ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಒಂದಿಲ್ಲೊಂದು ಪ್ರಕರಣಗಳು ಸಂಭವಿಸುತ್ತಿದ್ದು ಶನಿವಾರವೂ ಮತ್ತೊಂದು ಪ್ರಕರಣ ನಡೆದಿದೆ. ತಾಂತ್ರಿಕ ದೋಷದಿಂದ ರೆನಾಲ್ಡ್ ಡಸ್ಟರ್ ಕಾರು ಹೊತ್ತಿ ಉರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಪಿರಾನ್ ಎಂಬುವವರ ರೆನಾಲ್ಟ್ ಡಸ್ಟರ್ ಕಾರು ಹೊತ್ತಿ ಉರಿದಿದೆ. ತಮ್ಮ ಕುಟುಂಬದ ಜೊತೆ ಮೈಸೂರಿಗೆ ತೆರಳುತ್ತಿದ್ದಾಗ ಶ್ರೀರಂಗಪಟ್ಟಣದ ಗೌರಿಪುರ ಗೇಟ್ ಬಳಿ ಕಾರಿನ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರನ್ನು ನಿಲ್ಲಿಸಿ ಕಾರಿನಲ್ಲಿದ್ದ ಎಲ್ಲರೂ ಕೆಳಗಿಳಿದಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರಿನಲ್ಲಿ ಹೆಚ್ಚಿನ ಬೆಂಕಿ ಕಾಣಿಸಿಕೊಂಡು ಕಾರಿನ ಅರ್ಧದಷ್ಟು ಭಾಗ ಸುಟ್ಟು ಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಅಗಮಿಸಿ ಬೆಂಕಿ ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವರದಿ : ಗಿರೀಶ್ ರಾಜ್ ಮಂಡ್ಯ
Author: Prajatv Kannada
ಮೈಸೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇದೆ. ಖಾಲಿ ಹುದ್ದೆಗಳ ಭರ್ತಿ ಮಾಡುವ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾನ್ಸ್ಟೇಬಲ್, 400 ಪಿಎಸ್ಐ ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇದಕ್ಕೂ ಮುನ್ನ ಮೈಸೂರು ಅರಮನೆಗೆ ಕುಟುಂಬಸ್ಥರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದಾರೆ. ಅರಮನೆ ಆಡಳಿತ ಮಂಡಳಿ ಡಾ.ಪರಮೇಶ್ವರ್ಗೆ ಸ್ವಾಗತ ನೀಡಿ ಮೈಸೂರು ಪೇಟ ತೊಡಿಸಿ ನೆನಪಿನ ಕಾಣಿಕೆ ನೀಡಿದ್ರು. ನೆನಪಿನಾರ್ಥ ಡಾ.ಜಿ.ಪರಮೇಶ್ವರ್ ದಂಪತಿ ಗಂಧದ ಗಿಡ ನೆಟ್ಟರು. ಬಳಿಕ ಪ್ರಮೋದಾದೇವಿ ಒಡೆಯರ್ ಭೇಟಿಯಾದರು.
ಬೆಂಗಳೂರು: ವಿಕೆಂಡ್ ಬಂದ್ರೆ ಸಾಕು ಯುವಕರಿಗೆ ಅದೇನಾಗುತ್ತೋ ಗೊತ್ತಿಲ್ಲ.ರಸ್ತೆಯಲ್ಲಿ ಕಾರು ಓಡಿಸ್ತೀವಿ ಏರೋಫ್ಲೇನ್ ಓಡಸ್ತಿದ್ದೀವಿ ಅನ್ನೋ ಗುಂಗಲ್ಲಿ ಅಲ್ಲಿ ಇರ್ತಾರೋ ಗೊತ್ತಿಲ್ಲ.. ಯಾರದ್ದೋ ಹುಡುಗಾಟಕ್ಕೆ ಇನ್ಯಾರೋದ್ದೋ ಪ್ರಾಣ ಹೋಗಿದ್ರೆ ಏನ್ ಗತಿ ಅಲ್ವಾ ಅಷ್ಟಕ್ಕೂ ಈರೀತಿ ಯಾಕೆ ಹೇಳ್ತಿದ್ದೀವಿ ಅಂದ್ಕೋಂಡ್ರಾ ಈ ಆಕ್ಸಿಡೆಂಟ್ ದೃಶ್ಯ ನೋಡಿ ಗೊತ್ತಾಗುತ್ತೆ.. Video Player 00:00 00:17 ಈ ಸಿಸಿಟಿವಿ ದೃಶ್ಯಾವಳಿಗಳನ್ನ ಒಮ್ಮೆ ನೋಡಿ… ಅದೆಂಥಾ ವೇಗವಾಗಿ ಕಾರು ಓಡಿಸಿದ್ದಾನೆ.. ಈ ಸ್ಪೀಡ್ ನಲ್ಲಿ ಬಂದ ಕಾರು ಮೊದಲು ಡಿವೈಡರ್ ಗೆ ಗುದ್ದಿದೆ. ಅದೇ ಸ್ಪೀಡ್ ನಲ್ಲಿ ಮರಕ್ಕೆ ಗುದ್ದಿ ಪಕ್ಕಕ್ಕೆ ಹಾರಿ ನಿಂತಿದೆ. ಹೌದು ಈ ಘಟನೆ ನಡೆದಿದ್ದು ಪಾಪರೆಡ್ಡಿ ಪಾಳ್ಯದ ಬಸ್ ನಿಲ್ದಾಣದ ಬಳಿ. ರಾತ್ರಿ 12:40 ರ ಸಮಯ ಖಾಸಗಿ ಕಂಪನಿಯ ಇಂಜಿನಿಯರ್ ಯಶಸ್ ನಾಗರಬಾವಿ ಕಡೆಯಿಂದ ಕೆಂಗೇರಿಕಡೆಗೆ ಹೋಗ್ತಾ ಇದ್ದ. ಕಾರು ಗುದ್ದಿದ ರಭಸದ ಶಬ್ಧಕ್ಕೆ ಅಕ್ಕಪಕ್ಕದವರೆಲ್ಲ ಓಡಿ ಬಂದಿದ್ರೂ. ತಕ್ಷಣ ಕಾರಲ್ಲಿದ್ದ ಯಶಸ್ಸ್ ನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ.…
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಇನ್ನೊಂದೇ ವಾರ ಬಾಕಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಅಂತಿಮ ಹಂತದ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ವಸಂತನಗರದ KSFC ಕಚೇರಿಯಲ್ಲಿ ಸಭೆ ನಡೆಸುತ್ತಿರುವ ಸಿಎಂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲಿ ಬಹಳಷ್ಟು ಗೊಂದಲಗಳಿವೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಹಳಷ್ಟು ಗೊಂದಲ ಮಾಡಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸಂಪುಟ ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಒಂದೂವರೆ ತಿಂಗಳಲ್ಲಿ ಕೆಲ ನಿರ್ಣಯ ತೆಗೆದುಕೊಂಡಿದ್ದಾರೆ. ಸರ್ಕಾರದ ನಿರ್ಧಾರ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡ್ತೇವೆ ಎಂದರು.
ಬೆಂಗಳೂರು: ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ಹಾಕುವ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೊಟ್ಟ ಮಾತಿನಂತೆ ಅಕ್ಕಿ ಸಿಗುವವರೆಗೂ ಹಣ ಕೊಡುತ್ತೇವೆ ಎಂದರು. ಸಿಎಂ, ಆಹಾರ ಸಚಿವರು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಶೇಕಡಾ 80ರಿಂದ 85ರಷ್ಟು ಕಾರ್ಡ್ದಾರರ ಖಾತೆಗೆ ಆಧಾರ್ ಲಿಂಕ್ ಆಗಿದೆ. ಶೇಕಡಾ 15-20ರಷ್ಟು ಕಾರ್ಡ್ದಾರರ ಅಕೌಂಟ್ ಟ್ರೇಸ್ ಆಗಬೇಕು. ಆಧಾರ್ ಲಿಂಕ್ ಖಾತೆಗೆ ಹಣ ಕೊಡಿ ಎಂದರೆ ಹಾಕುತ್ತೇವೆ. ಬಿಜೆಪಿ ಸಲಹೆಯನ್ನೂ ಪರಿಗಣಿಸಿ ಈ ತೀರ್ಮಾನ ಮಾಡಿದ್ದೇವೆ ಎಂದರು. ಏಕ ರೂಪ ನಾಗರಿಕತೆ ಜಾರಿ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ರಾಷ್ಟ್ರೀಯ ಪಕ್ಷ ಅದರ ಬಗ್ಗೆ ಅಭಿಪ್ರಾಯ ತಿಳಿಸುತ್ತದೆ. ನಾವು ಬದುಕುತ್ತಿದ್ದೇವೆ. ನಮ್ಮ ಪಾರ್ಟಿ ಒಂದೊಂದು ಇಂಚು ತಿಳಿಸುತ್ತದೆ. ಅದರ ಬಗ್ಗೆ ಪ್ರತಿಕ್ರಿಯೆ ಕೊಡಲ್ಲ. ಇದು ನನ್ನ ಸ್ಟ್ಯಾಂಡ್ ಎಂದರು.
