ಬರ್ಲಿನ್: ಜಗತ್ತಿನ ಅತ್ಯಂತ ಹಳೆಯ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಸ್ಟ್ರಿಯಾ ಸರ್ಕಾರದ ಮಾಲೀಕತ್ವದ ವೀನರ್ ಝೈಟುಂಗ್ ಪತ್ರಿಕೆ ಶುಕ್ರವಾರ ತನ್ನ ಮುದ್ರಣ ಕಾರ್ಯ ಸ್ಥಗಿತಗೊಳಿಸಿದೆ. 1703 ಆ.8ರಿಂದ ಸತತವಾಗಿ 320 ವರ್ಷಗಳ ಕಾಲ ಪ್ರಕಟಗೊಳ್ಳುತ್ತಾ ಬಂದಿದ್ದ ವೀನರ್ ಝೈಟುಂಗ್ ಪತ್ರಿಕೆ ಇದೀಗ ತನ್ನ ಕೆಲಸವನ್ನು ನಿಲ್ಲಿಸಿದೆ. ಆಸ್ಟ್ರಿಯಾ ಸರ್ಕಾರದ ಮಾಲೀಕತ್ವ ಹೊಂದಿರುವ ಈ ಪತ್ರಿಕೆ ಆರಂಭದಲ್ಲಿ “ವಿನರಿಯಸ್ ಡಿಯರಿಯಮ್’ ಎಂಬ ಹೆಸರಿನಿಂದ ಪ್ರಕಟವಾಗುತ್ತಿತ್ತು. ಪ್ರಕಟವಾಗಿರುವ ಕೊನೆಯ ಆವೃತ್ತಿಯಲ್ಲಿ “320 ವರ್ಷ, 12 ಅಧ್ಯಕ್ಷರು, 10 ಚಕ್ರವರ್ತಿಗಳು, 2 ಗಣತಂತ್ರ, 1 ಪತ್ರಿಕೆ’ ಎಂದು ಜರ್ಮನ್ ಭಾಷೆಯಲ್ಲಿ ಮುದ್ರಿಸಲಾಗಿದೆ. ಸರ್ಕಾರಿ ಪತ್ರಿಕೆಯಾಗಿದ್ದರೂ, ಸಂಪಾದಕೀಯ ನಿಲುವುಗಳಲ್ಲಿ ಸ್ವಾತಂತ್ರ್ಯವಿತ್ತು. ಮುದ್ರಣ ಆವೃತ್ತಿಯಲ್ಲಿ ಕಂಪನಿಗಳು ತಮ್ಮ ಮಾಹಿತಿ ಪ್ರಕಟಿಸಬೇಕಾದರೆ ಪಾವತಿ ಮಾಡಬೇಕು ಎಂಬ ಕಾನೂನು ಜಾರಿಗೆ ತಂದ ಬಳಿಕ ಪತ್ರಿಕೆಯ ಆದಾಯ ಗಣನೀಯವಾಗಿ ತಗ್ಗಿತ್ತು. ಹೀಗಾಗಿಯೇ, ಉದ್ಯೋಗ ಕಡಿತವನ್ನೂ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಅದು ಆನ್‌ಲೈನ್‌ನಲ್ಲಿ ತಿಂಗಳಿಗೆ ಒಂದು ಆವೃತ್ತಿ ಪ್ರಕಟಿಸಲಿದೆ.
