ರಾಮನಗರ: ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮನಗರ ವ್ಯಾಪ್ತಿಯ ತಾವರೆಕೆರೆ ಪೋಲಿಸರು ಬಂಧಿಸಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನದ ಬಗ್ಗೆ ಕಾರ್ಯಾಚರಣೆ ನಡೆಸುತಿದ್ದ ತಾವರೇಕೆರೆ ಪೊಲೀಸರು ಮಾಹಿತಿ ಸಿಕ್ಕ ಆದರದ ಮೇಳೆ ಖದೀಮರು ಸಿಕ್ಕಿಬಿದ್ದಿದ್ದಾರೆ. ಇನ್ನೂ ಆರೋಪಿಗಳಿಂದ ಐದು ಬೈಕ್ ಗಳ ವಶಕ್ಕೆ ಪಡೆದಿದ್ದು, ಈ ಘಟನೆ ಸಂಬಂಧ ಆರೋಪಿಗಳ ಮೇಲೆ ತಾವರೆಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Prajatv Kannada
ಗಂಗಾವತಿ: ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳನ್ನ ಬಿಡುವಂತೆ ಎಬಿವಿಪಿಯಿಂದ ಗಂಗಾವತಿ ನಗರದ ಶ್ರೀ ಕೃಷ್ಣದೇವರಾಯ ಹತ್ತಿರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಕ್ತಿ ಯೋಜನೆ ಜಾರಿ ಹಿನ್ನೆಲೆ ಬಸ್ ಗಳೆಲ್ಲಾ ಮಹಿಳಾ ಪ್ರಯಾಣಿಕರಿಂದ ತುಂಬುತ್ತಿವೆ. ಆದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದ್ರಿಂದ ತೊಂದರೆ ಆಗಿದ್ದು, ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ. ವಿದ್ಯಾರ್ಥಿಗಳು ಬಸ್‌ಗಳ ಬಾಗಿಲಿಗೆ ಜೋತುಬಿದ್ದು ಪ್ರಯಾಣಿಸುವ ಪರಿಸ್ಥಿತಿ ಎದುರಾಗಿದ್ದು, ಮಹಿಳೆಯರಿಗೆ ಉಚಿತ ಪ್ರಯಾಣದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಕಲ್ಪಿಸಬೇಕೆಂದು ಆಗ್ರಹಿಸಿ ಕೆಲಹೊತ್ತು ಬಸ್ ನಿಲ್ದಾಣದ ಪ್ರವೇಶ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಯಿತು. ನಂತರ ಕಂಪ್ಲಿ, ಬೂದಗುಂಪ, ಆನೆಗುಂದಿ, ಕನಕಗಿರಿ ಭಾಗಕ್ಕೆ ತಲಾ 1ಬಸ್ ಹಾಗೂ ಕಾರಟಗಿ ಭಾಗಕ್ಕೆ ಹೆಚ್ಚುವರಿ ಬಸಗಳನ್ನು ಬಿಡುವಂತೆ ಎಬಿವಿಪಿ ಕಾರ್ಯಕರ್ತರು ಗಂಗಾವತಿ ತಹಸಿಲ್ದಾರ್ ಗೆ ಹಾಗೂ ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಭೋಪಾಲ್: ವಿಪಕ್ಷದ ಪ್ರತಿ ನಾಯಕರು (Opposition Leaders) 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೂನ್ 23ರಂದು ಪಾಟ್ನಾದಲ್ಲಿ (Patna) ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದ ವಿರೋಧ ಪಕ್ಷದ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದು, ವಿಪಕ್ಷದ ಪ್ರತಿ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು. ಬೂತ್ (Booth) ಮಟ್ಟದ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಿದ ಅವರು, ಗ್ಯಾರಂಟಿ (Guarantee) ಎನ್ನುವ ಪದ ಇತ್ತಿಚೀನ ದಿನಗಳಲ್ಲಿ ಜನಪ್ರಿಯ ವಾಗುತ್ತಿದೆ. ಇದು ಭ್ರಷ್ಟಾಚಾರದ (Corruption) ಗ್ಯಾರಂಟಿ ಎಂದು ನಾಗರಿಕರಿಗೆ ತಿಳಿಸುವುದು ಬಿಜೆಪಿ (BJP) ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಕೊಂಕು ನುಡಿದರು. ವಿರೋಧ ಪಕ್ಷದ ನಾಯಕರು ಇತ್ತೀಚೆಗೆ ಸಭೆ ನಡೆಸಿದ್ದರು. ಈ ಫೋಟೊವನ್ನು ನೋಡಿದಾಗ ಪ್ರತಿ ನಾಯಕರು 20 ಲಕ್ಷ ಕೋಟಿ…
ಮುಂಬೈ: ಎರಡು ಪ್ರಮುಖ ರಸ್ತೆಗಳಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಮರುನಾಮಕರಣ ಮಾಡಿದೆ. ವರ್ಸೋವಾ-ಬಾಂದ್ರಾ ಸೀ ಲಿಂಕ್ ಅನ್ನು ವೀರ ಸಾವರ್ಕರ್ ಸೇತು (Veer Savarkar Setu) ಮತ್ತು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನ್ಹವ ಶೇವಾ ಅಟಲ್ ಸೇತು (Atal Bihari Vajpayee Smruti Nhava Sheva Atal Setu) ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ವಿನಾಯಕ ದಾಮೋದರ್ ಸಾವರ್ಕರ್ ಹಿಂದೂ ರಾಷ್ಟ್ರೀಯವಾದಿ ನಾಯಕ. 1910 ರಲ್ಲಿ ಅವರನ್ನು ಬಂಧಿಸಿ 1911 ರಲ್ಲಿ 50 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲರ್ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು. 1921 ರಲ್ಲಿ ‘ಎಸೆನ್ಷಿಯಲ್ಸ್ ಆಫ್ ಹಿಂದುತ್ವ’ ಎಂಬ ಪುಸ್ತಕವನ್ನು ಬರೆದರು. ಅಟಲ್ ಬಿಹಾರಿ ವಾಜಪೇಯಿ ಮಾಜಿ ಪ್ರಧಾನಮಂತ್ರಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ…
ಧಾರವಾಡ : ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ವಾಹನ ಚಾಲಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಗುತ್ತಿಗೆ ಚಾಲಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಮತ್ತು ಸಹಾಯಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಸದಸ್ಯರು ಸರ್ಕಾರಗಳ ವಿರುದ್ಧ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದರು. ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿದೆ. ಯಾವಾಗ ಯಾರನ್ನು ತೆಗೆದು ಹಾಕುತ್ತಾರೋ, ಯಾರಿಗೆ ಟೆಂಡರ್ ಆಗುತ್ತೋ ಎಂಬ ಭಯದಲ್ಲಿಯೇ ಗುತ್ತಿಗೆ ಚಾಲಕರು ಕಾರ್ಯ ನಿರ್ವಹಿಸುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ವಾಹನ ಚಾಲಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಇನ್ನಿತರ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದರು. ಈಗಾಗಲೇ ಹಲವಾರು ಬಾರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ…
