Author: Prajatv Kannada

ಚಾಮರಾಜನಗರ: ನಾವು  ಅಕ್ಕೀನಾ ಫ್ರೀ ಕೇಳ್ತಾ ಇಲ್ಲಾ ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ,ನಗರದಲ್ಲಿ ಉಸ್ತುವಾರಿ ಸಚಿವ ಕೆ.ವೆಂಕಟೇಶ್ (K.Venkatesh)ಕೇಂದ್ರಕ್ಕೆ ಒತ್ತಾಯ. ಚಾಮರಾಜನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಆಗಮಿಸಿದ್ದ ವೇಳೆ ನಗರದ ಪ್ರವಾಸಿಮಂದಿರದಲ್ಲಿ   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮಗೆ ಅಕ್ಕಿ ಕೊಡ್ತೀವಿ ಅಂತ ಭರವಸೆ ನೀಡಿದ್ರು ನಂತರ ಕೊಡೋಕೆ ಆಗಲ್ಲ ಅಂತಿದ್ದಾರೆ. ನಾವು ಬಡವರಿಗೆ ಅಕ್ಕಿ ಕೊಡೋಕೆ ಕೇಳ್ತಾ ಇದೀವಿ‌. ಬೇರೆಯವರಿಗೆಲ್ಲೆ ಅಕ್ಕಿ ಕೊಡ್ತಾರೆ ಆದರೆ ಕರ್ನಾಟಕಕ್ಕೆ ಮಾತ್ರ ಅಕ್ಕಿ ಕೊಡಲ್ಲ ಅಂತಾರೆ . ನಾವೇನು  ಸುಮ್ನೆ ಕೇಳ್ತಾ ಇಲ್ಲ ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಬಡವರಿಗೆ ಅಕ್ಕಿ  ಕೊಡಬೇಕಿದೆ ಅಂದ್ರೂ ಅಕ್ಕಿ ಕೊಡ್ತಾ ಇಲ್ಲ ಅದಕ್ಕೆ ಪ್ರತಿಭಟನೆ ‌ಮಾಡಿದಿವಿ ಎಂದರು.  ಸಿದ್ದರಾಮಯ್ಯಯವರು ಐದು ವರ್ಷ ಪೂರೈಸ್ತಾ ಅಂತ ಮಾದ್ಯಮದವರ ಪ್ರಶ್ನೆಗೆ ಏನೂ ಹೇಳದೆ ನಗುತ್ತಾ ಸಾಗಿದರು.

Read More

ಕೋಲಾರ ;- ಟ್ರಾಕ್ಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಜರುಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಜಕಮ್ ಎಂಬ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಅಪಘಾತ ವೇಳೆ ಮಾವಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿ ಆಗಿದ್ದು, ಟ್ರಾಕ್ಟರ್ ಟ್ರಾಲಿಯಲ್ಲಿದ್ದ ಮಾವಿನ ಕಾಯಿ ಸಂಪೂರ್ಣವಾಗಿ ಮಣ್ಣು ಪಾಲಾಗಿದೆ. ರಸ್ತೆಯಲ್ಲಿಯೇ ಟ್ರಾಲಿ ಬಿದ್ದ ಪರಿಣಾಮ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. Video Player 00:00 00:07 ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Read More

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿವೆ. ಬಿಜೆಪಿ ಪಕ್ಷದಿಂದ ಮೇಯರ್ ಅಭ್ಯರ್ಥಿಯಾಗಿ ವೀಣಾ ಭರದ್ವಾಡ ಹಾಗೂ ಉಪಮೇಯರ್ ಸ್ಥಾನಕ್ಕೆ ಸತೀಶ್ ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸುವರ್ಣಾ ಕಲ್ಲಕುಂಟ ಹಾಗೂ ಉಪಮೇಯರ್ ಸ್ಥಾನಕ್ಕೆ ರಾಜು ಕಮತಿಯರನ್ನು ಪಾಲಿಕೆ ಗುದ್ದುಗೆ ಅಖಾಡಕ್ಕೆ ಇಳಿಸಿದೆ. Video Player 00:00 00:37 ಎರಡು ರಾಷ್ಟ್ರೀಯ ಪಕ್ಷದ ಒಟ್ಟು ನಾಲ್ಕು ಅಭ್ಯರ್ಥಿಗಳು ಈಗ 22ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಕಣದಲ್ಲಿದ್ದು, ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಧಾರವಾಡ ಪಾಲಿಕೆ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದರು.

