ಬೆಂಗಳೂರು: ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ ಸಮಸ್ಯೆ ನೋಡುತ್ತಿದ್ದೀರಿ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು. ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ…
Author: Prajatv Kannada
ಧಾರವಾಡ: ಜೂನ್ 29 ರಂದು ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜೂನ್ 28 ರ ರಾತ್ರಿ 11:59 ಗಂಟೆಯಿಂದ ಜೂನ್ 30 ರ ಬೆಳಿಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಈ ಆದೇಶ ಜಾರಿ ಇರುವ ಸಮಯದಲ್ಲಿ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ ಬಾರ್‍ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಿರತಕ್ಕದ್ದು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‍ಪೆಕ್ಟರ್, ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.…
ಚಿಕ್ಕಬಳ್ಳಾಪುರ: ಮೊದಲ ಬಾರಿಗೆ ಶಾಸಕರಾದವರಿಗೆ ಮತ್ತು ಕೆಲವು ಹಿರಿಯ ಶಾಸಕರಿಗೂ ಒರಿಯಂಟೇಶನ್ ಪ್ರೋಗ್ರಾಂ ನೀಡುವ ಅಗತ್ಯವಿದೆ ಎಂದು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಕ್ಕೆ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಖಡಕ್ ಉತ್ತರ ನೀಡಿದ್ದಾರೆ. ಸೋಲಿನ ಭೀತಿಯಿಂದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಾರೆ. ಸಂಸದ ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡು ಇರಬೇಕು ಅಷ್ಟೇ ಎಂದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಬಗ್ಗೆ ವೈಯಕ್ತಿಕ ಹೇಳಿಕೆ ಕೊಡ್ತಿದ್ದಾರೆ. ವಿಷಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಅವರೇ ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದೋದು ಬಿಟ್ಟಿದ್ದೀರಿ. ನಿಮಗೆ ತಾಕತ್ ಇದ್ದರೆ ಎಫ್ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರಿ ಎಂದು ಪ್ರಶ್ನಿಸಿದ್ದಾರೆ.
ಚಾಮರಾಜನಗರ: ಅಕ್ಕಿ ಕೊಡುತ್ತೇನೆ ಎಂದು ಹೇಳುವಾಗ ಇವರಿಗೆ ಪರಿಜ್ಞಾನ ಇರಲಿಲ್ವಾ? ನನಗೂ, ನಿಮಗೂ ನಮ್ಮ ಮನೆಯವರಿಗೂ, ನಿಮ್ಮ ಮನೆಯವರಿಗೂ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಟವಲ್ ಹೆಗಲಿನಿಂದ ಎಲ್ಲೋಯ್ತು? ಏನಾದ್ರೂ ಆಗ್ಲಿ ಕೊಡ್ತೀನಿ ಎಂದು ದೊಂಬರ ಲಾಗ ಹಾಕಿದ್ದರು. ಒಬ್ಬ ಸಿಎಂ ಆಗುವವನಿಗೆ ಮುಂದಾಲೋಚನೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಡಿವಿ ಸದಾನಂಗೌಡ ವಾಗ್ದಾಳಿ ನಡೆಸಿದರು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಅಕ್ಕಿ ಕೊಡುತ್ತಿಲ್ಲವೆಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಣಿಯಲಾರದವನು ನೆಲಡೊಂಕು ಅಂದನಂತೆ ಈಗ ಕೇಂದ್ರದ ಮೇಲೆ ಗೂಬೆ ಕೂರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.
