ಆಕ್ಷನ್ ದೃಶ್ಯಗಳ ಚಿತ್ರೀಕರಣದ ವೇಳೆ ಕಾಲಿಗೆ ಬಲವಾಗಿ ಪೆಟ್ಟು ಬಿಟ್ಟು ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಪೃಥ್ವಿರಾಜ್ ಸುಕುಮಾರನ್ ಶಸ್ತ್ರಚಿಕಿತ್ಸೆಯ ಬಳಿಕ ಭಾವುಕ ಫೋಸ್ಟ್ ಹಂಚಿಕೊಂಡಿದ್ದಾರೆ. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ತೀವ್ರ ಗಾಯ ಮಾಡಿಕೊಂಡಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚನೆ ನೀಡಿದ್ದರು. ಅದರಂತೆ ಇದೀಗ ಶಸ್ತ್ರಚಿಕಿತ್ಸಗೆ ಒಳಗಾಗಿದ್ದು ಬಳಿಕ ಭಾವುಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪತ್ರ ಬರೆದಿದ್ದು, ‘ನೋವಿನ ವಿರುದ್ಧ ಹೋರಾಡಿ, ಗೆದ್ದು ಮತ್ತೆ ನಾನು ಬರುತ್ತೇನೆ. ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯವಾಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ಹಲವು ತಿಂಗಳ ಬಳಿಕ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗುವೆ’ ಎಂದಿದ್ದಾರೆ.
Author: Prajatv Kannada
ಕಾಂತಾರ ಸಿನಿಮಾದ ಬಳಿಕ ನಟ ರಿಷಬ್ ಶೆಟ್ಟಿ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಈ ಮಧ್ಯೆ ವಾಷಿಂಗ್ಟನ್ ನಗರದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪತ್ನಿ ಪ್ರಗತಿ ಶೆಟ್ಟಿಯೊಂದಿಗೆ ಅಮೆರಿಕಾದ ವಾಷಿಂಗ್ಟನ್ ನ ಸಿಯಾಟಲ್ ಗೆ ಭೇಟಿ ನೀಡಿದ್ದ ವೇಳೆ, ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಉಪಸ್ಥಿತರಿದ್ದರು. ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು.
ಬೆಂಗಳೂರು: 5 ಕೆಜಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಜನರಿಗೆ ನೀಡಲು ನಿರ್ಧಾರ ಮಾಡಲಾಗಿದೆ. BPL ಕಾರ್ಡ್ನಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ಮಾಸಿಕ 170 ರೂ. ನೀಡಲಾಗುತ್ತೆ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 1ರಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಅಕ್ಕಿ ಸಿಗುವವರೆಗೆ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ನೀಡುತ್ತೇವೆ ಎಂದು ಹೇಳಿದರು. ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಹಾಗೂ ಹೆಚ್.ಕೆ ಪಾಟೀಲ್, ಅನ್ನಭಾಗ್ಯ ಯೋಜನೆ ಅಕ್ಕಿ ಹೊಂದಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾಪ ತಿರಸ್ಕಾರ ಹಾಗೂ ಇತರೆ ರಾಜ್ಯಗಳಿಂದ ಅಕ್ಕಿ ಕೊಳ್ಳುವ ಮುಂದಿನ ನಡೆ ಬಗ್ಗೆ ಸಹ ಚರ್ಚೆ ನಡೆಸಲಾಯಿತು ಎಂದರು. ಬಳಿಕ 10 ಕೆ.ಜಿ ಅಕ್ಕಿ ಬದಲಿಗೆ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ/ಗೋಧಿ ಅಥವಾ ಜೋಳ…
