ಉಡುಪಿ: ಉಚಿತವಾಗಿ ತಲಾ 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಕ್ಷಮೆ ಕೇಳಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಆಹಾರ ಭದ್ರತಾ ಕಾಯ್ದೆ ತಂದಿದ್ದು ಯುಪಿಎ ಸರ್ಕಾರ ಅಂತಿದ್ದಾರೆ. ಇಂತಹ ಮಾತುಗಳನ್ನು ಡಿಸಿಎಂ ಬಾಯಿಂದ ನಿರೀಕ್ಷೆ ಮಾಡಿರಲಿಲ್ಲ. ಯುಪಿಎ ಸರ್ಕಾರ ಈ ಕಾಯ್ದೆ ಮಾಡಿದ್ದರೂ ಜಾರಿ ಮಾಡಿರಲಿಲ್ಲ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಅಕ್ಕಿ ವಿತರಣೆ ಮಾಡುತ್ತಿದೆ. ಕಾಂಗ್ರೆಸ್ಸಿಗರು ತಮ್ಮ ಹೇಳಿಕೆಯನ್ನು ಮರುಪರಿಶೀಲನೆ ಮಾಡಿಕೊಳ್ಳಲಿ ಎಂದರು. ಕೇಂದ್ರ ಸರ್ಕಾರ 549 ಲಕ್ಷ ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ ನೀವು ನಮ್ಮ ಅಕ್ಕಿ ಎಂದು ಹೇಳಿ ಅಪಹಾಸ್ಯಕ್ಕೆ ಒಳಗಾಗಬೇಡಿ ಎಂದರು.
Author: Prajatv Kannada
ಧಾರವಾಡ: 2 ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ನೀಡುತ್ತೇವೆ. ಭೂಪರಿವರ್ತನೆ ಮಾಡಿಸಿಕೊಂಡು ಆಹಾರ ಉದ್ಯಮ ಮಾಡಬಹುದು ಎಂದು ಧಾರವಾಡದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(MB Patil) ಹೇಳಿದ್ದಾರೆ. ರಾಜ್ಯದಲ್ಲಿ ಆಹಾರ ಉದ್ಯಮ ಬೆಳೆಯಲು ಪ್ರೋತ್ಸಾಹ ನೀಡುತ್ತೇವೆ. ಭೂಪರಿವರ್ತನೆ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ. ಮಾವಿನ ಮಾರುಕಟ್ಟೆ ದರ ಕುಸಿದಾಗ ಫುಡ್ ಪ್ರೊಸೆಸ್ ಮಾಡಬಹುದು. ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರುತ್ತೇವೆ ಎಂದರು.
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮಳೆಗಾಗಿ ಸ್ಮಶಾನದಲ್ಲಿ ಹೂತಿದ್ದ ಸಮಾಧಿಗೆ ರಂಧ್ರವನ್ನು ತೋಡಿ, ಶವದ ಬಾಯಿಗೆ ಟ್ಯಾಂಕರ್ ಮೂಲಕ ನೀರು ಬಿಡುವ ವಿಚಿತ್ರ ಆಚರಣೆಯನ್ನು ಮಾಡಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರ ಬಂತು, ಬರಗಾಲ ತಂತು ಎಂದು ಮಾತಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬಾರಿ ಜೂನ್ ಕಳೆಯುತ್ತ ಬಂದರು ಮಳೆಯಾಗಿಲ್ಲ. ನದಿಗಳು, ಜಲಾಶಯಗಳು ಬತ್ತಿ ಹೋಗಿವೆ. ಹಳ್ಳಿ, ನಗರ ಪ್ರದೇಶಗಳಲ್ಲಿ ನೀರಿಗೆ ತತ್ವಾದ ಎದುರಾಗಿದೆ. ಈ ನಡುವೆ ಜನರು ಮಳೆಗಾಗಿ ಇನ್ನಿಲ್ಲದಂತೆ ಪ್ರಯತ್ನಗಳನ್ನ ಮಾಡ್ತಿದ್ದಾರೆ. ಕತ್ತೆ ಮದುವೆ, ಕಪ್ಪೆ ಮದುವೆ, ದೇವರಲ್ಲಿ ಪ್ರಾರ್ಥನೆ ಸೇರಿದಂತೆ ಮಳೆಗಾಗಿ ಹಪಹಪಿಸುತ್ತಿದ್ದಾರೆ. ಈ ನಡುವೆ ಬರದ ನಾಡು ಅಂತಲೆ ಕುಖ್ಯಾತಿ ಗಳಿಸಿರುವ ವಿಜಯಪುರ ಜಿಲ್ಲೆಯಲ್ಲಿ ಮಳೆಗಾಗಿ ವಿಚಿತ್ರ ಆಚರಣೆಯೊಂದು ನಡೆದಿದೆ. ಮಳೆಗಾಗಿ ಸ್ಮಶಾನದಲ್ಲಿ ಹೂತಿದ್ದ ಸಮಾಧಿಗೆ ರಂಧ್ರವನ್ನು ತೋಡಿ, ಶವದ ಬಾಯಿಗೆ ಟ್ಯಾಂಕರ್ ಮೂಲಕ ನೀರು ಬಿಡುವ ವಿಚಿತ್ರ ಆಚರಣೆಯನ್ನು ಮಾಡಿದ್ದಾರೆ. ಶವದ ಬಾಯಿಗೆ ನೀರು ಬಿಟ್ಟರೆ ಮಳೆ ಆಗಮನ: ಸ್ಮಶಾನದಲ್ಲಿ ಕೆಲವು ಶವಗಳು ನೀರಿಗಾಗಿ ಬಾಯಿತೆರೆದು ಕುಳಿತಿರುತ್ತವೆ. ಹೀಗಾಗಿ, ಅಂತಹ ಶವಗಳಿಗೆ ನೀರು ಬಿಡದೇ ಹೂತು ಹಾಕಿದ್ದರೆ ಊರಿಗೆ ಮಳೆ…
ಕುಣಿಗಲ್ ;– ಬಡ ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಮಾನವೀಯತೆ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಆಶಾ ಎಂಬ ಮಹಿಳೆಗೆ ಕೀಲು ಡಿಸ್ ಲೊಕೆಟ್ ಆಗಿತ್ತು. ಶಸ್ತ್ರಚಿಕಿತ್ಸೆ ಮಾಡಲು 4-5 ಲಕ್ಷ ರೂ ಖರ್ಚಾಗುತಿತ್ತು. ಶಾಸಕರ ಬಳಿ ಬಂದು ಮಹಿಳೆ ನೋವು ತೋಡಿಕೊಂಡಿದ್ದಳು. ಮಹಿಳೆ ನೋವಿಗೆ ಸ್ಪಂದಿಸಿ ಶಾಸಕ ರಂಗನಾಥ್ ಅವರು, ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿಸಿದರು. ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಆಶಾ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಆದರೆ ಈಗ ಮತ್ತೇ ಡಿಸ್ ಲೊಕೆಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಇದನ್ನರಿತು ಈ ರೀತಿಯ ಕೀಲು ಮೂಳೆ ಸಮಸ್ಯೆ ಇದ್ದ 23 ಮಹಿಳೆಯ ಉಚಿತ ಶಸ್ತ್ರಚಿಕಿತ್ಸೆಗೆ ಶಾಸಕ ರಂಗನಾಥ್…
ಮುಂಬೈ: 15 ವರ್ಷದ ಅಪ್ರಾಪ್ತ ಅತ್ಯಾಚಾರ (Rape) ಸಂತ್ರಸ್ತೆಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಲು ಬಾಂಬೆ ಹೈಕೋರ್ಟ್ (Bombay Highcourt) ಔರಂಗಬಾದ್ ಪೀಠ ನಿರಾಕರಿಸಿದೆ. 