ಬಳ್ಳಾರಿ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ (Accident Near Hosapete Vaddarahalli Bridge) ಬಳಿ ಶುಕ್ರವಾರ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ವಿಜಯನಗರ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ (Zameer Ahmed Khan) ಇಂದು (ಶನಿವಾರ) ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೆ ವಿಮ್ಸ್ ಶವಗಾರ ಮತ್ತು ಮೃತರ ಮನೆಗೆ ಕೂಡ ಜಮೀರ್ ಭೇಟಿ ನೀಡಿ ಕುಟುಂಬಕ್ಕೆ ಧೃತಿಗೆಡದಂತೆ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಮುಸ್ಲಿಮರಲ್ಲಿ ಬಕ್ರಿದ್ (Bakrid) ಬಳಿಕ ಬಾಸಿ ಖುತ್ಬ ಎನ್ನುವ ಆಚರಣೆ ಮಾಡುತ್ತೇವೆ. ಹಬ್ಬದಾಚರಣೆ ಮಾಡಲು ಕೌಲಬಜಾರನ 19 ಮಂದಿ ಎರಡು ಆಟೋ ಮೂಲಕ ತೆರಳಿದ್ರು. ಈ ವೇಳೆ ಅಪಘಾತ ಸಂಭವಿಸಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ ಎರಡು ಲಕ್ಷ ಪರಿಹಾರ ನೀಡಲಾಗ್ತದೆ ಎಂದರು. ಗಾಯಾಳುಗಳಿಗೆ 50 ಸಾವಿರ…
ಹುಬ್ಬಳ್ಳಿ: ಒಂದು ಸರ್ಕಾರ ಬರುತ್ತೆ ಸ್ಥಿರ ಸರ್ಕಾರ ಇರುತ್ತೆ ಅಂತ ಹೇಳಿದ್ದೆ ಅದು ನಿಜ ಆಗಿದೆ ಎಂದುಹಾರನಹಳ್ಳಿ ಕೊಡಿಮಠದ ಶಿವಾನಂದ ಶಿವಯೋಗಿ ಶ್ರೀ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತೆ ಜಲಪ್ರಳಯ ಆಗೋ ಆಗುವ ಲಕ್ಷಣ ಇದ್ದು ಜಾಗತಿಕ ಮಟ್ಟದಲ್ಲಿದುರಂತ ಆಗುವುದಿದೆ ಎಂದ ಅವರು ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಜನರ ಅಕಾಲ ಮೃತ್ಯು ಆಗುವ ಸೂಚನೆ ಇದೆ ಎಂದು ಭವಿಷ್ಯ ನುಡಿದ ಅವರು, ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತೆ̤ ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು ಇಲ್ಲಾ ಕಟ್ಟಿಟ್ಟ ಬುತ್ತಿ ಎಂದು ಮುನ್ಸೂಚನೆ ನೀಡಿದರು. ಕರುನಾಡಿಗೆ ಕೆಲವೊಂದು ಆಪತ್ತು ಇದೆ ಕೆಲ ಸಾವು ನೋವುಗಳು ಆಗ್ತವೆ ದೈವ ಕೃಪೆಯಿಂದ ಪಾರಾಗಬಹುದು̤. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತೆ ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ ಎಂದರು̤ ಜಗತ್ತಿನ ಸಾಮ್ರಾಟರು ತಲ್ಲಣ ಆಗ್ತಾರೆ ಬಡವರಿಗೆ ಗ್ಯಾರೆಂಟಿ ಒಳ್ಳೆಯದೇ ಯಾವ ಹೆಣ್ಣಿಗೆ ಸ್ವತಂತ್ರ ಇರ್ಲಿಲ್ಲ ಅಂತಹ…
ಬೆಳಗಾವಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ತಗುಲಿದ್ದು ಮನೆಯಲ್ಲಿದ್ದ ನಾಲ್ವರಿಗೆ ಗಾಯಗಳಾದ ಘಟನೆ ಬೆಳಗಾವಿಯ ಸುಭಾಷ್ ಗಲ್ಲಿಯಲ್ಲಿ ಬೆಳಗಿನ ಜಾವ ನಡೆದಿದೆ. NWKRTC ನೌಕರ ಮಂಜುನಾಥ ಅಥಣಿ, ಪತ್ನಿ ಲಕ್ಷ್ಮೀಗೆ ಗಂಭೀರ ಗಾಯಗಳಾಗಿದ್ದು ಮಕ್ಕಳಾದ ವೈಷ್ಣವಿ(13), ಸಾಯಿಪ್ರಸಾದ್(10)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಾಲ್ವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಂದಿನಂತೆ ಬೆಳಗ್ಗೆ ಎದ್ದು ಚಹಾ ಮಾಡಲು ಲೈಟರ್ ಆನ್ ಮಾಡಿದಾಗ ಬೆಂಕಿ ಹತ್ತಿಕೊಂಡಿದೆ.
ಚಿಕ್ಕಮಗಳೂರು: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೇದು ಎಂದರು.
ಮೈಸೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಂಚೆ ಬಗ್ಗೆ ಸಿ.ಟಿ.ರವಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮೊದಲು ಸಿ.ಟಿ.ರವಿ ತಮ್ಮ ಪಂಚೆಯನ್ನು ಸರಿ ಮಾಡಿಕೊಳ್ಳಲಿ ಎಂದು ಮೈಸೂರಿನಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹೀಗೆ ಮಾತನಾಡಿದ್ದಕ್ಕೆ ಚುನಾವಣೆಯಲ್ಲಿ ಜನ ಉತ್ತರಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಉತ್ತರವೇ ಅಂತಿಮ. ಕೇವಲ 65 ಸ್ಥಾನಕ್ಕೆ ಕುಸಿದಿರುವ ಬಿಜೆಪಿಯಲ್ಲಿ ಕಚ್ಚಾಟ ಇಲ್ಲವೇ?. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರೆ? ಮನಸ್ಸಿಗೆ ಬಂದಂತೆ ಮಾತನಾಡ್ತಿದ್ದಕ್ಕೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.