ಹಾವೇರಿ: ಬಕ್ರೀದ್ (Bakrid) ಹಬ್ಬದ ಪ್ರಯುಕ್ತ ಈದ್ಗಾ ಮೈದಾನದಲ್ಲಿ (Idgah Maidan) ನಡೆದ ಆಚರಣೆಯ ನಂತರ ಅಂಜುಮನ್ ಕಮಿಟಿ ಲೆಕ್ಕಪತ್ರ ನಿರ್ವಹಣೆ ವಿಚಾರವಾಗಿ ಮುಸ್ಲಿಂ ಯುವಕರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಈದ್ಗಾ ಮೈದಾನದ ನಿರ್ವಹಣೆಗಾಗಿ ವಂತಿಕೆ ಸಂಗ್ರಹ ವೇಳೆ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಮುಸ್ತಕಾಅಹ್ಮದ್ ಖಾಜಿ ಎಂಬವನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿರಾರು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ನಡೆಸಿದ ನಂತರ ಈ ಗಲಾಟೆ ನಡೆದಿದೆ. ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಆಗಮಿಸಿದ ಬಳಿಕ ಪರಿಸ್ಥಿತಿ ಶಾಂತವಾಗಿದೆ.
Author: Prajatv Kannada
ಬಡವರಿಗೆ ಕೊಡಲಿಕ್ಕೆ,ಸರ್ಕಾರಕ್ಕೆ ಕೊಡಲಿಕ್ಕೆ ನಿಮ್ಮ ಬಳಿ ಅಕ್ಕಿಯಿಲ್ಲ ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ? ಬಡವರ ಅಕ್ಕಿಯನ್ನು ಕೇಂದ್ರ ಹಣವನ್ನು ಕೊಟ್ಟರೂ ಕೊಡಲಿಲ್ಲ ಹೀಗಾಗಿ ರಾಜ್ಯದ ಜನ್ರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ ಒಬ್ಬ ಎಂಪಿಯಾದರೂ ರಾಜ್ಯಕ್ಕೆ ಅಕ್ಕಿ ಕೊಡು ಅಂತಾ ಕೇಳಿದ್ದಾರಾ? ಯಾಕೆ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಅಂತಾ ಕೇಳಿದ್ದಾರಾ? ಬೊಮ್ಮಾಯಿ,ಕಟೀಲ,ಯಡಿಯೂರಪ್ಪನವರು ಒಬ್ಬರಾದರೂ ಮಾತನಾಡಿದ್ದಾರಾ? ಮೋದಿಯವರು ಇದಕ್ಕೆ ಉತ್ತರಿಬೇಕು ಅಂತಾ ಎಚ್ ಕೆ ಆಕ್ರೋಶ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರನೂ ಆಗಿರುವ ಮಾಜಿ ಶಾಸಕ ಡಾ. ಯತಿಂದ್ರ ಅವರಿಗೆ ಉನ್ನತ ಸ್ಥಾನ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆಂಬಲಿಗರು ಯತಿಂದ್ರ ಹೆಸರಲ್ಲಿ ನಂಜನಗೂಡು ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರಿಂದ ಪೂಜೆ ಸಲ್ಲಿಸಲಾಗಿದೆ. ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಡಾ. ಯತಿಂದ್ರ ಹಗಲಿರುಳು ಶ್ರಮಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಯತಿಂದ್ರಗೆ ಉನ್ನತ ಸ್ಥಾನಮಾನ ನೀಡಬೇಕು. ಈ ಮೂಲಕ ಕ್ಷೇತ್ರಕ್ಕೆ ಹಾಗೂ ಜಿಲ್ಲೆಗೆ ಮತ್ತಷ್ಟು ಸೇವೆ ಅವರಿಂದ ದೊರೆಯಲಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.
ಹುಬ್ಬಳ್ಳಿ: ಇಂದು ಬಕ್ರೀದ್ ಹಬ್ಬದ ನಿಮಿತ್ತವಾಗಿ, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು, ಈದ್ಗಾ ಮೈದಾನದಲ್ಲಿ ನಮಾಝ್ ಮಾಡುವುದರ ಮೂಲಕ ತಮ್ಮ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಿದರು. ಅಷ್ಟೇ ಅಲ್ದೆ ಈ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು.
