ಮಂಗಳೂರು: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ಮಂಗಳೂರಿನ ಪುರಭವನ ಬಳಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ಮಡೆಸುತ್ತಿದ್ದಾರೆ. ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜನೆ ಮಾಡಲಾಗಿದ್ದು, ದ.ಕ ಜಿಲ್ಲೆಯ ಎಂಟು ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿ ಸಾಧ್ಯತೆ ಇದೆ. ಇನ್ನೂ ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
Author: Prajatv Kannada
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ಸಂಬಂಧ ಒಂದಷ್ಟು ಬೆಳವಣಿಗೆಗಳು ಚುರುಕುಗೊಂಡಿವೆ.ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ (C.T.Ravi) ಹೆಸರು ಕೈಬಿಟ್ಟಿರುವ ವರಿಷ್ಠರು, ಅವರಿಗೆ ಇಂದು ದೆಹಲಿಗೆ ಬುಲಾವ್ ಕೊಟ್ಟಿರೋದು ಕುತೂಹಲ ಮೂಡಿಸಿದೆ. ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಮೇಲೆ ಗಮನ ಹರಿಸುವ ಲಕ್ಷಣ ಕಾಣಿಸುತ್ತಿದೆ. ರಾಜ್ಯ ಬಿಜೆಪಿಗೆ ಮುಂದಿನ ಸಮರ್ಥ ಸಾರಥಿಯ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಈ ನಿಟ್ಟಿನಲ್ಲಿ ಒಂದಷ್ಟು ಸುಳಿವುಗಳು ಸಿಗುತ್ತಿದ್ದು, ಪೂರಕ ವಿದ್ಯಮಾನಗಳು ನಡೆಯುತ್ತಿವೆ. ಮುಂದಿನ ಬಿಜೆಪಿ ಸಾರಥಿಯಾಗಿ ಮಾಜಿ ಶಾಸಕ ಸಿ.ಟಿ ರವಿ ಹೆಸರು ಮುಂಚೂಣಿಯಲ್ಲಿದೆ. ಶನಿವಾರವಷ್ಟೇ ಅವರ ಹೆಸರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್ ಕೊಟ್ಟಿರೋದು ಈ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಟಿ ರವಿ, ತಾವೀಗ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಷ್ಟೇ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲದಿದ್ದರೂ ವರಿಷ್ಠರು ಕೊಡುವ ಯಾವುದೇ ಜವಾಬ್ದಾರಿ ನಿಭಾಯಿಸುವುದಾಗಿ ಹೇಳುವ…
ಬೆಂಗಳೂರು: ಬಿಜೆಪಿ ಅವಧಿಯ ಕೊರೊನಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಕೊರೊನಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ. ನ್ಯಾಯಾಂಗ ತನಿಖೆ ವಿಚಾರವನ್ನು ಸಿಎಂ ಮುಂದೆ ಪ್ರಸ್ತಾಪಿಸಿದ್ದೇವೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮೊದಲೇ ತಿಳಿಸಿ ನಾನು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಡಾಕ್ಟರ್ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದಿದ್ದೆ. ಅದೇ ರೀತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇನ್ನು