ಬೆಂಗಳೂರು: ವಲಸಿಗರಿಂದಾಗಿಯೇ ಪಕ್ಷಕ್ಕೆ ಈದುರ್ಗತಿ ಬಂತು ಅನ್ನೋ ಈಶ್ವರಪ್ಪ ಸ್ಟೇಟ್’ ಮೆಂಟ್ ನಿಂದಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ಬಂದಿದ್ದ ವಲಸಿಗರಿಗೆ ಮುಜುಗರ ಎದುರಾಗಿದೆ. ಯಾರೊಬ್ಬರೂ ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡದಿದ್ರೂ ಒಳಗೊಳಗೇ ಖುಗ್ಗಿ ಹೋಗಿದ್ದಾರೆ. ಅಲ್ಲಿಂದ ಇಲ್ಲಿಗೆ ಬಂದು ಇನ್ನು ಏನೇನೋ ಕೇಳ್ಬೇಕೋ. ಇನ್ನು ಏನೇನು ಅನುಭವಿಸ್ಬೇಕೋ ಅಂತ ಗೊಂದಲಕ್ಕೊಳಗಾಗಿದ್ದಾರೆ. ಪಕ್ಷದಿಂದ ಹೊರಹೋಗುವಂತೆಯೂ ಇಲ್ಲ, ಪಕ್ಷದೊಳಗೆ ಇರೋಕೂ ಸಾಧ್ಯವಾಗ್ತಿಲ್ಲ ಅಂತಹ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಕೆಲವು ಹಿರಿಯರ ಬಗ್ಗೆ ಕೋಪವಿದ್ರೂ ಒಳಗೇ ನುಂಗಿಕೊಂಡು ಸುಮ್ಮನಿದ್ದಾರೆ. ಇದ್ರ ನಡುವೆ ಇಂದು ಬಿಜೆಪಿ ಕಚೇರಿಯಲ್ಲಿಮಾತನಾಡಿದ ಈಶ್ವರಪ್ಪ ನಾನು ಆ ರೀತಿ ಹೇಳಿಯೇ ಇಲ್ಲವೆಂದು ತಿಪ್ಪೆ ಸಾರಿದ್ದಾರೆ. ಆದ್ರೆ ಅಡಿಕೆಗೆ ಹೋದ ಮಾನ ಮತ್ತೆ ಬರುತ್ತಾ ಅನ್ನೋ ಗಾದೆ ಮಾತಿನಂತೆ ಅನ್ನೋದು ಅಂದು ಬಿಟ್ಟು ಮರ್ಯಾದೆ ಹೋದ್ಮೇಲೆ ಈಗ ವಾಪಸ್ ಬರುತ್ತಾ ಅಂತ ಈಶ್ವರಪ್ಪ ವಿರುದ್ಧ ಎಲ್ಲರೂ ಕತ್ತಿ ಮಸೆಯುತ್ತಿದ್ದಾರೆ..
Author: Prajatv Kannada
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 3 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಇಂದು(ಜುಲೈ 02) ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥ್ ನಾರಾಯಣ, ನಾಳೆಯಿಂದ (ಜುಲೈ 03) ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ ಎಂಬ ಶೀರ್ಷಿಕೆ ಅಡಿ ಹೋರಾಟ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಜನರಿಗೆ ಗ್ಯಾರಂಟಿಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಎಂದಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಸದನದ ಹೊರಗಡೆ ಮತ್ತು ಒಳಗಡೆ ಹೋರಾಟ ಮಾಡಲಿದ್ದೇವೆ. ಸದನದ ಹೊರಗಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಜು.4ರಂದು ಫ್ರೀಡಂಪಾರ್ಕ್ನಲ್ಲಿ ಹೋರಾಟ ಮಾಡುತ್ತಾರೆ ಎಂದು ಹೇಳಿದರು.
ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಿರಿಸಿದ್ದೇವೆ. ನಾಡಿದ್ದು ಸಾವಿರಾರು ಕಾರ್ಯಕರ್ತರ ಜತೆ ಪ್ರತಿಭಟನೆ ನಡೆಸುತ್ತೇವೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ದೆಹಲಿಗೆ ಬರಲು ಹೇಳಿದ್ದಾರೆ. ವಿಷಯ ಏನು ಅಂತ ಗೊತ್ತಿಲ್ಲ. ಹೋಗಿ ಮಾತಾಡಿ ಸಾಧ್ಯ ಆದರೆ ಇಂದೇ ಬರುತ್ತೇನೆ. ನಾಡಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಹೀಗಾಗಿ ಅದರಲ್ಲಿ ಭಾಗವಹಿಸಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ (Alok Mohan) ಹೇಳಿದರು. ನಗರದಲ್ಲಿ ಟ್ರಾಫಿಕ್ (Bengaluru Traffic) ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಟ್ರಾಫಿಕ್ ನಿರ್ವಹಣೆಗೆ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರ ಬಳಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ವಿಶೇಷವಾಗಿ ಟ್ರಾಫಿಕ್ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡುವವರ ಬಗ್ಗೆ ಚರ್ಚೆ ಮಾಡಲಾಗಿದೆ. ಒಂದು ತಿಂಗಳಲ್ಲಿ ನಗರದಲ್ಲಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಒಂದು ಕ್ರಮ ಅಗಲಿದೆ. ಸಂಚಾರ ನಿರ್ವಹಣೆಗೆ ಹೆಚ್ಚುವರಿ ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗುವುದು ಎಂದರು. ಪೀಕ್ ಟೈಮ್ನಲ್ಲಿ ಟ್ರಾಫಿಕ್ ಹೆಚ್ಚು ಇರುತ್ತದೆ. ಈ ವೇಳೆ ಕಾನೂನು ಸುವ್ಯವಸ್ಥೆ ಪೊಲೀಸರು ಕೂಡ ಫೀಲ್ಡ್ನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಲಾ ಆಂಡ್ ಆರ್ಡರ್ ಪೊಲೀಸರನ್ನ ಟ್ರಾಫಿಕ್ ಕೆಲಸಕ್ಕೆ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ…
ಬೆಂಗಳೂರು: ಹೈಕಮಾಂಡ್ ಬಳಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಪಕ್ಷ ನನ್ನ ನಡವಳಿಕೆ, ಶಕ್ತಿ ಬಗ್ಗೆ ತಿಳಿದುಕೊಂಡಿದೆ. ಹಿಂದೆ ಕೂಡ ಗೃಹ ಸಚಿವ ಸ್ಥಾನಕ್ಕೂ ನಾನು ಬೇಡಿಕೆ ಇಟ್ಟಿರಲಿಲ್ಲ. ಪಕ್ಷ ಜವಾಬ್ದಾರಿ ನೀಡಿದರೂ, ನೀಡದಿದ್ದರೂ ಪಕ್ಷದ ಕೆಲಸ ಮಾಡುವೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲು ಒಂದೇ ದಿನ ಬಾಕಿ ಇದ್ದರೂ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದ್ದು, ಭಾನುವಾರ ದೆಹಲಿಯಲ್ಲಿ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯುಂಟಾಗಿರುವ ಕಾರಣ ಪಕ್ಷದಲ್ಲಿ ಮುಖಂಡರ ನಡೆಯ ಬಗ್ಗೆ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಇದನ್ನು ಶಮನಗೊಳಿಸುವಲ್ಲಿಯೇ ಹರಸಾಹಸ ಮಾಡುತ್ತಿರುವ ವರಿಷ್ಠರು ಚುನಾವಣೆಯ ಫಲಿತಾಂಶ ಬಂದು ತಿಂಗಳು ಕಳೆದರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಒಮ್ಮತ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಸೋಮವಾರದಿಂದ ಅಧಿವೇಶನ ಪ್ರಾರಂಭವಾಗಲಿದೆ. ಈ ವೇಳೆ ಪಕ್ಷದ ಶಾಸಕಾಂಗ ನಾಯಕನ ಆಯ್ಕೆಯು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾಯಕನ ಆಯ್ಕೆಯತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲಾಗಿದೆ. ಭಾನುವಾರ ದೆಹಲಿಯಲ್ಲಿ ಪಕ್ಷದ ವರಿಷ್ಠರ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ದೆಹಲಿಯಲ್ಲಿಯೇ ಭಾನುವಾರ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆಯಾದರೂ ಒಂದು ವೇಳೆ ಅಲ್ಲಿ ಘೋಷಣೆಯಾಗದಿದ್ದರೆ ಸೋಮವಾರ…
ಬೆಂಗಳೂರು: ನಮ್ಮ ಸಮಾಜದಲ್ಲಿ ಬಡವರು ಹಾಗೂ ಶ್ರೀಮಂತರು ಎಂಬ ತಾರತಮ್ಯ ಇದೆ. ಶ್ರೀಮಂತರು ಅವರ ಆರೋಗ್ಯ ಕಾಪಾಡಿಕೊಳ್ಳುತ್ತಾರೆ. ಜನ ಈಗ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಇರೋ ಸೌಲಭ್ಯ, ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲೂ ಇದ್ದಾರೆ. ಆದರೆ ಜನರು ತಮ್ಮ ಮನಸ್ಸನ್ನು ಬದಲಿಸಬೇಕು. ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಡಬೇಕು. ವೈದ್ಯರು ಕೂಡ ಅದನ್ನ ಉಳಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದರು.
