ಬೆಂಗಳೂರು ;- ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ’ ಹಾಗೂ ‘ಗೃಹಜ್ಯೋತಿ’ ಯೋಜನೆಗಳನ್ನು ಇಂದಿನಿಂದ ರಾಜ್ಯದಾದ್ಯಂತ ಅನುಷ್ಠಾನಕ್ಕೆ ತರಲು ಸಿದ್ಧತೆ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳು ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆಯುವಷ್ಟರಲ್ಲೇ ಅನುಷ್ಠಾನಕ್ಕೆ ಬರುತ್ತಿರುವುದು ವಿಶೇಷ. ಹಾಗೆಯೇ ಯೋಜನೆಗೆ ಎದುರಾದ ಅನಿರೀಕ್ಷಿತ ಸವಾಲುಗಳನ್ನು ಒಂದೊಂದಾಗಿ ಬದಿಗೆ ಸರಿಸಿ ಜನರಲ್ಲಿ ವಿಶ್ವಾಸ ತುಂಬಲು ಸರ್ಕಾರ ಪ್ರಯತ್ನ ನಡೆಸಿರುವುದೂ ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರದಿಂದ ಐದು ಕೆಜಿ ಅಕ್ಕಿಯ ಬದಲು ತಕ್ಷಣಕ್ಕೆ ಹಣ ನೀಡಲು ಉದ್ದೇಶಿಸಿದ್ದು, ಜುಲೈ 1ರಿಂದಲೇ ಅನ್ವಯವಾಗುವಂತೆ ಬಿಪಿಎಲ್ ಕಾರ್ಡ್ದಾರರ ಖಾತೆಗೆ ಹಣ ಜಮಾ ಆಗಲಿದೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿಯಾಗಲಿದೆ. ಪಡಿತರ ಚೀಟಿ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಯಾರು ಖಾತೆ ತೆರೆದಿಲ್ಲವೋ ಅಂತಹವರು ಬ್ಯಾಂಕ್ ಖಾತೆ ತೆರೆಯಬೇಕಾಗುತ್ತದೆ ಎಂದಿದ್ದಾರೆ.
Author: Prajatv Kannada
ಬೆಂಗಳೂರು ;- ನಗರದ ಮಹಾನಗರ ಸಾರಿಗೆ ಸಂಸ್ಥೆಯು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳು ಪ್ರಯಾಣಿಸಲು ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. 2022-23 ವಿದ್ಯಾರ್ಥಿ ಪಾಸ್ ಅಥವಾ 2023-24 ಶಾಲಾ/ಕಾಲೇಜು ಶುಲ್ಕ ರಶೀದಿ/ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಎಲ್ಲಾ ಸಾಮಾನ್ಯ ಸೇವೆಯಲ್ಲಿ 15-07-2023 ರವರೆಗೆ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು 2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿರುತ್ತವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಕೆಳಕಂಡಂತೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. 1 ರಿಂದ 12 ನೇ ತರಗತಿವರೆಗೆ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು, ಪಿ.ಹೆಚ್ಡಿ ವಿದ್ಯಾರ್ಥಿಗಳು 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಜುಲೈ 15ರವರೆಗೆ…
ಬೆಂಗಳೂರು ;- ರಾಜಧಾನಿ ಬೆಂಗಳೂರಿನ ಕಚೇರಿಯಲ್ಲಿ ಜೆಡಿಎಸ್ ರಾಜ್ಯಮಟ್ಟದ ವಕ್ತಾರರ ಸಭೆ ಜರುಗಿದೆ. ಹೆಚ್.ಡಿ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಸಭೆ ಜರುಗಿದ್ದು, ಜೆಡಿಎಸ್ ಪಕ್ಷ ಮತ್ತೆ ತಳಹದಿಯಿಂದ ಸಂಘಟಿಸಲು ಹೆಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ರಾಜ್ಯಕ್ಕೆ ಕೊಟ್ಟ ಕೊಡುಗೆ, ಸೇವೆಗಳ ಬಗ್ಗೆ ಮತ್ತಷ್ಟು ಜನರಿಗೆ ತಲುಪಿಸಬೇಕು. ಜೊತೆಗೆ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಾಲಮನ್ನ ಹಾಗೂ ಇನ್ನಿತರ ಎಲ್ಲಾ ವಿಚಾರಗಳು ಪ್ರಚಾರ ಮಾಡಿ. ಹಾಗೂ ಜೆಡಿಎಸ್ ಪಕ್ಷದ ಮುಂದಿನ ನಿಲುವುಗಳು ಸ್ಪಷ್ಟತೆಯಿಂದ ಜನರ ಮನಸ್ಸಿಗೆ ತಲುಪಿಸಿ ಎಂದು ಸಭೆಯಲ್ಲಿ ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ, ವಕ್ತಾರರಾದ ಚರಣ್ಗೌಡ, ನಸ್ಮಾ, ದೇವರಾಜು, ಅಶ್ವಿನ್ ಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದರು.