ಆಸ್ಪತ್ರೆ ಪರಿಶೀಲನೆ ನಡೆಸುತ್ತಿದ್ದೇನೆ. ದಿಢೀರ್ ಭೇಟಿ ಕೊಡುವುದನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಏನೆಲ್ಲಾ ತೊಂದರೆ ಆಗುತ್ತಿದೆ ಅದಕ್ಕೆ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕ್ಕಮಗಳೂರು: ಟೊಮೆಟೊ ಬೆಲೆ (Tomato price) ದಿಢೀರ್ ಏರಿಕೆ ಕಂಡಿರುವುದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. 2 ವರ್ಷಗಳಿಂದ ಮಾರುಕಟ್ಟೆಯಲ್ಲಿ ಟೊಮೆಟೊ ದರ ಹೇಳಿಕೊಳ್ಳುವಷ್ಟೇನೂ ಹೆಚ್ಚಾಗಿರಲಿಲ್ಲ. ಈ ಬೆಳೆಗೆ ಖರ್ಚು ಮಾಡಿದ್ದ ಹಣವೂ ಬೆಳೆಗಾರರ ಕೈ ಸೇರುತ್ತಿರಲಿಲ್ಲ. ಇದರಿಂದ ಹಲವು ರೈತರು ಬೆಳೆ ಮಾಡುವ ಸಾಹಸಕ್ಕೆ ಹೋಗಿರಲಿಲ್ಲ. ಆದರೂ, ಈ ಬಾರಿ ಉತ್ತಮ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕೆಲವು ರೈತರು ನಿರಂತರವಾಗಿ ಟೊಮೆಟೊ ಬೆಳೆಯುತ್ತಲೇ ಬಂದಿದ್ದರು. ಪಾತಾಳಕ್ಕೆ ಕುಸಿದಿದ್ದ ಟೊಮೆಟೊ ದರ ಯಾವಾಗ ಏರಿಕೆ ಆಗುತ್ತದೋ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದರು ಕಾಫಿನಾಡಿನಲ್ಲಿ ಟೊಮೇಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ತಲುಪಿದೆ. 26 ಕೆ.ಜೆ ಟೊಮೇಟೊ ಐದು ಸಾವಿರ ರೂಪಾಯಿಗೆ ಹರಾಜಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಚಿಕ್ಕಮಗಳೂರು ಟೊಮೇಟೊಗೆ ಭಾರಿ ಡಿಮ್ಯಾಂಡ್ ಹಿನ್ನೆಲೆ ಬೆಲೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರ: ಸದಾ ಒಂದಲ್ಲ ಒಂದು ವಿಚಾರವಾಗಿ ಸದ್ದು ಮಾಡುವ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಈಗ ಮತ್ತೊಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಖಾಕಿ ಶರ್ಟ್ ಧರಿಸಿ ಆಟೋ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದ (Chikkaballapura) ಸರ್ ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಟೋ ಚಾಲಕರಿಗೆ 5,000 ರೂ. ಸಹಾಯ ಧನ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಟೋ ಚಲಾಯಿಸಿಕೊಂಡು ಬಂದು ಶಾಸಕರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟೋ ಚಾಲಕರ ಕಷ್ಟ ನನಗೆ ಗೊತ್ತಿದೆ. ನಾನು ಕೂಡ ಕಷ್ಟ ಪಟ್ಟಿದ್ದೀನಿ. ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಮೂಟೆ ಹೊತ್ತಿದ್ದೀನಿ. 50 ರೂ. ಸಿಗುತ್ತೆ ಅಂತ ಹಿಂದೆ ಆಟೋ ಓಡಿಸಿದ್ದೀನಿ ಎಂದು ನೆನಪಿಸಿಕೊಂಡರು.
ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣರವರು ಭೇಟಿ ನೀಡುತ್ತಿದ್ದಾರೆ. ಈ ವೇಳೆ ಅವರಿಗೆ ಅಜ್ಜಿಯೊಬ್ಬಳು ಕಾಣ ಸಿಕ್ಕಿದ್ದಾಳೆ. ಜನ ಸಿಕ್ಕಾಗ ಎಂತದಾ ಸಮಾಚಾರ ಎಂದು ಮಾತಿಗಿಳಿವ ಬೇಳೂರು ಗೋಪಾಲಕೃಷ್ಣ, ಅಜ್ಜಿಯನ್ನು ಕಂಡು ಎಲ್ಲಿಗೆ ಹೊಗ್ತಿದ್ದಿ, ನಟ್ಟಿಗೆ ಬಂದಿದ್ಯಾ ಎಂದು ವಿಚಾರಿಸಿದ್ಧಾರೆ. ಅಲ್ಲದೆ ಅಜ್ಜಿ ಕುಳಿತಿದ್ದ ರಸ್ತೆ ಬದಿಯ ಕಟ್ಟೆ ಮೇಲೆ ಕುಳಿತು, ವೃದ್ಧೆಯ ಪೂರ್ವಪರ ವಿಚಾರಿಸಿದ್ದಾರೆ. ಈ ವೇಳೆ ತಾಯಿ, ತನ್ನ ವಿವರಗಳನ್ನು ನೀಡುತ್ತಾ, ಹೀಗೆ ಹೋಗುತ್ತಿರುತ್ತೇನೆ, ವಯಸ್ಸಾಯ್ತು ನಟ್ಟಿ ಮಾಡಕ್ಕಾಗಲ್ಲ, ಯಾರಾದರೂ ಗಾಡಿಯಲ್ಲಿ ಕರೆದುಕೊಂಡು ಹೋದರೆ ಹೋಗುತ್ತೇನೆ ಎಂದೆಲ್ಲಾ ಹೇಳಿದ್ಧಾಳೆ. ನೀ ಯಾರೆಂದು ಗೊತ್ತಾಗಿಲ್ಲಪ್ಪ! ಎಲ್ಲವನ್ನು ಆಲಿಸಿದ ಶಾಸಕರು ನಾನ್ಯಾರು ಗೊತ್ತಾ ನಿನಗೆ ಎಂದು ಕುತೂಹಲಕ್ಕೆ ಪ್ರಶ್ನಿಸಿದ್ದಾಳೆ. ಎಂಎಲ್ಎಯವರ ಪ್ರಶ್ನೆಗೆ ಮರುಕ್ಷಣದಲ್ಲಿಯೇ ನಿ ಯಾರೆಂದು ಗೊತ್ತಾಗ್ಲ ನಂಗೆ ಎಂದು ಹೇಳಿದ್ದಾಳೆ. ಇದಕ್ಕೆ ಶಾಸಕರು ನಾನು ಗೋಪಾಲಕೃಷ್ಣ ಬೇಳೂರು ಎಂದು ಪರಿಚಯಿಸಿಕೊಂಡಿದ್ದಾರೆ. ಹೆಸರನ್ನಷ್ಟೆ ತಿಳಿದಿದ್ದ ಅಜ್ಜಿ, ದೇವರು ನಿನಗೆ ಒಳ್ಳೆಯದು ಮಾಡ್ಲಪ್ಪ ಎಂದು ಬೇಳೂರುರವರ ಕೈಯನ್ನ ಹಿಡಿದು ಹಣೆಗೆ…
ತುಮಕೂರು;- ಹೈವೋಲ್ಟೆಜ್ ವಿದ್ಯುತ್ ಪ್ರವಹಿಸಿ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಲೆಕಡಕಲು ಗ್ರಾಮದಲ್ಲಿ ಜರುಗಿದೆ. ನೂರಕ್ಕೂ ಹೆಚ್ಚು ಮನೆಗಳ ಟಿ.ವಿ., ಫ್ರಿಡ್ಜ್, ಮಿಕ್ಸಿ ಸುಟ್ಟು ಕರಕಲಾಗಿದೆ. ಇನ್ನೂ ವಿದ್ಯುತ್ ಶಾಕ್ ಗೆ ಕೊಟ್ಟಿಗೆಯಲಿದ್ದ ಎಮ್ಮೆಯೂ ಬಲಿಯಾಗಿದೆ. ಊರತುಂಬೆಲ್ಲಾ ದಟ್ಟ ಹೊಗೆ ಆವರಿಸಿ ಆತಂಕ ಸೃಷ್ಟಿಸಿತು. ಇನ್ನೂ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತವಾಗಿದ್ದು, ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ;- ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಟೊಮೆಟೊ ದರ ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದ್ದು, ಇಂದು ಕೆಜಿ ಟೊಮೆಟೊ ಬೆಲೆ 150 ರೂಪಾಯಿಯಿಂದ 160 ರೂಪಾಯಿ ಆಗಿದೆ. ಕಳೆದ ಒಂದುವಾರದಿಂದ ಏರಿಳಿತವಾಗುತ್ತಿದ್ದ ಟೊಮೆಟೊ ಬೆಲೆ ಇಂದು ದಿಢೀರ್ ಏರಿಕೆಯಾಗಿದೆ. ವಾರದಿಂದ ಕೆಜಿ ಟೊಮೆಟೊಗೆ 80 ರೂಪಾಯಿಯಿಂದ 90 ರೂಪಾಯಿ, ಆಗಾಗ 100ರ ಗಡಿ ದಾಟುತ್ತಿದ್ದ ಟೊಮೆಟೊ ಇಂದು ಏಕಾಏಕಿ 160 ರೂಪಾಯಿವರೆಗೆ ತಲುಪಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಹಲವೆಡೆ ಅತಿವೃಷ್ಟಿಯಿಂದಾಗಿ ಟೊಮೆಟೊ ಬೆಳೆ ನಾಶವಾಗುತ್ತಿದ್ದು, ಕಟಾವಿಗೆ ಸಿದ್ಧವಾಗುತ್ತಿದ್ದ ಟೊಮೆಟೊ ತೋಟದಲ್ಲೇ ಹಾಳಾಗುತ್ತಿವೆ. ಬೆಲೆ ಏರಿಕೆಗೆ ಇದು ಕೂಡ ಪ್ರಮಖ ಕಾರಣವಾಗಿದೆ.
