ಬೆಂಗಳೂರು ;- ಲಂಚ ಪಡೆದ ಆರೋಪದಲ್ಲಿ ಪೀಣ್ಯಾ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಾರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಟ್ಟಡ ಕಾಮಗಾರಿ ವಿಚಾರವಾಗಿ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿತ್ತು. ಹೀಗಾಗಿ ದೂರುದಾರ ಗವಿರಾಜಗೌಡ ಕಟ್ಟಡದ ಬಳಿ ರಕ್ಷಣೆಗೆ ಮನವಿ ಮಾಡಿದ್ದರು. ಈ ವೇಳೆ ಬಂದೋಬಸ್ತ್ ನೀಡಲು ಮೂರು ಲಕ್ಷ ಹಣವನ್ನು ಹೆಡ್ ಕಾನ್ಸ್ ಟೇಬಲ್ ಬೇಡಿಕೆ ಇಟ್ಟಿದ್ದರು. ಅದೇ ರೀತಿ ಒಂದೂವರೆ ಲಕ್ಷ ಹಣ ಅಡ್ವಾನ್ಸ್ ಪಡೆಯೋ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Author: Prajatv Kannada
ವಿಜಯನಗರ ;- ಅವರೆಲ್ಲರೂ ನಿನ್ನೆಯಷ್ಟೆ ಬಕ್ರಿದ್ ಹಬ್ಬ ಮುಗಿದ ಸಂಭ್ರಮದಲ್ಲಿದ್ರು. ಇನ್ನೇನು ಹಬ್ಬ ಮುಗಿತು ಮತ್ತೆ ಸೋಮವಾರ ದಿಂದ ಮಕ್ಕಳೆಲ್ಲ ಶಾಲೆ, ಕಾಲೇಜು ಹಾಸ್ಟೆಲ್ ಎಂದು ಹೊರಗಡೆ ಹೋಗ್ತಾರೆ ಅಷ್ಟರಲ್ಲಿ ಒಂದೊಳ್ಳೆ ಟ್ರಿಪ್ಗೆ ಹೋಗಿ ಬಂದ್ರಾಯ್ತು ಎಂದು ಬಳ್ಳಾರಿಯ ಕೌಲ್ ಬಜಾರ್ನಿಂದ 19 ಜನರು ಎರಡು ಆಟೋದಲ್ಲಿ ಹೊಸಪೇಟೆ ಬಳಿಯ ಟಿಬಿ ಡ್ಯಾಂಗೆ ಹೊರಟಿದ್ರು. ಇನ್ನೊಂದು ಹತ್ತು ಕಿ.ಮೀ. ದಾಟಿದ್ರೇ ಟಿಬಿ ಡ್ಯಾಂ ತಲುಪುತ್ತಿದ್ರು. ಆದ್ರೇ, ಯಮನಂತೆ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ 19 ಜನರ ಪೈಕಿ ಏಳು ಜನರು ಸಾವನ್ನಪ್ಪಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ. ನಿನ್ನೆ ರಾಜ್ಯದ್ಯಾಂತ ಬಕ್ರಿದ್ ಹಬ್ಬದ ಸಂಭ್ರಮ, ಮುಸ್ಲಿಂ ಸಮುದಾಯದ ಜನರ ಖುಷಿಯಿನ್ನು ಇಮ್ಮಡಿ ಗೊಳಿಸಿತ್ತು. ತ್ಯಾಗ ಬಲಿದಾನದ ಸಂಕೇತವಾದ ಬಕ್ರಿದ್ ಹಬ್ಬದಲ್ಲಿ ಪ್ರಾಥನೆ, ಬಲಿದಾನ ಸೇರಿದಂತೆ ಭರ್ಜರಿ ಊಟವನ್ನು ಮಾಡಿ ಆ ಕಟುಂಬ ಸಂಭ್ರದಲ್ಲಿತ್ತು. ಇನ್ನೆನು ಗುರುವಾರ ಹಬ್ಬ ಮುಗಿತು. ಇನ್ನೇರೆಡು ದಿನಗಳಲ್ಲಿ ಮನೆಯಲ್ಲಿರೋ ಮಕ್ಕಳು ಸೋಮವಾರದಿಂದ ಶಾಲೆ…
