ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ. ನನಗೆ ಗೊತ್ತಿರುವ ಹಾಗೆ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಹಾಗೂ ಚುನಾವಣೆ ವೇಳೆ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಈಗ ಮೈಂಟೇನೆನ್ಸ್ಗಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಕರೆಂಟ್ ಶಾರ್ಟೇಜ್ ಆಗಿ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ಈ ವೇಳೆ ಜೆಸ್ಕಾಂ ಇಂಜಿನಿಯರ್ ಅವರಿಗೆ ಸಚಿವ ಕೆ.ಜೆ.ಜಾರ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ. ನಾನೇನು ಹೊಸದಾಗಿ ಮಂತ್ರಿಯಾಗಿಲ್ಲ. ನಿಮ್ಮ ಕೈಲಾಗದೆ ಇದ್ದರೇ ಹೆಡ್ ಆಫೀಸ್ಗೆ ಹೇಳಿ ಅಂತ ಕೆ.ಜೆ.ಜಾರ್ಜ್ ಗರಂ ಆಗಿದ್ದಾರೆ.
Author: Prajatv Kannada
ಬೆಂಗಳೂರು: ವೈಷ್ಣವಿ ಬಿಲ್ಡರ್ಸ್ ಚೇರ್ಮನ್ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ ಆತನ ಸ್ನೇಹಿತ, ಆರೋಪಿ ವೇದಾಂತ್ ದುಗಾರ್ ನನ್ನ ಬೆಂಗಳೂರು ಏರ್ಪೋರ್ಟ್ ನಲ್ಲಿ ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ಮೇ 9ರಂದು ರಾತ್ರಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ ವೇದಾಂತ್ ಮುಂಬೈಗೆ ತೆರಳಿ ಅಲ್ಲಿಂದ ತನ್ನ ಪ್ರೈವೇಟ್ ಜೆಟ್ ಬಳಸಿ ನೇಪಾಳಕ್ಕೆ ಪರಾರಿಯಾಗಿದ್ದ. ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಎಲ್ಓಸಿ ಹೊರಡಿಸಿದ್ದರು. ಜೂನ್ 24ರಂದು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಆರೋಪಿಯನ್ನ ಬಂದಿಸಿದ್ದಾರೆ. ಜೂನ್ 9ರಂದು ಸಂಜೆ ಆರ್.ಟಿ.ನಗರದ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವೈಷ್ಣವಿ ಬಿಲ್ಡರ್ಸ್ ಮಾಲೀಕ ಗೋವಿಂದರಾಜು ಪುತ್ರ ದರ್ಶನ್ ಹಾಗೂ ವಿಎಆರ್ ಬಿಲ್ಡರ್ಸ್ ಪುತ್ರ ಸಂಜಯ್ ದುಗಾರ್ ಪುತ್ರ ವೇದಾಂತ್ ದುಗಾರ್ ಬಂದಿದ್ದರು. ಇಬ್ಬರೂ ಸ್ನೇಹಿತರೇ ಆಗಿದ್ದ ವೇದಾಂತ್ ದುಗಾರ್ ಮತ್ತು ದರ್ಶನ್ ಕಳೆದ ಕೆಲ ದಿನದ ಹಿಂದೆ ರೆಸ್ಟೋರೆಂಟ್ನಲ್ಲಿ ಎದುರು ಬದುರಾಗಿದ್ದಾಗ ವೇದಾಂತ್ ನನ್ನ ಮಾತನಾಡಿಸದೇ ಇದ್ದಿದ್ದಕ್ಕೆ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ.…