ಹಾಸನ: ತೆಂಗಿನಕಾಯಿ ಗೊನೆ (Coconut Shell) ಬಿದ್ದು ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ಚನ್ನರಾಯಪಟ್ಟಣದ (Channarayapatna) ಬಿ.ಚೋಳೇನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್ (16) ಮೃತಪಟ್ಟ ಬಾಲಕ. ಗಾಳಿ, ಮಳೆಗೆ ಬಿದ್ದಿದ್ದ ಕಾಯಿಗಳನ್ನು ಒಂದೆಡೆ ಸಂಗ್ರಹಿಸುವಾಗ ಏಕಾಏಕಿ ಮರದಿಂದ ಕಾಯಿ ಗೊನೆ ಬಾಲಕನ ಮೇಲೆ ಬಿದ್ದಿದೆ. ತೀವ್ರವಾಗಿ ಪೆಟ್ಟಾಗಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ. ಶ್ರವಣಬೆಳಗೊಳ (Shravanabelagola) ಹೊರವಲಯದ ಉತ್ತೇನಹಳ್ಳಿ ಗ್ರಾಮದ ರವಿ ಮತ್ತು ಅನಸೂಯ ದಂಪತಿ ಮಗ ಪ್ರಜ್ವಲ್‍ನೊಂದಿಗೆ ಬಿ.ಚೋಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರಜ್ವಲ್ ಪ್ರತಿನಿತ್ಯ ತೋಟಕ್ಕೆ ಹೋಗಿ ಕಾಯಿ ಎತ್ತಿ ಹಾಕಿ ಇತರೆ ಸಣ್ಣಪುಟ್ಟ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ. ಭಾರೀ ಮಳೆ, ಗಾಳಿಯಿಂದ ಮರದಿಂದ ತೆಂಗಿನಕಾಯಿಗಳು ನೆಲಕ್ಕೆ ಬಿದ್ದಿದ್ದವು. ಬಿದ್ದಿದ್ದ ತೆಂಗಿನಕಾಯಿಗಳನ್ನು ಒಂದೆಡೆ ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ತೆಂಗಿನಮರದಿಂದ ಬಾಲಕನ ಮೇಲೆ ತೆಂಗಿನಕಾಯಿ ಗೊನೆಗಳು ಬಿದ್ದಿದ್ದವು
ಬೆಂಗಳೂರು: ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟದ ಬಗ್ಗೆ ಮಾತನಾಡುತ್ತಾ ‘ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ? ಅವರದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದು ಮಾಧ್ಯಮಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ. ಬಿಜೆಪಿಯವರು ಎಷ್ಟು ಹೊಸ ಬಿಲ್ ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್ ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ…
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಗೆ ವಾರಂಟಿಯಿಲ್ಲ, ಈಗಾಗಲೇ ಕಾಂಗ್ರೆಸ್ ವಾಂತಿ ಮಾಡಿಕೊಳ್ಳುವ ಸ್ಥಿತಿಗೆ ಬಂದು ನಿಂತಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯ, ಹಣಕಾಸಿನ ಮುಗ್ಗಟ್ಟಿನಲ್ಲಿದೆ ಈಗಾಗಲೇ ಅರ್ಧ ದಿವಾಳಿಯಾಗಿದೆ. ಮುಂದೆ ಸಂಬಳ ನೀಡಲು ಸಹ ಸರ್ಕಾರ ಬ್ಯಾಂಕ್ ನಿಂದ ಸಾಲ ಮಾಡಬೇಕು, ಬ್ಯಾಂಕ್ ಕೂಡ ಸಾಲ ಕೊಡಲ್ಲ. ನೀವು ಗ್ಯಾರಂಟಿ ಕೊಡ್ತಿವಿ ಅಂದಿದ್ದು, ಅದನ್ನ ನೀವು ಎಲ್ಲಿಂದಲಾದರೂ ತಂದು ಕೊಡಿ ಎಂದಿದ್ದಾರೆ. ಒಂದು ಕಡೆ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಮಸ್ಯೆ ಉಂಟಾಗಿದೆ. ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ (Congress) ನಾಯಕರು ಕಿಡಿಕಾರುತ್ತಿದ್ದಾರೆ. ಇನ್ನೊಂದೆಡೆ ವಿದ್ಯುತ್ ದರ (Electricity Hike) ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಇವೆಲ್ಲದರ ಮಧ್ಯೆ ಹೋಟೆಲ್ ಮಾಲೀಕರು ಸಾರ್ವಜನಿಕರಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.
