Author: Prajatv Kannada

ಬೆಂಗಳೂರು ;- ಡೇ ಕೇರ್ ನಲ್ಲಿಮಕ್ಕಳನ್ನ ಬಿಡುವ ಪೋಷಕರೇ ಮಿಸ್ ಮಾಡ್ದೆ ಈ ದೃಶ್ಯ ನೋಡಿ. ಈ ದೃಶ್ಯ ನೋಡಿದ್ರೆ ಅಯ್ಯೋ ಅಯ್ಯೋ ಪಾಪ ಅನ್ನಿಸದೇ ಇರಲ್ಲಾ.. ಸಣ್ಣ ಮಗು ಇನ್ನೊಂದು ಸಣ್ಣ ಮಗುವಿಗೆ ಹೊಡೆದಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೌದು ಸಣ್ಣ ಮಕ್ಕಳು ಬಡಿದಾಡಿಕೊಂಡರು ಅಲ್ಲಿನ ಆಯಾ ಎಷ್ಟರ ಮಟ್ಟಿಗೆ ನಿರ್ಲಕ್ಷ್ಯ ತೋರಿದ್ದಾರೆ ಎಂಬುವುದು ವಿಡಿಯೋದಲ್ಲಿ ಗಮನಿಸಬಹುದು. ಇಷ್ಟೆಲ್ಲಾ ದೃಶ್ಯ ಕಂಡು ಬಂದಿದ್ದು, ಸುಬ್ರಹ್ಮಣ್ಯ ಪುರದಲ್ಲಿ ಇರೋ ಟೆಂಡರ್ ಪೂಟ್ ಡೇ ಕೇರ್ ಸೆಂಟರ್ ನಲ್ಲಿ. ಈ ಡೇ ಕೇರ್ ಸೆಂಟರ್ ಅಲ್ಲಿ ಮಕ್ಕಳನ್ನು ನೋಡಿಕೊಳ್ತಾ ಇದ್ದ ಆಯಾ ಒಂದು ಮಗುವನ್ನು ಹೊರಗೆ ಕರೆದುಕೊಂಡು ಹೋಗಿದ್ದ ವೇಳೆ ಒಂದು ಮಗು ಇನ್ನೊಂದು ಮಗುವನ್ನು ಹಿಡಿದುಕೊಂಡು ಹೊಡೆದಿದೆ. ಸುಮಾರು ಮೂರು ನಾಲ್ಕು ನಿಮಿಷ ಹೊಡೆದ್ರೂ ಮಕ್ಕಳನ್ನ ನೋಡಿಕೊಳ್ಳಲು ಅಲ್ಲಿಗೆ ಯಾರು ಬರೋದೆ ಇಲ್ಲ. ನಾಲ್ಕೈದು ನಿಮಿಷ ಮಕ್ಕಳು ಜಗಳ ಮಾಡಿಕೊಂಡರು ಅಲ್ಲಿನ ಆಯಾ ಅಲ್ಲಿಗೆ ಬರದೇ ನಿರ್ಲಕ್ಷ್ಯ ತೋರಿದ್ದಾರೆ. ಈ ವಿಡಿಯೋ ಸಿಸಿಟಿವಿಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು  ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ. ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ‌ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು. ಪೂರ್ವ ತಯಾರಿ‌ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸಿದ್ದಾರೆ‌.

Read More

ಬೆಂಗಳೂರು ;- ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಗೋವಿಂದಪುರ ಠಾಣಾ ಪೊಲೀಸರು ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್‌ಎಸ್‌ಎಲ್ ರಿಪೋರ್ಟ್ ಚಾರ್ಜ್ ಶೀಟ್​ನಲ್ಲಿ ಅಟ್ಯಾಚ್ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ. ಲೋಪ ಯಾರದ್ದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್‌ಎಸ್‌ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್(KJ George) ತಿಳಿಸಿದ್ದಾರೆ. ಹಿಂದಿನ ಸರ್ಕಾರವಿದ್ದಾಗ KERC ವಿದ್ಯುತ್​ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್​ ಕಲೆಕ್ಟ್​​ ಮಾಡಲು ಹೇಳಿದ್ದಾರೆ.ಒಂದೇ ಬಾರಿ 2 ತಿಂಗಳ ವಿದ್ಯುತ್ ದರ​ ಏರಿಕೆಯ ಬಿಲ್​​ ಬಂದಿದೆ. ನಮ್ಮ ಸಾಫ್ಟ್​​ವೇರ್ ಹಳೆಯದು, ಹೊಸ ಸಾಫ್ಟ್​​ವೇರ್​​​ ಹಾಕಬೇಕು. ಕೆಲವೆಡೆ ಮೀಟರ್​ ಸಮಸ್ಯೆಯಿಂದ ವಿದ್ಯುತ್​ ದರ ಹೆಚ್ಚಳ ಆಗಿದೆ. ಕೊಪ್ಪಳದಲ್ಲೂ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಮೀಟರ್​ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ. ಅಜ್ಜಿ‌ ಅಷ್ಟೊಂದು ಕರೆಂಟ್​​ ಬಿಲ್​​ ಕಟ್ಟಬೇಕಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದರು

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಸುಮಾರು 27 ವರ್ಷದ ಅಮೃತಾ ಶರ್ಮ ಅಪಾರ್ಟ್‌ಮೆಂಟ್ ನ  ಹತ್ತನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ನಡೆದ ಘಟನೆಯಾಗಿದ್ದು ಸ್ಥಳೀಯರು ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಅಮೃತಾ ಶರ್ಮ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಅಮೃತಾ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು ಹಾಗೆ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ತುಂಬಾ ನೊಂದಿದ್ದರು. ಸದ್ಯ ಲಖನೌನಿಂದ ಮೃತಳ ತಾಯಿ ಆಗಮಿಸುತಿದ್ದು ಯಲಹಂಕ ನ್ಯೂಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

