ಲಿ ಅಪರಾಧಿ ಎಂದು ನಿರ್ಣಯಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. ಜೊತೆಗೆ, ಪ್ರಸ್ತುತ ಪ್ರಕರಣದಲ್ಲಿ ವಯಸ್ಕರಾದ ಸಂತ್ರಸ್ತೆ ಮತ್ತು ಅರ್ಜಿದಾರರು ಒಟ್ಟಾಗಿ ತಿರುಗಾಡಿದ್ದಾರೆ. ಅಲ್ಲದೇ, ಮದುವೆಯಾಗುವುದಾಗಿ ಒಪ್ಪಿಕೊಂಡು ಬಳಿಕ ಮದುವೆ ಆಗುವುದಕ್ಕೆ ಸಾಧ್ಯವಾಗಿಲ್ಲ. ಐಪಿಸಿ ಸೆಕ್ಷನ್ 415ರ ಪ್ರಕಾರ ಮೋಸ ಎಂದು ಪರಿಗಣಿಸಲಾಗದು. ಹೀಗಾಗಿ ಮೇಲ್ಮನವಿದಾರನನ್ನು ವಂಚನೆ ಆರೋಪದಲ್ಲಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.
ಬೆಂಗಳೂರು ;- ಕಾಲಕೂಡಿ ಬಂದಾಗ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕಾಲವೂ ಕೂಡಿ ಬರುತ್ತದೆ, ರಾಜ್ಯದಲ್ಲಿ ಜೆಡಿಎಸ್ ಸರಕಾರವೂ ಬರುತ್ತದೆ. ಪಕ್ಷದಲ್ಲಿ ನಿಷ್ಠರಾಗಿ ಉಳಿಯುವ ಎಲ್ಲರಿಗೂ ಅಧಿಕಾರ, ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ ಎಂದು ಹೇಳಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಕುರಿತು ಶಾಸಕರಿಗೆ ಟಿಪ್ಸ್ ನೀಡಿದ ಎಚ್ಡಿಡಿ ಪತಿಕ್ರೆಗಳನ್ನು ಗಂಭೀರವಾಗಿ ಓದುವಂತೆ, ಸುದ್ದಿ ಮಾಧ್ಯಮಗಳನ್ನು ಗಮನಿಸುವಂತೆ ಸಲಹೆ ನೀಡಿದ್ದಾರೆ. ಜನರ ಸಮಸ್ಯೆಗಳನ್ನು ಸರಕಾರದ ಮುಖಕ್ಕೆ ಹಿಡಿಯಿರಿ. ಹೋರಾಡುವುದಕ್ಕೆ ಅಂಜಿಕೆ, ಅಳಲು ಏಕೆ. ಇವತ್ತಿನ ರಾಜ್ಯ ಮತ್ತು ದೇಶದ ರಾಜಕಾರಣ ಗೊಂದಲಮಯವಾಗಿದೆ. ನಾವು ಜನನಿಷ್ಠರಾಗಿ ಅವರ ಜತೆ ನಿಲ್ಲೋಣ ಎಂದು ಶಾಸಕರನ್ನು ಹುರಿದುಂಬಿಸಿದ್ದಾರೆ. ಯಾರೂ ಎದೆಗುಂದಬೇಕಿಲ್ಲ. ಪಕ್ಷ ಕಟ್ಟಿ. ಸೋಲಿನಿಂದ ಹತಾಶರಾಗುವುದು ಬೇಡ. ಛಲವಿದ್ದರೆ ಗೆಲುವು ಖಚಿತ. ಅಧೈರ್ಯವೇ ಅವಸಾನಕ್ಕೆ ನಾಂದಿ ಆಗುತ್ತದೆ ಎಚ್ಚರ ಇರಲಿ. ಪಕ್ಷವನ್ನು ಉಳಿಸಲೇಬೇಕು, ಈ…
ಬೆಂಗಳೂರು ;– ಸಿಎಂ ಸಿದ್ದರಾಮಯ್ಯ ಅವರು ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸ, ಗೌರವ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಚುನಾವಣೆಯಿಂದ ನಿವೃತ್ತಿ ಅಷ್ಟೇ. ಆದ್ರೆ, ರಾಜಕೀಯ ನಿವೃತ್ತಿ ಆಗುವುದಿಲ್ಲ, ನಾನು