ಮಂಡ್ಯ :- ಆತಗೂರು ಹೋಬಳಿಯ ರೀ ಸರ್ವೆಯಲ್ಲಿ ಉಂಟಾಗಿರುವ ಲೋಪವನ್ನು ಸರಿಪಡಿಸಲು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು. ಮದ್ದೂರು ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ದೊಡ್ಡ ಅಂಕನಹಳ್ಳಿ, ಚಿಕ್ಕ ಅಂಕನಹಳ್ಳಿ, ನವಿಲೆ, ಹೂತಗೆರೆ, ಕುರುಬರದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆ ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸುಮಾರು 20 ವರ್ಷಗಳಿಂದ ಆತಗೂರು ಹೋಬಳಿಯಲ್ಲಿ ರೀ ಸರ್ವೆ ಸಮಸ್ಯೆಯಿಂದ ರೈತರು ಹಾಗೂ ಗ್ರಾಮಸ್ಥರಿಗೆ ತೊಂದರೆ ಉಂಟಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಹಲವು ಬಾರಿ ಚರ್ಚಿಸಲಾಗಿದ್ದು, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಗ್ರಾಮಗಳಿಗೆ ತೆರಳಿ ರೀ ಸರ್ವೆ ಸಮಸ್ಯೆಯನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು ಎಂದು ಹೇಳಿದರು. ಕ್ಷೇತ್ರದಲ್ಲಿ ಬೆಟ್ಟದಷ್ಟು ವಿವಿಧ ಸಮಸ್ಯೆಗಳಿದ್ದು, ಪ್ರತಿ ಗ್ರಾಮಗಳಲ್ಲೂ ಕುಡಿಯುವ ನೀರು, ರಸ್ತೆ, ವಿದ್ಯುತ್, ಹಾಗೂ ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಎದ್ದು…
ಮಂಡ್ಯ :- ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಾಮಲಿಂಗಯ್ಯ ಅವಿರೋಧವಾಗಿ ಆಯ್ಕೆಗೊಂಡರು. ಈ ಹಿಂದೆ ಅಧ್ಯಕ್ಷರಾಗಿದ್ದ ಶಂಕರೇಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ರಾಮಲಿಂಗಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಇವರ ಆಯ್ಕೆಯನ್ನು ಚುನಾವಣಾಧಿಕಾರಿ ಮಹದೇವಯ್ಯ ಘೋಷಣೆ ಮಾಡಿದರು. ಇದೇ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಮಧು, ಗೌರಮ್ಮ, ಜಿ.ಬಿ.ಉಮೇಶ್, ಅನುಪಮ, ರೇಣುಕಾ, ಶೋಭಾ, ಜವನಮ್ಮ, ಮನು, ಸ್ವರೂಪ್ ಚಂದ್, ಸೌಭಾಗ್ಯ, ರಮೇಶ್, ವಸುಧಾ, ಮುಖಂಡರಾದ ಗೊರವನಹಳ್ಳಿ ರಾಘವ, ಪ್ರಸನ್ನ, ಶಿವಲಿಂಗಯ್ಯ, ಉಪ್ಪಿನಕೆರೆ ಪ್ರಸನ್ನ, ಕೃಷ್ಣಪ್ಪ, ನಗರಕೆರೆ ಪ್ರಸನ್ನ ಸೇರಿದಂತೆ ಮತ್ತಿತರರು ಇದ್ದರು. ವರದಿ : ಗಿರೀಶ್ ರಾಜ್ ಮಂಡ್ಯ