ಬೆಂಗಳೂರು ;– ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ತಿರುಗಿ ಬಿದ್ದಿದೆ. ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಜುಲೈ 27ರಂದು ಬಂದ್‌ಗೆ ಕರೆ ಕೊಟ್ಟಿದ್ರು. ಇದ್ರ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜುಲೈ 24ರಂದು ಒಂದೇ ದಿನ 2 ಸುತ್ತಿನ ಸಭೆ ನಡೆಸಿ ಕೆಲವು ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಭರವಸೆ ನೀಡಿದ್ರು. ಸಾರಿಗೆ ಸಚಿವರ ಭರವಸೆಯ ಮೇರೆಗೆ ಖಾಸಗಿ ಸಾರಿಗೆ ಸಂಘಟನೆಗಳು ಮುಷ್ಕರ ವಾಪಸ್ ಪಡೆದಿದ್ರು. ಜೊತೆಗೆ ಇಂದು ಇನ್ನೊಂದು ಸುತ್ತಿನ ಸಭೆ ನಡೆಸೋದಾಗಿ ಹೇಳಿದ್ರು. ಅಲ್ಲದೇ ಆಗಸ್ಟ್ ಮೊದಲನೇ ವಾರದಲ್ಲಿ ಸಿಎಂ ಜೊತೆ ಭೇಟಿ ಮಾಡಿಸೋದಾಗಿಯೂ ಭರವಸೆ ನೀಡಿದ್ರು. ಇಂದಿನ ಸಭೆಯಲ್ಲಿ ಸಾರಿಗೆ ಸಚಿವರು ಎಲ್ಲ ಸಂಘಟನೆಗಳನ್ನ ಬೇರೆ ಬೇರೆಯಾಗಿ ಕರೆದು ಮಾತುಕತೆ ನಡೆಸಲಿದ್ದಾರೆ. ಒಂದು ಸಂಘಟನೆಯಿಂದ ಇಬ್ಬರಿಗೆ ಮಾತ್ರ ಸಭೆಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಆಟೋ ಅಸೋಸಿಯೇಷನ್,…
ಬೆಂಗಳೂರು ;- ಪತ್ನಿ ಇರುತ್ತಿದ್ದ ಕೋಣೆಯಲ್ಲಿಯೇ ತನ್ನ ಸಹೋದರನಿಗೆ ಮಲಗಲು ಅನುಮತಿಸುತ್ತಾ ಪತ್ನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದ ಪತಿಯ ಕ್ರೌರ್ಯ ತಾಳದೆ ಆತನೊಂದಿಗೆ ವಿಚ್ಛೇದನ ಕೋರಿದ ಮನವಿಯನ್ನು ತಿರಸ್ಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ದಂಪತಿಯ ವಿವಾಹ ಅನೂರ್ಜಿತಗೊಳಿಸಿ ನೊಂದ ಮಹಿಳೆಗೆ ನೆಮ್ಮದಿ ಕರುಣಿಸಿದೆ. ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಮತ್ತು ವಿಜಯ್‌ಕುಮಾರ್ ಎ. ಪಾಟೀಲ್ ಅವರ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಪತಿಯ ಕ್ರೌರ್ಯಕ್ಕೆ ಸಂಬಂಧಿಸಿದಂತೆ ಮೇಲ್ಮನವಿದಾರೆ ನಿರ್ದಿಷ್ಟಆರೋಪ ಮಾಡಿ, ಹಲವು ಸಾಕ್ಷ್ಯಾಧಾರ ಒದಗಿಸಿದ್ದರು. ಆದರೆ ಪತ್ನಿಯ ಆರೋಪಗಳಿಗೆ ವಿರುದ್ಧವಾದ ಯಾವುದೇ ಸಾಕ್ಷ್ಯಧಾರಗಳನ್ನೂ ಪತಿ ಒದಗಿಸಿಲ್ಲ. ಇದರಿಂದ ಪತ್ನಿಯ ಆರೋಪಗಳು ನಿಜವೆಂದು ತೋರುತ್ತದೆ. ಹೀಗಿದ್ದರೂ ಪತ್ನಿಯ ಮನವಿ ಹಾಗೂ ಸಾಕ್ಷ್ಯಗಳನ್ನು ತಿರಸ್ಕರಿಸಿ ವಿಚ್ಛೇದನ ಕೋರಿದ ಅರ್ಜಿ ತಿರಸ್ಕರಿಸಿದ ಕೌಟುಂಬಿಕ ನ್ಯಾಯಾಲಯದ ಕ್ರಮ ದೋಷಪೂರಿತವಾಗಿದೆ. ಪ್ರಕರಣದಲ್ಲಿ ಕ್ರೌರ್ಯದ ಆಧಾರದ ಮೇಲೆ ಮೇಲ್ಮನವಿದಾರೆಗೆ ವಿಚ್ಛೇದನ ಮಂಜೂರು ಮಾಡಬಹುದಾಗಿದೆ ಎಂದ ಹೈಕೋರ್ಟ್, ಮೇಲ್ಮನವಿದಾರೆಯ ವಿವಾಹವನ್ನು ಅನೂರ್ಜಿತಗೊಳಿಸಿ ವಿಚ್ಛೇದನ ಕಲ್ಪಿಸಿದೆ.