Author: Prajatv Kannada
ನೈರೋಬಿ: ಚಾಲಕನ ನಿಯಂತ್ರಣ ತಪ್ಪಿ ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಮಂದಿ ಮೃತಪಟ್ಟಿದ್ದು ಸಾಕಷ್ಟು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ಸಂಭವಿಸಿದೆ. ರಾಜಧಾನಿ ನೈರೋಬಿಯ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲೊಂಡಿಯಾನಿಯ ರಿಫ್ಟ್ ವ್ಯಾಲಿ ಪಟ್ಟಣದ ಸಮೀಪ ಶುಕ್ರವಾರ ಸಂಜೆ ರಸ್ತೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸ್ಥಳದಲ್ಲೇ 48 ಜನ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಪಷ್ಟ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ಟಾಮ್ ಒಡೆರಾ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್‌ಕ್ರಾಸ್ ಸೊಸೈಟಿ ಹೇಳಿದೆ. ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ…
ದುಬೈ: ಹಜ್ ಯಾತ್ರೆಗೆಂದು ಮೆಕ್ಕಾಗೆ ತೆರಳಿರುವ ಸಾವಿರಾರು ಯಾತ್ರಿಕರು ಬಿಸಿಲ ಝಳಕ್ಕೆ ಹೈರಾಣಾಗಿದ್ದು, ಅರಾಫತ್ ಪರ್ವತದಲ್ಲಿ ತಾಪಮಾನವು 48 ಡಿ.ಸೆ.ಗೆ ತಲುಪಿದೆ. 2 ಸಾವಿರಕ್ಕೂ ಅಧಿಕ ಮಂದಿ “ಅಧಿಕ ತಾಪದ ಒತ್ತಡ’ ಸಮಸ್ಯೆಯಿಂದ ಬಳಲುತ್ತಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ ಎಂದೂ ಹೇಳಲಾಗಿದೆ. ಆದರೆ ಈ ಕುರಿತು ಸೌದಿ ಆಡಳಿತ ಮಂಡಳಿ ಯಾವುದೇ ಮಾಹಿತಿ ನೀಡಿಲ್ಲ. ಈ ಬಾರಿ ಸುಮಾರು 18 ಲಕ್ಷ ಮುಸ್ಲಿಂ ಯಾತ್ರಿಕರು ಹಜ್ ಯಾತ್ರೆ ಪೂರ್ಣಗೊಳಿಸಿದ್ದಾರೆ. ಕೊರೊನಾ ನಂತರ ಗರಿಷ್ಠ ವಯೋಮಿತಿಯನ್ನು ತೆಗೆದುಹಾಕಿದ ಕಾರಣ ಈ ಬಾರಿ ಹಿರಿಯ ನಾಗರಿಕ ಯಾತ್ರಿಕರ ಸಂಖ್ಯೆ ಅಧಿಕವಾಗಿತ್ತು. ಗುರುವಾರ ಒಂದೇ ದಿನ 1700ಕ್ಕೂ ಹೆಚ್ಚು ಮಂದಿ ಬಿಸಿಲಿನ ಝಳ ತಾಳಲಾರದೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸೌದಿ ಆರೋಗ್ಯ ಇಲಾಖೆ ತಿಳಿಸಿದೆ. ಜತೆಗೆ, ಸಾಧ್ಯವಾದಷ್ಟು ಬಿಸಿಲಿಗೆ ಬಾರದೇ, ಹೆಚ್ಚು ನೀರು ಕುಡಿಯುವಂತೆಯೂ ಸಲಹೆ ನೀಡಿದೆ. ಇದೇ ವೇಳೆ, ಇಂಡೋನೇಷ್ಯಾ ಸರ್ಕಾರವು ಹಜ್ ಯಾತ್ರೆ ವೇಳೆ ತನ್ನ 230 ನಾಗರಿಕರು ಮೃತಪಟ್ಟಿರುವುದಾಗಿ ತಿಳಿಸಿದೆ. ಇನ್ನು,…
ಮುಂಬೈ: ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು, ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಅತ್ಯಂತ ದುಃಖವನ್ನು ತಂದಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ, ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಘಟನೆ ಸಂಬಂಧ ಬುಲ್ಧಾನ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಲಾಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಾಳುಗಳ ನೆರವಿನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನವದೆಹಲಿ: ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಮಂಡಳಿ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ನವದೆಹಲಿ: ಝೊಮ್ಯಾಟೋ ಡೆಲಿವರಿ ಸಿಬ್ಬಂದಿ (Zomato Delivery Executive) ಒಬ್ಬ ತನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿರುವ ಘಟನೆ ನಡೆದಿದೆ. ಯುವಕನನ್ನು ಕರಣ್ ಆಪ್ಟೆ (Karan Apte Birthday) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಕರಣ್ 30ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಬೇಕು ಎಂಬುದಾಗಿ ನಿರ್ಧರಿಸಿದ್ದಾರೆ.ಮೊದಲು ತನಗೊಂದು ಹೊಸ ಬಟ್ಟೆಯನ್ನು ಖರೀದಿಸಿದ್ದಾರೆ. ನಂತರ ತಾನು ಡೆಲಿವರಿ ಮಾಡುವ ಆಹಾರದಲ್ಲಿ ಚಾಕ್ಲೇಟ್ ಇಟ್ಟು ಗ್ರಾಹಕರಿಗೆ ತಲುಪಿಸಿದ್ದರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಗ್ರಾಹಕರಿಗೆ ಕೊಡುವ ಫುಡ್ ಮೇಲೆ ಚಾಕ್ಲೇಟ್ ಇಟ್ಟು ನೀಡುತ್ತಿಒರುವ ಫೋಟೋವೊಂದನ್ನು ಆಪ್ಟೆ ತನ್ನ ಫೇಸ್‍ಬುಕ್ (Facebook) ಅಕೌಂಟ್‍ನಿಂದ ಶೇರ್ ಮಾಡಿದ್ದಾರೆ. ಈ ಫೋಟೋ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಆಪ್ಟೆ ತಾನು ಶೇರ್ ಮಾಡಿದ ಫೋಟೋ ಜೊತೆಗೆ ಇವತ್ತು ನನ್ನ ಹುಟ್ಟುಹಬ್ಬ. ಹೀಗಾಗಿ ನನಗೊಂದು ಹೊಸ ಬಟ್ಟೆ ಖರೀದಿಸಿದ್ದೇನೆ. ಅಲ್ಲದೆ ನಾನು ಝೊಮ್ಯಾಟೋದಲ್ಲಿ ವಿತರಿಸಿದ ಪ್ರತಿಯೊಂದು ಆರ್ಡರ್‍ನೊಂದಿಗೆ ಚಾಕ್ಲೇಟ್‍ಗಳನ್ನೂ ನೀಡಿದ್ದೇನೆ. ಈ ಮೂಲಕ…
ಮುಂಬೈ: ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ (Maharashtra) ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಪುಣೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 33 ಮಂದಿ ಇದ್ದರು. ಸಮೃದ್ಧಿ-ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬುಲ್ಧಾನಾ ಬಳಿ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಅವಘಡದಲ್ಲಿ 25 ಜನರು ಸುಟ್ಟು ಕರಕಲಾಗಿದ್ದು, ಬಸ್ ಚಾಲಕ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬುಲ್ಧಾನದ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕಡಸನೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ;- ನನ್ನ ಇಲಾಖೆಯಲ್ಲಿ ಇದುವರೆಗೂ ಒಂದೇ ಒಂದು ವರ್ಗಾವಣೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೆಲವು ಒತ್ತಡದಲ್ಲಿ ಯಾರಿಗೆ ಯಾವ ಆದೇಶ ಎಂದು ಗೊತ್ತಾಗುವುದಿಲ್ಲ. ಎಲ್ಲವೂ ಒಂದು ಹಂತಕ್ಕೆ ಬರಲು ಸಮಯ ಬೇಕು. ಎಲ್ಲವನ್ನೂ ಸರಿಪಡಿಸಲಾಗುವುದು. ಸಿಎಂ ಕಚೇರಿಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನನ್ನ ಇಲಾಖೆಯಲ್ಲಿ ಇದುವರೆಗೂ ಒಂದೇ ಒಂದು ವರ್ಗಾವಣೆ ಮಾಡಿಲ್ಲ. ಅವರಿಗೆ ಮಾಹಿತಿ ಇದ್ದರೆ ನೀಡಲಿ ಎಂದರು. ಇನ್ನೂ ತೆಲಂಗಾಣದಲ್ಲಿ ಶರ್ಮಿಳಾ ಅವರ ಕಾಂಗ್ರೆಸ್ ಸೇರ್ಪಡೆಗೆ ಡಿ.