28 ವಾರಗಳ ಹಂತದಲ್ಲಿ ಬಲವಂತವಾಗಿ ಹೆರಿಗೆ ಮಾಡಿಸಿದರೆ ಮಗು ಜೀವಂತವಾಗಿ ಜನಿಸುತ್ತದೆ. ನವಜಾತ ಶಿಶುವಿಗೆ ಆರೈಕೆಯ ಅಗತ್ಯವಿರುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಗರ್ಭಪಾತಕ್ಕೆ (Abortion) ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಧೀಶರಾದ ಆರ್‌ವಿ ಘುಗೆ (R.V.Ghuge) ಮತ್ತು ವೈಜಿ ಖೋಬ್ರಗಡೆ (Y.G.Khobragade) ಅವರ ಪೀಠವು ಜೂನ್ 20ರಂದು ಈ ಆದೇಶವನ್ನು ನೀಡಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ಕೋರಿ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. 2023ರ ಫೆಬ್ರವರಿಯಲ್ಲಿ ತನ್ನ ಮಗಳು ನಾಪತ್ತೆಯಾಗಿದ್ದು, 3 ತಿಂಗಳ ಬಳಿಕ ರಾಜಸ್ಥಾನದಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಪತ್ತೆಯಾಗಿದ್ದಾಳೆ ಎಂದು ಮಹಿಳೆ ಮನವಿಯಲ್ಲಿ ತಿಳಿಸಿದ್ದಾರೆ. ಘಟನೆಯ ಕುರಿತು ವ್ಯಕ್ತಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.…
ಮಧ್ಯಪ್ರದೇಶ: ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ 1) ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, 2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್,3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್,4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.
ಮಲೆನಾಡಿನ ಜಲಾಶಯಗಳ ಒಡಲು ತುಂಬಿದರೆ ಬಯಲು ಸೀಮೆ ಶ್ರೀಮಂತವಾಗುತ್ತದೆ.ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದರೆ ಬಯಲು ಸೀಮೆ ಸಮೃದ್ಧವಾಗುತ್ತದೆ.ಜಲಾಶಯಗಳ ಆಗರವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಲಿಂಗನಮಕ್ಕಿ, ತುಂಗಾ, ಭದ್ರಾ, ಮಾಣಿ, ಚಕ್ರ ಸಾವೆಹಕ್ಲು ಜಲಾಶಯಗಳು ವರ್ಷಪೂರ್ತಿ ಮೈದುಂಬಿ ಹರಿಯುತ್ತವೆ.ಆದರೆ ಈ ಬಾರಿ ರಾಜ್ಯದ ಬಹುತೇಕ ಜಲಾಶಯಗಳ ಒಡಲು ಬರಿದಂತೆ ಜಿಲ್ಲೆಯ ಜಲಾಶಯಗಳು ಬತ್ತಿ ಹೋಗಿದೆ. ಶರಾವತಿ ಕಣಿವೆ ಪ್ರದೇಶದಲ್ಲಿ ನೆನ್ವೆಯಿಂದ ಮಳೆ ಸುರಿಯುತ್ತಿದ್ದರೂ ಅದು ಡ್ಯಾಂ ಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. 151.64 ಟಿಎಂಸಿ ಸಾಮರ್ಥ್ಯವಿರುವ ಲಿಂಗನಮಕ್ಕಿ ಜಲಾಶಯದಲೇಲ್ ಇಂದಿಗೆ 18.69 ಟಿಎಂಸಿ ನೀರು ಸಂಗ್ರಹಗೊಂಡಿದೆ. ಗರಿಷ್ಠ 1819 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂ ನಲ್ಲಿ 1740.40 ಅಡಿ ನೀರು ಸಂಗ್ರಹಗೊಂಡಿದೆ. ಜಲಾಶಯಕ್ಕೆ 2559 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕಣಿವೆ ಪ್ರದೇಶದ ವ್ಯಾಪ್ತಿಯಲ್ಲಿ 38.2 ಮಿಲಿಮೀಟರ್ ಮಳೆಯಾಗಿದೆ. ಇನ್ನು ಮಾಣಿ ಡ್ಯಾಂ ಪರಿಸರದಲ್ಲೂ ಕೂಡ ಮಳೆ ಪ್ರಮಾಣ ತಗ್ಗಿದೆ. ಗರಿಷ್ಠ 594.36 ಮೀಟರ್ ನೀರು ಸಂಗ್ರಹ ಸಮರ್ಥ್ಯ ಹೊಂದಿರುವ…
ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಲಾಗಿದೆ. ಹಲವು ರಾಜ್ಯ ಮತ್ತು ರಾಷ್ಟ್ರದಲ್ಲಿ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆಗಿರುವ ಗೋಲ್ಡಿ ಬ್ರಾರ್ ಜೊತೆ ಫೋನ್ ಮೂಲಕ ಸಂದರ್ಶನ ನಡೆಸಲಾಗಿದೆ. ಈ ವೇಳೆ ಆತ ಸಲ್ಮಾನ್ ಖಾನ್ ಬಗ್ಗೆ ಮಾತನಾಡಿದ್ದಾನೆ. ‘ಸಲ್ಮಾನ್ ಖಾನ್ನನ್ನು ಖಂಡಿತಾ ಕೊಲೆ ಮಾಡುತ್ತೇವೆ’ ಎಂದು ಆತ ಶಪಥ ಮಾಡಿದ್ದಾನೆ. ಈ ಹಿಂದೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರಗಳು ಬಂದಿದ್ದವು. ಈಗ ಗೋಲ್ಡಿ ಬ್ರಾರ್ ಕೂಡ ಸಲ್ಲು ಜೀವ ತೆಗೆಯುವುದಾಗಿ ಹೇಳಿದ್ದಾನೆ. ಸಲ್ಮಾನ್ ಖಾನ್ನನ್ನು ಖಂಡಿತಾ ಕೊಲ್ಲುತ್ತೇವೆ. ಆತ ಬಿಷ್ಣೋಯ್ ಸಮುದಾಯಕ್ಕೆ ಅವಮಾನ ಮಾಡಿದ್ದಾನೆ. ನಾವು ಪವಿತ್ರವೆಂದು ತಿಳಿಯುವ ಕೃಷ್ಣಮೃಗವನ್ನು ಆತ ಸಾಯಿಸಿದ್ದಾನೆ. ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಅವನು ಕ್ಷಮೆ ಕೇಳಿಲ್ಲ. ಸಲ್ಮಾನ್ ಖಾನ್ ಮಾತ್ರವಲ್ಲದೇ ನಮ್ಮ ಎಲ್ಲ ಶತ್ರುಗಳನ್ನೂ ನಾವು ಕೊಲ್ಲುತ್ತೇವೆ’ ಎಂದು ಗೋಲ್ಡಿ ಬ್ರಾರ್ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಸಲ್ಮಾನ್…
ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಶೂಟಿಂಗ್ ನಲ್ಲಿದ್ದ ವೇಳೆ ಕಾಲಿಗೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ವಿಲಾಯತ್ ಬುದ್ದ ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು ಶಸ್ತ್ರ ಚಿಕಿತ್ಸೆ ಮಾಡಬೇಕಾಗಿ ವೈದ್ಯರು ಸೂಚನೆ ನೀಡಿದ್ದರು. ಅದರಂತೆ ಇಂದು ನಟ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಮಲಯಾಳಂನ ನಿರೀಕ್ಷಿತ ವಿಲಾಯತ್ ಬುದ್ದ ಸಿನಿಮಾದಲ್ಲಿ ಸಾಕಷ್ಟು ಸಾಹಸ ಪ್ರಧಾನ ದೃಶ್ಯಗಳಿದ್ದು ಅವುಗಳ ಚಿತ್ರೀಕರಣದ ವೇಳೆ ಪೃಥ್ವಿರಾಜ್ ಸುಕುಮಾರನ್ ಪೆಟ್ಟು