ಕಲಬುರಗಿ: ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವ ಉದ್ದೇಶ ಕೇಂದ್ರಕ್ಕೆ ಇಲ್ಲ ಎಂದು ಕಲಬುರಗಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ಹೇಳಿದರು. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿಲ್ಲ, ಹಿಂದೆಯೂ ಆಗಿದ್ದರು. ಈ ಹಿಂದೆ ಆಗದಿದ್ದ ಸಮಸ್ಯೆ ಈಗ ಯಾಕೆ ಆಗುತ್ತಿದೆ. ಕೇಂದ್ರ ಅಕ್ಕಿ ಕೊಟ್ಟಾಗ ಸಿದ್ದರಾಮಯ್ಯ ತಮ್ಮ ಫೋಟೋ ಹಾಕಿದ್ರು. ಸಿದ್ದರಾಮಯ್ಯ ಕೇಂದ್ರದ್ದು ಸೇರಿ 10 ಕೆಜಿ ಕೊಡ್ತೇವೆ ಅಂತಾ ಹೇಳಿಲ್ಲ. ತಲಾ 10 ಕೆಜಿ ಅಕ್ಕಿ ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹ ಮಾಡ್ತೇವೆ ಎಂದರು. ನಿನ್ನೆ ಸಿಎಂ ಸಿದ್ದರಾಮಯ್ಯ ಅಮಿತ್ ಶಾರನ್ನು ಭೇಟಿ ಮಾಡಿ ಬಂದಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ಯಾರು ಎಂದು ಕಲಬುರಗಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ಪ್ರಶ್ನಿಸಿದರು. ಭಾಗ್ಯಗಳನ್ನು ನೀಡಲು ಆಗದೆ ಅವರೇ ಸಮಸ್ಯೆಗೆ ಸಿಲುಕುತ್ತಾರೆ. ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ ಎಂದರು.
ಬೆಂಗಳೂರು: ಅನ್ನಭಾಗ್ಯ ಯೋಜನೆ ತಡವಾಗಿಯಾದರೂ ಸರಿ ಜಾರಿ ಮಾಡುತ್ತೇವೆ. ಈ ಯೋಜನೆಯ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ. ಬದಲಿಗೆ ಹೊಟ್ಟಿ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿಂದ ಇದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ. ಅವರ ಖುಷಿ ನೋಡಲಾಗದೇ, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಹೋರಾಟ ಮಾಡುತ್ತೇನೆ ಎಂದು ಸಂಕಟಪಡುತ್ತಿದ್ದಾರೆ. ಯಡಿಯೂರಪ್ಪನವರು ಧರಣಿ ಮಾಡುವುದರಲ್ಲಿ ಸಮರ್ಥರು. ಈಗಲೂ ಅವರು ವಿಧಾನಸಭೆಗೆ ಬಂದು ಹೋರಾಟ ಮಾಡಲಿ. ಅನ್ನಭಾಗ್ಯ ಯೋಜನೆ ಜಾರಿ ವಿಚಾರಪವಾಗಿ ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಮಾತನಾಡಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರ ಜತೆ ಮಾತನಾಡುವ ಭರವಸೆ ನೀಡಿದ್ದಾರೆ.
ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಆದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜನವೋಜನ. ದೇವಾಸ್ಥಾನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ ಎಂದರೆ ತಪ್ಪಾಗಲಾರದು. ಬೆಳಗ್ಗೆ 5.30ರಿಂದ ರಾತ್ರಿ 12.30ರವರೆಗೆ ತಾಯಿ ಚಾಮುಂಡಿ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬೆಳಗ್ಗಿನ ಜಾವದಿಂದಲೇ ಜನರು ಕ್ಯೂ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ ಆಷಾಢ ಮಾಸದ ಮೊದಲ ಶುಕ್ರವಾರ ದೇವಿ ಭಕ್ತರನ್ನು ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಈ ಬಾರಿಯ ಆಷಾಢದಲ್ಲಿ 5 ಶುಕ್ರವಾರಗಳು ಸಿಗಲಿದ್ದು ಆ ದಿನಗಳಲ್ಲಿ ದೇವಿಗೆ ವಿಶೇಷ ಪೂಜೆಗಳು ನೆರವೇರಲಿದೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡುವವರು ಅಧಿಕಾರಿಗಳಿಂದ ಅನುಮತಿ ಪಡೆಯಲು ಜಿಲ್ಲಾಡಳಿತ ಸೂಚಿಸಿದೆ. ವಿಶೇಷ ದರ್ಶನಕ್ಕೆ 50 ರೂ. 300 ರೂ.…