ಬೆಂಗಳೂರು: ಕಳೆದ ಬಾರಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಾಗ ಹಣ ಹೊಡೆಯುತ್ತಾರೆ ಎಂದು ಜೋರಾಗಿ ಪ್ರತಿಭಟನೆ ಮಾಡಿದರು. ಆಗ ಸಿದ್ದರಾಮಯ್ಯ ಹಾಗೂ ಜಾರ್ಜ್ ಯೋಜನೆ ಕೈ ಬಿಟ್ಟರು. ನಾನಾಗಿದ್ದರೆ ಯಾವುದಕ್ಕೂ ಬಗ್ಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈಗಲೂ ನಾನು ಕೆಲವು ನಿರ್ಧಾರ ಕೈಗೊಳ್ಳುತ್ತೇನೆ. ಪ್ರತಿಭಟನೆ ಮಾಡುವವರು ಸಿದ್ಧರಾಗಲಿ. ನಾನು ಮಾತ್ರ ಕೆಲಸದ ವಿಚಾರದಲ್ಲಿ ಮುಂದೆ ಸಾಗುತ್ತಿರುತ್ತೇನೆ ಎಂದರು. ಮಾನವನ ಗುಣಗಳಲ್ಲಿ ನಂಬಿಕೆ ಬಹಳ ಶ್ರೇಷ್ಠವಾದ ಗುಣ. ನೀವು ನಮ್ಮ ಮೇಲೆ ನಂಬಿಕೆ ಇಟ್ಟಿದ್ದೀರಿ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ನಾವು ಪ್ರತಿಮೆಗಿಂತ ಪ್ರಗತಿ ಬಗ್ಗೆ ಹೆಚ್ಚು ಆದ್ಯತೆ ನೀಡುತ್ತೇವೆ. ಈ ಹಿಂದಿನ ಸರ್ಕಾರಗಳು ಅನೇಕ ಕೆಲಸ ಮಾಡಿವೆ. ಅವರ ಆಚಾರ ವಿಚಾರಕ್ಕೆ ತಕ್ಕಂತೆ ಕೆಲಸ ಮಾಡಿವೆ ಎಂದರು. ಬೆಂಗಳೂರಿಗೆ ಕುಡಿಯುವ ನೀರು ಪೂರೈಸಬೇಕು. ಇದಕ್ಕಾಗಿ ಮೇಕೆದಾಟು ಯೋಜನೆ ಮುಂದಾಗಿದ್ದೇವೆ. ಇದರ ಜತೆಗೆ ಕಸದ ಸಮಸ್ಯೆ ನಿವಾರಣೆ ಮಾಡಬೇಕು. ಕೆಂಪೇಗೌಡರು ಹೇಗೆ ಎಲ್ಲಾ ಸಮಾಜದವರನ್ನು ಒಟ್ಟಾಗಿ ತೆಗೆದುಕೊಂಡು ಬೆಂಗಳೂರು ಕಟ್ಟಿದ್ದಾರೋ ಹಾಗೆಯೇ…
Author: Prajatv Kannada
ತುಮಕೂರು: ನನ್ನನ್ನು ಎದುರು ಹಾಕೊಂಡು ಯಾರೂ ಗೆಲ್ಲೋಕಾಗಲ್ಲ ಎಂಬ ಸಹಕಾರಿ ಸಚಿವ ಕೆ.ಎನ್.ರಾಜಣ್ಣ (KN Rajanna) ರ ದರ್ಪದ ಮಾತು ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ತುಮಕೂರಿನಲ್ಲಿ ನಡೆದ ವಾಲ್ಮಿಖಿ ಸಮುದಾಯದ ಅಭಿನಂದನಾ ಸಮಾವೇಶದಲ್ಲಿ ಕೆ.ಎನ್. ರಾಜಣ್ಣ ಮಾಡಿದ್ದ ಅಬ್ಬರದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜಣ್ಣ ಹೇಳಿದ್ದೇನು..?: ತುಮಕೂರು (Tumakuru) ಜಿಲ್ಲೆಯಲ್ಲಿ ನನ್ನನ್ನು ಎದುರು ಹಾಕೊಂಡು ಯಾವನಾದ್ರೂ ಗೆದ್ದು ತೋರಿಸಲಿ. ಅವನು ಯಾವ ಪಾರ್ಟಿಯವನು ಬೇಕಾದರೆ ಆಗಲಿ. ಎಲ್ಲ ಪಾರ್ಟಿಯವರು ನನಗೆ ವಿಶ್ವಾಸದಿಂದ ಇರಲೇಬೇಕು. ತುಮಕೂರು ಜಿಲ್ಲೆಯಲ್ಲಿ ಗೆದ್ದ 11 ಕ್ಷೇತ್ರದ ಶಾಸಕರೂ ನನ್ನೊಂದಿಗೆ ವಿಶ್ವಾಸದಿಂದ ಇದ್ದವರೇ. ಜಿಲ್ಲೆಯಲ್ಲಿ ಗೆದ್ದಂತಹ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ (JDS) ಎಲ್ಲಾ ಶಾಸಕರು ನನ್ನೊಂದಿಗೆ ವಿಶ್ವಾಸದಿಂದ ಇದ್ದವರು. ಹಾಗಾಗಿ ಅವರೆಲ್ಲಾ ಈಗ ಗೆದ್ದಿದ್ದಾರೆ ಎಂದಿದ್ದಾರೆ. ಕೆ.ಎನ್.ರಾಜಣ್ಣರನ್ನು ಎದರುಹಾಕೊಂಡು 2018 ಚುನಾವಣೆಯಲ್ಲಿ ಕಾಂಗ್ರೆಸ್ (Congress) ನ ಮಾಜಿ ಸಚಿವ, ಶಿರಾ ಶಾಸಕ ಟಿ.ಬಿ.ಜಯಚಂದ್ರ, ತಿಪಟೂರು ಶಾಸಕ ಕೆ.ಷಡಕ್ಷರಿ ಸೋತಿದ್ದರು. ಇನ್ನು 2013 ರಲ್ಲಿ ಪರಾಭವಗೊಂಡಿದ್ದ ಜಿ.ಪರಮೇಶ್ವರ್…
ಹುಬ್ಬಳ್ಳಿ: ಉತ್ತಮ ರೈಲು ಸೇವೆಗೆ ರೈಲ್ವೆ ಇಲಾಖೆಯ ಸನ್ನದ್ಧವಾಗಿದ್ದು ಇನ್ನಷ್ಟು ಸೇವೆಗೆ ದೇಶದಲ್ಲಿ ರೈಲು ಆಧುನಿಕರಣ ನಡೆದಿದೆ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಹೇಳಿದರು. ವಂದೇ ಮಾತರಂ ರೈಲ್ವೆ ಆರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಈ ಎಲ್ಲ ಸೌಕರ್ಯಕ್ಕೆ ಇದಕ್ಕೆ ನಾನು ರೈಲ್ವೆ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ದೇಶದಲ್ಕಿ ರೈಲು ಸೇವೆ ಸಾಕಷ್ಡು ಸಹಾಯ ನೀಡುತ್ತದೆ.ದೇಶದ ಅಭಿವೃದ್ಧಿಯಲ್ಲಿ ಇಲಾಖೆಯ ಸಾಕಷ್ಟು ಪಾಲಿದೆ ಕಾರಣ ರೈಲ್ವೆ ಕೆಲಸಕ್ಕಾಗಿ ಕರ್ನಾಟಕಕ್ಕೆ 7000 ಕೋಟಿ ಹಣವನ್ನು ನೀಡಲಾಗಿದ್ದು, ಇದುವರೆಗೂ ನೀಡಿದ ಅತಿ ಹೆಚ್ಚು ಅನುದಾನ ಇದಲಾಗಿದೆ ಎಂದ ಅವರು ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ಆರಂಭವಾಗಿದ್ದು, ನಿಮಗೆಲ್ಲ ಅಭಿನಂದನೆ ಸಲ್ಕಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.ವಂದೇ ಭಾರತ್ ದೇಶದ ಗೌರವ, ಹೆಮ್ಮೆ ಆಗಿದೆ. ಇದು ಸಂಪೂರ್ಣ ಸ್ವದೇಶಿ ನಿರ್ಮಿತ ರೈಲು ಆಗಿದ್ದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೋಶಿ ಅವರು ಅನೇಕ ಬೇಡಿಕೆ ಇಟ್ಟಿದ್ದಾರೆ ಆ ಬಗ್ಗೆ ಇಲಾಖೆಯವರು ಗಮನ ಹರಿಸುತ್ತಾರೆ ಎಂದರು.