ಕೆ. ಶಿವಕುಮಾರ್ ಅವರ ಪಾತ್ರ ದೊಡ್ಡದಿದೆ ಎಂದು ಕೇಳಿದ ಮಾಧ್ಯಮಗಳ ಪ್ರಶ್ನೆಗೆ, ನಾನು ಆ ವಿಚಾರವಾಗಿ ಮಾತನಾಡುವುದಿಲ್ಲ. ಅವರದ್ದು ಬಹಳ ಗೌರವಯುತ ಕುಟುಂಬ. ಅವರ ತಂದೆ ಹಾಗೂ ನಾನು ಉತ್ತಮ ಸ್ನೇಹಿತರು. ಜತೆಯಲ್ಲಿ ರಾಜಕೀಯ ಮಾಡಿದ್ದೆವು. ರಾಜಶೇಖರ ರೆಡ್ಡಿ ಅವರಿಗೆ ನನ್ನ ಮೇಲೆ ಅಭಿಮಾನ ಇತ್ತು ಎಂದರು. ರಾಷ್ಟ್ರ ರಾಜಕಾರಣ ಪ್ರವೇಶಿಸುತ್ತೀರಾ ಎಂದು…
ನರಗುಂದ: ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ ಹಾವು ಕಡಿದು ಮೃತಪಟ್ಟಿದ್ದಾನೆಂದು ತಿಳಿದು ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸತ್ತನೆಂದು ತಿಳಿದಿದ್ದ ವ್ಯಕ್ತಿ ಎದ್ದು ಕುಳಿತ ಘಟನೆ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಿರೇಕೊಪ್ಪದ ಸಿದ್ದಪ್ಪ ನರಸಿಂಗಪ್ಪ ಬಳಗಾನೂರ (44) ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಈತ ಹಿರೇಕೊಪ್ಪ ಗ್ರಾಮದಲ್ಲಿ ಮೃತಪಟ್ಟಿದ್ದ ಬಸವಂತಪ್ಪ ಶಿವಪ್ಪ ಅಂಗಡಿ ಎಂಬುವರ ಮನೆಗೆ ಗುರುವಾರ ಭಜನೆ ಕಾರ್ಯಕ್ರಮಕ್ಕೆ ಹೋಗಿದ್ದ. ಇದೇ ವೇಳೆ ಮಧ್ಯಾಹ್ನ ಗ್ರಾಮದ ಜಗದೀಶ ಬಡಿಗೇರ ಎಂಬುವರ ಮನೆಯಲ್ಲಿ ನಾಗರ ಹಾವು ಕಾಣಿಸಿಕೊಂಡಿತ್ತು. ಕುಡಿದ ಮತ್ತಿನಲ್ಲಿದ್ದ ಸಿದ್ದಪ್ಪ ಹಾವನ್ನು ಯಾವುದೇ ಸುರಕ್ಷತೆ ಪರಿಕರಗಳಿಲ್ಲದೇ ಬರಿಗೈಯಲ್ಲಿ ಹಿಡಿದಿದ್ದ. ಗ್ರಾಮಸ್ಥರು ಬುದ್ಧಿವಾದ ಹೇಳಿದರೂ ಕೇಳದ ಸಿದ್ದಪ್ಪ, ‘ನನ್ನ ಕೈಯಲ್ಲಿ ಗರುಡವಿದೆ. ನನಗೇನೂ ಆಗುವುದಿಲ್ಲ’ ಎಂದು ಭಂಡತನ ಮೆರೆಯಲು ಹೋಗಿ ಹಾವಿನಿಂದ ನಾಲ್ಕು ಬಾರಿ ಕೈಗೆ ಕಚ್ಚಿಸಿಕೊಂಡಿದ್ದ. ದೇಹದಲ್ಲಿ ವಿಷವೇರಿದ ಬಳಿಕ ನರಳಾಡುತ್ತಿದ್ದ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿದ್ದಪ್ಪ ಮೃತಪಟ್ಟಿದ್ದಾನೆ ಎಂದು ಊರಲ್ಲಿ…
ತುಮಕೂರು: ಪೆಟ್ರೋಲ್ ಬಾಟಲ್ ಹಿಡಿದು ಜಿಲ್ಲಾ ಪೊಲೀಸ್ ಕಚೇರಿ ಎದುರು ತಾಯಿ,ಸಹೋದರನೊಟ್ಟಿಗೆ ಆಗಮಿಸಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೈಡ್ರಾಮಾ ನಡೆಸಿದ ಘಟನೆ ತುಮಕೂರು ನಗರದ ಬಿಹೆಚ್ ರಸ್ತೆಯಲ್ಲಿರೋ ಎಸ್ಪಿ ಕಚೇರಿಯಲ್ಲಿ ನಡೆಸಿದೆ. ನಗರದ ಮಾಲ್ ನಲ್ಲಿ ಅಂಗಡಿಯನ್ನ ಯುವಕ ಬಾಡಿಗೆಗೆ ಪಡೆದಿದ್ದನು. ಬಾಡಿಗೆ ಕಟ್ಟದ ವಿಚಾರಕ್ಕೆ ಅಂಗಡಿ ಮಾಲೀಕ ಹಾಗೂ ಯುವಕನ ನಡುವೆ ಗಲಾಟೆ ನಡೆದು ಮಾಲೀಕ ಅಂಗಡಿ ಖಾಲಿ ಮಾಡಿಸಿದ್ದರು. ಈ ಬಗ್ಗೆ ತುಮಕೂರು ನಗರ ಪೊಲೀಸ್ ಠಾಣೆಗೆ ದೂರು ಯುವಕ ನೀಡಿದ್ದ. ನಗರ ಠಾಣೆ ಪೊಲೀಸರಿಂದ ನ್ಯಾಯ ದೊರಕದ ಆರೋಪ ಹಿನ್ನೆಲೆ ಕೈಯಲ್ಲಿ ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹೊಡ್ಡಿದ್ದಾನೆ. ಎಸ್ಪಿ ಕಚೇರಿ ಸಿಬ್ಬಂದಿಗಳಿಂದ ಯುವಕನ ಮನವೊಲಿಕೆ ಮಾಡಿ ನ್ಯಾಯ ದೊರಕಿಸಿಕೊಡೋದಾಗಿ ಯುವಕನಿಗೆ ಭರವಸೆ ನೀಡಿದರು.