Author: Prajatv Kannada

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ. ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ‌ ಮಾಡಿದ್ದಾರಾ? ಬೆಲೆ‌ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

Read More

ಬೆಂಗಳೂರು: ಗ್ಯಾರಂಟಿ ಭರವಸೆ ನೀಡಿದ್ದು ಕಾಂಗ್ರೆಸ್​ನವರು, ಬಿಜೆಪಿಯಲ್ಲ. ಸೋನಿಯಾ ಗಾಂಧಿ, ರಾಹುಲ್​​ರನ್ನು ಕೇಳಿ ಮಾತು ಕೊಟ್ಟಿದ್ದೀರಿ. ನಿಮ್ಮ ಕಾಂಗ್ರೆಸ್ ಹೈಕಮಾಂಡ್​​​​ ನಾಯಕರನ್ನು ಹೋಗಿ ಕೇಳಿ. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಬಗ್ಗೆ ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದೆ. ಮೋದಿ ಮೇಲೆ ಗೂಬೆ ಕೂರಿಸಿ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೇವೆಂದು ಹೇಳಿದ್ದಾರೆ. ಹಾಗಾಗಿ 170 ರೂಪಾಯಿ ಅಲ್ಲ, 340 ರೂಪಾಯಿ ನೀಡಬೇಕು. 340 ರೂ. ನೀಡುವವರೆಗೂ ನಾವು ಬಿಡಲ್ಲ ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್​.ಮುನಿಸ್ವಾಮಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದರು.

Read More

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅವರು ಸಿಎಂ ಅವರಿಗೆ ಭರ್ಜರಿ ಬಾಡೂಟ ಕಳುಹಿಸಿದ್ದಾರೆ. ಆದರೆ ಆಟೋ ರಿಕ್ಷಾದಲ್ಲಿ ಕಳುಹಿಸಲಾಗಿದ್ದ ಬಿರಿಯಾನಿಯನ್ನು (Biryani) ಸಿಎಂ ನಿವಾಸದೊಳಗೆ ತೆಗೆದುಕೊಂಡು ಹೋಗಲು ಪೊಲೀಸರು ಬಿಡದ ಹಿನ್ನೆಲೆ ಬೆಂಜ್ ಕಾರ್‌ನಲ್ಲಿ ಕೊಂಡೊಯ್ಯಲಾಗಿದೆ. ಜಮೀರ್ ಅಹಮದ್ ಖಾನ್ ಅವರು ಹಬ್ಬದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಆಟೋದಲ್ಲಿ ಬಿರಿಯಾನಿ ಕಳುಹಿಸಿದ್ದರು. ಸಿಎಂ ಸರ್ಕಾರಿ ನಿವಾಸದ ಬಳಿ ಆಟೋದಲ್ಲಿ ಬಂದ ಬಿರಿಯಾನಿಯನ್ನು ಅನುಮತಿ ಇಲ್ಲದೆ ಒಳಗೆ ಕೊಂಡುಹೋಗಲು ಬಿಡಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೊನೆಗೂ ಬಿರಿಯಾನಿಯನ್ನು ಹೇಗಾದ್ರೂ ಮಾಡಿ ಸಿಎಂ ನಿವಾಸಕ್ಕೆ ಕಳುಹಿಸಲೇಬೇಕು ಎಂದು ಜಮೀರ್ ಬೆಂಬಲಿಗರು ಅದನ್ನು ಬೆಂಜ್ ಕಾರಿಗೆ ಶಿಫ್ಟ್ ಮಾಡಿದ್ದಾರೆ.

Read More

ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ.  ಆ ಶಕ್ತಿಗಳು  ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು  ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ  ಅಭಿವೃದ್ಧಿ ಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು. ತ್ಯಾಗದ ಸಂಕೇತ ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ.  ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

Read More

ನವದೆಹಲಿ: ಯಾರನ್ನೂ ಕೇಳದೆ ಸಿದ್ದರಾಮಯ್ಯ ಅಕ್ಕಿ ಘೋಷಣೆ ಮಾಡಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ. ನವದೆಹಲಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ನೈಸರ್ಗಿಕ ವಿಕೋಪ, ತುರ್ತು ಪರಿಸ್ಥಿತಿಯಲ್ಲಿ ಅಕ್ಕಿ ಕೊಡಬೇಕು. ಕೇಂದ್ರದ ಬಳಿ ಅಕ್ಕಿ ಇದ್ದರೆ ಕೊಡುತ್ತಿದ್ದೆವು ಎಂದಿದ್ದಾರೆ

Read More

ಮಡಿಕೇರಿ: ಸಿದ್ದರಾಮಯ್ಯ(Siddaramaiah) ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್(R Ashok) ಹೇಳಿದ್ದಾರೆ. ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ. ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ‌ ಮಾಡಿದ್ದಾರಾ? ಬೆಲೆ‌ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

Read More

ಬೆಂಗಳೂರು: ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಇನ್ನುಳಿದಿದ್ದು 5 ಕೆಜಿಗೆ ಹಣ ಕೊಡುತ್ತೇವೆ ಎಂದು ನಿರ್ಧರಿಸಿದ್ದೇ ತಡ ವಿಪಕ್ಷಗಳು ಕೊಂಕು ಹುಡುಕಲು ಶುರುಮಾಡಿದರು. ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಅನ್ನಭಾಗ್ಯ ಯೋಜನೆ ನೀಡುವುದಾಗಿ ಭರವಸೆ ನೀಡಿತ್ತು. ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಸಿಗದ ಹಿನ್ನೆಲೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ.ಗಳಂತೆ ಹತ್ತು ಕೆಜಿಗೆ ತಗುಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ ಜನರಿಗೆ ಕ್ಷಮೆ…

Read More

ನವದೆಹಲಿ: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜ್ವರದ ಕೇಸ್ ಹೆಚ್ಚಳ ಹಿನ್ನೆಲೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ನೇತೃತ್ವದಲ್ಲಿ ನಾಳೆ ನಡೆಯುವ ಈ ವರ್ಚುವಲ್ ಸಭೆಯಲ್ಲಿ ಎಲ್ಲ ರಾಜ್ಯಗಳ ಆರೋಗ್ಯ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Read More

ಚಾಮರಾಜನಗರ: ಮೂರು ಬಾರಿ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದರೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಅಧಿಕಾರಿಗಳ ಸಭೆ ನಡೆಸಿಲ್ಲ. ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತಿರುವ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕಿದೆ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗ 20ಕ್ಕೂ ಹೆಚ್ಚು ಬಾರಿ ಭೇಟಿ‌ ನೀಡಿದ್ದರು. ವಿಶೇಷ ಅನುದಾನವನ್ನೂ ನೀಡಿದ್ದರು. ಆದರೆ ಉಸ್ತುವಾರಿ ಸಚಿವರು ಜಿಲ್ಲಾ ಅಭಿವೃದ್ದಿಗೆ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ.

Read More

ಬೆಂಗಳೂರು: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಬಿಜೆಪಿ ಪಕ್ಷ ಛಿದ್ರ ಛಿದ್ರ ಆಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಕೂಡ ಬಿಜೆಪಿ ಜೋಡಿಸಲು ಆಗುವುದಿಲ್ಲ. ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ. ಬಿಜೆಪಿಯವರು ಒಂದೊಂದು ತರ ಮಾತಾಡುತ್ತಿದ್ದಾರೆ ಎಂದರು.

Read More