ಕೆ.ಆರ್.ಪುರ: ಧಾರ್ಮಿಕ, ಪರಂಪರೆ, ಸಂಸ್ಕೃತಿ ಮತ್ತು ಜಾತ್ಯತೀತ ನಿಲುವಿನಿಂದ ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರನ್ನು ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸಬಾರದು ಬೆಂಗಳೂರು ನಗರ ನಿರ್ಮಾಣ ಮಾಡಿರುವಲ್ಲಿ ಅವರ ಪಾತ್ರ ಅನನ್ಯ ಅವರ ಸ್ಮರಣೆಗಾಗಿ ಕೆ.ಆರ್.ಪುರದ ವೃತ್ತದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಬಿ.ಎ. ಬಸವರಾಜ ಭರವಸೆ ನೀಡಿದರು. ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿ ವತಿಯಿಂದ ಶುಕ್ರವಾರ ಕೆ.ಆರ್.ಪುರದಲ್ಲಿ ಏರ್ಪಡಿಸಿದ್ದ 514ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರು ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ದೂರದೃಷ್ಟಿ ಯಿಂದ ಮಾಡುತ್ತಿದ್ದರು.ದೇಶ, ರಾಜ್ಯ, ಬೆಳೆಯಬೇಕಾದರೆ ನಗರಗಳ ಬೆಳವಣಿಗೆ ಮುಖ್ಯ ಎಂಬುದನ್ನು ಅರಿತಿದ್ದ ಅವರು, ಬೆಂಗಳೂರಿಗೆ ಭದ್ರ ಬೂನಾದಿ ಹಾಕಿದ ನಾಯಕ ಎಂದು ತಿಳಿಸಿದರು. ಸರ್ವಜನಾಂಗದ ಅಭಿವೃದ್ಧಿಗೆ ಕೆಂಪೇಗೌಡರು ಶ್ರಮಿಸಿದ್ದು, ಒಂದು ಸಮುದಾಯಕ್ಕೆ ಸ್ಥೀಮಿತರಲ್ಲ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹನೀಯನನ್ನ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಎಲ್ಲ ಸಮುದಾಯಗಳು ಅಭಿವೃದ್ಧಿಯಾದಗ ಮಾತ್ರ ದೇಶದ ಅಭಿವೃದ್ಧಿ ಸಾದ್ಯ, ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು ;– ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಒಬ್ಬರಿಗೆ ಮಾತ್ರ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ರಾಜ್ಯ ಶಿಸ್ತು ಸಮಿತಿಯಿಂದ ಒಬ್ಬರಿಗೆ ಮಾತ್ರ ನೋಟಿಸ್ ನೀಡಲಾಗಿದೆ. ಹಾಲಿ ಶಾಸಕ ಮತ್ತು ಸಂಸದರಿಗೆ ನೋಟಿಸ್ ಕೊಡುವ ಅಧಿಕಾರ ನಮ್ಮ ಸಮಿತಿಗೆ ಇಲ್ಲ. ಅದು ಕೇಂದ್ರಿಯ ಶಿಸ್ತು ಸಮಿತಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ನಾವು ಮಾಜಿ ಶಾಸಕ ರೇಣುಕಾಚಾರ್ಯ ಅವರಿಗೆ ಮಾತ್ರ ನೋಟಿಸ್ ನೀಡಿದ್ದೇವೆ. ಅವರಿಗೆ ಇಂದಿನ ಸಭೆಗೆ ಹಾಜರಾಗಲು ತಿಳಿಸಲಾಗಿತ್ತು. ಆದರೆ ಇಂದು ಅವರು ಬರಲಿಲ್ಲ. ನಂತರ ಬಂದು ವಿವರಣೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದು ವಿವರಣೆ ನೀಡದಿದ್ದರೆ ಮುಂದೆ ಏನು ಮಾಡಬೇಕು ಅನ್ನೋದನ್ನು ನೋಡುತ್ತೇವೆ ಎಂದು ಕ್ರಮದ ಎಚ್ಚರಿಕೆ ನೀಡಿದರು.
ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಜಲಾಂತರ್ಗಾಮಿಯಲ್ಲಿ ತೆರಳಿದ್ದ ಐವರು ಶ್ರೀಮಂತರು ದಾರುಣವಾಗಿ ಮೃತಪಟ್ಟಿದ್ದರು. ಜಲಾಂತರ್ಗಾಮಿ ಸ್ಫೋಟದ ತೀವ್ರತೆಯಿಂದಾಗಿ ಮೃತಪಟ್ಟ ಯಾರ ದೇಹವೂ ಸಿಕ್ಕಿರಲಿಲ್ಲ. ಇದೀಗ ಜಲಾಂತರ್ಗಾಮಿ ಅವಶೇಷಗಳು ಪತ್ತೆಯಾಗಿದ್ದು, ಅದರ ಜೊತೆಯಲ್ಲಿ ಟೈಟಾನಿಕ್ ಹಡಗು ನೋಡಲು ತೆರಳಿದ್ದ ಮನುಷ್ಯರ ದೇಹದ ಭಾಗಗಳು ಪತ್ತೆಯಾಗಿವೆ. ಪೈಲಟ್ ಸೇರಿ ಐದು ಮಂದಿ ಜಲಾಂತರ್ಗಾಮಿಯಲ್ಲಿ ಟೈಟಾನಿಕ್ ಅವಶೇಷಗಳನ್ನು ನೋಡಲು ತೆರಳಿದ್ದರು. ನಾಲ್ಕುದಿನಗಳು ಜಲಾಂತರ್ಗಾಮಿಯ ಪತ್ತೆಗಾಗಿ ಸಾಕಷ್ಟು ಪ್ರಯತ್ನ ನಡೆದಿತ್ತು. ಆದರೆ ಜಲಾಂತರ್ಗಾಮಿಯಲ್ಲಿ ಆಕ್ಸಿಜನ್ ಖಾಲಿ ಆದ ನಂತರ ಎಲ್ಲರೂ ಮೃತಪಟ್ಟಿದ್ದಾರೆ. ನಂತರ ಜಲಾಂತರ್ಗಾಮಿ ನೀರಿನಲ್ಲಿಯೇ ಭಯಾನಕವಾಗಿ ಸ್ಫೋಟಗೊಂಡಿದೆ. ಟೈಟಾನಿಕ್ ಅವಶೇಷಗಳಿಂದ ಒಟ್ಟಾರೆ ೧೬೦೦ ಅಡಿ ದೂರದಲ್ಲಿ ಜಲಾಂತರ್ಗಾಮಿ ಅವಶೇಷಗಳು ಪತ್ತೆಯಾಗಿವೆ. ಅದರ ಜೊತೆಯಲ್ಲಿ ಮಾನವ ಅವಶೇಷಗಳೂ ಪತ್ತೆಯಾಗಿರುವ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ.
ಬೆಂಗಳೂರು ;- ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಜು.4ರಂದು ಸದನದ ಒಳಗೆ, ಹೊರಗೆ ಹೋರಾಟ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ, ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಅಂದು ಬಿಜೆಪಿ ಚುನಾಯಿತ ಪ್ರತಿನಿಧಿಗಳು ಉಭಯ ಸದನದ ಒಳಗೂ ಹೋರಾಟ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷವು ಮನೆ ಮನೆಗೆ ಹೋಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡನ್ನು ವಿತರಿಸಿತ್ತು. ಆದರೆ ಈಗ ಷರತ್ತುಗಳನ್ನು ಪ್ರಸ್ತಾಪಿಸಿದೆ. ಕಾಂಗ್ರೆಸ್ನ ಈ ಧೋರಣೆ ಖಂಡಿಸಿ ನಾವು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು. ಈಗ ಗ್ಯಾರಂಟಿಗಳ ಅಂಶಗಳನ್ನು ಚಾಚೂತಪ್ಪದೆ ಕಾಂಗ್ರೆಸ್ ಅನುಷ್ಠಾನಕ್ಕೆ ತರಬೇಕು, ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ…
ಬೆಂಗಳೂರು ;- ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರ ಈಗ ಮೂರನೇ ಬಾರಿಗೆ ವಿಸ್ತರಣೆಯ ಆದೇಶ ಹೊರಡಿಸಿದೆ. 2023-24ನೇ ಸಾಲಿಗೆ ಗ್ರೂಪ್ ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ಕೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ…
ಇಷ್ಟು ದಿನಗಳ ಕಾಲ ನಾವು ಸ್ನೇಹಿತರು ಎನ್ನುತ್ತಲೆ ಜೊತೆ ಜೊತೆಯಾಗಿ ಓಡಾಡಿದ್ದ ಕೊಡಗಿನ ಬ್ಯೂಟಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಇದೀಗ ಹಸೆಮಣೆ ಏರಲು ಸಿದ್ದವಾಗಿದ್ದಾರೆ. ಗುರು ಹಿರಿಯರ ಒಪ್ಪಿಗೆ ಪಡೆದು ಇದೇ ಆಗಸ್ಟ್ 24ರಂದು ಇಬ್ಬರು ಕೊಡಗಿನಲ್ಲಿ ಸಪ್ತಪದಿ ತುಳಿಯುತ್ತಿದ್ದಾರೆ. ಮೊನ್ನೆಯಷ್ಟೇ ಕೊಡಗಿನ ಇಗ್ಗುತ್ತಪ್ಪ ದೇವಾಲಯದಲ್ಲಿ ಲಗ್ನಪತ್ರಿಕೆ ಕಾರ್ಯ ಸರಳವಾಗಿ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಮತ್ತು ಆತ್ಮೀಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಈ ಜೋಡಿಯ ಆತ್ಮೀಯರು, ಸಿನಿಮಾ ರಂಗದ ಗಣ್ಯರು ಭಾಗಿಯಾಗಲಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆ ಕೂಡ ಸಿದ್ಧವಾಗಿದ್ದು, ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕೊಡಗು ಸಂಪ್ರದಾಯದಂತೆಯೇ ಇಬ್ಬರೂ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲೇ ನಡೆಯಲಿವೆ. ಭುವನ್ ಮತ್ತು ಹರ್ಷಿಕಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಟ್ಟಿಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗಿದ್ದರು.