ದೊಡ್ಡಬಳ್ಳಾಪುರ: ನಾಳೆ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸಲಹೆ ನೀಡಿದರು. ನಗರದ ಬಸವ ಭವನದಲ್ಲಿ ಬುಧವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿದ ಅವರು, ಮುಸ್ಲಿಮರು ಹಾಗೂ ಅನ್ಯ ಧರ್ಮಿಯರು ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳಿಗೆ ಆಸ್ಪದ ನೀಡಬಾರದು. ಅಂತಹ ಚಟುವಟಿಕೆ ಕಂಡುಬಂದರೆ ಪೊಲೀಸರಿಗೆ ಮಾಹಿತ ನೀಡಬೇಕು ಎಂದು ಸೂಚಿಸಿದರು. ಪ್ರತಿಯೊಂದು ಧರ್ಮವೂ ಶಾಂತಿ, ಸಹಭಾಳ್ವೆ ಹಾಗೂ ಸೌಹಾರ್ದತೆಯನ್ನು ಸಾರುತ್ತವೆ. ಅವರವರ ಧರ್ಮ ಅವರಿಗೇ ಶ್ರೇಷ್ಠ. ಅವರ ಆಚರಣೆಗಳಿಗೆ ಯಾರೂ ಕೂಡ ದಕ್ಕೆ ತರಬಾರದು. ಆಯಾ ಧರ್ಮದ ಧಾರ್ಮಿಕ ಹಬ್ಬಗಳ ಆಚರಣೆ ವೇಳೆ ಅನ್ಯಧರ್ಮಿಯರು ಸಹಕರಿಸಬೇಕು. ಆಗಷ್ಟೇ ದೇಶದ ಏಕತೆಗೆ ಅರ್ಥ ಬರಲಿದೆ. ಶಾಂತಿ ಭಂಗ ಉಂಟು ಮಾಡುವ ಹೇಳಿಕೆ, ಧರ್ಮಧರ್ಮಗಳ ವಿರುದ್ಧ ಎತ್ತಕಟ್ಟುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು. ಆಗೊಮ್ಮೆ ಕಾನೂನು ಉಲ್ಲಂಘಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ.…
ಹುಬ್ಬಳ್ಳಿ: ಒಂದು ಮುಂಗಾರು ಹಂಗಾಮು ಹಾಳು ಇನ್ನೊಂದು ಕಡೆ ಟೊಮ್ಯಾಟೊ ಸೇರಿದಂತೆ ತರಕಾರಿ ಬೆಲೆ ಏರಿಕೆ ಆಗಿದ್ದು ಅದರಲ್ಲೂ ಟೊಮ್ಯಾಟೊ ಬೆಲೆ ಗಗನಕ್ಕೆ ಹೋಗಿದ್ದರಿಂದ ಜನಸಾಮಾನ್ಯರು ಕಂಗಾಲು ಆಗಿದ್ದಾರೆ. ಟೊಮೆಟೊ ಬೆಲೆ ಹೊಸ ದಾಖಲೆ ಬರೆದಿದ್ದು, ಸತತವಾಗಿ ಬೆಲೆ ಏರಿಕೆಯಾಗುತ್ತಲೇ ಇರುವ ಪರಿಣಾಮ ಕೆಜಿ ಟೊಮೆಟೊ ಬೆಲೆ 100 ರೂಪಾಯಿಯ ಗಡಿ ದಾಟಿದೆ. ಒಂದು ಸರ್ಕಾರ ಐದು ಗ್ಯಾರಂಟಿಗಳಲ್ಲಿ ಗ್ಯಾರಂಟಿಗಳನ್ನ ಜಾರಿಗೆ ತರುವ ಪ್ರಯತ್ನ ಇನ್ನೊಂದು ಕಡೆ ಟೊಮ್ಯಾಟೊ ದಂತಹ ತರಕಾರಿ ಬೆಲೆ ಏರಿಕೆ ಬಿಸಿಯಿಂದಾಗಿ ಸರ್ಕಾರಕ್ಕೆ ತಲೆ ಬೇನೆ ಹಾಗಿದೆ.. ಈ ಕುರಿತು ಒಂದು ವಿಶೇಷ ವರದಿ… ಟೊಮ್ಯಾಟೊ ಬೆಲೆ ಈಗ ನೂರರ ಗಡಿ ದಾಟಿದೆ. ಟೊಮ್ಯಾಟೊ ಬಳಕೆ ಪ್ರತಿಯೊಂದು ಅಡುಗೆ ಮಾಡಲು ಅತ್ಯವಶ್ಯಕ ಆದರೆ ಈಗ ಬೆಲೆ ಏರಿಕೆಯಿಂದ ಒಂದು ಜನಸಾಮಾನ್ಯರು ಆರ್ಥಿಕ ಹೊಡೆತಕ್ಕೆ ಸಿಲುಕಿದರೆ ಇನ್ನೊಂದು ಕಡೆ ಸರ್ಕಾರಕ್ಕೋ ಕೂಡ ದೊಡ್ಡ ಸವಾಲು ಆಗಿದೆ. ಸಗಟು ಮಾರುಕಟ್ಟೆ ಬೆಲೆಗಳನ್ನು ಧಾರವಾಡ ಜಿಲ್ಲೆಯಲ್ಲಿ ನೋಡುವುದಾದರೆ ನವಲಗುಂದದಲ್ಲಿ 110 ಕೆಜಿಗೆ ರೂಪಾಯಿ…