Read More

ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಹಿನ್ನೆಲೆ ನಿನ್ನೆ ಕೈಗಾರಿಕೋದ್ಯಮಿಗಳು ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಇಂದು ಕೈಗಾರಿಕೋದ್ಯಮಿಗಳ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ಮಾಡಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದೆ. ಇಂಧನ ಇಲಾಖೆ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಭಾಗಿಯಾಗಲಿದ್ದಾರೆ. ಒಂದು ಕಡೆ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಮಸ್ಯೆ ಉಂಟಾಗಿದೆ. ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ (Congress) ​ ನಾಯಕರು ಕಿಡಿಕಾರುತ್ತಿದ್ದಾರೆ. ಇನ್ನೊಂದೆಡೆ ವಿದ್ಯುತ್ ದರ (Electricity Hike) ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಇವೆಲ್ಲದರ ಮಧ್ಯೆ ಹೋಟೆಲ್ ಮಾಲೀಕರು ಸಾರ್ವಜನಿಕರಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.

Read More

ಬೆಂಗಳೂರು: ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್​ ಸಂಜೆ 6 ಗಂಟೆಗೆ ಭೇಟಿಯಾಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಬೆಂಗಳೂರು ನಗರ ಅಭಿವೃದ್ಧಿಗೆ ಪಣ ತೊಟ್ಟಿರುವ ಡಿ.ಕೆ.ಶಿವಕುಮಾರ್​​ ಈ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಾತುಕತೆ ಮಾಡಲಿದ್ದಾರೆ ಹಾಗೆ ಕೆಲವು ಸಲಹೆಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತಿದೆ. ಬಿಜೆಪಿ ಅವಧಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು: ಅಪ್ಪನ ಸರ್ಕಾರಿ ಕಾರಿನಲ್ಲಿ ಮಗಳ ದರ್ಬಾರ್. ಹೌದು ಸದಾಶಿವನಗರದಲ್ಲಿ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಸಚಿವ ಶಿವಾನಂದ ಪಾಟೀಲ್ (Shivanada Patil Daughter) ಅವರ ಪುತ್ರಿ ಸಂಯುಕ್ತ ಪಾಟೀಲ್ ಸರ್ಕಾರದ ಕಾರಲ್ಲಿ ಓಡಾಟ ನಡೆಸಿದ್ದಾರೆ. ಸಚಿವರು ತಮ್ಮ ಸರ್ಕಾರಿ ಕಾರನ್ನ ಮಗಳಿಗೆ ನೀಡಿದ್ದಾರೆ. ಸರ್ಕಾರಿ ಕಾರಿನಲ್ಲಿ ಸಚಿವರ ಪುತ್ರಿ ಫುಲ್ ಸುತ್ತಾಟ ನಡೆಸುತ್ತಿದ್ದಾರೆ. ಸರ್ಕಾರಿ ವಾಹನವನ್ನು ಸ್ವಂತ ಕಾರ್ಯಕ್ಕೆ ಬಳಸಿಕೊಳ್ಳುವ ಕುರಿತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Read More

ರಾಯಚೂರು ;- ಹೆಚ್ಚುವರಿ ಬಸ್ ಬಿಡುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ABVP ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಜರುಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯಿಂದ ಹಳ್ಳಿಯ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಹಳ್ಳಿಗಳಿಂದ ಬಸ್ ನಲ್ಲಿ ಬರುವ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಫ್ರೀ ಬಸ್ ಇರುವುದರಿಂದ ಬಸ್ ಗಳು ಫುಲ್ ಆಗುತ್ತಿದ್ದು, ಯೋಜನೆ ಒಳ್ಳೆದಾಗಿದೆ ಆದರೆ ಹೆಚ್ಚುವರಿ ಬಸ್ ಕಳಿಸಿ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Read More

ಧಾರವಾಡ ;- ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಇಂದು ನಡೆದ ಪ್ರತಿಭಟನೆ ಯಶಸ್ವಿಯಾಗಿದೆ. ನಗರದ ಕೆಸಿಸಿ ಬ್ಯಾಂಕ್ ವೃತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ರ‌್ಯಾಲಿ ಜರುಗಿದ್ದು, ವಿವಿಧ ವರ್ತಕರು, ಉಧ್ಯಮಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರ‌್ಯಾಲಿ ಉದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಏಕಾಏಕಿ ವಿದ್ಯುತ್ ದರ ಏರಿಕೆಯಿಂದಾಗಿ ವಾಣಿಜೋದ್ಯಮಿಗಳಿಗೆ ಸಂಕಷಕ್ಕೆ ಸಿಲುಕಿದ್ದಾರೆ. ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಹಿಂದೆ ಇದ್ದ ವಿದ್ಯುತ್ ದರವನ್ನೇ ಮುಂದುವರೆಸಿಬೇಕು. ವಿದ್ಯುತ್ ದರ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟ ಮತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಿನಯ ಜವಳಿ, ಇಂದಿನ ಬಂದ್ ಬಹುತೇಕ ಯಶಸ್ವಿಯಾಗಿದೆ. ಹುಬ್ಬಳ್ಳಿ- ಧಾರವಾಡದ ೪೦ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ರಾಜ್ಯಾದ್ಯಂತ 25 ಜಿಲ್ಲಾ ಸಂಘಗಳು ಬೆಂಬಲ ನೀಡಿವೆ. ಮಂಡ್ಯದಿಂದ ಕಲ್ಬುರ್ಗಿ ವರೆಗೆ…

Read More