ಬೆಂಗಳೂರು ; ನಗರದ ಪೂರ್ವ ತಾಲೂಕು, ಕೆ.ಆರ್.ಪುರ ತಹಶೀಲ್ದಾರ್ ಎಸ್. ಅಜಿತ್ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದಿದ್ದನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದರು. ಪರಿಶೀಲನೆ ವೇಳೆ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪತ್ತೆ ಹಾಗೂ ಸತತ 30 ಗಂಟೆ ಮನೆ ಪರಿಶೀಲನೆ ಬಳಿಕ ತಹಸೀಲ್ದಾರ್ ಅಜಿತ್ ರೈ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಲಾಗಿದೆ. Loka Raid: ತಹಸೀಲ್ದಾರ್ ಅಜಿತ್ ರೈ ಬಳಿ ಏನೆಲ್ಲಾ ಇವೆ ಗೊತ್ತಾ: ಲೋಕಾ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದೇಕೆ? ಅಜಿತ್ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್ ರೈ ಆಸ್ತಿ ಮಾಡಿರುವ ಶಂಕೆ ಹಿನ್ನೆಲೆ ಅಜಿತ್…
ಬೆಂಗಳೂರು ; ನಗರದ ಪೂರ್ವ ತಾಲೂಕು, ಕೆ.ಆರ್.ಪುರ ತಹಶೀಲ್ದಾರ್ ಎಸ್. ಅಜಿತ್ಕುಮಾರ್ ರೈ ಮನೆ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು. ಈ ವೇಳೆ ಅಜಿತ್ ಮನೆಯಲ್ಲಿ ಭಾರಿ ಪ್ರಮಾಣದ ಆಲ್ಕೋಹಾಲ್ ಪತ್ತೆಯಾಗಿದೆ. ಅಜಿತ್ ಮನೆಯಲ್ಲಿ ವಿದೇಶಿ ಬ್ರ್ಯಾಂಡ್ನ 16.2 ಲೀ. ಆಲ್ಕೋಹಾಲ್ ಪತ್ತೆಯಾಗಿದ್ದು, ಅದರ ಮೌಲ್ಯ 1.45 ಲಕ್ಷ ರೂ. ಎಂದು ಅಬಕಾರಿ ಅಧಿಕಾರಿಗಳು ಅಂದಾಜಿಸಿದ್ದು, ಅದನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಅಜಿತ್ಕುಮಾರ್ ಮನೆಯಲ್ಲಿ 40 ಲಕ್ಷ ರೂ. ನಗದು ಮಾತ್ರವಲ್ಲದೆ, 1.9 ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿ ಪತ್ತೆಯಾಗಿವೆ. ಅಜಿತ್ ಮನೆಯಲ್ಲಿ ಐಷಾರಾಮಿ ಕಾರುಗಳೂ ಪತ್ತೆಯಾಗಿದೆ.
ಮೈಸೂರು ;- ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಸಂಭವಿಸಿಸುತ್ತಿರುವ ಅಪಘಾತಗಳಿಗೆ ಚಾಲಕರ ಬೇಜವಾಬ್ದಾರಿ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹೈವೇಯಲ್ಲಿ ಪ್ರತಿದಿನ ಅಪಘಾತಗಳಾಗುತ್ತಿವೆ. ಇದಕ್ಕೆ ಹೆದ್ದಾರಿ ಅವೈಜ್ಞಾನಿಕವಾಗಿ ನಿರ್ಮಿಸಿದ್ದೇ ಕಾರಣ ಎಂದು ಹೇಳಿದರೆ ಅಥವಾ ತೋರಿಸಿದರೆ ಎಂಜಿನಿಯರ್ಗಳನ್ನು ಕರೆದುಕೊಂಡು