ಮಂಡ್ಯ :- ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಭವಿಸುತ್ತಿರುವ ಅಪಘಾತದ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಿದರು. ಕೆಲ ದಿನಗಳ ಹಿಂದೆ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ್ದ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್.ಯತೀಶ್ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಿದ ಬಳಿಕ ಮಾಹಿತಿ ಪಡೆದುಕೊಂಡರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾ ಗಡಿ ಭಾಗ ನಿಡಘಟ್ಟ ಗ್ರಾಮದ ಬಳಿಯಿಂದ ಪರಿಶೀಲನೆ ಆರಂಭಿಸಿದ ಅಲೋಕ್ ಕುಮಾರ್ ಹೆಚ್ಚಿನ ಅಪಘಾತ ಪ್ರಕರಣಗಳು ನಡೆದ ಸ್ಥಳಗಳಿಗೆ ತೆರಳಿ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ನಿಡಘಟ್ಟ, ಅಗರಲಿಂಗನದೊಡ್ಡಿ ಹಾಗೂ ಕೆ.ಕೋಡಿಹಳ್ಳಿ ಗ್ರಾಮಸ್ಥರು ಹೆದ್ದಾರಿಯಲ್ಲಿ ಉಂಟಾಗಿರುವ ಲೋಪ ದೋಷಗಳು, ಸರ್ವಿಸ್ ರಸ್ತೆ ಹಾಗೂ…
ಮಂಡ್ಯ ;- ಬೆಂಗಳೂರು- ಮೈಸೂರು ಹೆದ್ದಾರಿಯನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲಿಸಿದರು. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಮೈಸೂರು ಗಡಿಯವರೆಗೆ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಎಸ್ಪಿ ಎನ್.ಯತೀಶ್ ಜೊತೆಗಿದ್ದರು. ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ”ಇವತ್ತು ನಾನು ಪರಿಶೀಲನೆ ಮಾಡಿದಾಗ ಜನರು ತಮ್ಮ ಸಮಸ್ಯೆ ಹೇಳಿದ್ದಾರೆ. ಕೆಲವು ಕಡೆ ಸರ್ವಿಸ್ ರೋಡ್‌ನ ಫುಟ್‌ಪಾತ್ ಮಾಡಿಲ್ಲ. ಕೆಲವು ಕಡೆ ಅಂಡರ್ ಪಾಸ್ ಮಾಡಿಲ್ಲ. ಕೆಲವೆಡೆ ನೀರು ನುಗಿತ್ತಿದೆ. ಇದರಿಂದ ಅಪಘಾತಗಳು ಆಗುತ್ತಿವೆ. ಸರ್ವಿಸ್ ರೋಡ್‌ನಲ್ಲಿ ಫೆನ್ಸ್ ಸರಿಯಾಗಿ ಹಾಕಿಲ್ಲ. ಹೆದ್ದಾರಿಯಲ್ಲಿ ಸರಿಯಾಗಿ ಕ್ಯಾಮರಾ ಅಳಡಿಕೆಯಾಗಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎಲ್ಲಾ ಕೆಲಸಗಳು ಬೇಗ ಆದ್ರೆ ಅಪಘಾತಗಳನ್ನು ತಡೆಯಲು ಸಾಧ್ಯ. ಸಾರ್ವಜನಿಕರು ಸುರಕ್ಷಿತ ಚಾಲನೆಯನ್ನು ಮಾಡಬೇಕು” ಎಂದರು.
ಬೆಂಗಳೂರು ;- ಶಕ್ತಿ ಯೋಜನೆಯನ್ನು ರದ್ದು ಮಾಡುವಂತೆ ಆಟೋ ಚಾಲಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಆಟೋ ಚಾಲಕರ ಸಂಘದವರು ಭೇಟಿಯಾಗಿ ಈ ಮನವಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯಿಂದ ನಮಗೆ ನಷ್ಟವಾಗುತ್ತಿದ್ದು, ಜೀವನನಿರ್ವಹಣೆಯೇ ಕಷ್ಟವಾಗುತ್ತಿದೆ. ಶಕ್ತಿ ಯೋಜನೆ ಮುಂದುವರಿಸಿದರೆ ನಮ್ಮ ಜೀವನ ಬೀದಿಗೆ ಬರುತ್ತದೆ. ಹೀಗಾಗಿ ಶಕ್ತಿ ಯೋಜನೆ ರದ್ದು ಮಾಡಿ ಅಥವಾ ಆಟೋ ಚಾಲಕರಿಗೂ ಅರ್ಥಿಕ ಸಹಾಯ ನೀಡಿ ಎಂದು ಆಟೋ ಚಾಲಕರ ಸಂಘಟನೆಗಳು ಮನವಿ ಮಾಡಿಕೊಂಡಿವೆ.