ಪಾಟ್ನಾ: ಜುಲೈ 3 ರಂದು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕುರಿತು ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಶೀಲ್ ಮೋದಿ ಹೇಳಿದ್ದಾರೆ. ಇಂದು ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸಮಿತಿಯು ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರನ್ನು ಹೊಂದಿರುವುದರಿಂದ, ಸಮಿತಿಯ ಸಭೆಯು ರಾಜಕೀಯೇತರವಾಗಿದೆ ಎಂದು ತಿಳಿಸಿದ್ದಾರೆ. ಯುಸಿಸಿ ಕುರಿತ ಕಾನೂನು ಆಯೋಗದ ವರದಿ ಬಗ್ಗೆ ಜುಲೈ 3ರಂದು ಸಮಿತಿಯಲ್ಲಿ ಚರ್ಚಿಸುತ್ತೇವೆ. ಅಗತ್ಯವಿದ್ದಲ್ಲಿ ಇನ್ನೊಂದು ಸಭೆಯನ್ನು ಕರೆದು ಮತ್ತಷ್ಟು ಚರ್ಚಿಸುತ್ತೇವೆ. ಈ ವಿಚಾರದಲ್ಲಿ ಸಮಿತಿ ಸಂಪೂರ್ಣ ತಟಸ್ಥವಾಗಿದೆ ಎಂದಿದ್ದಾರೆ. ಜುಲೈ 3 ರ ಸಭೆಯಲ್ಲಿ ಯುಸಿಸಿ ಕುರಿತು ನಿಮ್ಮ ಸಲಹೆ, ಸೂಚನೆಗಳನ್ನು ತಿಳಿಸುವಂತೆ ಸದಸ್ಯರಿಗೆ ಕೋರಲಾಗುವುದು ಮತ್ತು ಅವರ ಅಭಿಪ್ರಾಯವನ್ನು ಪರಿಗಣಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.
ಕೋಲ್ಕತ್ತಾ: ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣವೇ ಹೊರತು ಭಾರತವಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಪ್ಪಾಳೆ ತಟ್ಟಲು ಎರಡು ಕೈಗಳು ಬೇಕಾಗುತ್ತವೆ. ಸಂಬಂಧ ಉಳಿಯಬೇಕಾದರೆ ಭಾರತದ ಒಂದು ಕೈ ಜೊತೆ ಚೀನಾ ಕೂಡ ನಂಬಿಕೆ ಇಡಬೇಕು. ಆಗ ಮಾತ್ರ ದ್ವಿಪಕ್ಷೀಯ ಸಂಬಂಧ ಸರಿಯಾದ ಮಾರ್ಗದಲ್ಲಿರುತ್ತದೆ ಎಂದಿದ್ದಾರೆ. ಎರಡೂ ದೇಶಗಳ ಸಂಬಂಧ ದೊಡ್ಡ ಶಕ್ತಿಯಾಗಿ ಹೊರಹೊಮ್ಮುವಾಗ ಸ್ಥಿರತೆಯನ್ನು ಬಯಸುತ್ತದೆ. ಆ ಸ್ಥಿರತೆಯನ್ನು ಕಾಯ್ದುಕೊಳ್ಳದ ಹಿನ್ನಲೆ ಭಾರತ ಮತ್ತು ಚೀನಾ ಸಂಬಂಧ ಹಳಸಲು ಕಾರಣವಾಗಿದೆ. ಎರಡು ದೇಶಗಳ ಸಂಬಂಧಗಳು ಪರಸ್ಪರ ತಿಳುವಳಿಕೆಯನ್ನು ಹೊಂದಿರಬೇಕು ಎಂಬುದನ್ನು ಚೀನಾ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ. ಪ್ರಮುಖ ದೇಶಗಳ ನಡುವಿನ ಸಂಬಂಧಗಳು ಪರಸ್ಪರ ಆಸಕ್ತಿ, ಸೂಕ್ಷ್ಮತೆ ಮತ್ತು ಗೌರವವನ್ನು ಆಧರಿಸಿದ್ದಾಗ ಮಾತ್ರ ಅದು ಕೆಲಸ ಮಾಡುತ್ತದೆ. ಇದನ್ನು ಚೀನಾ ಅರ್ಥ ಮಾಡಿಕೊಂಡಿಲ್ಲ. ಗಡಿ ಪ್ರದೇಶಗಳಲ್ಲಿ ನಾವು ಕೆಲವು ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಎಲ್ಲಿ ಸಮಸ್ಯೆಗಳಿಲ್ಲ? ರಾಜತಾಂತ್ರಿಕತೆಯ ಮೂಲಕ ಬಗೆಹರಿಸಬೇಕು. ಅದನ್ನು ನಾವು ಎಂದಿಗೂ…
ನವದೆಹಲಿ: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಶಹದೋಲ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಒಂದು ದಿನಕ್ಕೂ ಮುನ್ನ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅದೇ ವಿಧಾನಸಭಾ ಕ್ಷೇತ್ರದ ರಾಜ್ಯದ ಮತ್ತೊಂದು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ನಡ್ಡಾ ಅವರು ನೈರುತ್ಯ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಖಾರ್ಗೋನ್ ಜಿಲ್ಲೆಯಲ್ಲಿ ರೋಡ್‌ಶೋ ನಡೆಸಿದರು ಮತ್ತು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಅದೇ ಕಾರ್ಯಕ್ರಮದಲ್ಲಿ, ಮಧ್ಯ ಪ್ರದೇಶದ ಮಾಜಿ ಸಚಿವ ಮತ್ತು ಮಹೇಶ್ವರ-ಎಸ್‌ಸಿ ಸ್ಥಾನದಿಂದ ಐದನೇ ಬಾರಿಗೆ ಹಾಲಿ ಶಾಸಕಿ ಡಾ. ವಿಜಯಲಕ್ಷ್ಮಿ ಸಾಧೋ ಅವರ ಸಹೋದರಿ ಪ್ರಮೀಳಾ ಸಾಧೋ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು. ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, 15 ತಿಂಗಳ ಹಿಂದಿನ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಆಡಳಿತವನ್ನು ಭ್ರಷ್ಟ ಸರ್ಕಾರ ಎಂದು ಬಣ್ಣಿಸಿದರು. ‘ಆ ಆಡಳಿತವು ಎಷ್ಟು ದೇಶಭಕ್ತಿಯಿಂದ ಕೂಡಿತ್ತು ಎಂದು ನಿಮಗೆ ತಿಳಿದಿದೆಯೇ?. ಇದು ಮಧ್ಯಪ್ರದೇಶದ ಶೈಕ್ಷಣಿಕ ಪಠ್ಯಕ್ರಮದಿಂದ ಕಾರ್ಗಿಲ್ ಅಧ್ಯಾಯವನ್ನು ತೆಗೆದುಹಾಕಿತು. ಇದು ನಮ್ಮ ರಕ್ಷಣಾ ಪಡೆಗಳಿಗೆ ಮಾಡಿದ ದೊಡ್ಡ ಅವಮಾನ.…