ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮತ್ತೊಂದು ಮಹತ್ವದ ಯೋಜನೆ ಜಾರಿಗಾಗಿ ಮುಹೂರ್ತ ಫಿಕ್ಸ್ ಆಗಿದೆ. ಇಷ್ಟುದಿನ ರಾಜ್ಯದ ಮಹಿಳೆಯರು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ. ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಂದುಕೊಂಡಂತೆ ಆದ್ರೆ ಸ್ವಾತಂತ್ರೋತ್ಸವ ದಿನಕ್ಕೆ ಲಕ್ಷ್ಮೀಯರ ಖಾತೆಗೆ ಲಕ್ಷ್ಮೀಯ ಆಗಮನವಾಗಲಿದೆ. ಹಾಗಾದ್ರೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ಹೇಗೆಲ್ಲಾ ಸರ್ಕಾರ ಸಿದ್ದವಾಗ್ತಿದೆ ಅನ್ನೋ ರಿಪೋರ್ಟ್ ಇಲ್ಲಿದೆ ಮಹಿಳಾ ಮಣಿಗಳಿಗೆ ಶಕ್ತಿಯ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ದೊಡ್ಡ ಗಿಫ್ಟ್ ಕೊಡೋಕೆ ಮುಂದಾಗಿದೆ. ಎಲ್ಲೆಂದರಲ್ಲಿ ಫ್ರೀ ಬರ್ಡ್ನಂತೆ ಓಡಾಡಿ ಅಂತ ನಾರಿಯರಿಗೆ ಫ್ರೀ ಬಸ್ ಪ್ರಯಾಣ ಕಲ್ಪಿಸಿದ್ದ ಸರ್ಕಾರ ಈಗ ಖರ್ಚಿಗೆ ರಾಜ್ಯದ ಎಲ್ಲಾ ಗೃಹಗಳ ಲಕ್ಷ್ಮೀಯರ ಖಾತೆಗೆ ಹಣ ಹಾಕಲು ಮುಂದಾಗಿದೆ.ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆ ನೋಂದಾಣಿ ಪ್ರಕ್ರಿಯೆ ಆರಂಭವಾಗಲಿದ್ದು,ಇದಕ್ಕೆ ಅಂತ ಸರ್ಕಾರ…
Author: Prajatv Kannada
ಬೆಂಗಳೂರು : ಗೃಹ ಜ್ಯೋತಿ,ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅರ್ಜಿದಾರರಿಂದ ಹಣ ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ” ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನ ಮಾಡ್ತೇವೆ. ಅರ್ಜಿ ಸಲ್ಲಿಕೆ ಉಚಿತವಾಗಿ ಮಾಡಿಕೊಡಬೇಕು. ಯಾರಾದರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ” ಎಂದು ಎಚ್ಚರಿಕೆ ನೀಡಿದರು. 200 -500 ರೂಪಾಯಿ ವಸೂಲಿ ಈಗಾಗಲೇ 200 ರಿಂದ 500 ರೂಪಾಯಿ ಹಣ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಅದು ಗೊತ್ತಾದ್ರೆ ಅವರ ಏಜೆನ್ಸಿ ಕೂಡ ಕ್ಯಾನ್ಸಲ್ ಮಾಡ್ತೀವಿ. ಈ ಸ್ಕೀಮ್‌ಗಳಲ್ಲಿ ಯಾರು ಕೂಡ ಒಬ್ಬರಿಗೆ ಲಂಚ ಕೊಡಬಾರದು ಎಂದು ಮನವಿ ಮಾಡಿದರು. ಸಹಾಯವಾಣಿ ಆರಂಭ ಯೋಜನೆ ಪಡೆದುಕೊಳ್ಳಲು ಯಾರಾದರೂ ಲಂಚ ಕೇಳಿದರೆ ಅಥವಾ ಕೊಟ್ಟರೆ ನಾವು ಒಂದು ಸಹಾಯವಾಣಿ ( ಹೆಲ್ಪ್ ಲೈನ್) ನಂಬರ್ ಕೊಡ್ತೀವಿ. ಅದಕ್ಕೆ ಕಾಲ್ ಮಾಡಿ ದೂರು ಕೊಡಿ…
ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy)ಶಾಂತಿನಗರದ ಕೆಎಸ್‌ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಇವತ್ತು ಒಂದೇ ದಿನ 1.05 ಕೋಟಿ ಜನ ಪ್ರಯಾಣ ಮಾಡಿದ್ದಾರೆ. ಸಾರಿಗೆ ಬಸ್ ಗಳಲ್ಲಿ ಒಂದೇ ದಿನ 1.05 ಕೋಟಿ ಜನ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ಸಾರಿಗೆ ಇಲಾಖೆಯ ಬಲವರ್ಧನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹೊಸ ಬಸ್ ಗಳ ಸೇರ್ಪಡೆ ಮತ್ತು ಬಸ್ ಗಳ ಪುನಶ್ಚೇತನ ಕಾರ್ಯ ನಡೆಸಬೇಕು. ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು. ಆದ್ಯತೆ ಮೇರೆಗೆ ಸಿಬ್ಬಂದಿ ನೇಮಕ ಮಾಡಬೇಕು. ಸರ್ಕಾರಿ ಬಸ್ ಗಳು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕೃಷ್ಣಾಮೃಗ ಎಂಬ ಪ್ರಾಣಿಗೆ ಕಾಲಿಗೆ ಪೆಟ್ಟಾಗಿ ನರಲಾಟ ಒಳಪಟ್ಟಿದ್ದು ಹಿನ್ನೆಲೆಯಲ್ಲಿ ಇಂದು ಅದಕ್ಕೆ ಶಸ್ತ್ರ ಚಿಕಿತ್ಸೆ ನೀಡಿ ವಿಶೇಷ ಹಾರೈಕೆಯನ್ನು ಮಾಡಲಾಗಿದೆ ಎಂದು ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಉಮಾಶಂಕರ್ ಮಾಹಿತಿ ನೀಡಿದರು. ಹೌದು ಬೆಂಗಳೂರು ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕೃಷ್ಣಾಮೃಗ ಪಾರ್ಕ್ ನಲ್ಲಿ ಗುಂಪು ಇರುವಾಗ ಕಳೆದ ಎರಡು ದಿನಗಳ ಹಿಂದೆ ಎರಡು ಕೃಷ್ಣಾಮೃಗ ಗಳು ಕಿತ್ತಾಟ ಮಾಡಿಕೊಂಡಿವೆ. ಹಾ ವೇಳೆ ಕೃಷ್ಣಾಮೃಗ ಒಂದಕ್ಕೆ ಕಾಲು ಮುರಿದು ಒಂದೇ ಜಾಗದಲ್ಲಿ ಕುಳಿತು ನರಲಾಟ ಅನುಭವಿಸುತ್ತಿತ್ತು ಇದನ್ನು ಕಂಡ ಪ್ರಾಣಿ ಪಾಲಕ ಗಮನಿಸಿ ವೈದ್ಯರಿಗೆ ಮಾಹಿತಿ ನೀಡಿ ಅದನ್ನು ಲ್ಯಾಬ್ ಗೆ ಕರೆತಂದು ಅದಕ್ಕೆ ಇಂದು ಶಸ್ತ್ರ ಚಿಕಿತ್ಸೆ ಮಾಡಿ ವಿಶೇಷ ಹಾರೈಕೆ ಮಾಡಲಾಗಿದೆ ಎಂದು ಡಾಕ್ಟರ್ ಉಮಾ ಶಂಕರ್ ಮಾಹಿತಿ ನೀಡಿದರು ಇನ್ನು ಕಾಲಿನ ಮೂಳೆ ಮುರಿದುಕೊಂಡಿದ್ದ ಕೃಷ್ಣಾಮೃಗ ಶಸ್ತ್ರ ಚಿಕಿತ್ಸೆಯಲ್ಲಿ ಉಮಾಶಂಕರ್ ವಿಜಯದಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ದಾವಣಗೆರೆ: ಮುಸ್ಲಿಮರ ಓಲೈಕೆಗೆ ಸರ್ಕಾರ ಕೆಲವು ನಿರ್ಧಾರ ತೆಗೆದುಕೊಳ್ತಿದೆ. ಇದರ ಪ್ರತೀಕವಾಗಿ ಪಠ್ಯ ಪುಸ್ತಕ ಪರಿಷ್ಕರಣೆ ಆಗಿದೆ ಎಂದು ದಾವಣಗೆರೆ ನಗರದಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದ್ದಾರೆ. ಯಾವುದೇ ಶಿಕ್ಷಣ ತಜ್ಞರನ್ನು ಕೇಳದೆ ಶಾಲಾ ಪಠ್ಯ ಪರಿಷ್ಕರಣೆ ಮಾಡಲಾಗುತ್ತಿದೆ. ನೇರವಾಗಿ ಸಿಎಂ ಮನೆಯಿಂದ ಸಂಪುಟಕ್ಕೆ ಪುಸ್ತಕ ಹೋಗಿದೆ. ಆರ್ಎಸ್ಎಸ್ ಹೆಡ್ಗೇವಾರ್ ಸಂಸ್ಥಾಪಕ ಭಾಷಣ ತೆಗೆದಿದ್ದಾರೆ. PhD ಓದಿದ ಸಚಿವ ಪ್ರಿಯಾಂಕ್ ಯಾಕೆ ಓದಬೇಕು ಅಂತಿದ್ದಾರೆ. ಚಕ್ರವರ್ತಿ ಸೂಲೆಬೆಲೆ ಶಿಕ್ಷಣ ಪಂಡಿತರಲ್ಲ ಅಂತಾ ಹೇಳುತ್ತಿದ್ದಾರೆ. ಯಾವ ಪಂಡಿತರ ಸಲಹೆ ಪಡೆದು ಪಠ್ಯ ಬದಲಾವಣೆ ಮಾಡಿದ್ದಾರೆ ಎಂದು ದಾವಣಗೆರೆ ನಗರದಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ವಾಗ್ದಾಳಿ ನಡೆಸಿದ್ದಾರೆ.
ನಾಲ್ಕು ದಿನಗಳ ಅಮೆರಿಕ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಈಜಿಪ್ಟ್ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಈಜಿಪ್ಟ್ ಗೆ ಭೇಟಿ ನೀಡಿರುವ ಮೊದಿ ಇಂದು ಈಜಿಪ್ಟ್‌ನ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ. ಈಜಿಪ್ಟ್‌ನ ಕೈರೋದಲ್ಲಿರುವ 11ನೇ ಶತಮಾನದಲ್ಲಿ ನಿರ್ಮಾಣವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣವಾಗಿರುವ ಅಲ್-ಹಕೀಮ್ ಮಸೀದಿಗೆ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಮೋದಿ ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಈ ಮೂಲಕ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯವು ಮತ್ತಷ್ಟು ಬಲಪಡಿಸಲಿದೆ. ನಂತರ ಪ್ರಧಾನಿ ಮೋದಿ ಅವರು ಈಜಿಪ್ಟ್‌ನಲ್ಲಿ ನೆಲೆಸಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ಜನರ ನಡುವಿನ ಸಂಬಂಧವನ್ನು ಬೆಳೆಸುವುದು ಮಾತ್ರವಲ್ಲದೆ ಎರಡು ರಾಷ್ಟ್ರಗಳ ನಡುವಿನ ಆರ್ಥಿಕ ಬೆಳವಣಿಗೆ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಕೊಡುಗೆ ನೀಡಲು ವೇದಿಕೆಯನ್ನು ಕಲ್ಪಿಸುತ್ತದೆ. ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್…
ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳು ಮುಂದುವರೆದಿದೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಅಂತರ್ ಜನಾಂಗೀಯ ಸಂಘರ್ಷದಿಂದ ಅಲ್ಲಿನ ಜನತೆ ತತ್ತರಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ದೆಹಲಿಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತು ಸರ್ವಪಕ್ಷ ಸಭೆ ನಡೆಸಿದರು. ಏತನ್ಮಧ್ಯೆ, ಸ್ಥಳೀಯರ ತೀವ್ರ ಪ್ರತಿರೋಧದಿಂದಾಗಿ, ಸೇನೆಯು 12 ಉಗ್ರರನ್ನು ಬಿಡುಗಡೆ ಮಾಡಬೇಕಾಯಿತು. ಇಂಫಾಲ್ ಪೂರ್ವದಲ್ಲಿರುವ ಇಥಾಮ್ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಸೇನೆ ಸುತ್ತುವರಿದಿತ್ತು. ಆದರೆ ಈ ಬಾರಿ ಮಹಿಳೆಯರ ನೇತೃತ್ವದಲ್ಲಿ ಸುಮಾರು 1,200ಜನ ಸೇನಾ ವಾಹನಗಳನ್ನು ಸುತ್ತುವರಿದು ಅವರನ್ನು ಮುನ್ನಡೆಯದಂತೆ ತಡೆದರು. ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸದಂತೆ ಸೇನೆ ಎಷ್ಟೇ ಎಚ್ಚರಿಕೆ ನೀಡಿದರೂ ಎರಡು ಗುಂಪುಗಳ ನಡುವಿನ ಜಟಾಪಟಿ ಕೊನೆಗೊಂಡಿಲ್ಲ. ಇದರಿಂದಾಗಿ ಸೇನೆ 12 ಉಗ್ರರನ್ನು ಬಿಡಬೇಕಾಯಿತು. ಯಾವುದೇ ಪ್ರಾಣಹಾನಿಯಾಗಲೀ, ರಕ್ತಪಾತವಾಗಲೀ ಆಗದೇ ಸೇನೆ ಪ್ರಬುದ್ಧ ನಿರ್ಧಾರ ಕೈಗೊಂಡಿತು ಎನ್ನಲಾಗಿದೆ. ಸೇನೆಯು ಗ್ರಾಮದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹವನ್ನು ಸ್ವಾಧೀನಪಡಿಸಿಕೊಂಡಿದೆ. ಮೈತೇಯಿ ಪಂಗಡಕ್ಕೆ ಸೇರಿದ ಉಗ್ರಗಾಮಿ ಸಂಘಟನೆ ಕೈಕಾಲೆ ಸದಸ್ಯರು…
ಹಾಂಕ್ಕಾಂಗ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಥೆ ಪೆಸಿಫಿಕ್ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ 11 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದು ಬಳಿಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಯಿತು. ಹಾಂಗ್ಕಾಂಗ್ನಿಂದ ಲಾಸ್ ಏಂಜಲೀಸ್ಗೆ ಹೊರಟಿದ್ದ ವಿಮಾನದಲ್ಲಿ 17 ಸಿಬ್ಬಂದಿ ಹಾಗೂ 293 ಪ್ರಯಾಣಿಕರಿದ್ದು, ಘಟನೆಯಲ್ಲಿ 11 ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಟೈರ್ ಸ್ಫೋಟದಿಂದ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಈ ಪೈಕಿ 9 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಐದು ಡೋರ್ ಎಸ್ಕೇಪ್ ಸ್ಲೈಡ್ಗಳನ್ನು ಬಳಸಿಕೊಂಡು ಪ್ರಯಾಣಿಕರು ವಿಮಾನದಿಂದ ಇಳಿದಿದ್ದಾರೆ. ವಿಮಾನದ ಟೈರ್ಗಳು ಹೆಚ್ಚು ಬಿಸಿಯಾಗಿದ್ದ ಕಾರಣ ಸಿಡಿದಿದೆ, ವಿಮಾನದಿಂದ ಕೆಳಗಿಳಿಯುವ ವೇಳೆ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.
ನಾಲ್ಕು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಎರಡು ದಿನಗಳ ಕಾಲ ಈಜಿಪ್ಟ್ ಗೆ ಭೇಟಿ ನೀಡಿದ್ದಾರೆ. ಮೋದಿ ಆಗಮನದ ವೇಳೆ ಈಜಿಫ್ಟ್ ನ ಲ್ಲಿರುವ ಭಾರತೀಯ ಸಮುದಾಯದ ಸದಸ್ಯರು ಅವರನ್ನು ಭಾರತದ ಹೀರೋ ಎಂದು ಶ್ಲಾಘಿಸಿದರು. 26 ವರ್ಷಗಳಲ್ಲಿ ಈಜಿಪ್ಟ್‌ಗೆ ದ್ವಿಪಕ್ಷೀಯ ಭೇಟಿ ನೀಡಿದ ಮೊದಲ ಪ್ರಧಾನಿ ಮೋದಿಯವರಿಗೆ ರಿಟ್ಜ್ ಕಾರ್ಲ್‌ಟನ್ ಹೋಟೆಲ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು, ಅಲ್ಲಿ ಅವರು ಪ್ರತ್ಯೇಕ ಗುಂಪುಗಳಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ನೀವು ಭಾರತದ ಹೀರೋ ಎಂದು ಭಾರತೀಯ ಡಯಾಸ್ಪೊರಾ ಸದಸ್ಯರೊಬ್ಬರು ಮೋದಿಯವರಿಗೆ ಹೇಳಿದರು. ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ವಿದೇಶದಲ್ಲಿ ವಾಸಿಸುವವರು ಸೇರಿದಂತೆ ಪ್ರತಿಯೊಬ್ಬ ಭಾರತೀಯರ ಪ್ರಯತ್ನಗಳು ದೇಶದ ಯಶಸ್ಸಿಗೆ ಕಾರಣವಾಗಿವೆ ಎಂದರು ಪ್ರಧಾನಿ ನರೇಂದ್ರ ಮೋದಿ. ಶನಿವಾರ ಈಜಿಪ್ಟ್‌ಗೆ ತಮ್ಮ ಚೊಚ್ಚಲ ರಾಜ್ಯ ಪ್ರವಾಸವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಲಸಿಗರು ಮತ್ತು ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು. ಭಾರತದ ದಾವೂದಿ ಬೊಹ್ರಾ…
ದಕ್ಷಿಣ ಕೊರಿಯಾ: ಮಹಿಳೆಯೊಬ್ಬಳು ತಾನು ಹೆತ್ತ ಮಕ್ಕಳನ್ನು ಕೊಂದು ಬಳಿಕ ಶವವನ್ನು ವರ್ಷಗಳ ಕಾಲ ಫ್ರೀಜರ್ ನಲ್ಲಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಕ್ಕಳು ಹಿಟ್ಟಿದ ಬಳಿಕ ಅವುಗಳನ್ನು ಕೊಂದು ಪ್ರೀಜರ್ ನಲ್ಲಿ ಇರಿಸುತ್ತಿದಿದ್ದಾಗಿ 30 ವರ್ಷದ ಮಹಿಳೆ ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾಳೆ. ಆರೋಪಿ ಮಹಿಳೆಗೆ ಈಗಾಗಲೇ 12, 10 ಹಾಗೂ 8 ವರ್ಷದ ಮಕ್ಕಳಿದ್ದಾರೆ. ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವ ಮಹಿಳೆಗೆ ಮತ್ತಿಬ್ಬರು ಮಹಿಳೆ ಹುಟ್ಟಿದ್ದಾರೆ. ಹೀಗಾಗಿ ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತದೆ ಎಂದು ಅವರನ್ನು ಹತ್ಯೆ ಮಾಡಿ ಪ್ರಿಡ್ಜ್ ನಲ್ಲಿ ಇರಿಸಿದ್ದಾಗಿ ಒಪ್ಪಿಕೊಂಡಿದ್ದಾಳೆ. ಮಹಿಳೆಯು ನವೆಂಬರ್ 2018ರಲ್ಲಿ ನಾಲ್ಕನೇ ಮಗುವನ್ನು ಹತ್ಯೆ ಮಾಡಿದ್ದಳು. ಹೆರಿಗೆಯಾದ ಮರುದಿನ ಹೆಣ್ಣು ಮಗುವನ್ನು ಕತ್ತು ಹಿಸುಕಿ ಮಗುವಿನ ಶವವನ್ನು ತನ್ನ ಮನೆಯ ಫ್ರೀಜರ್ನಲ್ಲಿರಿಸಿದ್ದಳು. 2019ರಲ್ಲಿ ಜನಿಸಿದ ತನ್ನ ಐದನೇ ಮಗುವಿಗೆ ಅದೇ ರೀತಿ ಮಾಡಿದ್ದಾಳೆ ಎನ್ನಲಾಗಿದೆ. ಗರ್ಭಪಾತ ಮಾಡಲಾಗಿದೆ ಎಂದು ಆಕೆಯ ಪತಿ ಎಲ್ಲರಿಗೂ ಹೇಳಿದ್ದ, ಆದರೆ ಮೇ ತಿಂಗಳಲ್ಲಿ ಶಿಶುಗಳ ಜನನದ ಗಣತಿ…