ಬಂದು ಸರಿಮಾಡುತ್ತೇನೆ. ಅದನ್ನು ಬಿಟ್ಟು ಬರೀ ಹೆದ್ದಾರಿ ಅವೈಜ್ಞಾನಿಕ ಎಂದು ಹೇಳಿದ್ರೆ ಒಪ್ಪಲು ನಾವು ಸಿದ್ದವಿಲ್ಲ. ಹೆದ್ದಾರಿಯಲ್ಲಿ ಅಪಘಾತವಾಗಲು ಚಾಲಕರ ಬೇಜವಾಬ್ದಾರಿಯುತ ಚಾಲನೆಯೇ ಕಾರಣ ಎಂದರು. ಹೆದ್ದಾರಿಯಲ್ಲಿ ಯಾವುದೇ ಅವೈಜ್ಞಾನಿಕ ಕಾಮಗಾರಿಗಳು ನಡೆದಿಲ್ಲ. ಹೆದ್ದಾರಿಯಲ್ಲಿ ಗರಿಷ್ಠ ವೇಗ 120 ಕಿಲೋಮೀಟರ್ ಆಗಿದೆ. ಸಣ್ಣಪುಟ್ಟ ಕಾರುಗಳಲ್ಲಿ ವೇಗವಾಗಿ ಹೋದರೆ ಅಪಘಾತಗಳು ಸಂಭವಿಸುತ್ತವೆ ಎಂದು ಹೇಳಿದರು. ಯಾರಾದರೂ ಇಂಜಿನಿಯರ್ಗಳು ಈ ರಸ್ತೆ ಪ್ರಾಬ್ಲಮ್ ಇದೆ ಎಂದು ಹೇಳಲಿ. ಖಂಡಿತಾ ಅದನ್ನು ಸರಿಮಾಡುತ್ತೇವೆ. ಕೆಲವು ಅವಶ್ಯಕ ಸೌಲಭ್ಯ ಹಾಗೂ ಸಣ್ಣಪುಟ್ಟ ಕಾಮಗಾರಿಗಳು ನಡೆಯಬೇಕಿವೆ. ಶೀಘ್ರವೇ ಆ ಕೆಲಸ ಕೈಗೆತ್ತಿಕೊಳ್ಳುತ್ತೇವೆ. ಮಂಡ್ಯದಿಂದ ಮೈಸೂರಿನವರೆಗಿನ ಟೋಲ್ ಸಂಗ್ರಹ ಕಾರ್ಯ ಶೀಘ್ರ ಆರಂಭವಾಗಲಿದೆ. ಶೀಘ್ರದಲ್ಲೇ…
ಬೆಂಗಳೂರು :- ವಾಹನ ಸವಾರರೇ ನಾಳೆ ರಸ್ತೆಯಲ್ಲಿ ಓಡಾಡುವ ಮುನ್ನ ತಪ್ಪದೇ ಸುದ್ದಿ ನೋಡಿ. ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ಸಂಚಾರ ನಿರ್ಬಂಧ ಇರಲಿದೆ. ಹೀಗಾಗಿ ಬೆಳಗ್ಗೆ 8 ರಿಂದ 11.30ರವರೆಗೆ ಸಂಚಾರ ವ್ಯತ್ಯಯ ಇರಲಿದೆ. 1. ಬಸವೇಶ್ವರ ವೃತ್ತದಿಂದ ಸಿಐಡಿ ಜಂಕ್ಷನ್‌ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಪ್ರಯಾಣಿಕರು ದೇವರಾಜ ಅರಸು ರಸ್ತೆಯನ್ನು ಬಳಸಲು ಕೋರಲಾಗಿದೆ. 2. ಲಾಲ್‌ಬಾಗ್ ಮುಖ್ಯ ಗೇಟ್‌ನಿಂದ ಕಣ್ಣಪ್ಪ ಪೆಟ್ರೋಲ್ ಬಂಕ್‌ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಯಾಣಿಕರು ಊರ್ವಶಿ, ಸಿದ್ದಯ್ಯ ರಸ್ತೆ, 34ನೇ ಜಂಕ್ಷನ್, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ ಮತ್ತು ಹೊಸೂರು ರಸ್ತೆಯನ್ನು ಬಳಸಲು ಸೂಚಿಸಲಾಗಿದೆ. 3. ಟೋಲ್ ಗೇಟ್ ಜಂಕ್ಷನ್‌ನಿಂದ ಶಿರಸಿ ವೃತ್ತದವರೆಗೆ ಸಂಚಾರ ನಿರ್ಬಂಧಿಸಿರುವುದರಿಂದ ಸಿರ್ಸಿ ವೃತ್ತದಿಂದ ಬಲ ತಿರುವು ಪಡೆದು ಬಿನ್ನಿ ಮಿಲ್, ಟ್ಯಾಂಕ್ ಬಂಡ್ ರಸ್ತೆ, ಮಾಗಡಿ ರಸ್ತೆ ಮತ್ತು ವಿಜಯನಗರ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಹನೂರು ; ಹೆಣ್ಣು ಮಕ್ಕಳು ಅಂದರೆ ತಂದೆಗೆ ಇನ್ನಿಲ್ಲದ ಪ್ರೀತಿ. ಹಾಗೆಯೇ ಹೆಣ್ಣು ಮಕ್ಕಳಿಗೂ ಕೂಡ ತಂದೆ ಎಂದರೆ ಅಪಾರ ಪ್ರೀತಿ ಗೌರವ. ಮಗಳ ಸೂಪರ್ ಹೀರೋ ತಂದೆ ಅಂದರೆ ತಪ್ಪಾಗಲ್ಲ. ಹೌದು ಇಲ್ಲೊಬ್ಬ ತಂದೆ ತನ್ನ ಮಗಳಿಗೋಸ್ಕರ ಪ್ರಾಣವನ್ನು ಲೆಕ್ಕಿಸದೇ ಹೋರಾಡಿದ್ದಾರೆ. ಏನಿದು ಸ್ಟೋರಿ ಅಂತಿರಾ!? ಈ ಕೆಳಗೆ ಓದಿ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡುವಿನ ಅರಣ್ಯಕ್ಕೆ ಚಿರತೆಯೊಂದು ತನ್ನ 6 ವರ್ಷದ ಮಗಳನ್ನು ಎಳೆದೊಯ್ಯಲು ಮುಂದಾದಾಗ ಎಚ್ಚೆತ್ತ ತಂದೆ ಮಗಳನ್ನು ಚಿರತೆಯ ದವಡೆಯಿಂದ ರಕ್ಷಿಸಿದ ದಾರುಣ ಘಟನೆ ನಡೆದಿದೆ. ಹನೂರು ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಬಾಲಕಿ ಮೊಬೈಲ್ ನೋಡಿಕೊಂಡಿದ್ದಾಗ ಚಿರತೆ ಆಕೆಯ ಕತ್ತು ಹಿಡಿದು ಎಳೆದೊಯ್ಯಲು ಯತ್ನಿಸಿತ್ತು. ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಿದ್ದರಿಂದ ಆಕೆಯ ತಂದೆ ಮತ್ತು ಇತರ ಗ್ರಾಮಸ್ಥರು ಚಿರತೆಯನ್ನು ಬೆನ್ನಟ್ಟಲು ಮುಂದಾದರು. ರಾಮು ಅವರ ಓಡಾಟದಿಂದ ಬೆಚ್ಚಿಬಿದ್ದ ಚಿರತೆ ಬಾಲಕಿಯನ್ನು…
ಬೆಂಗಳೂರು ;- ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾವನ್ನು ಈ ವರ್ಷ ಮಾಡಲಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾಗೆ 2400 ಕೋಟಿ ರೂ ಬೇಕಾಗುತ್ತದೆ, ಅದನ್ನು ಈ ವರ್ಷ ಮಾಡುವುದಕ್ಕೆ ಆಗಲ್ಲ. ಮಹಿಳೆಯರ ಜೊತೆ ಚರ್ಚಿಸಿ ಮುಂದಿನ ವರ್ಷ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಗೃಹಶಕ್ತಿಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇನ್ನೂ, ಗೃಹಜ್ಯೊತಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಶುರು ಆಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಈ ಬೆನ್ನಲ್ಲೇ ಕೊಟ್ಟ ಮಾತಿನಂತೆ ಸರ್ಕಾರ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮನೆ ಎದುರು ಬುಧವಾರ ಬೆಳಗ್ಗೆಯಿಂದಲೇ ಮಹಿಳೆಯರು ಪ್ರತಿಭಟನೆಗೆ ಕುಳಿತಿದ್ದರು. ಸಂಪುಟ ಸಭೆ ಮುಗಿಸಿ ಮಹಿಳೆಯರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.