ಮಾಡಿಕೊಂಡಿದ್ದಾರೆ. ಇದೀಗ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ನಟನಿಗೆ ವೈದ್ಯರು ಕೆಲ ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದು ಹೀಗಾಗಿ ಸದ್ಯದ ಮಟ್ಟಿಗೆ ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ. ಪೃಥ್ವಿರಾಜ್ ಸುಕುಮಾರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ಹರಡುತ್ತಿದ್ದಂತೆಯೇ ಅವರ ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು. ನಟನ ಆರೋಗ್ಯದ ಕುರಿತಾಗಿ ಅಪ್ ಡೇಟ್ ಪಡೆಯಲು ಕಾದಿದ್ದರು. ಆತಂಕ ಪಡುವಂಥದ್ದು ಏನೂ ಆಗಿಲ್ಲ. ಸಣ್ಣದೊಂದು ಸರ್ಜರಿ ಮಾಡಬೇಕಿದೆ ಎಂದು ವೈದ್ಯರು ಹೇಳಿದ ಬಳಿಕವೇ ಅಭಿಮಾನಿಗಳು ಅಲ್ಲಿಂದ ವಾಪಸ್ ಆಗಿದ್ದಾರೆ.
ಸಾಮಾನ್ಯವಾಗಿ ಭಾರತೀಯರು ಬಳಸುವ ಅಡುಗೆ ಪದಾರ್ಥಗಳು ಔಷಧೀಯ ಗುಣಗಳನ್ನು ಹೊಂದಿವೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಆದರೆ ನಾವು ಬಳಸುವ ಬಹಳಷ್ಟು ಮಸಾಲೆಗಳು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳು ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಮಾಡುತ್ತವೆ. ನಮಗೆಲ್ಲಾ ತಿಳಿದ ಮಟ್ಟಿಗೆ ನಮ್ಮೆಲ್ಲರ ನೆಚ್ಚಿನ ಮಸಾಲೆ ಪದಾರ್ಥ ಏಲಕ್ಕಿ ಅಥವಾ ಎಲೈಚಿ ಸುವಾಸನಾಭರಿತ ಗಿಡಮೂಲಿಕೆಗಳಲ್ಲಿ ಒಂದಾಗಿದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದ್ದು, ಇದನ್ನು ಊಟದ ರುಚಿ ಹೆಚ್ಚಿಸಲು, ಅಡುಗೆ ಘಮ ಬರಲು ಮತ್ತು ಆರೋಗ್ಯದ ಬಗ್ಗೆ ಕಾಳಜಿ ಇರುವವರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಳಸುತ್ತಾರೆ. ಆದರೆ ಏಲಕ್ಕಿ ಬಗ್ಗೆ ಅನೇಕರಿಗೆ ಗೊತ್ತಿರದ ವಿಚಾರವೊಂದಿದೆ. ಅದೇನೆಂದರೆ ಏಲಕ್ಕಿ ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಅಥವಾ ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಹೌದು, ನಿಮಗೆ ಮಧುಮೇಹ ಇದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಯಾರಾದರೂ ಮಧುಮೇಹದಿಂದ ಬಳಲುತ್ತಿದ್ದರೆ ನೀವು ಅವರಿಗೆ ಏಲಕ್ಕಿ ಚಹಾವನ್ನು ಕೊಡಿ. ಈ ಲೇಖನದಲ್ಲಿ ಏಲಕ್ಕಿ ಚಹಾದ ವಿಧಗಳನ್ನು ಪ್ರಯೋಜನಗಳ ಸಮೇತ ನೀಡಲಾಗಿದೆ ನೋಡಿ……