ಬೆಂಗಳೂರು ;- ಜುಲೈ 1ರಿಂದ ಅನ್ವಯವಾಗುವಂತೆ ಬೆಂಗಳೂರಿನ ನೈಸ್ ರೋಡ್ ಸಂಚಾರಕ್ಕೆ ಟೋಲ್ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರ ಮತ್ತು ನಂದಿ ಎಕಾನಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ ನಡುವೆ ನಡೆದ 2000ದಲ್ಲಿ ನಡೆದ ಒಪ್ಪಂದದ ಪ್ರಕಾರ ಈ ಹೆಚ್ಚಳ ನಡೆದಿದೆ. ಈ ಹಿಂದೆ 2022ರ ಜೂನ್‌ನಲ್ಲಿ ಟೋಲ್ ದರವನ್ನು ಶೇ 17ರಷ್ಟು ಹೆಚ್ಚಿಸಲಾಗಿತ್ತು. ಹೆಸರಿಗೆ ಇದು ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ ಆಗಿದ್ದರೂ ಅದು ಸುತ್ತುವರಿದಿರುವುದು ಬೆಂಗಳೂರನ್ನು ಮಾತ್ರ. ನೈಸ್ ರಸ್ತೆಯು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟ ಮತ್ತು ನಿರ್ವಹಿಸಲ್ಪಡುವ ಖಾಸಗಿ ಎಕ್ಸ್‌ಪ್ರೆಸ್ ವೇ ಆಗಿದೆ. ಆರು ಪಥಗಳ ಖಾಸಗಿ ಎಕ್ಸ್‌ಪ್ರೆಸ್ ವೇ ಬೆಂಗಳೂರಿನ ವಿವಿಧ ಭಾಗಗಳನ್ನು ಸಂಪರ್ಕಿಸುತ್ತದೆ. ಏಳು ರಸ್ತೆಗಳ ಒಟ್ಟಾರೆ ಉದ್ದ 50 ಕಿಲೋಮೀಟರ್ ಇದೆ. ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಕ್ಲೋವರ್ ಲೀಫ್ ಜಂಕ್ಷನ್, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆ ಮತ್ತು ಲಿಂಕ್ ರಸ್ತೆ ಮಾರ್ಗಗಳಲ್ಲಿ ನೈಸ್ ರಸ್ತೆಯನ್ನು ಆಗಾಗ್ಗೆ ಬಳಸುವ…
ಬೆಂಗಳೂರು ;– ಮಹಿಳೆ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಶಿಕಲಾ ಅನ್ನೊ ಮಹಿಳೆಗೆ ಚಾಕುವಿನಿಂದ ಅನೇಕ ಬಾರಿ ಇರಿಯಲಾಗಿದೆ. ಆರೋಪಿ ಸುರೇಶ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ. ನಿನ್ನೆ ರಾತ್ರಿ 8:30 ಸುಮಾರಿಗೆ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ತನ್ನ ಸ್ನೇಹಿತೆ ಜೊತೆ ಶಶಿಕಲಾ ಹೋಗುತ್ತಿದ್ದ ವೇಳೆ ಚಾಕುವಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿರೋದಾಗಿ ಆರೋಪ ಕೇಳಿಬಂದಿದೆ. ಈ ಹಿಂದೆ ಆರೋಪಿ ಬಿಎಲ್ ಸುರೇಶ್ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಶಶಿಕಲಾ ದೂರು ನೀಡಿದ್ರಂತೆ, ಕುಂಬಾರಪೇಟೆ ಅನ್ನದಾನ ಸಮಿತಿ ಟ್ರಸ್ಟ್ ,ವಿಚಾರವಾಗಿ ಶಶಿಕಲಾ ದೂರು ದಾಖಸಿದ್ರಂತೆ. ಹೀಗಾಗಿ ಇದೇ ಕೋಪದಿಂದ ಸುರೇಶ್ ಹಾಗು ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಅಂತ ಶಶಿಕಲಾ ಆರೋಪ ಮಾಡುತ್ತಿದ್ದಾರೆ. ಘಟನೆ ಸಂಬಂದ ಕೊಲೆಯತ್ನ ಆರೋಪದಡಿ ಎಫ್ ಐಅರ್ ದಾಖಲಾಗಿದೆ. ಸದ್ಯ ಆರೋಪಿ ಸುರೇಶ್ ನನ್ನ ವಶಕ್ಕೆ ಪಡೆದಿರುವ ಕೆ ಆರ್ ಮಾರ್ಕೇಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೆ ಆರ್…