ಪಶ್ಚಿಮ ಬಂಗಾಳ: ಎರಡು ಗೂಡ್ಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳ(West Bengal)ದ ಓಂಡಾ ರೈಲು ನಿಲ್ದಾಣದಲ್ಲಿ ನಡೆದಿದೆ. . ಭಾನುವಚಾರ ಮುಂಜಾನೆ 4 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಗೂಡ್ಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ಗೆ ಪ್ರವೇಶಿಸಿತ್ತು ಮತ್ತು ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. 12 ಬೋಗಿಗಳು ಹಳಿ ತಪ್ಪಿವೆ. ಜೂನ್ 2 ರಂದು ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಖರಗ್ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಗೂಡ್ಸ್ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ, ರೈಲು ಮಾರ್ಗದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ತಲುಪಿದ್ದಾರೆ.
Author: Prajatv Kannada
ಕಲಬುರಗಿ: ಕೆಲವು ಸಂಸದರಿಗೆ ಲೋಕಸಭೆ ಟಿಕೆಟ್ ಕೈ ತಪ್ಪಲಿದೆ ಎಂಬ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel), ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ, ಇದೆಲ್ಲಾ ಕಪೋಲಕಲ್ಪಿತ ಎಂದರು. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಲು ಆರಂಭಿಸಿದ್ದಾರೆ. ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದಾರೆ. ಉಚಿತ ಅಕ್ಕಿ ಕೊಡುತ್ತೇವೆ ಅಂತಾ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರಾ? ಉಚಿತ ಅಕ್ಕಿ ವಿತರಣೆ ಬಗ್ಗೆ ಯಾರ ಜೊತೆ ಮಾತುಕತೆ ಮಾಡಿದ್ದಾರೆ? ಘೋಷಣೆ ಮಾಡಿದಂತೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡಬೇಕು. ಕೆಎಸ್ಆರ್ಟಿಸಿ ನೌಕರರಿಗೆ ಮೊದಲು 2 ತಿಂಗಳ ಸಂಬಳ ಕೊಡಿ ಎಂದರು.
ಬೆಳಗಾವಿ: ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ(Sasikala Jolle) ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಹೆಣ್ಣು ಮಕ್ಕಳು ಗ್ಯಾರಂಟಿ ಯೋಜನೆ ನಂಬಿಕೊಂಡು ಕೂತಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಅದು ಜಾರಿ ಆಗದೇ, ಅದಕ್ಕೆ ಬರುವ ಸಮಸ್ಯೆ ನೋಡಿ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಜನರಿಗೆ ಗ್ಯಾರಂಟಿ ಯೋಜನೆ ಸಿಗುತ್ತದೆಯೂ, ಇಲ್ಲೋ ಎಂಬ ಬಗ್ಗೆ ನಾನು ಮಾತಾಡೊದ್ಕಿಂತ ಸುಮ್ಮನೆ ಕುಳಿತು ನೋಡೊ ಕೆಲಸ ಮಾಡ್ತೀವಿ. ವೇಟ್ ಆ್ಯಂಡ್ ವಾಚ್ ಮಾಡಿ ಆಮೇಲೆ ಮಾತನಾಡುತ್ತೇವೆ ಎನ್ನುವ ಮೂಲಕ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರು ಕಾಂಗ್ರೆಸ್ಗೆ ವಾರ್ನಿಂಗ್ ಕೊಟ್ಟಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮಗಳಿಗೆ ಸೋಮವಾರದಿಂದಲೇ ಟ್ರ್ಯಾಕ್ಟರ್ ಮೂಲಕ ಕುಡಿಯುವ ನೀರು ಪೂರೈಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದ ನಂತರ ಕಳೆದ 3 ದಿನಗಳಿಂದ ಗ್ರಾಮಸ್ಥರು ನಡೆಸುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ ಹಿಂಪಡೆದರು. ನಗರದ ತಹಶೀಲ್ದಾರ್ ಕಚೇರಿ ಎದುರು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು.ದೊಡ್ಡಬಳ್ಳಾಪುರ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ತ್ಯಾಜ್ಯ ನೀರಿನಿಂದ ಮಜರಾಹೊಸಹಳ್ಳಿ, ದೊಡ್ಡತುಮಕೂರು ಭಾಗದ ಅಂತರ್ಜಲ ಕಲುಷಿತವಾಗಿದೆ. ಶುದ್ಧ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಧರಣಿನಿರತರು ಸಚಿವರ ಗಮನ ಸೆಳೆದರು. Video Player 00:00 01:08 ಈ ವೇಳೆ ಮಾತನಾಡಿದ ಸಚಿವ ಕೆ.ಎಚ್.ಮುನಿಯಪ್ಪ ಅವರು, ಒಂದು ತಿಂಗಳೊಳಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗು ವುದು. ಕೆರೆಯ ವಸ್ತುಸ್ಥಿತಿ, ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಕುರಿತಂತೆ ಜಿಲ್ಲಾಧಿಕಾರಿಯಿಂದ ವರದಿ ಪಡೆಲಾಗು…
ಹುಬ್ಬಳ್ಳಿ: ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಮ್ಮೆಲ್ಲರ ಜನಪರ ನಾಯಕರು ಮಾರ್ಗದರ್ಶಕರು ಅಜಾತಶತ್ರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಇಂದು ಅವರ ಮಾಜಿ ಶಾಸಕರಾದ ಎಸ ಐ ಚಿಕ್ಕನಗೌಡ ಇವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು .ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಮುಖಂಡರಾದ ಎಸ್ ಎಫ್ ನಿರಂಜನ ಗೌಡ, ಹುಬ್ಬಳ್ಳಿ ಎಪಿಎಂಸಿ ಮಾಜಿ ಅಧ್ಯಕ್ಷ ಕಲ್ಲಪ್ಪಣ್ಣ ಎಲಿವಾಳ ,ಎಬಿ ಉಪ್ಪಿನ ಮುಂತಾದವರಿದ್ದರು.
ಹುಬ್ಬಳ್ಳಿ : ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವೇಳೆ ಹಿಂದುಪರ ಸಂಘಟನೆಗಳು ಅಡ್ಡಗಟ್ಟಿ ವಾಹನ ಸಮೇತ ಪೊಲೀಸ್ ಠಾಣೆಗೆ ಕರೆತಂದ ಘಟನೆ ನಗರದಲ್ಲಿ ನಡೆದಿದೆ. ಯಾವುದೇ ದಾಖಲೆಯಿಲ್ಲದೆ ಅಕ್ರಮವಾಗಿ ಸಾಗಾಟ ಮಾಡಲಾಗತ್ತು. ಈ ವೇಳೆ ಹಿಂದುಪರ ಕಾರ್ಯಕರ್ತರು ಅನುಮಾನಗೊಂಡು ವಾಹನ ತಡೆದಿದ್ದಾರೆ. ಈ ವೇಳೆ ವಾಹನದೊಳಗೆ ಆರೋಗ್ಯವಂತ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ಹೀಗಾಗಿ ಸಂಘಟನೆ ಸದಸ್ಯರು ವಾಹನ ತಡೆದಿದ್ದಲ್ಲದೇ ವಾಹನ ಜಾನುವಾರಗಳ ಸಮೇತ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ನಗರದಲ್ಲಿ ಆರೋಗ್ಯವಂತ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುವ ಜಾಲವಿದ್ದು ಪೊಲೀಸರು ಪತ್ತೆ ಹಚ್ಚಿ ಸೂಕ್ತ ಕ್ರಮ ಜರುಗಿಸುವಂತೆ ಭಜರಂಗದಳದ ಕಾರ್ಯಕರ್ತರು ಆಗ್ರಹಿಸಿದರು. ಸದ್ಯ ಈ ಘಟನೆ ಸಂಬಂದ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್: ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಅಂದರೆ 1 ಕೋಟಿ 18 ಲಕ್ಷದ ಮೌಲ್ಯದ ಒಟ್ಟು 118 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೀದರ್ ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸ್ವಿಫ್ಟ್ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಬೀದರ್ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು: ದಿವಂಗತ ಪಾರ್ವತಮ್ಮ ರಾಜ್ಕುಮಾರ್(Parvathamma Rajkumar) ಅವರ ತಮ್ಮನ ಮಗ, ಯುವ ನಟ ಸೂರಜ್ಗೆ ಅಪಘಾತವಾಗಿದೆ. ದುರ್ಘಟನೆ ಯಲ್ಲಿ ಸೂರಜ್ ಬಲಗಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಮೈಸೂರು ನಂಜನಗೂಡು ರಸ್ತೆಯಯಲ್ಲಿ ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ಹೋಗ್ತಿದ್ದಾಗ ಟಿಪ್ಪರ್ ಹರಿದು ಅನಾಹುತ ಸಂಭವಿಸಿದೆ. ಸೂರಜ್ (Sooraj)ಬಲಗಾಲಿಗೆ ಗಂಭೀರವಾಗಿ ಗಾಯವಾದ ಹಿನ್ನೆಲೆಯಲ್ಲಿ ಮಂಡಿಯವರೆಗೆ ಕಾಲನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ನೋಡಲು ಶಿವರಾಜ್ ಕುಮಾರ್, ನಿರ್ಮಾಪಕ ಚಿನ್ನೇಗೌಡ ಮೈಸೂರಿಗೆ ಆಗಮಿಸಿದ್ದಾರೆ. ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಚಿತ್ರದಲ್ಲಿ ಸೂರಜ್ ನಟಿಸಿದ್ದರು.
ಬೆಂಗಳೂರು: ಈ ಚುನಾವಣೆಯಲ್ಲಿ ಫೋರ್, ಸಿಕ್ಸ್ ಹೊಡೆಯಲು ಹೋಗಿ ಬೌಲ್ಡ್ ಆಗಿದ್ದೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ (V.Somanna) ಹೇಳಿದ್ದಾರೆ. ಬೆಂಗಳೂರಿನ (Bengaluru) ಬಿಜೆಪಿ (BJP) ಕಚೇರಿಯಲ್ಲಿ ಭಾನುವಾರ ಮಾತಾಡಿದ ಅವರು, ನಾನು ಸನ್ಯಾಸಿ ಅಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದಿದ್ದಾರೆ. ಪಕ್ಷ ಕೊಟ್ಟಿರುವ ಟಾಸ್ಕ್‌ಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ. ಇಲ್ಲಿಯವರೆಗೂ 12 ಚುನಾವಣೆಗಳನ್ನು ನೋಡಿದ್ದೇನೆ. 7 ರಿಂದ 8 ಉಪಚುನಾವಣೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ ಎಂದಿದ್ದಾರೆ.
ಕಲಬುರಗಿ: ಶಿಕ್ಷಕರು ಮಕ್ಕಳ ನಡುವಣ ಬಾಂಧವ್ಯಕ್ಕೆ ಕಲಬುರಗಿಯ ದಿಕ್ಸಂಗಾ ಸರ್ಕಾರಿ ಶಾಲೆಯಲ್ಲಿ ನೋಡಬಹುದು. ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಸಂಗನ ಬಸಯ್ಯ ದಿಕ್ಸಂಗಾ ದಿಂದ ಚವಡಾಪುರ ತಾಂಡಾಕ್ಕೆ ಶಾಲೆಗೆ ವರ್ಗಾವಣೆಯಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕನನ್ನ ಬಿಡದೇ ವಿದ್ಯಾರ್ಥಿಗಳು ತಬ್ಬಿಕೊಂಡು ಕಣ್ಣೀರಿಟ್ಟ ಘಟನೆ ನಡೆಯಿತು. ಹೌದು ಸರ್ ತಬ್ಬಿಕೊಂಡು ಹೋಗಬೇಡಿ ಸರ್ ಎಂದು ಕಣ್ಣೀರಿಟ್ಟಿದ್ದು, ಮಕ್ಕಳು ಅಳುವುದನ್ನ ನೋಡಿದ ಶಿಕ್ಷಕ ಸಂಗನ ಬಸಯ್ಯ ಕೂಡ ಭಾವುಕರಾದರು. ಸದ್ಯ ಮಕ್ಕಳು ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.