ತುಮಕೂರು: ಉಸಿರಾಟದ ಸಮಸ್ಯೆಯಿಂದ 4 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ಕುಣಿಗಲ್ನ ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ದಿವಾಕರ್, ಅರುಣಾ ದಂಪತಿಯ ಮಗು ಉಸಿರಾಟ ತೊಂದರೆಯಿದ್ದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಲಭ್ಯವಿಲ್ಲದೇ ಕಾರಣ ಸಿಬ್ಬಂದಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಬಳಿಕ ಕೂಡಲೇ ಚುಂಚನಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಸಿಬ್ಬಂದಿ ತಿಳಿಸಿದ್ದಾರೆ. ಅಷ್ಟರಲ್ಲೇ ಮಗು ಸಾವೀಗಿಡಾಗಿದೆ. ಇದರಿಂದ ರೊಚ್ಚಿಗೆದ್ದ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾರೆ.
Author: Prajatv Kannada
ಬೆಂಗಳೂರು ;– ಆದಾಯಕ್ಕೂ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕುಬೇರ ತಹಶೀಲ್ದಾರ್ ಅಜಿತ್ ರೈ ಅವರನ್ನು ಇಂದು ನ್ಯಾಯಾಲಕ್ಕೆ ಲೋಕ ಅಧಿಕಾರಿಗಳು, ಹಾಜರುಪಡಿಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ಒಳಗಾಗಿ ನ್ಯಾಯಾಧೀಶ ರ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದು 10 ದಿನ ಅಜಿತ್ ರೈಯನ್ನು ಕಸ್ಟಡಿ ಕೇಳುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆ ನಿಟ್ಟಿನಲ್ಲಿ ಕಸ್ಟಡಿ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಹಾಗೆ ಬೆಂಗಳೂರು ನಮ್ಮ ಮೆಟ್ರೋ ರೈಲಿನಲ್ಲೂ ಉಚಿತ ಪ್ರಯಾಣದ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೆ ಹೊಸ ಬೇಡಿಕೆಯೊಂದು ಬಂದಿದೆ. ಈಗಾಗಲೇ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಬೆಂಗಳೂರಿನ ಹಿರಿಯ ವೈದ್ಯರೊಬ್ಬರು ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಸಬೇಕು ಎಂದು ಆಗ್ರಹಿಸಿದ್ದಾರೆ. ಮೆಟ್ರೋ ನಲ್ಲಿ ಉಚಿತ ಪ್ರಯಾಣ ಕುರಿತು ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ಹಿರಿಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ.ದೀಪಕ್ ಕೃಷ್ಣಮೂರ್ತಿ ಅವರು ಮಾಡಿರುವ ಈ ಟ್ವೀಟ್ ಸಾಕಷ್ಟು ಮುನ್ನೆಲೆಗೆ ಬರುತ್ತಿದೆ. ಸಾರಿಗೆ ಬಸ್‌ಗಳಂತೆ ನಮ್ಮ ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಮಾಡಿಕೊಂಡಿ ಎಂದು ಅವರು ಬರೆದುಕೊಂಡಿದ್ದಾರೆ
ಬೆಂಗಳೂರು: ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾವನ್ನು ಈ ವರ್ಷ ಮಾಡಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾಗೆ 2400 ಕೋಟಿ ರೂ ಬೇಕಾಗುತ್ತದೆ, ಅದನ್ನು ಈ ವರ್ಷ ಮಾಡುವುದಕ್ಕೆ ಆಗಲ್ಲ. ಮಹಿಳೆಯರ ಜೊತೆ ಚರ್ಚಿಸಿ ಮುಂದಿನ ವರ್ಷ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಗೃಹಶಕ್ತಿಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನೂ, ಗೃಹಜ್ಯೊತಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಶುರು ಆಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಈ ಬೆನ್ನಲ್ಲೇ ಕೊಟ್ಟ ಮಾತಿನಂತೆ ಸರ್ಕಾರ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮನೆ ಎದುರು ಬುಧವಾರ ಬೆಳಗ್ಗೆಯಿಂದಲೇ ಮಹಿಳೆಯರು ಪ್ರತಿಭಟನೆಗೆ ಕುಳಿತಿದ್ದರು. ಸಂಪುಟ ಸಭೆ ಮುಗಿಸಿ ಮಹಿಳೆಯರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು. ಕರ್ನಾಟಕ SSLC ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ. ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ. ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ. ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು.
