ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನೈತಿಕ ಸಂಬಂಧ ಶಂಕೆಗೆ ಬೇಸತ್ತು ಪತ್ನಿ ಪ್ರಿಯಾಂಕಾಳ ಗುಪ್ತಾಂಗಕ್ಕೆ ಚಾಕು ಇರಿದಿರುವ ಪತಿ ದಯಾನಂದ ಈ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕ ಅತಿಯಾಗಿ ಪೋನ್ ನಲ್ಲಿ ಮಾತಾಡ್ತಿದ್ಲು ಅಂತಾ ಗಲಾಟೆ ತೆಗೆದು ಚಾಕು ಇರಿದಿದ್ದಾನೆ ಈ ರಭಸಕ್ಕೆ ತೀವ್ರ ರಕ್ತಸ್ರಾವ ವಾಗಿದ್ದ ಗಾಯಾಳು ಪ್ರಿಯಾಂಕಾ ಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆದಿದೆ. ಚಾಕು ಇರಿತ ಪತಿ ದಯಾನಂದನನ್ನು ಆಡುಗೋಡಿ ಪೊಲೀಸರು ಬಂಧಿಸಿ ವಿಚಾರನೆ ಮುಮದುವರೆಸಿದ್ದಾರೆ.
Author: Prajatv Kannada
ತುಮಕೂರು: ಮಕ್ಕಳಲ್ಲಿ ದಿಢೀರನೆ ಕಾಣಿಸಿಕೊಂಡ ಕಪ್ಪು ಚುಕ್ಕೆಗಳು ಕಾಣಿಸಿಕೊಂಡ ಘಟನೆಯೊಂದು ತುಮಕೂರು ಜಿಲ್ಲೆ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ವರದಿಯಾಗಿದೆ. ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳಲ್ಲಿ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಯಲಚೇನಹಳ್ಳಿ ಗ್ರಾಮದ 5 ಮಕ್ಕಳಲ್ಲಿ ಕಾಣಿಸಿಕೊಂಡಿವೆ. ಮಕ್ಕಳ ಅಂಗಾಲು- ಅಂಗೈಲ್ಲಿ ಕಾಣಿಸಿಕೊಂಡಿದ್ದು, ಇದೀಗ ಇಬ್ಬರು ಶಿಕ್ಷಕರೂ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ತುರುವೇಕೆರೆ ತಾಲೂಕು ಆಸ್ಪತ್ರೆಯ ಚರ್ಮ ತಜ್ಞೆ ಡಾ.ಮಧುಮತಿ ಗ್ರಾಮಕ್ಕೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಭೇಟಿ ಮಾಡಿ ತಪಾಸಣೆ ನಡೆಸಿದರು.
ಹುಬ್ಬಳ್ಳಿ: 5 ಕೆಜಿ ಅಕ್ಕಿ ಕೊಡಲು ಆರಂಭ ಮಾಡಿದ್ದು ಯುಪಿಎ ಸರ್ಕಾರ. ಇದು ನರೇಂದ್ರ ಮೋದಿ ಅಕ್ಕಿ ಅಲ್ಲ, ಯುಪಿಎ ಅಕ್ಕಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರತೆ ಕಾಯ್ದೆ ತಂದಿದ್ದೇವೆ. ಈ ಕಾಯ್ದೆ ಮೂಲಕ ಎಲ್ಲರಿಗೂ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೇವೆ. ಕೇಂದ್ರದ 5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೇವು. ಮಾತುಕೊಟ್ಟಂತೆ ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಅಡೂರು : ಅಡೂರಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಪ್ರೌಢಶಾಲಾ ವಿಭಾಗದ ಸೋಶಿಯಲ್ ಸಯನ್ಸ್ ಪಠ್ಯವನ್ನು ಕಲಿಸಲು ಕನ್ನಡ ತಿಳಿಯದ ಮಲಯಾಳಿ ಶಿಕ್ಷಕಿಯನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಅಡೂರು ಶಾಲೆಯ ಕನ್ನಡ ವಿದ್ಯಾರ್ಥಿಗಳು ಹಾಗೂ ಕನ್ನಡ ಪೋಷಕರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಪ್ರತೀ ಮಗುವಿಗೂ ಕೂಡಾ 6ರಿಂದ 14ನೇ ವಯಸ್ಸಿನ ತನಕ ಮಗುವಿನ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕೆಂಬ ಕಾನೂನು ಇದೆ. ಆದರೆ ಅಡೂರು ಶಾಲೆಯಲ್ಲಿ ಕೇರಳ ಶಿಕ್ಷಣ ಇಲಾಖೆಯು ಮಕ್ಕಳ ಮಾತೃಭಾಷಾ ಶಿಕ್ಷಣದ ಹಕ್ಕನ್ನು ಕಸಿಯುತ್ತಿದೆ. ಕನ್ನಡ ಮಕ್ಕಳಿಗೆ ಕನ್ನಡ ಮಾತೃಭಾಷೆಯಲ್ಲೇ ಶಿಕ್ಷಣ ದೊರೆಯಬೇಕಿದೆ. ಈಗ ನೇಮಕವಾದ ಶಿಕ್ಷಿಕಿಗೆ ಸರಿಯಾಗಿ ಕನ್ನಡ ಬರೆಯಲು ಹಾಗೂ ಓದಲು ಬರುತ್ತಿಲ್ಲ. ಅವರ ಪಾಠ ಏನೇನೂ ಅರ್ಥವಾಗುತ್ತಿಲ್ಲ ಎಂದು ಮಕ್ಕಳು ಹೇಳುತ್ತಿದ್ದಾರೆ. 10ನೇ ತರಗತಿಯ ತಮ್ಮ ಜೀವನದ ನಿರ್ಣಾಯಕ ಪರೀಕ್ಷೆಯನ್ನು ಎದುರಿಸಲು ಸಿದ್ಧರಾದ ಕನ್ನಡ ಮಕ್ಕಳಿಗೆ ನೇಮಕವಾದ ಮಲಯಾಳಿ ಮಾತೃಭಾಷೆಯ ಶಿಕ್ಷಕಿಯಿಂದ ಕಲಿಸಲು ಸಾಧ್ಯವಿಲ್ಲ. ಕನ್ನಡ ಮಕ್ಕಳ ಶೈಕ್ಷಣಿಕ ಅಗತ್ಯವನ್ನು ಸರ್ಕಾರ ಒದಗಿಸಬೇಕು. ಈಗಾಗಲೇ ನೇಮಕವಾದ…
ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು (Training Aircraft) ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಪೈಲಟ್ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಷ (Emergency Landing) ಮಾಡಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಕಲಬುರಗಿ ವಿಮಾನ ನಿಲ್ದಾಣದ ಟ್ರೈನಿಂಗ್ ವಿಮಾನ ಹಾರಾಟ ಪ್ರಾರಂಭಿಸಿದ ನಂತರ ಅದರ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿಮೀ ಹಾರಾಟದ ಬಳಿಕ ವಿಮಾನದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆ ಪೈಲಟ್ ತಕ್ಷಣವೇ ಹತ್ತಿರದ ಜಮೀನಿನಲ್ಲಿ ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್ ಪೈಲಟ್ ಹಾಗೂ ಟ್ರೈನಿ ಪೈಲಟ್‌ಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ: ಗಂಡ-ಹೆಂಡತಿ (Husband- Wife Fight Hassan) ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತೇ ಇದೆ. ಆದರೆ ಇಲ್ಲೊಂದು ದಂಪತಿಯ ಕಲಹ ಬೀದಿಗೆ ಬಂದಿದೆ. ಈ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಹೌದು. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಮೇಲೆ ಪತಿ ಅಮಾನುಷವಾಗಿ ಹಲ್ಲೆ ಮಾಡುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆಗೈದಿದ್ದು ಯಾಕೆ..?: 18 ವರ್ಷಗಳ ಹಿಂದೆ ವಿವಾಹವಾಗಿದ್ದ ಶ್ರೀನಿವಾಸ್ ಹಾಗೂ ಸವಿತಾ ಕಳೆದ ಎರಡು ವರ್ಷಗಳಿಂದ ಒಂದೇ ಮನೆಯಲ್ಲಿ ವಿಭಾಗ ಮಾಡಿಕೊಂಡು ವಾಸ ಮಾಡುತ್ತಿದ್ದರು. ಪತಿಯಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ಸವಿತಾ ಆಸ್ತಿ ವಿಭಾಗಕ್ಕೂ ಪತಿ ಮೇಲೆ ಕೇಸ್ ಹಾಕಿದ್ದಳು. ಶನಿವಾರ ಸಂಜೆ ಸೈಟ್ ಸೇಲ್ ಸಂಬಂಧ ಸವಿತಾ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದಾನೆ. ಈ ವೇಳೆ ಎದುರು ಮಾತನಾಡಿದ ಪತ್ನಿ ಮೇಲೆ ಮಚ್ಚು ಹಾಗೂ ರಾಡ್‍ನಿಂದ ಹಲ್ಲೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ರಸ್ತೆ ಮದ್ಯದಲ್ಲಿ ಬಾಟಲ್ ಹೊಡೆದು, ಗ್ರಾಮಸ್ಥರ ಮೇಲೆ ಮಚ್ಚು,ಹೆಲ್ಮೆಟ್ ನಿಂದ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ನಡೆದಿದೆ.. ಯಲಹಂಕ ಮೂಲದ 30 ಜನರ ಪಡ್ಡೆ ಹುಡುಗರ ಗುಂಪೊಂದು ಪಾಲ್ ಪಾಲ್ ದಿನ್ನೆ ಗ್ರಾಮದ ಸೀಬೆ ತೋಟದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗು ಕಂಠ ಪೂರ್ತಿ ಕುಡಿದು ಮೋಜು ಮಸ್ತಿ ಮಾಡಿದ್ದಾರೆ. ಮನೆಗೆ ತೆರಳುವ ಸಂದರ್ಭದಲ್ಲಿ ರಸ್ತೆಗೆ ಬಂದು ಮದ್ಯದ ಬಾಟಲ್ ಹೊಡೆದು ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹೋಗಿ ಬರುತ್ತಿರು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ್ದು, ಕೂಡಲೆ ಯುವಕರು ಪ್ರಶ್ನೆ ಮಾಡಿದ್ದಾರೆ. ನಶೆಯಲ್ಲಿ ತೇಲಾಡುತ್ತಿದ್ದ ಗ್ಯಾಂಗ್ ಏಕಾಏಕಿ ಹೆಲ್ಮೆಟ್ ಹಾಗು ಮಚ್ಚಿನಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. Video Player 00:00 00:20 ವಿಷಯ ತಿಳಿದ ಗ್ರಾಮಸ್ಥರು ಕೂಡಲೆ ಸ್ಥಳಕ್ಕೆ ಆಗಮಿಸಿದಾಗ ನಶೆಯಲ್ಲಿದ್ದ ಗ್ಯಾಂಗ್ ಪರಾರಿಯಾಗಲು ಯತ್ನಿಸಿದ್ದು,ಗ್ರಾಮಸ್ಥರು ಕೆಲವರನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..ಕೂಡಲೇ ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ…
ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆಯ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದರು. ನಗರದ ಬಸವಭವನದಲ್ಲಿ ಜರುಗಿದ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತಾಗಬೇಕು. ಈ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿದರೆ ಮಾತ್ರ ಭಾರತ ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಭಾರತ ಜಾಗತಿಕವಾಗಿ ಬೆಳೆದು ನಿಲ್ಲಲು ಸಾಧ್ಯ ಎಂದರು. ಜಿಪಂ, ತಾಪಂ ಚುನಾವಣೆಗಳು ಸನಿಹದಲ್ಲಿವೆ. ಲೋಕಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಬೇಕು. ಈ ದಿಸೆಯಲ್ಲಿ ಎಲ್ಲ ಕಾರ್ಯಕರ್ತರು ಕೆಲಸ ಆರಂಭಿಸಿ. ವಿಧಾನಸಭಾ ಚುನಾವಣೆಯಿಂದ ಕಂಗಾಲಾಗುವುದು ಬೇಡ. ಸೋಲಿನ ಮಧ್ಯೆ ಕಾರ್ಯಕರ್ತರು ಉತ್ಸಾಹದಿಂದ ಕಾರ್ಯ ನಿರ್ವಹಿಸಿ ಎಂದು ಕಟೀಲ್ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ, ಬಿಜೆಪಿ ಅಂತಹ ಸುಳ್ಳುಗಳನ್ನು…
ಹುಬ್ಬಳ್ಳಿ: ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ವರ್ಗಾವಣೆಯಲ್ಲಿ ಮುಖ್ಯ ಮಂತ್ರಿಗಳು ಹಣ ಬೇಡಿಕೆ ಇಡ್ತಾ ಇದ್ದಾರೆ. ಈ ಮೂಲಕ ಪೇ ಸಿಎಂ ಪೇ ಡಿಸಿಎಂ ವ್ಯವಸ್ಥೆ ಜಾರಿಗೆ ಬಂದಿದೆ ಅಂತಾ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದರು. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು, ಯಾವ ಆಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ ಇದೊಂದು ಆಧಾರ ರಹಿತ ಆರೋಪ ಆಗಿದೆ. ಹೊಸ ಸರ್ಕಾರ ಬಂದ ಮೇಲೆ ವರ್ಗಾವಣೆ ಸಹಜ ಆದ್ದರಿಂದ ಬಸವರಾಜ ಬೊಮ್ಮಾಯಿ ಅವರು ಯಾವ ಬೇಸ್ ಮೇಲೆ ಹೇಳಿಕೆ ಕೊಟ್ಟಿದ್ದಾರೆ ಗೊತ್ತಿಲ್ಲ ಕಾರಣ ಈ ಕುರಿತು ಅವರನ್ನೇ ತಾವು ಕೇಳಬೇಕು ಎಂದ ಅವರು ಸಂಪೂರ್ಣ ಮಾಹಿತಿ ಆಧಾರ ಇದ್ದರೇ ಅವರನ್ನೇ ಕೇಳಿರಿ ಎಂದರು. ಇನ್ನೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಎಂದು ನಿರ್ಧಾರಕ್ಕೆ ಕೆಂಡ ಕಾರಿದ ಸಚಿವ ಸಂತೋಷ ಲಾಡ್ ಅವರು, ಆಹಾರ ಭದ್ರತೆ ಕಾನೂನು ಜಾರಿಗೆ ತಂದವರು ಕಾಂಗ್ರೆಸ್ ಸರ್ಕಾರ. ಇಲ್ಲಿ…
ಬೆಳಗಾವಿ ;- ಬಿಜೆಪಿಯಲ್ಲಿ ದಲಿತರು ರಾಜ್ಯಾಧ್ಯಕ್ಷರಾಗಬಾರದೇ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ. ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷನಾಗುತ್ತೇನೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ಅದನ್ನು ಬಹಿರಂಗವಾಗಿ ಹೇಳುವುದಿಲ್ಲ ಎಂದು ಹೇಳಿದ್ದಾರೆ.