ಬೆಂಗಳೂರು: ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಅಧ್ಯಕ್ಷ, 2008ರ ಬೆಂಗಳೂರು ಸರಣಿ ಬಾಂಬ್ (2008 Bengaluru Serial Blasts) ಸ್ಪೋಟದ ಆರೋಪಿ ಅಬ್ದುಲ್ ನಾಸೀರ್ ಮದನಿ (Abdul Nasser Madani) ಇಂದು ಸಂಜೆ ಕೊಚ್ಚಿನ್‌ಗೆ ಪ್ರಯಾಣ ಬೆಳೆಸಲಿದ್ದಾನೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಇಂದು ಸಂಜೆ ಸಂಜೆ 6:15 ರ ವಿಮಾನದಲ್ಲಿ ಪ್ರಯಾಣ ಬೆಳೆಸಿ ರಾತ್ರಿ 7:20ಕ್ಕೆ ಮದನಿ ಕೊಚ್ಚಿನ್ ತಲುಪಲಿದ್ದಾನೆ. ಮದನಿ ಜೊತೆ ಹೆಂಡತಿ ಮತ್ತು ಇತರರು ಪ್ರಯಾಣ ಬೆಳೆಸಲಿದ್ದಾರೆ. ಕೊಚ್ಚಿನ್‌ಗೆ ತೆರಳಿದ ಬಳಿಕ ಕೊಲ್ಲಂ ಜಿಲ್ಲೆಯ ಅನ್ವರ್ ಸಿರಿ ಸಸ್ತುಂಮಕುಟ ಎಂಬಲ್ಲಿಗೆ ಮದನಿ ತೆರಳಲಿದ್ದಾನೆ. ಮದನಿ ಭದ್ರತೆಗೆ ಓರ್ವ ಆರ್‌ಎಸ್ಐ, ಮೂವರು ಪಿಸಿಗಳು, ಒಬ್ಬ ಚಾಲಕನನ್ನು ನಿಯೋಜನೆ ಮಾಡಲಾಗಿದೆ. ತಂದೆಯ ಅನಾರೋಗ್ಯದ ನಿಮಿತ್ತ ಕೇರಳಕ್ಕೆ ತೆರಳಲು ಅನುಮತಿ ನೀಡುವಂತೆ ಮದನಿ ಸುಪ್ರೀಂ ಕೋರ್ಟ್‌ಗೆ (Supreme Court) ಮನವಿ ಮಾಡಿದ್ದ. ಈ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್ ಕೇರಳಕ್ಕೆ ತೆರಳಲು ಏಪ್ರಿಲ್ 17 ರಂದು ಅನುಮತಿ ನೀಡಿತ್ತು. ಸುಪ್ರೀಂ ಕೋರ್ಟ್ 3 ತಿಂಗಳ ಅನುಮತಿ…
ಬೆಂಗಳೂರು: ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ ವಿದ್ಯುತ್ , ಹಾಲು, ಮದ್ಯಪಾನ ಹೀಗೆ ಎಲ್ಲದರ ರೇಟ್ ಗಗನಕ್ಕೇರಿದ್ದು ಈಗ ಟೊಮೆಟೋ ಸರದಿ ಬಂದಿದೆ. ಜನರಿಗೆ ಬರೆ ಹಾಕಿದಂತೆ ಆಗುತ್ತಿದೆ. ಸಾಮಾನ್ಯ ಜನರಿಗಂತು ಇದು ನುಂಗಲಾರದ ತುತ್ತಾಗಿಬಿಟ್ಟಿದಂತೆ ಕಾಣುತ್ತಿದೆ. ನೂರರ ಸನಿಹಕ್ಕೆ ಆಗಮಿಸಿದ ಟೊಮೆಟೊ ದರ ಐದು ಗ್ಯಾರಂಟಿ ಖುಷಿ ನಡುವೆ ಜನತೆಗೆ ಟೊಮಟೋ ದರ ಶಾಕ್.ಈ ದಿನದಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಕಳೆದ ವಾರ 30-40 ರೂ. ಇದ್ದ ಟೊಮೆಟೋ ದರ ನಿನ್ನೆ 40-50 ರೂ. ಇಂದು 70-80 ರೂ. ಇನ್ನೆರಡು ದಿನದಲ್ಲಿ 100 ಗಟಿ ದಾಟಿದ ಟೊಮೆಟೋ ದರ. ಮಳೆಯಿಂದಾಗಿ ಕೈ ಕೊಟ್ಟ ಫಸಲು- ಗಗನಕ್ಕೇರಿದ ಟೊಮ್ಯಾಟೊ ದರ ಕೆ ಆರ್ ಮಾರುಕಟ್ಟೆಯಲ್ಲಿ ಟೊಮ್ಯಾಟೊ ದರ ಬಲು ದುಬಾರಿ ಟೊಮ್ಯಾಟೊ ಬೆಲೆ ಕೇಳಿ ಒಂದು ಕ್ಷಣ ಗಾಬರಿಯಾಗ್ತಿದ್ದಾರೆ ಜನ ಬೇಡಿಕೆ ತಕ್ಕಂತೆ ಪೂರೈಕೆಯಾಗ್ತಿಲ್ಲ ಟೊಮ್ಯಾಟೊ ದರ ಕೇಳಿ ಕೊಳ್ಳಲು ಜನ ಹಿಂದೇಟು ಇವತ್ತು ಮಾರುಕಟ್ಟೆ ಯಲ್ಲಿ ಒಂದು ಕೆಜಿ ಟೊಮ್ಯಾಟೊ 80ರಿಂದ…