ಬೆಂಗಳೂರು: ರಾಜ್ಯದಲ್ಲಿ ತರಕಾರಿ, ಹೋಟೆಲ್ ಊಟ, ಮದ್ಯ ಹೀಗೆ ಎಲ್ಲವೂ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 1ಕ್ಕೆ ಜಾರಿಯಾಗಬೇಕಿದ್ದ ಅನ್ನ ಭಾಗ್ಯ ಯೋಜನೆ ಜಾರಿಗೆ ಅಕ್ಕಿ ಸಮಸ್ಯೆ ಎದುರಾಗಿದ್ದು, ಫಲಾನುಭವಿಗಳಿಗೆ ಅಕ್ಕಿಯ ಹಣ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯದಲ್ಲಿ ಪರ ವಿರೋಧಗಳು ಶುರುವಾಗಿದೆ. ಜೊತೆಗೆ ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಮತ್ತು ವಿಪಕ್ಷ ಬಿಜೆಪಿ (BJP) ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಆಡಳಿತಾರೂಢ ಮತ್ತು ವಿಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಕೌಂಟರ್ ನೀಡಲು ಬಿಜೆಪಿ ಮನೆ ಮನೆ ಅಭಿಯಾನವನ್ನು ಈಗಾಗಲೇ ಆರಂಭಿಸಿದೆ.
ಬೆಂಗಳೂರು: ಆಧಾರ್ ಹಾಗೂ ಪಾನ್ಕಾರ್ಡ್ ಲಿಂಕ್ಗೆ ಎಕ್ಸೆಟೆಂಡ್ ಮಾಡಿದ್ದ ಸಮಯ ಇಂದಿಗೆ ಮುಕ್ತಾಯವಾಗುತ್ತದೆ. ಆಧಾರ್ ಮತ್ತು ಪಾನ್ ಲಿಂಕ್ಗೆ ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಆದ್ರೆ, ಸಾಕಷ್ಟು ಜನರು ಲಿಂಕ್ ಮಾಡಿಸಿಕೊಳ್ಳದ ಹಿನ್ನೆಲೆ ಸರ್ಕಾರದ ನಿರ್ಧಾರದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಮಾರ್ಚ್ 30 ರಿಂದ ಜೂನ್ 30 ರವರೆಗೆ ಹೆಚ್ಚಿನ ಅವಧಿ ನೀಡಲಾಗಿತ್ತು. ಈ ಅವಧಿ ಇಂದಿಗೆ ಮುಗಿಯಲಿದ್ದು, ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂದ್ರೆ, 10 ಸಾವಿರ ದಂಡ ಬೀಳುವುದರ ಜೊತೆಗೆ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುವ ಸಾಧ್ಯತೆಯಿದೆ.
ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು
ಬೆಂಗಳೂರು: ಬಿಜೆಪಿಯಲ್ಲಿ ನಾಯಕರ ಬಹಿರಂಗ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕರಾದ ಗೋವಿಂದ ಕಾರಜೋಳ, ಎ.ಎಸ್. ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು: ಎಲ್ಪಿಜಿ ಗ್ಯಾಸ್, ತರಕಾರಿ,ವಿದ್ಯುತ್ ದರ ಏರಿಕೆ ಆಯಿತು.ಇದೀಗ ಹಾಲು ಕೂಡ ಬಿಸಿಯಾಗ್ತಿದೆ. ಯಸ್ ..ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರೋ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ಹೌದು ನಷ್ಟದ ನೆಪವೊಡ್ಡಿ ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಮನವಿ ಮಾಡಿದ್ದು, ಗ್ರಾಹಕರಿಗೆ ಕೆಎಂಎಫ್ ಕಹಿ ಸುದ್ದಿ ನೀಡೋಕ್ಕೆ ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಸಿದ್ದತೆ ನಡೆಸಿದೆ. ಈಗಾಗ್ಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ದಿನನಿತ್ಯ ಉಪಯೋಗಿಸುವ ದವಸ ಧಾನ್ಯ, ತರಕಾರಿ ಬೆಲೆ , ಪೆಟ್ರೋಲ್ , ಡಿಸೇಲ್ , ಗ್ಯಾಸ್ ದರ ಗಗನಕ್ಕೇರುತ್ತಿದೆ.ಇದ್ರ ನಡುವೆ ಕಳೆದ ಕೆಲ ದಿನಗಳ ಹಿಂದೆ ವಿದ್ಯುತ್ ದರ ಪರಿಷ್ಕರಣೆ ಆದ ಬೆನ್ನಲ್ಲೇ ಇದೀಗ ನಂದಿನ ಹಾಲಿನ ದರವೂ ಬೆಲೆ ಏರಿಕೆಯತ್ತ ಸಾಗೋ ಮುನ್ಸೂಚನೆ ಸಿಕ್ಕಿದೆ. ಹೌದು.. ಹಾಲಿನ ದರ ಪರಿಷ್ಕರಣೆಗೆ ಮುಂದಾಗಿರುವ ಕೆಎಂಎಫ್, ಪ್ರತಿ ಲೀಟರ್ 2 ರೂಪಾಯಿ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.ರಾಜ್ಯದ 14 ಹಾಲು ಒಕ್ಕೂಟಗಳು…