ಬದನೆಯನ್ನು ಮಕ್ಕಳು ಸೇರಿದಂತೆ ಅನೇಕರು ಮೂಗು ಮುರಿಯುತ್ತಾರೆ. ಆದರೆ ಅದರ ನಿಜವಾದ ಅಭಿರುಚಿ ವಿವಿಧ ರೀತಿಯಲ್ಲಿ ಅಡುಗೆ ಮಾಡಿ ತಿಂದವರಿಗೆ ಮಾತ್ರ ಗೊತ್ತಿರುತ್ತೆ. ನಾವಿಂದು ರುಚಿಕರ ಹಾಗೂ ಸುಲಭವಾದ ಬದನೆ ಫ್ರೈ ರೆಸಿಪಿಯನ್ನು ತಿಳಿಯೋಣ. ಬದನೆ ಇಷ್ಟ ಪಡದವರು ಕೂಡಾ ಖಂಡಿತಾ ಇಷ್ಟಪಟ್ಟು ಸವಿಯುತ್ತಾರೆ. ಊಟದೊಂದಿಗೆ ಸೈಡ್ ಡಿಶ್ ಆಗಿಯೂ ಇದನ್ನು ಸವಿಯಬಹುದು. ಟೇಸ್ಟಿ ಬದನೆ ಫ್ರೈ ರೆಸಿಪಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಪದಾರ್ಥಗಳು: ಬದನೆ – 2 ಅರಿಶಿನ ಪುಡಿ – 1 ಟೀಸ್ಪೂನ್ ಉಪ್ಪು – ರುಚಿಗೆ ತಕ್ಕಷ್ಟು ಎಣ್ಣೆ – 4 ಟೀಸ್ಪೂನ್ ಮೆಣಸಿನ ಪುಡಿ – ಒಂದೂವರೆ ಟೀಸ್ಪೂನ್ ಮಾಡುವವಿಧಾನ: ಮೊದಲಿಗೆ ಬದನೆಯನ್ನು ತೆಳುವಾದ ಹೋಳುಗಳಾಗಿ ಕತ್ತರಿಸಿಕೊಳ್ಳಿ. * ಒಂದು ಬೌಲ್‌ನಲ್ಲಿ ಮೆಣಸಿನ ಪುಡಿ, ಅರಿಶಿನ ಪುಡಿ ಮತ್ತು ಉಪ್ಪನ್ನು ಹಾಕಿ ಮಿಶ್ರಣ ಮಾಡಿ. * ಬಳಿಕ ಬದನೆ ಹೋಳುಗಳಿಗೆ ಮೆಣಸಿನ ಪುಡಿ ಮಿಶ್ರಣವನ್ನು ಚೆನ್ನಾಗಿ ಕೋಟ್ ಆಗುವಂತೆ ಲೇಪಿಸಿಕೊಳ್ಳಿ. * ಈಗ ಪ್ಯಾನ್‌ನಲ್ಲಿ ಎಣ್ಣೆ ಸುರಿದು,…
Author: Prajatv Kannada
ದಾವಣಗೆರೆ ;- ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜಿನಾಮೆ ಕೊಡಲಿ ಎಂದು ಎಂಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರ ಪರವಾಗಿ ಮಾತನಾಡಿದರೆ ಅದು ಪಕ್ಷ ವಿರೋಧಿಯಾ? ಯಡಿಯೂರಪ್ಪ ನವರ ವಿರುದ್ಧವಾಗಿ ಮಾತನಾಡಿದರೆ ಅದು ಪಕ್ಷದ ಚಟುವಟಿಕೆಯಾ? ಎಂದು ಹೇಳಿದ್ದಾರೆ. ಯಡಿಯೂರಪ್ಪ ಒಬ್ಬ ಹುಟ್ಟು ಹೋರಾಟಗಾರ. ನೂರಾರು ಹೋರಾಟಗಳನ್ನು ಮಾಡಿ ಜೈಲಿಗೆ ಹೋಗಿಬಂದವರು. ಅನೇಕ ಬಾರಿ ದೆಹಲಿಯಲ್ಲಿ ಹೇಳಿಬಂದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪ್ರಸ್ತುತ ವಿದ್ಯಮಾನಗಳ ಹತ್ತಾರು ಬಾರಿ ಹೇಳಿದ್ದೆನೆ. ಬಸವರಾಜ್ ಬೊಮ್ಮಾಯಿ ಕೈಗಳನ್ನು ಕಟ್ಟಿ ಹಾಕಿ ಅಧಿಕಾರ ಮಾಡಿಸಿದ್ದೀರಿ. ರೇಣುಕಾಚಾರ್ಯ ಸೋತರು ಎಂಬ ಹತಾಶೆಯಿಂದ ಮಾತನಾಡುತ್ತಿಲ್ಲ. ನಾನು ಸೋತಿಲ್ಲ, ಜನ 75 ಸಾವಿರ ಮತಗಳನ್ನು ಹಾಕಿದ್ದಾರೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಮೋದಿಯವರು ಪ್ರಧಾನಿಯಾಗಬೇಕು. ಮತ್ತೊಮ್ಮೆ ಆತ್ಮವಲೋಕನ ನಡೆದು ಬಿಜೆಪಿ ಹೊಸ ಹುಟ್ಟು ಪಡೆಯಬೇಕು ಎಂದು ಹೇಳಿದರು.
ಬೆಂಗಳೂರು ;– ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಉಂಟಾಗಿರುವ ಹಿನ್ನೆಲೆ ಅಕ್ಕಿ ಬದಲು ಹಣ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಕೆ ಹೆಚ್ ಮುನಿಯಪ್ಪ, ಅಕ್ಕಿ ಪಡೆಯಲು ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ್ದೆ. ಎಫ್ಸಿಐನಲ್ಲಿ ಅಕ್ಕಿ ಸಂಗ್ರಹ ಹೆಚ್ಚಿದ್ದು, ಅಕ್ಕಿ ಕೊಡುವಂತೆ ಮನವಿ ಮಾಡಿದ್ದೆವು. ಆದರೆ ಅವರು ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ್ದಾರೆ. ಇದರಲ್ಲಿ ರಾಜಕೀಯ ಮಾಡಲಾಗಿದೆ. ಅಕ್ಕಿ ಕೊಡುವುದಾಗಿ ನಾವು ರಾಜ್ಯದ ಜನರಿಗೆ ಮಾತು ಕೊಟ್ಟಿದ್ದೇವೆ. 1 ಕೆ.ಜಿಗೆ 34 ರೂ.ನಂತೆ ಬಿಪಿಎಲ್ ಕಾರ್ಡುದಾರರಿಗೆ ಹಣ ಪಾವತಿ ಮಾಡಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರ ನಮಗೆ ಸಹಕರಿಸದ ಕಾರಣ ನಾವು ಮಾತುಕೊಟ್ಟಂತೆ ಅಕ್ಕಿಯ ಬದಲು ಹಣ ಕೊಡುತ್ತೇವೆ. ಜುಲೈಯಿಂದ ಕೆ.ಜಿಗೆ 34 ರೂ.ನಂತೆ ಕುಟುಂಬದ ಸದಸ್ಯರಿಗೆ ಅಕ್ಕಿಯ ಹಣ ನೀಡಲಾಗುತ್ತದೆ. ಒಂದು ತಿಂಗಳಿಗೆ 750ರಿಂದ 800 ಕೋಟಿ ರೂ. ಹಣ ಬೇಕಾಗುತ್ತದೆ. ಅಕ್ಕಿ ವಿಚಾರವಾಗಿ…
ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ಮಂಗಳಮುಖಿಯರ ದಾಂಧಲೆ ಇನ್ನೂ ಕೂಡ ನಿಂತಿಲ್ಲ. ಅಷ್ಟಕ್ಕೂ ಗೃಹ ಪ್ರವೇಶದ ವೇಳೆ ಮಂಗಳಮುಖಿಯರು ಮಾಡಿದ್ದೇನು ಗೊತ್ತಾ? ಹಾಗಾದರೆ ಈ ಸ್ಟೋರಿ ಪೂರ್ತಿ ಓದಿ. ಹೌದು, ಬೆಂಗಳೂರಿನ ವಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಗೃಹ ಪ್ರವೇಶದ ವೇಳೆ ಏಕಾಏಕಿ ನುಗ್ಗಿದ ಮುಂಗಳಮುಖಿಯರು ಅಸಭ್ಯ ವರ್ತನೆ ತೋರಿ ದಾಂಧಲೆ ನಡೆಸಿರುವ ಘಟನೆ ಜರುಗಿದೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ ಮುಂಗಳಮುಖಿಯರು ಏಕಾಏಕಿ ಗೃಹ ಪ್ರವೇಶದ ಮನೆಯೊಳಗೆ ನುಗ್ಗಿದ್ದಾರೆ. ಮಂಗಳಮುಖಿಯರನ್ನು ನೋಡಿ ಕುಟುಂಬದವರು ಊಟಕ್ಕೆ ಕರೆದಿದ್ದಾರೆ. ಆದರೆ ‘ನಮಗೆ ಹಣ ಕೊಡಿ’ ಎಂದು ಬಂದಿದ್ದ ಮೂವರು ಮಂಗಳಮುಖಿಯರು ಕಿರಿಕ್ ತೆಗೆದಿದ್ದಾರೆ. ನಂತರ ಐನೂರು ರೂಪಾಯಿ ನೀಡಲಾಗಿದೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಮುಂಗಳಮುಖಿಯರು ಒಬ್ಬೊಬ್ಬರಿಗೆ ಐದೈದು ಸಾವಿರ ನೀಡುವಂತೆ ಖ್ಯಾತೆ ತೆಗೆದಿದ್ದಕ್ಕೆ ಮತ್ತೆ ಮೂವರಿಗೂ ಐದು ಸಾವಿರ ನೀಡಲಾಗಿದೆ. ಇಷ್ಟಕ್ಕೆ ಸುಮ್ಮನಾಗದ ಮಂಗಳಮುಖಿಯರು ಹಣ ಪಡೆಯದೆ ದಾಂಧಲೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ರಾದ ರೋಜರ್ ಬಿನ್ನಿ ಅವರು ಭೇಟಿ ಮಾಡಿದ್ದಾರೆ. ನಿನ್ನೆ ಸಂಜೆ ಸಂಜೆ ಬಿಸಿಸಿಐ ನಿಯಂತ್ರಣ ಮಂಡಳಿಯ ಅಧ್ಯಕ್ಷ ರಾದ ರೋಜರ್ ಬಿನ್ನಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ತಮ್ಮೆಲ್ಲ ಕೆಲಸದ ಒತ್ತಡಗಳನ್ನು ಬದಿಗಿರಿಸಿ ಸಿಎಂ ಸಿದ್ದರಾಮಯ್ಯ ರೋಜರ್ ಬಿನ್ನಿ ಹಾಗೂ ಇತರರ ಜೊತೆ ಸಮಯ ಕಳೆದಿದ್ದು, ಚರ್ಚೆ ನಡೆಸಿದ್ದಾರೆ. ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ ಹಾಗೂ ಸಿದ್ದರಾಮಯ್ಯ ಭೇಟಿ ಫೋಟೋಗಳು ವೈರಲ್ ಆಗಿವೆ. ಕೆ.ಎಸ್.ಸಿ.ಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ.
ಬೆಂಗಳೂರು ;– ಸುಳ್ಳೇ ನಮ್ಮನೆ ದೇವರು ಎಂಬ ಮಾತು ಸಿದ್ದರಾಮಯ್ಯರಿಗೆ ಅನ್ವಯವಾಗಲಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಸರಕಾರದ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ದೇಶದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುವ ಐದು ಕೆಜಿ ಅಕ್ಕಿ ತಮ್ಮದೆಂದು ಯಾವುದೇ ಮುಜುಗರವಿಲ್ಲದೇ ಸುಳ್ಳು ಹೇಳುವುದು. “ಸುಳ್ಳೇ ನಿಮ್ಮನೆ ದೇವರು ಎಂಬುದಕ್ಕೆ ಸಾಕ್ಷಿಯಾಗಿದೆ” ಎಂದು ಕಿಡಿ ಕಾರಿದ್ದಾರೆ. ”ಸಿದ್ದರಾಮಯ್ಯನವರೇ ರಾಜ್ಯದ ಜನತೆಗೆ ನೀವು ಕೊಡಬೇಕಾಗಿರುವುದು ಕೇಂದ್ರ ಸರಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಹೊರತುಪಡಿಸಿ ನೀವು ನೀಡಿದ ಗ್ಯಾರಂಟಿಯ 10 ಕೆಜಿ ಅಕ್ಕಿ. ಹಿಂದಿನ ಬಾರಿಯಂತೆ ಅಕ್ಕಿ ನಿಂದು ಚೀಲ ನಂದು ಎಂದು ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ” ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು ;- ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಸಂಗೀತ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ವಜಾ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಎಫ್‌ಐಆರ್ ರದ್ದುಪಡಿಸಲು ನ್ಯಾ. ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠ ನಿರಾಕರಿಸಿತು. ಅರ್ಜಿದಾರರು ಅನುಮತಿ ಪಡೆಯದೇ ಸೋರ್ಸ್ ಕೋಡ್ ತಿರುಚಿದ್ದು, ಅದನ್ನು ಬಳಕೆ ಮಾಡಿರುವುದು ಅನುಮಾನರಹಿತವಾಗಿ ದೂರುದಾರರ ಕೃತಿಸ್ವಾಮ್ಯದ ಉಲ್ಲಂಘನೆಗೆ ಸಮನಾಗಿದೆ. ಅರ್ಜಿದಾರರು ದೂರುದಾರರ ಕೃತಿಸ್ವಾಮ್ಯವನ್ನು ಲಘುವಾದ ರೀತಿಯಲ್ಲಿ ಬಳಕೆ ಮಾಡಿದ್ದು, ಇದು ಮೇಲ್ನೋಟಕ್ಕೆ ಸಾಕ್ಷ್ಯ ಪರಿಶೀಲಿಸಬೇಕಾದ ಪ್ರಕರಣವಾಗಿದ್ದು, ತನಿಖೆಯಿಂದ ಹೊರಬರಬೇಕಿದೆ. ಹೀಗಾಗಿ, ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು ;- ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ʼಕಾಸಿಗಾಗಿ ಪೋಸ್ಟಿಂಗ್’ ಎಂಬ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟೀಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ ದಕ್ಷ ಅಧಿಕಾರಿಗಳನ್ನು ಹುಡುಕಿ ಪೋಸ್ಟಿಂಗ್ ನೀಡುತ್ತಿದ್ದೇವೆ. ಯಾವುದೇ ಭ್ರಷ್ಟಾಚಾರ ಕೂಡ ನಡೆದಿಲ್ಲ ಎಂದಿದ್ದಾರೆ. ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವೇ ಭ್ರಷ್ಟಾಚಾರ ಮಾಡಲು ಸಾಧ್ಯವಾ?, ಅದೆಲ್ಲಾ ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದರು. ಇನ್ನು ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣ ಇಲ್ಲದಿರೋ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಓಡಾಡಿದ್ದಾರೆ ಅನ್ನೋದರ ಬಗ್ಗೆ ಮಾಹಿತಿ ಬೇಕು. ಅದರ ವೆಚ್ಚ ಮಾಹಿತಿ ನೀಡಲಿದ್ದೇವೆ. ಆ ಮೊತ್ತ ಸರ್ಕಾರ ಭರಿಸಲಿದೆ. ನಾಲ್ಕು ಸ್ವಾಮ್ಯದ ಸಂಸ್ಥೆಗಳಿಗೆ ವೇತನ ನೀಡಲಾಗುವುದು. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ. ನಾವು ಸಂಬಳ…
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ಅಜ್ಮಾನ್ ನಗರದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಕೈನ್ಯೂಸ್ ವರದಿ ಮಾಡಿದೆ. ಅಜ್ಮಾನ್ ಒನ್ ವಸತಿ ಸಂಕೀರ್ಣದ 2ನೇ ಗೋಪುರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೆಲ ಅಂತಸ್ತಿನಿಂದ ಮೇಲಿನ ಮಹಡಿಯವರೆಗೆ ಹೊಗೆಯ ಕರಿಮೋಡ ಆವರಿಸಿರುವ ವೀಡಿಯೊವನ್ನು ಅಜ್ಮಾನ್ ಪೊಲೀಸರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಬೆಂಕಿಯನ್ನು ಕೆಲ ಗಂಟೆಗಳ ಕಾರ್ಯಾಚರಣೆ ಬಳಿಕ ಹತೋಟಿಗೆ ತರಲಾಗಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಅಲ್ಲಿದ್ದ ನಿವಾಸಿಗಳನ್ನು 7 ಬಸ್ಸುಗಳ ಮೂಲಕ ಅಜ್ಮಾನ್ ಮತ್ತು ಶಾರ್ಜಾದಲ್ಲಿರುವ ಹೊಟೇಲ್‌ಗಳಿಗೆ ರವಾನಿಸಲಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಅಜ್ಮಾನ್ ಪೊಲೀಸ್‌ನ ಕಾರ್ಯಾಚರಣೆ ವಿಭಾಗದ ಪ್ರಧಾನ ನಿರ್ದೇಶಕ ಬ್ರಿಗೇಡಿಯರ್ ಅಬ್ದುಲ್ಲಾ ಸೈಫ್ ಅಲ್ ಮತ್ರೂಷಿಯವರನ್ನು ಉಲ್ಲೇಖಿಸಿ ಖಲೀಜಾ ಟೈಮ್ಸ್ ವರದಿ ಮಾಡಿದೆ.
ತೈಪೆ: ದೇಶದ ಪೂರ್ವ ಕರಾವಳಿ ವ್ಯಾಪ್ತಿಯಲ್ಲಿ ರಷ್ಯಾದ ಎರಡು ಯುದ್ಧ ನೌಕೆಗಳು ಇರುವುದನ್ನು ಪತ್ತೆಯಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಲಘು ವಿಮಾನಗಳು ಹಾಗೂ ಕಣ್ಗಾವಲು ನೌಕೆಗಳನ್ನು ನಿಯೋಜಿಸಲಾಗಿದೆ ಎಂದು ತೈವಾನ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ. ರಾತ್ರಿ 11ರ ವೇಳೆಗೆ ನಮ್ಮ ಪೂರ್ವ ತೀರದಲ್ಲಿ ದಕ್ಷಿಣದಿಂದ ಉತ್ತರಕ್ಕೆ ಸಂಚರಿಸುತ್ತಿದ್ದಾಗ ರಷ್ಯಾ ನೌಕೆಗಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಎರಡು ಯುದ್ಧ ನೌಕೆಗಳು ತೈವಾನ್ ತೀರದಿಂದ ಎಷ್ಟು ದೂರದಲ್ಲಿವೆ ಎಂಬುದನ್ನು ಖಚಿತಪಡಿಸಿಲ್ಲ. ಚೀನಾ ನೌಕೆಗಳು ತನ್ನ ಸಮುದ್ರ ಪ್ರದೇಶದಲ್ಲಿ ನಿತ್ಯ ಕಾಣಿಸಿಕೊಳ್ಳುತ್ತಿವೆ ಎಂದು ದ್ವೀಪ ರಾಷ್ಟ್ರವಾಗಿರುವ ತೈವಾನ್‌ನಲ್ಲಿ ವರದಿಯಾಗುತ್ತಿರುತ್ತದೆ. ಆದರೆ, ಈ ದ್ವೀಪವು (ತೈವಾನ್) ತನ್ನದೇ ಭೂ ಪ್ರದೇಶ ಎಂದು ಹೇಳಿಕೊಂಡಿರುವ ಚೀನಾ, ಅಗತ್ಯಬಿದ್ದರೆ ಮುಂದೊಂದು ದಿನ ಬಲವಂತವಾಗಿ ವಶಪಡಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.