ಬೆಂಗಳೂರು: ಡ್ರಗ್ಸ್ ಗಾಗಿ ಪೆಡ್ಲರ್ ಗಳ ಜೊತೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಟಿ.ಚಂದ್ರಶೇಖರ್ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಎಂಬ ಎರಡು ಚಿತ್ರಗಳ ನಿರ್ಮಾಪಕರಾಗಿರುವ ಚಂದ್ರಶೇಖರ್ ಇದೀಗ ಹೆಂಡತಿಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೇಲ್ನೋಟಕ್ಕೆ ಇದು ಕೌಟುಂಬಿಕ ಸಮಸ್ಯೆ ಎನಿಸಿದರು, ಹೆಂಡತಿಯ ವಿರುದ್ಧ ಚಂದ್ರಶೇಖರ್ ಗುರುತರ ಆರೋಪ ಮಾಡಿದ್ದಾರೆ. ಪತ್ನಿ ಡ್ರಗ್ ವ್ಯಸನಿಯಾಗಿದ್ದು, ಡ್ರಗ್ಸ್ ಗಾಗಿಯೇ ಆಕೆ ಡ್ರಗ್ ಪೆಡ್ಲರ್ ಜೊತೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದಾಳೆ ಎಂದು ಚಂದ್ರಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ನನ್ನ ಹೆಂಡತಿಯಾದ ನಮಿತಾರನ್ನು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದೇನೆ. ನನ್ನ ಹೆಂಡತಿಯೊಂದಿಗೆ ವಾಸವಾಗಿರುತ್ತೇನೆ. ನಮಗೆ ಮಕ್ಕಳು ಇರುವುದಿಲ್ಲ. ನನ್ನ ಹೆಂಡತಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವ್ಯಸನಿಯಾಗಿದ್ದು, ಅದನ್ನು ಬಿಡಿಸಲು ಬಹಳ ಸಾರಿ ಪ್ರಯತ್ನ ಪಟ್ಟಿರುತ್ತೇನೆ. ಆದರೂ ಕದ್ದು ಮುಚ್ಚಿ ಆಕೆ ಸೇವನೆ ಮಾಡುತ್ತಿರುತ್ತಾಳೆ’ ಎಂದು ದೂರಿನಲ್ಲಿ…
ಬೆಂಗಳೂರು ಗ್ರಾಮಾಂತರ: ಹೊಸಕೋಟೆ ನಗರವನ್ನು ತಂತಿಗಳ ಮುಕ್ತಮಾಡಿ ನಗರಕ್ಕೆ ಅಂಡರ್ ಗ್ರೌಂಡಿಂಗ್ ಕೇಬಲ್ ಮಾಡಿಕೊಡಬೇಕಾಗಿ ಇಂಧನ ಸಚಿವರಲ್ಲಿ ಮನವಿ ಮಾಡಿದ ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ ನಗರದಲ್ಲಿ ಕರೆಂಟ್ ತಂತಿಗಳು ಜೋಳಾಡುತ್ತಿರುವ ಕಾರಣದಿಂದಾಗಿ, ಅನೇಕರು ಅದನ್ನು ಮುಟ್ಟಿ ಶಾಕ್ ಹೊಡೆದ ಪರಿಣಾಮ ತೊಂದರೆಗಳನ್ನು ಅನುಭವಿಸಿದ್ದಾರೆ. ಈ ಹಿನ್ನಲೆಯಲ್ಲಿ ಹೊಸಕೋಟೆ ನಗರವನ್ನು ತಂತಿಗಳ ಮುಕ್ತವನ್ನಾಗಿ ಮಾಡಬೇಕು ಈ ನಿಟ್ಟಿನಲ್ಲಿ ಹೊಸಕೋಟೆ ನಗರಕ್ಕೆ (ಅಂಡರ್ ಗ್ರೌಂಡಿಂಗ್ ಕೇಬಲ್) ಮಾಡಿಕೊಡಬೇಕಾಗಿದೆ ಎಂದು ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರಲ್ಲಿ ಮನವಿ ಮಾಡಿದರು.