ಹುಬ್ಬಳ್ಳಿ: ನಮ್ಮ ಸರ್ಕಾರ ರಾಜಕೀಯ ಕಾರಣಕ್ಕಾಗಿ ಯಾವುದೇ ಆಶ್ವಾಸನೆ ಕೊಡುವುದಿಲ್ಲ ಎಂದು ಕೇವಲ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ವಂದೇ ಮಾತರಂ ರೈಲ್ವೆಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ವಂದೇ ಭಾರತ ರೈಲು ಉದ್ಘಾಟೆನೆ ಇಂದು ಅಧಿಕೃತವಾಗಿ ಆಗಿದ್ದು ನಾವು ಕೆಲಸ ಮಾಡಿ ತೋರಿಸುವವರು ಧಾರವಾಡದಿಂದ ವಂದೇ ಭಾರತ ರೈಲು ಆರಂಭ ಆಗಬೇಕೆಂಬ ಬೇಡಿಕೆ ಇತ್ತು ಇದು ಆಗಿದೆ. ಬಹಳ ದಿನಗಳ ಬೇಡಿಕೆಯಂತೆ ಧಾರವಾಡದಿಂದ ಆರಂಭ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ವಂದೇ ಭಾರತ ರೈಲು ನಿರ್ವಹಣೆ ಮಾಡಲು ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದರು. ಅದನಂತರ ವಂದೇ ಭಾರತ ರೈಲು ಸಮಯವನ್ನ ಬದಲಾವಣೆ ಮಾಡಲಾಗುತ್ತದೆ ಈ ಟ್ರೈನ್ ಪ್ರಧಾನಿ ನರೇಂದ್ರ ಮೋದಿಯವರು ಆತ್ಮ ನಿರ್ಭರ ಟ್ರೈನ್, ಸ್ವದೇಶಿ ನಿರ್ಮಾಣ ಟ್ರೈನ್ ಆಗಿದ್ದುಮುಂದಿನ ಮೂರುವರ್ಷಗಳಲ್ಲಿ 400 ವಂದೇ ಭಾರತ ರೈಲು ಓಡಿಸುವ ಗುರಿ ಇದೆ ಎಂದರು. ಬೆಳಗಾವಿಯಿಂದ ಈ ರೈಲು ಓಡಿಸಬೇಕೆಂಬ ಬೇಡಿದೆ ಇದೆ. ಬೆಳಗಾವಿಯಿಂದ ಈ ರೈಲು ಓಡಿಸಬೇಕೆಂಬ ಬೇಡಿದೆ ಇದ್ದು. ಅದನ್ನು ಸಹ ನಮ್ಮ ಸರ್ಕಾರ ಈಡೇರಿಸುತ್ತದೆ…
ಹಾಸನ: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನಲೆ ಹಾಸನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು 2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ. ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು. ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ…
ಹಾಸನ: ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ. ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ ಎಂದು…
ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ವಿದ್ಯಾಕಾಶಿ, ಪೇಡಾ ನಗರಿಗೆ ಇದೀಗ ಮತ್ತೊಂದು ಕಿರಿಟ್ ಸಿಕ್ಕಿದ್ದು, ಹೊಸ ಬ್ಬಳ್ಳಿ ಧಾರವಾಡ ಜನರ ಖುಷಿ ಮತ್ತಷ್ಟು ಹೆಚ್ಚಿಸಿದೆ. ಅದರ ಕುರಿತು ಒಂದು ವರದಿ ಇಲ್ಲಿದಡ ನೋಡಿ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಧಾರವಾಡ-ಬೆಂಗಳೂರು ಮಧ್ಯೆ ಸಂಚಾರ ಮಾಡಲಿರುವ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಇಂದು ಧಾರವಾಡ ನಗರಕ್ಕೆ ಮಹತ್ವದ ದಿನವಾಗಿದ್ದು, ಐತಿಹಾಸಿಕ ದಿನಕ್ಕೆ ನಾವು ಎದುರು ನೋಡುತ್ತಿದ್ದೆವು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖುಷಿ ಸಂತಸ ವ್ಯಕ್ತಪಡಿಸಿದರು. ಜೊತೆಗೆ ಒಂದೇ ಭಾರತ ಎಕ್ಸ್‌ಪ್ರೆಸ್ ಟ್ರೈನ್ ಸಮಯ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು. ಧಾರವಾಡದಿಂದ…
ಬೆಂಗಳೂರು: ಫೇಕ್ ನ್ಯೂಸ್ ಹರಡುವುದರಲ್ಲಿ ಕೆಲವರು ನಿರತರಾಗಿದ್ದಾರೆ ಅದು ರಾಜಕೀಯ ಇರಬಹುದು ಅಥವಾ ಸಮಾಜದ ಶಾಂತಿ ಕದಡುವ ವಿಚಾರ ಇರಬಹುದು ಇಂತಹ ಸುಳ್ಳು ಸುದ್ದಿಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಾಕುವುದನ್ನು ಗಮನಿಸಿದ್ದೇವೆ ಇದಕ್ಕೆಲ್ಲಾ ಒಂದು ಕಡಿವಾಣ ಹಾಕಲು ತಂಡ ರಚನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಂಬಂಧವೇ ಇಲ್ಲದ ಪೋಟೋಗಳನ್ನು ಹಾಕಿ ಸಂಬಂಧ ಕಲ್ಪಿಸುವುದು ನಡೆಯುತ್ತಿದ್ದು ಸರ್ಕಾರ ರಚನೆ ಆದಮೇಲೆ ಫೇಕ್ ನ್ಯೂಸ್ ಗಮನಿಸಿದ್ದೇವೆಇದನ್ನು ನಿಲ್ಲಿಸದಿದ್ದರೆ ಬಹಳಷ್ಟು ಸಮಸ್ಯೆ ಆಗಲಿದೆ ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ ಸೈಬರ್ ಲಾನಲ್ಲಿ ದಿನಾ ಅಮೆಂಡ್ಮೆಂಟ್ ಮಾಡಬೇಕಾಗುತ್ತದೆ ಹಾಗೆ ಆರ್ಟಿಫಿಸಲ್ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಆಮೇಲೆ ಸುಳ್ಳು ಸುದ್ದಿ ಹರಡುವವರ ಮೇಲೆ ಶಿಕ್ಷೆಗೆ ಸೂಕ್ತ ಕಾನೂನು ಕೂಡ ತರುತ್ತೇವೆ ಎಂದು ಹೇಳಿದರು. ಬಿಟ್ ಕಾಯಿನ ವಿಚಾರ ಬಗ್ಗೆ ಮಾತನಾಡಿದ ಅವರು ಇದರ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ.…