ಬೆಳಗಾವಿ ;- ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು ಮತ್ತು ಅದರಲ್ಲಿ ಕೆಲ ನ್ಯೂನತೆಗಳಿವೆ ಎಂದರು. ಈ ಎಲ್ಲ ವಿಚಾರಗಳ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನ್ಯೂನತೆಗಳು ಏನೇನಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಶಿಕ್ಷಣ ನೀತಿಯಲ್ಲಿ ಬೇರೆ ಬೇರೆ ಅವಿಷ್ಕಾರಗಳಿವೆ ಎಂದು ತಿಳಿಸಿದರು. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ…
ಬೆಂಗಳೂರು ;– ಸಿಲಿಕಾನ್ ಸಿಟಿ ಬೆಂಗಳೂರಿನ ಬಾಡಿಗೆ ಮನೆ ಮಾಲೀಕರೇ ಹುಷಾರ್,, ಅಪರಿಚಿತರಿಗೆ ಬಾಡಿಗೆ ಮನೆ ಕೊಡೊ ಮುನ್ನ ಕೊಂಚ ಯೋಚನೆ ಮಾಡಿ ಕೊಟ್ಟರೆ ಒಳಿತು. ಇಲ್ಲವಾದರೆ ನಿಮ್ಮ ಮನೆ ಗುಡಿಸಿ ಗುಂಡಾಂತರವಾಗೋದು ಪಕ್ಕಾ. ಹೌದು, ರಾಜಧಾನಿ ಬೆಂಗಳೂರಿನ ಮನೆ ಮಾಲೀಕರು ಸಿಕ್ಕ ಸಿಕ್ಕವರಿಗೆ ಬಾಡಿಗೆ ನೀಡುವುದಕ್ಕೂ ಮುನ್ನ ಸ್ವಲ್ಪ ಜಾಗೃತರಾಗಿರಬೇಕು. ಏಕೆಂದರೆ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆಗೆ ಬಂದ ಖತರ್ನಾಕ್ ಜೋಡಿ ಇಡೀ ಮನೆಯನ್ನೇ ಗುಡಿಸಿ ಗಂಡಾಂತರ ಮಾಡಿಬಿಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆಯಲ್ಲಿ ಇದ್ದುಕೊಂಡೇ ಲಿವಿಂಗ್ ಟುಗೆದರ್ ನಲ್ಲಿದ್ದ ಖತರ್ನಾಕ್ ಜೋಡಿ ಇಡೀ ಮನೆಯನ್ನೇ ಗುಡಿಸಿ ಗುಂಡಾಂತರ ಮಾಡಿದ್ದಾರೆ. ಈ ಖತರ್ನಾಕ್ ಜೋಡಿ ಮನೆ ಕಳ್ಳತನ ಮಾಡಲು ಬರೊಬ್ಬರಿ ನಾಲ್ಕು ತಿಂಗಳು ಬಾಡಿಗೆಗಿದ್ದರು. ಈ ವೇಳೆ ಮನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿದ್ದಾರೆ. ಅದೇ ರೀತಿ ಮನೆಯಲ್ಲಿ ಬರೊಬ್ಬರಿ 4 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ. ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್ನಲ್ಲಿ ಘಟನೆ ನಡೆದಿದ್ದು, ಪ್ರೇಮಲತ ಎಂಬುವವರ…