ಬೆಂಗಳೂರು: ವಿದ್ಯಾರ್ಥಿಗಳು ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವವರು. ಹೀಗಾಗಿ ಡ್ರಗ್ಸ್ನಂತಹ ಮಾದಕ ವಸ್ತುಗಳಿಂದ ದೂರವಿರಿ. ಕಾಲ್ನಡಿಗೆ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾದಕವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ದಿನ ಆಚರಣೆ ಮಾಡುತ್ತಿದ್ದೇವೆ. ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕೃತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ಇಂದು ವಿಶ್ವಮಟ್ಟದಲ್ಲಿ ಹೆಸರು ಬಂದಿದೆ. ಇಲ್ಲಿರುವ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಡಿ ಕೆ ಶಿವಕುಮಾರ್ ಕೂಡ ಆಗಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತ ದುಶ್ಚಾಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಗುರಿ ಸೇರಿ, ಸಾಧನೆ ಮಾಡಲು ಸಾಧ್ಯ. ಇಂದು ನಾನು ನಿಮ್ಮ ಜೊತೆ ಜಾಥಾದಲ್ಲಿ ಹೆಜ್ಜೆ ಹಾಕುತ್ತೇನೆ. ಈ ಜಾಥಾ ನಿಮ್ಮ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯಲಿದೆ. ಮಾದಕ ವಸ್ತುಗಳ ವಿರುದ್ಧ…
ಬೆಂಗಳೂರು: ಮಾದಕ ಮುಕ್ತ ರಾಜ್ಯ ಮಾಡುವುದಕ್ಕೆ ನಾವು ಪಣ ತೊಟ್ಟಿದ್ದೇವೆ. ಪ್ರತಿ ದಿನ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಬಹಳಷ್ಟು ದೊಡ್ಡ ದೊಡ್ಡ ವ್ಯಕ್ತಿಗಳು ಮಾದಕ ವ್ಯಸನಿಗಳಾಗಿದ್ದಾರೆ. ಇಲಾಖೆ ಮಾದಕ ವಸ್ತು ಮುಕ್ತ ರಾಜ್ಯ ಮಾಡಲು ಹೊಣೆ ಹೊತ್ತಿದೆ. ಡ್ರಗ್ಸ್ ಮಾರಾಟ ಮಾಡುವವರ ಮೇಲೆ ಕಠಿಣ ಕೇಸ್ ಹಾಕುತ್ತೇವೆ. ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಓಪನ್ ಮಾಡುತ್ತೇವೆ. ಸಹಾಯವಾಣಿಗೆ ಕರೆ ಮಾಡುವವರ ಹೆಸರನ್ನು ಬಹಿರಂಗಪಡಿಸಲ್ಲ ಎಂದು ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಆಯೋಜಿಸಲಾಗಿದ್ದ ಮಾದಕವಸ್ತು ವಿರೋಧಿ ದಿನ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ಬೆಂಗಳೂರು: ಶಾಲಾ ಮಕ್ಕಳಲ್ಲಿ ಡ್ರಗ್ ಬಗ್ಗೆ ಜಾಗೃತಿ ಮೂಡಿಸುವ ತಂತ್ರಕ್ಕೆ ಮುಂದಾಗಿದ್ದಾರೆ. ಡ್ರಗ್ಸ್ ಸೇವನೆ, ಅದರಿಂದಾಗುವ ದುಷ್ಪರಿಣಾಮ ಹಾಗೂ ಆರೋಗ್ಯದಲ್ಲಾಗುವ ನಷ್ಟ, ಡ್ರಗ್ಸ್ನಿಂದ ಆಗುವ ಅನಾಹುತಗಳ ಬಗ್ಗೆ ಶಿಕ್ಷಕರಿಂದಲೇ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪಠ್ಯದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಸೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ ಪೊಲೀಸರು ಡ್ರಗ್ಸ್ ಸಂಬಂಧ ಹಲವು ಕಾರ್ಯಾಚರಣೆ ನಡೆಸುತ್ತಿದ್ದು ಯುವಕರು ಹೆಚ್ಚಾಗಿ ಮಾದಕ ಲೋಕಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿದೆ. ಯುವಜನತೆ ಹೆಚ್ಚು ಮಾದಕ ವ್ಯಸನಿಗಳಾಗುತಿದ್ದಾರೆ. ಕಾಲೇಜು ಹಂತದಲ್ಲಿರುವ ಮಕ್ಕಳೇ ಹೆಚ್ಚು ಮಾದಕ ದುಷ್ಚಟಕ್ಕೆ ಬಲಿಯಾಗುತಿದ್ದಾರೆ. ಹೀಗಾಗಿ ಶಾಲಾ ಹಂತದಲ್ಲೇ ಮಕ್ಕಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು ಪ್ರಯತ್ನದ ಹಂತವಾಗಿ ಬೆಂಗಳೂರು ಪೊಲೀಸ್ ಕಮಿಷನರ್, ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಿದ್ದಾರೆ.
ಬೆಂಗಳೂರು: ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗ. ಇದರಿಂದ ನಮ್ಮ ಸಮಾಜವನ್ನುರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಮಾತಾಡಿದರು. ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ತುಂಬಿದರು. ನಂತರ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೂ ಜಾಗೃತಿ ಜಾಥಾದಲ್ಲಿ ಮಕ್ಕಳ ಜತೆ ಹೆಜ್ಜೆ ಹಾಕಿದರು.