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬರಸಿಡಿಲು ಹೊಡೆದಂತಾಗಿದೆ ಅದೇನೆಂದರೆ ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್ ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಎರಡು ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. “ಸಿರಿವಂತನಾದರ ಕನ್ನಡ ನಾಡಲ್ಲಿ ಮೆರೆವೆ” , ಬೆಳೆದೆ ನೋಡ ಬೆಂಗಳೂರ ನಾಡ ಹಾಗೂ ಇನ್ನಷ್ಟು ಸೂಪರ್ ಹಿಟ್ ಹಾಡುಗಳ ಸಾಹಿತಿ ರಚಿಸಿದ್ದು ಮನೆ ಕಟ್ಟಿ ನೋಡು ಸಿನಿಮಾದ ನಿರ್ಮಾಪಕರಾಗಿ ಸಹ ಕೆಲಸ ಮಾಡಿದ್ದಾರೆ. ಅದಲ್ಲದೆ ಸಹ ನಿರ್ದೇಶಕರಾಗಿ ಕೆಲ್ಸಾ ಮಾಡಿದ್ದ ಅವ್ರು 60 ದಶಕದ ಪ್ರತಿಭೆ ಎಂದರೆ ಸುಳ್ಳಾಗುವುದಿಲ್ಲ ಮನೆಕಟ್ಟಿ ನೋಡು, ಪದವೀಧರ , ಹೊಯ್ಸಳ , ಮಹಾತಪಸ್ವಿ , ವೀರಮಹಾದೇವ , ಕನ್ನಡ ಕುವರ ಸೇರಿದಂತೆ ಅನೇಕ ಸಿನಿಮಾಗಳನ್ನ ಸಹ ನಿರ್ದೇಶನ ಮಾಡಿದ್ದಾರೆ. ಇತ್ತೀಚಿಗೆ ಹಿರಿಯ ನಟಿ ಲೀಲಾವತಿ ಅವರ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಸಹ ಭಾಗಿಯಾಗಿದ್ದರು.
ಬೆಂಗಳೂರು: ಈ ವರ್ಷ ಮುಂಗಾರು ಮಳೆಯ ಕೊರತೆಯಿಂದ ಕರುನಾಡು ನಲುಗಿ ಹೋಗಿರುವುದು ಅಕ್ಷರಶಃ ಸತ್ಯ. ಈ ಸಂದರ್ಭದಲ್ಲಿ ಕೆಆರ್‌ಎಸ್, ಆಲಮಟ್ಟಿ ಸೇರಿ ರಾಜ್ಯದ ಪ್ರಮುಖ ಡ್ಯಾಂಗಳು ಬಹುತೇಕ ಡೆಡ್ ಸ್ಟೋರೇಜ್ ತಲುಪಿವೆ. ಈಗಿನ ಪರಿಸ್ಥಿತಿ ನೋಡಿದರೆ, ಇನ್ನೂ ಕೆಲವು ದಿನದಲ್ಲಿ ಉತ್ತಮವಾಗಿ ಮಳೆ ಆಗದೇ ಇದ್ರೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಜನ ಪರದಾಡಬೇಕು ಅಂತಹ ಸ್ಥಿತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಕುಡಿಯುವ ನೀರಿಗೆ ಭಾರಿ ಪರದಾಟ ಎದುರಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಮಂಡ್ಯ, ಮೈಸೂರು ಭಾಗದ ರೈತರು ಚಿಂತೆ ಮಾಡುವಂತಾಗಿದೆ. ಹಾಗೇ ಈ ಪರಿಸ್ಥಿತಿಯ ಪರಿಣಾಮ ಮತ್ತೊಮ್ಮೆ ಕಾವೇರಿ ನೀರಿಗೆ ಕಿತ್ತಾಟ ಶುರುವಾಗುವ ಆತಂಕ ಹೆಚ್ಚಾಗಿದೆ. ಇದು ಕೆಆರ್‌ಎಸ್ ಪರಿಸ್ಥಿತಿ ಮಾತ್ರವಲ್ಲ, ರಾಜ್ಯದ ಬಹುತೇಕ ಡ್ಯಾಂಗಳಲ್ಲಿ ಇದೇ ಸ್ಥಿತಿ ಇದೆ. ಹೌದು, ದಕ್ಷಿಣ ಕರ್ನಾಟಕದ ಸ್ಥಿತಿಯೇ ಉತ್ತರ ಕರ್ನಾಟಕಕ್ಕೂ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜನರ ಜೀವನಾಡಿ…