ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. ಎರಡು ವರ್ಷಗಳ ಹಿಂದೆ ಹಿಂದಿನ ಸರ್ಕಾರದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ಅನುಷ್ಠಾನ ಮಾಡಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು, ಅದರಲ್ಲಿ ಕೆಲ ನ್ಯೂನತೆಗಳು ಇವೆ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ ಎಂದರು. ನೂತನ ರಾಜ್ಯ ಸರ್ಕಾರದ ಮೊದಲ ಬಜೆಟ್ನ್ನು ಜುಲೈ 7 ರಂದು ಮಂಡನೆ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನಲೆ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಬಜೆಟ್ ಪೂರ್ವಭಾವಿ ಸಭೆ ಮುಂದುವರೆದಿದೆ. ವಸಂತನಗರದ ಹಣಕಾಸು ಇಲಾಖೆಯ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.
Author: Prajatv Kannada
ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಘಟನೆಯಲ್ಲಿ 5 ಜನ ಮಹಿಳೆಯರು ಮೃತಪಟ್ಟಿದ್ದು ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಹಾಗೆ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ಗೆ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಅರ್ಜಿಗೆ 20 ರೂ.ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಲಾಸ್ಟ್ ಡೇಟ್ ಇಲ್ಲ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಅರ್ಜಿ ಸಲ್ಲಿಕೆ ವೇಳೆ ಯಾರಿಗೂ ಕೂಡ 1 ರೂಪಾಯಿ ಕೂಡಬೇಡಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಹುಬ್ಬಳ್ಳಿ: ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿ ಬದಲಿಗೆ ಹಣ ನೀಡಲು ನಿರ್ಧಾರದ ವಿಚಾರ ಕುರಿತು ‘ನಮಗೆ ದುಡ್ಡು ಬೇಡ, ಅಕ್ಕಿ ಬೇಕೆಂದು ಹುಬ್ಬಳ್ಳಿಯಲ್ಲಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡ್ಡು ಕೊಟ್ರೆ ತಿನ್ನೋಕೆ ಆಗಲ್ಲ. ಅಕ್ಕಿ ಇದ್ರೆ, ಒಂದೊತ್ತಿನ ಊಟ ಮಾಡಬಹುದು ಎಂದಿದ್ದಾರೆ. ನಾಳೆಯಿಂದಲೇ ಗೃಹಜ್ಯೋತಿ ಅನ್ವಯ ವಿಚಾರವಾಗಿ ಜನರಲ್ಲಿ ಹಲವಾರು ಗೊಂದಲ ಏರ್ಪಟ್ಟಿದೆ. ಹೌದು ಬಹುತೇಕ ಮನೆ ಮಾಲೀಕರು ಮಾತ್ರ ಅರ್ಜಿ ತುಂಬಿದ್ದು, ಬಾಡಿಗೆದಾರರು ಅರ್ಜಿ ತುಂಬಲು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಮೊದಲು ಬಾಡಿಗೆದಾರರು ರೆಂಟ್ ಅಗ್ರಿಮೆಂಟ್ ಕೊಡಬೇಕು ಅಂದಿದ್ರು. ಆದ್ರೆ, ರೆಂಟ್ ಅಗ್ರಿಮೆಂಟ್ ಆಪ್ಷನ್ ಅದರಲ್ಲಿಲ್ಲ, ಜೊತೆಗೆ ಆಧಾರ್ ನಂಬರ್ ಲಿಂಕ್ ಆಗುತ್ತಿಲ್ಲ. ಹೀಗೆ ಹತ್ತು ಹಲವು ಗೊಂದಲಗಳು ಏರ್ಪಟ್ಟಿದೆ.