Read More

ವಿಜಯನಗರ ;– ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿಜಯನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಹೊಸಪೇಟೆಯ ತಹಶಿಲ್ದಾರರ ಕಚೇರಿ ಎದುರು ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷ ಸಿರಾಜ್ ಶೇಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪಾದಯಾತ್ರೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಬಡವರ ಹೊಟ್ಟೆಯ ಮೇಲೆ ಬಡಿಬೇಡಿ, ಅಕ್ಕಿ ನೀಡಬೇಕು ಅಂತ ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿದ್ದಾರೆ. Video Player 00:00 00:12 ಈ ಸಂದರ್ಭದಲ್ಲಿ ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್, ಹರಪನಹಳ್ಳಿ ಶಾಸಕಿ ಎಂಪಿ. ಲತಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Read More

ಧಾರವಾಡ ;– ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಆರೋಪ ಮಾಡುತ್ತಿರುವ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತನ್ನ ಕೈಯಲ್ಲಿ ಅಕ್ಕಿ ಕೊಡಲು ಆಗುತ್ತಿಲ್ಲ. ಹೀಗಾಗಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳಾಯ್ತು, ಇನ್ನೂ ಒಂದು ಕೆಜಿ ಅಕ್ಕಿ ಸಹ ಕೊಟ್ಟಿಲ್ಲ. ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ್ದು. ನ್ಯಾಷನಲ್ ಫುಡ್ ಸೆಕ್ಯೂರಿಟಿ ಆ್ಯಕ್ಟ್ ಅಡಿ ಕೊಡುತ್ತಿದ್ದೇವೆ. ಈ ಆ್ಯಕ್ಟ್ ಮಾಡಿದ್ದು ನಾವು ಅಂತಾ ಅವರು ಹೇಳುತ್ತಾರೆ. ಅವರು ಆ್ಯಕ್ಟ್ ಪಾಸ್ ಮಾಡಿದ್ದರೂ ಹಣ ಇಟ್ಟಿರಲಿಲ್ಲ. ಮೋದಿಯವರು ಬಂದ ನಂತರ ಇದನ್ನು ಶುರು ಮಾಡಿದೇವೆ. 80 ಕೋಟಿ ಜನರಿಗೆ ನಾವು ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಉಳಿದ 60 ಕೋಟಿ ಜನಸಂಖ್ಯೆಗೆ ಕನಿಷ್ಠ ದರದಲ್ಲಿ ಅಕ್ಕಿ ಕೊಡಬೇಕಾಗುತ್ತದೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು. ಇನ್ನೂ ಈಗ ಮೋದಿ ಕೊಡುತ್ತಿರುವ 5ಕೆಜಿ…

Read More

ಚಿತ್ರದುರ್ಗ ;- ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿತ್ತು. ಮೊದಲು ಕೇಂದ್ರ ಸರಕಾರದ ವಿರೋಧ ಜಾಥಾವನ್ನು ನಡೆಸಿದರು. ಆದರೆ ಬಹಿರಂಗ ಸಭೆ ನಡೆಯುವ ವೇಳೆಗೆ ಬಿಸಿಲಿನ ತಾಪ ಹೆಚ್ಚಿತ್ತು. ಬಿಸಿಲಿನಿಂದ ತಪ್ಪಿಸಿ ಕೊಳ್ಳಲು ಮಹಿಳಾ ಕಾರ್ಯಕರ್ತರು ಸೀರೆಯನ್ನು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿಯಾಗಿಸಿಕೊಂಡ್ರೆ, ಕಾಂಗ್ರಸ್ ಲೀಡರ್ಗಳು ಟವಲ್ ಮೊರೆ ಹೋದ ದೃಶ್ಯ ಸೆರೆಯಾಯ್ತು.

Read More

ಮಂಡ್ಯ ;- ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಾಟಾ ಎಕ್ಸ್ ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಡಿಸೈರ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಓರ್ವನನ್ನು ನೀರಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತಿಬ್ಬರ ಹೆಸರು ತಿಳಿದುಬಂದಿಲ್ಲ. ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿಯು ಗಂಭೀರವಾಗಿದ್ದು, ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರು ಅತಿ ವೇಗವಾಗಿ ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮುಂಬದಿ ಕಾರಿನಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ‌ ಹೆದ್ದಾರಿ ಸಾವಿನ ಹೆದ್ದಾರಿಯಾಗಿ ಮಾರ್ಪಡಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಧಾರವಾಡ ;- ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ರಾಜ್ಯ ಸರ್ಕಾರ ನಡೆ ಖಂಡಿಸಿ ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಷದ್, ಬಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭಾರತ ಹಿಂದೂಗಳ ರಾಷ್ಟ್ರ. ಇಲ್ಲಿ ಹಿಂದೂಗಳ ಜೊತೆ ಅನ್ಯ ಧರ್ಮಿಯವರು ಇದ್ದಾರೆ. ಅವರ ಜೊತೆ ಹಿಂದೂಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಕೆಲವು ದುಷ್ಟ ಶಕ್ತಿಗಳು ಹಿಂದೂಗಳಿಗೆ ಆಸೆ ಆಮೇಶಗಳ ಮೂಲಕ ಮತಾಂತರ ಮಾಡುತ್ತಿದ್ದಾರೆ. ಬಲವಂತ ಹಾಗೂ ಆಮೇಶಗಳ ಮೂಲಕ ನಡೆಯು ಮತಾಂತರವನ್ನು ನಾವು ಖಂಡಿಸುತ್ತೇವೆ. ಬಲವಂತದ ಮತಾಂತರ ತಡೆಯುವ ಕಾಯ್ದೆಯನ್ನು ಸರ್ಕಾರ ಹಿಂಪಡೆಯುತ್ತಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಒಂದು ವೇಳೆ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟಕ್ಕೆ ನಾವು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More