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್‍ಗೆ ಸಚಿವ ಸಂಪುಟ ದಲ್ಲಿ ಗ್ರೀನ್ ಸಿಗ್ನಲ್ ದೊರಕಿದೆ. ಈ ಮೂಲಕ ಆಗಸ್ಟ್ ನಲ್ಲಿ ಗೃಹಿಣಿಯರ ಅಕೌಂಟ್ 2 ಸಾವಿರ ಫಿಕ್ಸ್ . ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಬಗ್ಗೆ ಚರ್ಚೆ ನಡೆದಿದ್ದು. ಈ ವೇಳೆ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ದರಾಮಯ್ಯಗೆ ಆಪ್ ಬಗ್ಗೆ ವಿವರಣೆ ನೀಡಿದ್ರೆ ಪ್ರತ್ಯೇಕ ಆಪ್ ಬಗ್ಗೆ ಸಂಪುಟ ಸಹೋದ್ಯೋಗಿಗಳಿಗೂ ಮಾಹಿತಿ ನೀಡಿದರು. ಬಳಿಕ ಆಪ್ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಯಿತು. ಅರ್ಜಿ ಸಲ್ಲಿಕೆ ಯಾವ ದಿನಾಂಕದಿಂದ ಆರಂಭವಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಈ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರು ಸರ್ವರ್ ಬ್ಯುಸಿ ಆಗದಂತೆ ಪ್ಲಾನ್ ಮಾಡಲಾಗುತ್ತಿದೆ. ಬಾಪೂಜಿ ಸೇವಾ ಕೇಂದ್ರದ…
ಬೆಂಗಳೂರು: ಸ್ತ್ರಿ ಶಕ್ತಿ ಸಂಘದ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸಿಎಂ ನಿವಾಸದ ಬಳಿ ಸ್ತ್ರೀ ಶಕ್ತಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಚುನಾವಣಾ ಸಮಯದಲ್ಲಿ ಸ್ತ್ರೀ ಶಕ್ತಿ ಸಂಘದ ಸಾಲ ಮನ್ನಾದ ಭರವಸೆ ನೀಡಿದ್ರಿ, ಅದರಂತೆ ಈಗ ಸಾಲ ಮನ್ನಾ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಸಿಎಂ ಬರುವವರೆಗೂ ನಾವು ಇಲ್ಲಿಂದ ಕದಲೋದಿಲ್ಲ ಎಂದು ಸಿಎಂ ನಿವಾಸ ಕುಮಾರಕೃಪ ರಸ್ತೆಯಲ್ಲೇ ಕುಳಿತುಕೊಂಡಿದ್ದಾರೆ. ಐದು ಗ್ಯಾರಂಟಿಗಳ ವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಹೊಸ ಟೆನ್ಶನ್ ಒಂದು ಶುರುವಾಗಿಬಿಟ್ಟಿದೆ. ಕಾಂಗ್ರೆಸ್ ನಾಯಕರು ಪ್ರಚಾರದ ವೇಳೆ ಕೊಟ್ಟಿರುವ ಭರವಸೆಯನ್ನು ಗಂಭೀರವಾಗಿ ತೆಗೆದುಕೊಂಡ ಮಹಿಳೆಯರು ಈಗ ಸಹಕಾರ ಸಂಘಗಳಿಂದ ತೆಗೆದುಕೊಂಡ ಸಾಲವನ್ನು ಮನ್ನಾ ಮಾಡುವಂತೆ ಸಿದ್ದರಾಮಯ್ಯ ನಿವಾಸದೆದುರು ಮಹಿಳೆಯರಿಂದ ಆಗ್ರಹ ಫ್ರೀ ಬಸ್ ಇರುವುದರಿಂದ ಬಸ್ ಹತ್ತಿ ಕೋಲಾರ, ಚಿಕ್ಕಬಳ್ಳಾಪುರ ಭಾಗದಿಂದ ಬಂದ ನೂರಾರು ಮಹಿಳೆಯರು ಸ್ವತಃ ಸಿದ್ದರಾಮಯ್ಯನವರಿಂದ ನಲವತ್ತು ಸಾವಿರ ಮಹಿಳೆಯರ ಮುಂದೆ ಆಡಿದ ಮಾತಿಗೆ ಈಗ ಸಾಲ ಮನ್ನಾ ಮಾಡುವಂತೆ ಆಗ್ರಹಿಸುತ್ತಿದ್ದಾರೆ.…
ಶಿವಮೊಗ್ಗ: ಹಂತ ಹಂತವಾಗಿ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡ್ತಿದೆ. ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ನನಗೆ ಅರ್ಥ ಆಗ್ತಿಲ್ಲ ಎಂದು ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಿಜೆಪಿಯವರು 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು ಕೊಟ್ರಾ ಬಿಜೆಪಿಯವರು 5 ಗ್ಯಾರಂಟಿಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಜನವರಿವರೆಗೆ ಬಿಜೆಪಿಯವರು ಗ್ಯಾರಂಟಿ ಬಗ್ಗೆ ಮಾತನಾಡಬಾರದು. ಬಿಜೆಪಿ ಹಗರಣ ಬಗ್ಗೆ ತನಿಖೆ ಮಾಡಲು ನಾನು ಒತ್ತಾಯ ಮಾಡ್ತೇನೆ. ಬಿಜೆಪಿ ಹಗರಣದ ದುಡ್ಡಲ್ಲೇ ನಾನು ತೀರ್ಥಹಳ್ಳಿಯಲ್ಲಿ ಸೋತಿದ್ದೇನೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 70 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದರು
ಬೆಂಗಳೂರು: ಬೋರಿಂಗ್ ಆಸ್ಪತ್ರೆಗೆ ಬಡ ಮಹಿಳೆಯನ್ನು ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಕರ್ತವ್ಯ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿಯಾದ ಆಶಾ ಎಂಬ ಮಹಿಳೆಯ ಕೀಲು ಡಿಸ್ ಲೋಕೆಟ್ ಆಗಿತ್ತು. ಇದನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲು 5 ಲಕ್ಷ ರೂಪಾಯಿಗಳು ವೆಚ್ಚವಾಗುತ್ತಿತ್ತು. ಮಹಿಳೆಯು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಹೀಗಾಗಿ ಆ ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಶಾಸಕ ಡಾ.ರಂಗನಾಥ್ ಅವರು ಉಚಿತವಾಗಿ ಬರೋಬ್ಬರಿ 4 ತಾಸು ತಾವೇ ಆಪರೇಷನ್ ಮಾಡಿದ್ದಾರೆ. ಡಾ.ರಂಗನಾಥ್ ಅವರು ಮೂಲತಹ ಆರ್ಥೋಪೆಡಿಕ್ (Orthopedic) ಡಾಕ್ಟರ್ ಆಗಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಶಾಸಕರ ಈ ಸೇವೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಶಾ ಅವರು ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಈಗ ಅದು ಮತ್ತೆ ಡಿಸ್ ಲೋಕೆಟ್ ಆಗಿತ್ತು. ಇದರಿಂದ ಸರ್ಕಾರದ ಯೋಜನೆಯಾದ ಯಶಸ್ವಿನಿಯಡಿ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಮತ್ತೆ ಸರ್ಜರಿ ಮಾಡಿಸಬೇಕು ಎಂದರೆ ಹಣ ಪಾವತಿಸಬೇಕಾಗಿತ್ತು. ಈ…
ದೆಹಲಿ: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ್ದ ಮುತ್ತಯ್ಯ ಮುರಳಿಧರನ್, “2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ vs ಇಂಗ್ಲೆಂಡ್ ತಂಡಗಳನ್ನು ನೋಡಲು ಎದುರು ನೋಡುತ್ತಿದ್ದೇನೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ನೆಚ್ಚಿನ ತಂಡವಾಗಿದೆ. ಏಕೆಂದರೆ ತವರಿನಲ್ಲಿ ಹೇಗೆ ಗೆಲ್ಲಬೇಕೆಂದು ಭಾರತ ತಂಡಕ್ಕೆ ಚೆನ್ನಾಗಿ ಗೊತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್‌ಗೆ ಲಗ್ಗೆ ಇಟ್ಟರೆ ಪಂದ್ಯ ತುಂಬಾ ಆಸಕ್ತಿಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ. 2011ರಲ್ಲಿ ಶ್ರೀಲಂಕಾ, ಬಾಂಗ್ಲಾದೇಶದ ಜೊತೆ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿತ್ತು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮುತ್ತಯ್ಯ ಮುರಳಿಧರನ್ ಕೂಡ ಆಡಿದ್ದರು. ಅತ್ಯುತ್ತಮ ಪ್ರದರ್ಶನ ತೋರಿದ್ದ…