ಧಾರವಾಡ: ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಹಳ್ಳಿಕಡೆಗಳಲ್ಲಿ ಹಾವುಗಳು ಮನೆಯೊಳಗೆ ಬರುವ ಘಟನೆಗಳು ಹೆಚ್ಚಾಗಿ ಕೇಳಿ ಬರುತ್ತವೆ. ಅದೇ ರೀತಿ ಶೂ ಒಳಗಡೆ ಬೆಚ್ಚಗೆ ಅವಿತು ಕುಳಿತ್ತಿದ್ದ ನಾಗರ ಹಾವಿನ ಮರಿಯನ್ನು ರಕ್ಷಣೆ ಮಾಡಿದ ಘಟನೆ ಧಾರಾವಾಡ ನಗರದ ಹೊಸಯಲ್ಲಾಪೂರದ ಮೇದಾರ ಓಣಿಯಲ್ಲಿ ನಡೆದಿದೆ. ನಂದಿತಾ ಶಿವನಗೌಡರ ಎಂಬವರ ಮನೆಯಲ್ಲಿ ಹಾವು ಪತ್ತೆಯಾಗಿದೆ. ಕಸ ಗುಡಿಸುವ ವೇಳೆ ಹಾವು ನೋಡಿದ ನಂದಿತಾ ಬೆಚ್ಚಿಬಿದ್ದಿದ್ದಾರೆ. ನಂತರ ಉರಗ ತಜ್ಞ ಎಲ್ಲಪ್ಪ ಜೋಡಳ್ಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಎಲ್ಲಪ್ಪ ಜೋಡಳ್ಳಿ ನಾಗರಹಾವಿನ ಮರಿಯನ್ನ ರಕ್ಷಣೆ ಮಾಡಿದ್ದಾರೆ.
ಬೆಂಗಳೂರು: ನೈತಿಕತೆ ಇಲ್ಲದ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಸಿದ್ದರಾಮಯ್ಯ ಬಡವರಿಗೆ ಮೋಸ ಮಾಡಿದ್ದಾರೆ. ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಈಗ ಜನಕ್ಕೆ ಮೋಸ ಮಾಡಿದ್ದೀರಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಕಿಡಿಕಾರಿದ್ದಾರೆ. ಹಣ ತಿನ್ನಲು ಆಗಲ್ಲ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಕೊಡಪ್ಪ ಅಕ್ಕಿನಾ. ನಾವು ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು. ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಸರ್ಕಾರಕ್ಕೆ ಅಕ್ಕಿ ಕೊಡಲಾಗದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದಿದ್ದರು. ಕೇಂದ್ರ ಸರ್ಕಾರದ್ದು ಸೇರಿದಂತೆ ಒಟ್ಟು 15 ಕೆಜಿ ಅಕ್ಕಿ ಕೊಡಬೇಕಿತ್ತು. ಈಗ ರಾಜ್ಯ ಸರ್ಕಾರ ಅಕ್ಕಿ ಬದಲು ಹಣ ಹಾಕಲು ಹೊರಟಿದೆ. ಹಣ ಏನು ತಿನ್ನಲು ಆಗುತ್ತಾ ಅಂತಾ ಎಂದಿದ್ದಾರೆ.
ಬೆಂಗಳೂರು: ಅಕ್ಕಿ ಬದಲು ಹಣ ನೀಡುವ ಕುರಿತ ಸರ್ಕಾರದ ನಿರ್ಣಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ 10 ಕೆ.ಜಿ ಅಕ್ಕಿ ಅಂದಿದ್ರು. ನಮ್ಮದು ಸೇರಿ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕಿತ್ತು. ಈವಾಗ ಅಕ್ಕಿಗೆ ಹಣ ಹಾಕೋಕೆ ಹೊರಟಿದ್ದಾರೆ ಎಮದು ಆಕ್ರೋಶ ಹೊರಹಾಕಿದ್ರು. ಹಣ ಏನು ತಿನ್ನೋಕೆ ಆಗುತ್ತಾ ಅಂತಾ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ರು. ನಿಮಗೆ ಶಕ್ತಿ ಇದ್ರೆ 10 ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಘಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.