ಬೆಂಗಳೂರು: ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ಕೂಡ ರೆಡಿ ಇದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆಯಿಂದಲೇ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತೆ. ಒಂದು ಮನೆಯಲ್ಲಿ 5 ಸದಸ್ಯರು ಇದ್ದರೆ, ಪ್ರತಿ ಕೆಜಿಗೆ 34 ರೂ.ನಂತೆ 25 ಕೆಜಿಗೆ 850 ರೂ. ಸಿಗುತ್ತದೆ. ಅಕ್ಕಿ ಕೊಡುವವರೆಗೆ ಹಣ ನೀಡುವ ವ್ಯವಸ್ಥೆ ಮಾಡಿದ್ದೇವೆ. ಮುಂದೆ ಅಕ್ಕಿ ಸಿಕ್ಕ ಕೂಡಲೇ ಕೊಡುವ ವ್ಯವಸ್ಥೆ ಮಾಡುತ್ತೇವೆ. ರೇಷನ್ ಕಾರ್ಡ್ ಪ್ರಕಾರ ಯಾರು ಮುಖ್ಯಸ್ಥರಿದ್ದಾರೋ ಅವರ ಅಕೌಂಟ್‌ಗೆ ಹಣ ಹಾಕುತ್ತೇವೆ. ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇಲ್ಲದವರು ತಕ್ಷಣ ಬ್ಯಾಂಕ್ ಖಾತೆ ಮಾಡಿಸಿಕೊಂಡರೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ಶಿಸ್ತು ಸಮಿತಿಯಿಂದ ಒಬ್ಬರಿಗೆ ಮಾತ್ರ ನೋಟಿಸ್ ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದರು. ಹಾಲಿ ಶಾಸಕ, ಸಂಸದರಿಗೆ ನೋಟಿಸ್ ಕೊಡುವ ಅಧಿಕಾರ ನಮಗಿಲ್ಲ. ಅದು ಕೇಂದ್ರಿಯ ಶಿಸ್ತು ಸಮಿತಿ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯಗೆ ಹೇಳಿ, ನಾನು ಏನು ಚಪ್ರಾಸಿ ತರ ಕೂತಿದ್ದೇನೆ ಅಂದುಕೊಳ್ಳುತ್ತಾರಾ ಅವರು? ಸಿದ್ದರಾಮಯ್ಯ ಏನು ಚಪ್ರಾಸಿ ಅಲ್ವಲ್ಲಾ? ಅವರು ಮೋಸ್ಟ್ ಎಕ್ಸ್ ಪೀರಿಯನ್ಸ್ ಚೀಫ್ ಮಿನಿಸ್ಟರ್ ತಾನೇ? ಎಲ್ಲಾ ದರವನ್ನು ಇಳಿಸುವ ತಾಕತ್ತು ಅವರಿಗೆ ಇದೆ ಅಲ್ವಾ? ಇವರುಒಂದು ಮಾದರಿ ಆಗಬೇಕು ಅಂದರೆ ಎಲ್ಲಾ ದರವನ್ನು ಇಳಿಕೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಲೆಕ್ಕ ಹೇಳಿಕೊಡಬೇಕಾ? 10*35 ಎಷ್ಟು ರೂಪಾಯಿ ಆಗುತ್ತದೆ? ಸದನದಲ್ಲಿ ಲೆಕ್ಕದ ಬಗ್ಗೆ ಪಾಠ ಮಾಡುವವರಿಗೆ ಲೆಕ್ಕ ಗೊತ್ತಿಲ್ವೇ? ಸುಮ್ಮನೆ ಇವರು ಏನೂ ಕೊಡಲ್ಲ, ಈಗಾಗಲೇ ಏರಿಸಿದ್ದೆಲ್ಲಾ ಏರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಹಾಗೆ ಸಿಎಂ ಸಿದ್ದರಾಮಯ್ಯಗೆ ಹೇಳಿ, ನಾನು ಏನು ಚಪ್ರಾಸಿ ತರ ಕೂತಿದ್ದೇನೆ ಅಂದುಕೊಳ್ಳುತ್ತಾರಾ ಅವರು? ಸಿದ್ದರಾಮಯ್ಯ ಏನು ಚಪ್ರಾಸಿ ಅಲ್ವಲ್ಲಾ? ಅವರು ಮೋಸ್ಟ್ ಎಕ್ಸ್ ಪೀರಿಯನ್ಸ್ ಚೀಫ್ ಮಿನಿಸ್ಟರ್ ತಾನೇ? ಎಲ್ಲಾ ದರವನ್ನು ಇಳಿಸುವ ತಾಕತ್ತು ಅವರಿಗೆ ಇದೆ ಅಲ್ವಾ? ಇವರುಒಂದು ಮಾದರಿ ಆಗಬೇಕು ಅಂದರೆ ಎಲ್ಲಾ ದರವನ್ನು ಇಳಿಕೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ.