ನಿಮ್ಮ ಪರವಾಗಿ ಹೋರಾಟ ಮಾಡೇ ಮಾಡುತ್ತೇವೆ. ಅವಕಾಶ ವಂಚಿತರ ಪರವಾಗಿ ಇರುತ್ತೇ, ಹೋರಾಟ ಮಾಡುತ್ತೇನೆ ಎಂದರು. ಎರಡನೇ ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ. ಜನರ ಆಶೀರ್ವಾದ ಸಿಕ್ಕಿದ್ದು, ಐದು ಗ್ಯಾರೆಂಟಿ ಜೊತೆಗೆ ಬೇರೆ ಭರವಸೆಯನ್ನ ಕೊಟ್ಟಿದ್ದೇನೆ. ರಾಜಕೀಯಕ್ಕಾಗಿ ಕೆಲವರು ಟೀಕೆ ಮಾಡಬಹುದು. 2013ರಲ್ಲಿ 6 ಭರವಸೆಯನ್ನ ಈಡೇರಿಸಿದ್ದೆವೆ. 5 ಗ್ಯಾರೆಂಟಿಗಳನ್ನ ಈ ಬಜೆಟ್ ನಲ್ಲಿ ಘೋಷಣೆ ಮಾಡುತ್ತೇವೆ. ಯಾರು ಏನೇ ಹೇಳಿದರೂ ಗ್ಯಾರೆಂಟಿ ಪೂರೈಕೆ ಬೇಕೇ ಬೇಕು. 50 ರಿಂದ 60 ಸಾವಿರ ಕೋಟಿ ರೂ. ಹಣ ಗ್ಯಾರೆಂಟಿಗೆ ಖರ್ಚಾಗುತ್ತದೆ. ನಾವು ಅಧಿಕಾರಕ್ಕೆ ಬಂದು ಇವತ್ತಿಗೆ 50 ದಿನ ಆಗಿದೆ. ಐದು ಗ್ಯಾರೆಂಟಿಗಳನ್ನ ಚಾಚು ತಪ್ಪದೇ…
ಲಕ್ನೋ: ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ತಿಗೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಉತ್ತರ ಪ್ರದೇಶದ ರಾಮ್ಪುರದಲ್ಲಿ ನಡೆದಿದೆ. ಆರೋಪಿ ಮೈದುನ ಕಿರುಕುಳ ನೀಡುತ್ತಿದ್ದ ವಿಡಿಯೋವನ್ನೂ ಸಂತ್ರಸ್ತೆ ರೆಕಾರ್ಡ್ ಮಾಡಿ ಪೊಲೀಸರಿಗೆ ಸಾಕ್ಷಿಗಾಗಿ ನೀಡಿದ್ದಾರೆ. ಪೊಲೀಸರು ಸಾಕ್ಷಿ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆಯ ಪತಿ ಒಂದು ವರ್ಷದ ಹಿಂದೆ ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದರು. ಈ ವೇಳೆ ಮೈದುನ ಸಂತ್ರಸ್ತೆಗೆ ಮದುವೆಯಾಗುದಾಗಿ ಮಾತು ಕೊಟ್ಟಿದ್ದಾನೆ. ನಂತರ ಮದುವೆ ಹೆಸರಿನಲ್ಲಿ ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡಲು ಶುರುಮಾಡಿದ್ದಾನೆ. ಸಂತ್ರಸ್ತೆ ನನ್ನನ್ನು ಮದುವೆಯಾಗು ಎಂದು ಒತ್ತಾಯ ಮಾಡಿದ್ರೆ, ನೆಪ ಹೇಳಿ ಆರೋಪಿ ಮದುವೆಯನ್ನು ಮುಂದೂಡುತ್ತಿದ್ದನು. ಈ ವೇಳೆ ಸಂತ್ರಸ್ತೆ ಆತ ಕಿರುಕುಳ ನೀಡುತ್ತಿದ್ದ ವಿಡಿಯೋವನ್ನು ಮಾಡಿದ್ದಾರೆ. ನಂತರ ಅದನ್ನು ಪೊಲೀಸರಿಗೆ ನೀಡಿ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಆರೋಪಿ ಮೈದುನನ್ನು ಬಂಧಿಸಿದ್ದಾರೆ.
ತುಮಕೂರು: ರಸ್ತೆ ಬದಿಯಲ್ಲಿ ಚಹಾ ಸವಿಯೋ ಮೂಲಕ ಶಾಸಕ ಟಿ.ಬಿ.ಜಯಚಂದ್ರ ಜನರ ಸಮಸ್ಯೆ ಆಲಿಸಿದ್ದಾರೆ. ಶಿರಾ ನಗರದ ಕೆಲ ಬಡವಾಣೆಗಳ ರೌಂಡ್ ಹಾಕಿ ನಗರ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಿರುವ ಶಾಸಕ, ಚುನಾವಣೆಯಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಸಿಟಿ ರೌಂಡ್ಸ್ ಹೊಡೆದ ಟಿ.ಬಿ.ಜಯಚಂದ್ರ..ಈ ವೇಳೆ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ಸಮಸ್ಯೆ ಕುರಿತಂತೆ ಹಲವು ಸಮಸ್ಯೆಗಳ ಹೇಳಿಕೊಂಡ ಮತಾದರರು..
ಬೀದರ್ : ಕರ್ನಾಟಕ ರಾಜ್ಯದಲ್ಲಿ 7ಲಕ್ಷ ಟನ್ ಅಕ್ಕಿ ಇದ್ದರೂ ಅದನ್ನು ಕೇಂದ್ರ ಸರ್ಕಾರ ಮುಚ್ಚಿಸಿಟ್ಟಿದೆ. ಇರುವ ಅಕ್ಕಿಯನ್ನು ಗೋದಾಮುಗಳಲ್ಲಿ ಮುಚ್ಚಿಟ್ಟಿದ್ದಾರೆ. ನಮ್ಮ ಕಾರ್ಯಕ್ರಮಕ್ಕೆ ಅಡತಡೆ ಮಾಡುತ್ತಿರುವ ಬಿಜೆಪಿ ವರ್ತನೆಯನ್ನು ಜನ ನೋಡುತ್ತಿದ್ದಾರೆ ಎಂದು ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು. ಅವರು ನಗರದಲ್ಲಿ ಭೇಟಿಯಾದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿ, ಕರ್ನಾಟಕ ಸರ್ಕಾರಕ್ಕೆ ಎಫ್‌ಸಿಐ ಅವರು ಅಕ್ಕಿ ಒದಗಿಸುವ ಭರವಸೆ ಕೊಟ್ಟನಂತರವೂ ಬಹಿರಂಗ ಹರಾಜಿನಲ್ಲಿ ರಾಜ್ಯ ಸರ್ಕಾರದವರಿಗೆ ಪರವಾನಿಗೆ ಕೊಡೋದಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರ ಹೇಳುತ್ತಿದೆ ಎಂದರು. ರಾಜ್ಯದಲ್ಲಿ ಎಲ್ಲಿಯವರೆಗೆ ಅಕ್ಕಿ ವ್ಯವಸ್ಥೆ ಆಗುವದಿಲ್ಲವೋ, ಅಲ್ಲಿಯವರೆಗೆ ಬಡ ಜನರಿಗೆ ಧನಸಹಾಯ ಮಾಡುತ್ತೇವೆ. ಮೂರು ತಿಂಗಳಲ್ಲಿ ಅಕ್ಕಿ ಪೂರೈಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು
ಮೈಸೂರು : ಔರಾದ್ಕರ್ ವರದಿ ಯಥಾವತ್ ಜಾರಿ ಕಷ್ಟ. ಪೊಲೀಸರಿಗೆ ವಾರದ ರಜೆ ಕೊಡಬೇಕು. ಅದನ್ನು ಅನುಷ್ಠಾನ ಮಾಡುತ್ತೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಆದಷ್ಟು ಬೇಗ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ, 400 ಸಬ್ ಇನ್ಸ್‌ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು. ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5 ರಂದು ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇವೆ. ಅದನ್ನು ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ಮಂಗಳೂರು : ಮಂಗಳೂರಿನ ನಂತೂರು, ಕೆಪಿಟಿ ಹಾಗೂ ಕೂಳೂರುಗಳಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಡೆತಡೆಯಾಗಿರುವ ಪರಿಕರಗಳನ್ನು ಕೂಡಲೇ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಇನ್ನು ಒಂದು ವಾರದಲ್ಲಿ ಇಲ್ಲಿ ಕಾಮಗಾರಿ ಆರಂಭಿಸುವಂತೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಪಾಲನಾ ವರದಿ ವೇಳೆ ವಿವಿಧ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪ್ರಸ್ತಾಪಿಸಿದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಇಲಾಖೆ(ಎನ್‌ಎಚ್‌ಐಎ) ಎಂಜಿನಿಯರ್ ಅನಿರುದ್ಧ ಕಾಮತ್, ಬಿ.ಸಿ.ರೋಡ್-ಪೆರಿಯಶಾಂತಿ ಹೆದ್ದಾರಿಯಲ್ಲಿ 48.48 ಕಿ.ಮೀ. ಪೈಕಿ 14.2 ಕಿ.ಮೀ. ಕಾಮಗಾರಿ ಮುಕ್ತಾಯವಾಗಿದ್ದು, ಶೇ.31.4 ಪ್ರಗತಿ ಆಗಿದೆ. ಪೆರಿಯಶಾಂತಿ-ಅಡ್ಡಹೊಳೆಯ 8.5 ಕಿ.ಮೀ. ಕಾಮಗಾರಿ ಮುಗಿದಿದ್ದು, ಶೇ.61 ಪ್ರಗತಿ ಆಗಿದೆ. ಈ ಕಾಮಗಾರಿಗಳು 2023ರ ಡಿಸೆಂಬರ್‌ಗೆ ಮುಕ್ತಾಯಗೊಳ್ಳಲಿದೆ. ಕಲ್ಲಡ್ಕದಲ್ಲಿ ಮೇಲ್ಸೇತುವೆ ಕಾಮಗಾರಿ ಶೇ.34ರಷ್ಟುಮುಕ್ತಾಯವಾಗಿದ್ದು, 2024ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕುಲಶೇಖರ-ಸಾಣೂರು ಹೆದ್ದಾರಿ ಕಾಮಗಾರಿ ಶೇ.21ರಷ್ಟುಆಗಿದೆ, ಇಲ್ಲಿ 48 ಕಿ.ಮೀ. ಪೈಕಿ 15 ಕಿ.ಮೀ. ಕಾಮಗಾರಿ ಪೂರ್ತಿಯಾಗಿದ್ದು, 2024 ಅಕ್ಟೋಬರ್ ವೇಳೆಗೆ ಪೂರ್ತಿಯಾಗಲಿದೆ. ಆದರೆ ಹೆದ್ದಾರಿಯಲ್ಲಿರುವ ವಿದ್ಯುತ್ ಲೈನ್ ಮತ್ತಿತರ…
ಧಾರವಾಡ: ಶಿವಮೊಗ್ಗ, ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಚಾಜ್‌ರ್‍ಶೀಟ್ ಸಲ್ಲಿಸಿದ್ದು, ಅದರಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈಗ ಉತ್ತರ ಕೊಡಬೇಕು. ಅದೊಂದು ಸಣ್ಣ ವಿಷಯ. ಅದನ್ನು ಡೈವರ್ಟ್ ಮಾಡುತ್ತಿದ್ದಾರೆ ಎಂದು ಅಂದು ಡಿ.ಕೆ.ಶಿವಕುಮಾರ್ ಹೇಳಿದ್ದರು ಎಂದರು. ಭಯೋತ್ಪಾದಕರು ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಕಾಂಗ್ರೆಸ್ ಯಾವಾಗಲೂ ಅನುಕಂಪ ತೋರುತ್ತಲೇ ಬಂದಿದೆ. ಈಗ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಅಂದು ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆಯನ್ನು ಮಾಧ್ಯಮಗಳು ತೋರಿಸಬೇಕು. ಅದಕ್ಕೆ ಡಿ.ಕೆ.ಶಿವಕುಮಾರ್ ಮತ್ತೇನು ಹೇಳುತ್ತಾರೆ ನೋಡಿ ಎಂದರು.