ಆರ್ ಆರ್ ಆರ್ ಸಿನಿಮಾದ ಬಳಿಕ ನಟ ಜ್ಯೂನಿಯರ್ ಎನ್ ಟಿ ಆರ್ ಗ್ಲೋಬಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ಅಪ್ಪನಾದ ಸಂತಸದಲ್ಲಿರುವ Jr NTR ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಸಿನಿಮಾಗೆ ದೇವರ ಎಂದು ಹೆಸರಿಡಲಾಗಿದ್ದು ಚಿತ್ರದಲ್ಲಿ ಜೂ.ಎನ್ ಟಿ ಆರ್ ಗೆ ಜೋಡಿಯಾಗಿ ನಟಿ ಸಾಯಿ ಪಲ್ಲವಿ ಎಂಟ್ರಿಕೊಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೊರಟಾಲ ಶಿವ ನಿರ್ದೇಶನದ ದೇವರ ಸಿನಿಮಾದಲ್ಲಿ ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಸೇರಿದಂತೆ ಬಾಲಿವುಡ್ ನ ದೊಡ್ಡ ದೊಡ್ಡ ತಾರೆಯರೇ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಜೂನಿಯರ್ ಎನ್ ಟಿ ಆರ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಹಾಗೂ ಎರಡನೇ ನಟಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಾಯಿ ಪಲ್ಲವಿ ಹಾಗೂ ಜ್ಯೂನಿಯರ್ ಎನ್ ಟಿ ಆರ್ ಫೋಟೋಗಳು ಸಾಮಾಜಿಕ ಜಾಲಾ ತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಸಿನಿಮಾದ ಅಧಿಕೃತ ಟ್ವಿಟ್ಟರ್ ಹ್ಯಾಂಡ್ನಿಂದ ಈ ಬಗ್ಗೆ…
ಟಾಲಿವುಡ್ ನ ಸ್ಟಾರ್ ನಟ ಪವನ್ ಕಲ್ಯಾಣ್ ಸಿನಿಮಾಗಳಿಗೆ ಬ್ರೇಕ್ ಪಡೆದುಕೊಂಡು ಫುಲ್ ಟೈಮ್ ರಾಜಕೀಯದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹೇಗಾದರೂ ಮಾಡಿ ಜನಸೇನಾ ಪಕ್ಷವನ್ನು ಗೆಲ್ಲಿಸಲೇ ಬೇಕೆಂಬ ನಿರ್ಧಾರ ತೆಗೆದುಕೊಂಡಿರುವ ನಟ ರಾಜ್ಯದಾದ್ಯಂತ ಯಾತ್ರೆ ಪ್ರಾರಂಭಿಸಿದ್ದು, ಯಾತ್ರೆಗೆ ವಾರಾಹಿ ಯಾತ್ರೆ ಎಂದು ಹೆಸರಿಟ್ಟಿದ್ದಾರೆ. ಆದರೆ ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಯಾತ್ರೆಗೆ ಅಲ್ಪ ವಿರಾಮ ಹಾಕಿರುವ ನಟ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಿಡುವಿಲ್ಲದ ಯಾತ್ರೆಯಿಂದ ಧಣಿದಿರುವ ಪವನ್ ಕಲ್ಯಾಣ್ ಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದೆ. ನಿನ್ನೆ ಪವನ್ ಕಲ್ಯಾಣ್ ಯಾತ್ರೆ ಭೀಮವರಂ ತಲುಪಿ ಅಲ್ಲಿನ ನಾಯಕರು, ಮುಖಂಡರುಗಳೊಟ್ಟಿಗೆ ಚರ್ಚೆ ನಡೆಸಬೇಕಿತ್ತು. ಆದರೆ ಪವನ್ ಕಲ್ಯಾಣ್ ಆರೋಗ್ಯದಲ್ಲಿ ವ್ಯತ್ಯಯ ಆಗಿರುವ ಕಾರಣ ಭೀಮವರಂ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಅಭಿಮಾನಿಗಳು ಆತಂಕ ಪಡುವಂಥಹದ್ದೇನೂ ಇಲ್ಲ, ಆದಷ್ಟು ಬೇಗ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಚೇತರಿಕೆ ಕಾಣಲಿದ್ದು ಅವರ ಯಾತ್ರೆ ಭೀಮವರಂ ತಲುಪಲಿದೆ ಎಂದು ಜನಸೇನಾ ಪಕ್ಷ ಮುಖಂಡರು ತಿಳಿಸಿದ್ದಾರೆ. ಪವನ್ ಕಲ್ಯಾಣ್ರ ವಾರಾಹಿ ಯಾತ್ರೆ ರಾಜ್ಯವೆಲ್ಲ ಸಂಚರಣೆ ಮಾಡಲಿದೆ.…