ಬೆಂಗಳೂರು : ಯಡಿಯೂರಪ್ಪ ಅವರನ್ನು 2013 ರಲ್ಲಿ ಪಕ್ಷದಿಂದ ಹೊರಗೆ ಕಳಿಸಿದರು. ಆಗ ಪಕ್ಷ ಹೀನಾಯ ಸೋಲು ಕಂಡಿತು ಎಂದು ಬೆಂಗಳೂರಿನಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದರು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕರೆದು ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷ ಮಾಡಿದರು. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪ್ರವಾಸ ಮಾಡಿದರು ಎಂದರು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನ ಯಾರು ಮಾಡಿದ್ದು,, ಹಿರಿಯರನ್ನ ಮಾಡಬೇಕಲ್ವಾ ಪ್ರಯೋಗ ಮಾಡುವ ಅವಶ್ಯಕತೆ ಹಾಗೆ ಇತ್ತ ಅಕ್ಕಿ ಕಡಿಮೆ ಮಾಡಿದ್ರು, ಸಿಲಿಂಡರು ಕಡಿಮೆ ಮಾಡಿದ್ರು, ಒಳಮೀಸಲಾತಿ ಕೊಟ್ಟಿದ್ದು, ಇದೆಲ್ಲ ಸೋಲಿಗೆ ಕಾರಣ ಆಗಿದೆ ಹೀಗಾಗಿ ಈ ಎಲ್ಲ ವಿಚಾರವನ್ನ ಜೆ ಪಿ ನಡ್ಡಾ ಅವರಿಗೆ, ಅಮಿತ್ ಶಾ ಅವರಿಗೆ ಪತ್ರ ಬರೆದು ತಿಳಿಸುತ್ತೇನೆ ಎಂದು ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರಬೇಕೆಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ‘ ಭರವಸೆ ನೀಡಿದಂತೆ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಬೇಕು ಎಂದರು. ಹಾಗೆ ನಮ್ಮ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಯಾರೂ ಹೇಳಿಕೆ ಕೊಡಬಾರದು.ಪಕ್ಷದ ಹೊರಗಡೆ ಯಾವುದೇ ಹೇಳಿಕೆ ಕೊಡದಂತೆ ನಾವು ಎಚ್ಚರಿಕೆ ನೀಡಿದ್ದೇವೆ ಮುಂದೆ ಏನಾದರೂ ಈ ರೀತಿ ಹೇಳಿಕೆ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದಲೇ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಆರಂಭವಾಗಿದೆ.ಗೃಹಜ್ಯೋತಿ’ ಯೋಜನೆ ಇಂದು ಮಧ್ಯರಾತ್ರಿಯಿಂದ ಅಧಿಕೃತವಾಗಿ ಆರಂಭವಾಗಲಿದ್ದು, ರಾತ್ರಿ ಒಂದು ಗಂಟೆಯಿಂದ ಪ್ರತಿ ಯೂನಿಟ್ ಕೌಂಟ್ ಆಗಲಿದೆ. 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ. 12 ತಿಂಗಳ ಸರಾಸರಿ ಬಳಕೆ 200 ಯೂನಿಟ್ ಇದ್ದರೆ ಫ್ರೀ ವಿದ್ಯುತ್ ಸಿಗಲಿದೆ. ಒಂದುವೇಳೆ 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಮಾತ್ರ ಬಿಲ್ ಬರಲಿದೆ.ಇನ್ನೂ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ್ದ 5 ಗ್ಯಾರಂಟಿ ಗಳಲ್ಲಿ ಗೃಹಜ್ಯೋತಿ’ ಯೋಜನೆ ಕೂಡ ಒಂದು. ಈ ಯೋಜನೆ ನೋಂದಣಿಗೆ ರಾಜ್ಯ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜುಲೈ ತಿಂಗಳ ವಿದ್ಯುತ್ ಬಿಲ್ ಆಗಸ್ಟ್ ತಿಂಗಳಲ್ಲಿ ಬರಲಿದೆ. ಬರುವ ಕರೆಂಟ್ ಬಿಲ್ ನಲ್ಲಿ ಶಕ್ತಿ ಯೋಜನೆಯಂತೆ ಗೃಹಜ್ಯೋತಿಯ ಉಚಿತ ಬಿಲ್ ಎಂದು ಹೆಸರು ಬರುವ ಸಾಧ್ಯತೆಗಳಿವೆ. 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ…