ಬೆಂಗಳೂರು ;- ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ರಾಜ್ಯ ಜನರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ. ಉಚಿತ ಕರೆಂಟ್ ಸೌಲಭ್ಯ ಪಡೆಯಲು ನಾ ಮುಂದು, ತಾ ಮುಂದು ಎಂದು ಅರ್ಜಿ ಸಲ್ಲಿಸಲು ಜನತೆ ಮುಗಿಬಿದ್ದಿದ್ದಾರೆ. ಇದುವರೆಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಇಂದಿಗೆ 50 ಲಕ್ಷ ಗಡಿ ದಾಟಿದೆ. ಜೂನ್ 18 ರಿಂದ ಆರಂಭವಾದ ನೋಂದಣಿ ಪ್ರಕ್ರಿಯೆ ಶರವೇಗ ಪಡೆದುಕೊಂಡಿದ್ದು, ಭಾನುವಾರ ಸಂಜೆ 4 ಗಂಟೆಯವರೆಗೆ 51,17,693 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿಧಾನವನ್ನು ಅತ್ಯಂತ ಸುಲಭಗೊಳಿಸಿರುವುದರಿಂದ, ಗ್ರಾಹಕರು ಅತ್ಯಂತ ಉತ್ಸುಕತೆಯನ್ನು ತೋರುತ್ತಿದ್ದು, ಪ್ರತಿದಿನವೂ ಲಕ್ಷದೋಪಾದಿಯಲ್ಲಿ ನೋಂದಣಿಯ ಪ್ರಮಾಣ ಹೆಚ್ಚುತ್ತಿದೆ. ಗೃಹ ಜ್ಯೋತಿ ಯೋಜನೆಗೆ ಯಾವುದೇ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಸಂಪೂರ್ಣ ಉಚಿತ. ಗ್ರಾಹಕರು ಮೇಲ್ಕಂಡ ವೆಬ್’ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್’ಸೈಟ್ ಬಳಸದೇ ಇರುವುದು ಸೂಕ್ತ.…
Author: Prajatv Kannada
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಡಿಸಿಎಂ ಡಿಕೆಶಿವಕುಮಾರ್ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು. ರಾಜ್ಯದ 31 ಜಿಲ್ಲೆಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ ಎಂದು ವಿಧಾನಸೌಧ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿ ಕುರಿತು ಮಾತನಾಡಿದ ಅವರು ‘ಈ ಹಿಂದೆ ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆರಂಭಿಸಿದ್ದು. ಸರ್ಕಾರದಿಂದ ಕೆಂಪೇಗೌಡ ಜಯಂತಿ ಆಚರಿಸಲು ಆದೇಶ ನೀಡಿದ್ದೆವು. ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ನಾವೇ ಎಂದರು. ಒಂದು ಸಮುದಾಯಕ್ಕೆ ಸೀಮಿತವಾಗಿದ್ದ ಕೆಂಪೇಗೌಡರ ಜಯಂತಿಯನ್ನು ಎಲ್ಲರ ಜಯಂತಿಯಾಗಿ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಆದಿಚುಂಚನಗಿರಿ ಶ್ರೀ ಹೇಳಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂದು ಸಿದ್ದರಾಮಯ್ಯ ಅವರು ಸಿಎಂ ಆಗಿ ಜಯಂತಿ ಮಾಡಿದ್ದರು. ಇಂದು ಈ ಕಾರ್ಯಕ್ರಮ ರಾಜ್ಯದ ಬೇರೆ ಕಡೆ ಕೂಡ ದೊಡ್ಡ ರೀತಿಯಲ್ಲಿ ಆಗುವಂತೆ ಮಾಡಿದ್ದು ಕೂಡ ಸಿದ್ದರಾಮಯ್ಯನವರೇ ಎಂದರು.
ಬೆಂಗಳೂರು: ಗೃಹಜ್ಯೋತಿಯಡಿ ಆಶ್ವಾಸನೆಯಂತೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಗೃಹಜ್ಯೋತಿ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನಗೊಳಿಸಲಾಗುವುದು. 200 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಆಗಸ್ಟ್ ತಿಂಗಳಿಂದ ಜನರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಯೂನಿಟ್ ಬಳಸಿದಲ್ಲಿ ಬಳಕೆ ಮಾಡಿದ ವಿದ್ಯುತ್ ಬಿಲ್ ಪೂರ್ಣ ಪಾವತಿಸಬೇಕಾಗುತ್ತದೆ” ಎಂದು ತಿಳಿಸಿದರು. ರಾಜ್ಯದಲ್ಲಿ 2.16 ಕೋಟಿ ಜನರು ಗೃಹಜ್ಯೋತಿ ಯೋಜನೆ ಫಲಾನುಭವಿಗಳಿದ್ದು, ಅದರಲ್ಲಿ 2.14 ಕೋಟಿ ಜನರು ಅರ್ಹರಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬದಂದು ಪ್ರಾಣಿವಧೆ ನಿರ್ಬಂಧಿಸಿ ಆದೇಶಿಸಲಾಗಿದೆ. ಪ್ರತಿ ಬಕ್ರೀದ್ ಹಬ್ಬ ಆಚರಣೆ ಅಥವಾ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ ಮಾಡಿ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ಕೆ.ಪಿ. ರವಿಕುಮಾರ್ ಆದೇಶಿಸಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ರಸ್ತೆ, ಪಾದಚಾರಿ ಮಾರ್ಗ, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು ಅಥವಾ ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ ಮಕ್ಕಳ ಮಣಭಾರದ ಬ್ಯಾಗ್ಗೆ ತೂಕ ಮಿತಿ ನಿಗದಿಗೊಳಿಸಿದೆ. ವಿದ್ಯಾರ್ಥಿಗಳ ತರಗತಿಗೆ ಅನುಗುಣವಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶಾಲಾ ಬ್ಯಾಗ್ಗಳ ಭಾರವನ್ನು ನಿಗದಿಪಡಿಸಿದೆ. ಹೆಚ್ಚುವರಿ ಭಾರವನ್ನು ವಿದ್ಯಾರ್ಥಿಗಳ ಬೆನ್ನಿನಿಂದ ಕೆಳಗಿಳಿಸುತ್ತಿದೆ. ಇದು ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಕೊಂಚ ನೆಮ್ಮದಿ ತಂದಿದೆ. ಇದರಿಂದಾಗಿ ಮಕ್ಕಳ ಬೆನ್ನು ಮೂಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದರೂ ಪೋಷಕರು ಮತ್ತು ಶಿಕ್ಷಕರು ಇದರ ಬಗ್ಗೆ ಅಷ್ಟು ಗಮನ ಹರಿಸಿಲ್ಲ. ಆದರೆ ಈ ಸಮಸ್ಯೆಯ ಗಂಭೀರತೆ ಅರ್ಥ ಮಾಡಿಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳ ಬೆನ್ನ ಮೇಲಿನ ಶಾಲಾ ಬ್ಯಾಗ್ ಭಾರವನ್ನು ಕೊಂಚ ಇಳಿಸಿದೆ.
ಬೆಂಗಳೂರು: ಇಂದು(ಜೂ.27) ಕೆಂಪೇಗೌಡರ ಜಯಂತಿ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಶುಭಾಶಯಗಳು ಕೋರಿದ ಸಿಎಂ ಸಿದ್ದರಾಮಯ್ಯ. ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು. ರಾಜ್ಯದ31 ಜಿಲ್ಲೆಗಳಲ್ಲೂ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ ಎಂದು ವಿಧಾನಸೌಧ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿ ಕುರಿತು ಮಾತನಾಡಿದ ಅವರು ‘ಈ ಹಿಂದೆ ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆರಂಭಿಸಿದ್ದು. ಸರ್ಕಾರದಿಂದ ಕೆಂಪೇಗೌಡ ಜಯಂತಿ ಆಚರಿಸಲು ಆದೇಶ ನೀಡಿದ್ದೆವು. ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ನಾವೇ ಎಂದು ಹೇಳಿದರು.
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಡಿಸಿಎಂ ಡಿಕೆಶಿವಕುಮಾರ್ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು. ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ 514ನೇ ಕೆಂಪೇಗೌಡ ಜಯಂತಿ ಆಚರಣೆ ವೇಳೆ ರಾಜಕೀಯ ವೈರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಅವರು ಕೆಂಪೇಗೌಡ ಜಯಂತಿ ಆಚರಣೆ ವೇಳೆ ಮುಖಾಮುಖಿಯಾದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿ ಇದ್ದು ಅವರು ಕೂಡ ಇಬ್ಬರು ನಾಯಕರಿಗೆ ಪರಸ್ಪರ ಕಚ್ಚಾಡದಂತೆ ಬುದ್ಧಿಮಾತು ಕೂಡ ಹೇಳಿದರು.
ಬೆಂಗಳೂರು: ಇಂದು ನಡೆಯಲಿರುವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕುದುರೆ ಮೇಲೆ ಕುಳಿತಿರುವ ಕೆಂಪೇಗೌಡರ ಪ್ರತಿಮೆಯನ್ನು ಒಳಗೊಂಡಿದೆ. ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡಲ್ಪಡುವ ಪ್ರಸಕ್ತ ಸಾಲಿನ (2023) ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ದೇಶದ ಪ್ರತಿಷ್ಟಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರು ಭಾಜನರಾಗಿದ್ದಾರೆ
ಬೆಂಗಳೂರು: ಇಂದು ಹಾಸನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಸನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಹಾಸನದ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಇತ್ಯಾದಿ ಗಣ್ಯರು ಭಾಗಿಯಾಗಲಿದ್ದಾರೆ. ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರದ ಅಧಿಕೃತ ಕಾರ್ಯಕ್ರಮವಾದ ಹಿನ್ನೆಲೆ ಇಂದು(ಜೂ.27) ಹಾಸನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ. ಇನ್ನು ಹಾಸನದ ಹಳೇ ತಾಲೂಕು ಕಚೇರಿ ಪಕ್ಕದ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಆಯೋಜನೆ ಮಾಡಲಾಗಿದೆ.
ಬೆಂಗಳೂರು: ಮದ್ಯ (Alcohol) ಪ್ರಿಯರಿಗೆ ಇದೀಗ ಬೆಲೆ ಏರಿಕೆ (Price Hike) ಬಿಸಿ ಕಾಡುತ್ತಿದೆ. ಕುಡಿಯೋ ಮೊದಲೇ ಬಿಯರ್ (Beer) ಉತ್ಪಾದನಾ ಕಂಪನಿಗಳು ಮದ್ಯ ಪ್ರಿಯರ ಕಿಕ್ ಏರಿಸಿದೆ. ಪ್ರತಿ ಬಿಯರ್ ಮೇಲೂ 10 ರಿಂದ 15 ರೂ. ದರ ಏರಿಕೆಯಾಗಿದೆ ಇತ್ತ ಸರ್ಕಾರ ಸುಂಕ ಏರಿಕೆ ಮಾಡದಿದ್ದರೂ, ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿರೋ ಬಿಯರ್ ಉತ್ಪಾದನಾ ಕಂಪನಿಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಏರಿಕೆ ಮಾಡಿದೆ. ಬಿಯರ್ ಉತ್ಪಾದನೆಗೆ ತಗಲುವ ವೆಚ್ಚವನ್ನು ಹೊಂದಾಣಿಕೆ ಮಾಡಿಕೊಳ್ಳಲು ಬಿಯರ್ ದರವನ್ನು ಪ್ರತಿ ಬಾಟಲ್‌ಗೆ ಸುಮಾರು 10 ರೂ.ಗಳಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಜುಲೈನ ಹೊಸ ಬಜೆಟ್‌ನಲ್ಲೂ ಕಾಂಗ್ರೆಸ್ ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಯಾವ ಬ್ರ್ಯಾಂಡ್ ಎಷ್ಟು ದರ ಏರಿಕೆ? ಮದ್ಯ ಹಳೆಯ ದರ – ಹೊಸ ದರ ಬಡ್ ವೈಸರ್ 198 – 220 ರೂ. ಕಾರ್ಲ್ಸ್ ಬರ್ಗ್ 190 – 220 ರೂ. ಬ್ಲಾಕ್ ಫೋಟ್ 135 – 155 ರೂ. ಟುಬರ್ಗ್…