ಶಿವಮೊಗ್ಗ: ನಿಗದಿತ ಸಮಯಕ್ಕೆ ಮಳೆಯಾಗದಿದ್ದರೆ ಮೋಡಬಿತ್ತನೆ ಮಾಡುವುದು ಅನಿವಾರ್ಯವಾಗಿದೆ. ಈ ವಿಟಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕುಡಿಯುವ ನೀರಿನ ವಿಚಾರವಾಗಿ ಟಾಸ್ಕ್ ಫೋರ್ಸ್ ನೊಂದಿಗೆ ಸಭೆ ನಡೆಸಿದ ನಂತರ ಮಾದ್ಯಮದ ಜೊತೆ ಮಾತನಾಡಿದ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಇಪ್ಪತ್ತು ದಿನಗಳಿಗಾಗುವಷ್ಟು ಕುಡಿಯುವ ನೀರನ್ನು ಪೂರೈಸಬಹುದಾಗಿದೆ.ಅಷ್ಟರೊಳಗೆ ಮಳೆಯಾದರೆ ಪರವಾಗಿಲ್ಲ. ಮಳೆಯಾಗದೆ ಹೋದರೆ, ನೀರಿನ ಸಮಸ್ಯೆಯಿರುವ ತಾಲೂಕುಗಳಲ್ಲಿ ಟ್ಯಾಂಕರ್ ಇಲ್ಲವೇ ಬೋರ್ ವೆಲ್ ಹಾಗು ಖಾಸಗಿ ಬೋರ್ ವೆಲ್ ಮೂಲಕ ನೀರು ಕಲ್ಪಿಸಲು ಸಿದ್ದತೆ ನಡೆಸಲಾಗಿದೆ ಎಂದರು. ಅತಿವೃಷ್ಟಿ ಅನಾವೃಷ್ಟಿಯಿಂದ ಜಿಲ್ಲೆಯಲ್ಲಿ ನೀಕಿದೆ ಸಮಸ್ಯೆಯಾಗುತ್ತಿದೆ. ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರೀಯಾ ಯೋಜನೆ ರೂಪಿಸಬೇಕಿದೆ. ನಿಗದಿತ ಸಮಯದಲ್ಲಿ ಮಳೆಯಾಗದಿದ್ದರೆ ಮೋಡಬಿತ್ತನೆ ಮಾಡುವ ಪ್ರಸ್ಥಾಪವೂ ಕೂಡ ಇದೆ. ಮೋಡಬಿತ್ತನೆ ಕೆಲವು ಸಂದರ್ಭದಲ್ಲಿ ಸಮರ್ಪಕವಾಗಿ ಯಶಸ್ವಿಯಾಗಿದ್ದರೂ, ಕೆಲವು ಸಂದರ್ಭದಲ್ಲಿ ಯಶಸ್ವಿಯಾಗಿಲ್ಲ ಎಂದು ಹೇಳಿದರು.ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ…

Read More

ಸೋಮಶೇಖರ್ ಗುರೂಜಿ B.Sc M.93534 88403 ಸೂರ್ಯೋದಯ: 05.54 AM, ಸೂರ್ಯಾಸ್ತ : 06.48 PM ಆಷಾಢ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಬಿದಿಗೆ 01:07 PM ತನಕ ನಂತರ ತದಿಗೆ ನಕ್ಷತ್ರ: ಇವತ್ತು ಪುನರ್ವಸು 10:37 PM ತನಕ ನಂತರ ಪುಷ್ಯ ಯೋಗ: ಇವತ್ತು ವೃದ್ಧಿ01:15 AM ತನಕ ನಂತರ ಧ್ರುವ ಕರಣ: ಇವತ್ತು ಬಾಲವ 12:13 AM ತನಕ ನಂತರ ಕೌಲವ 01:07 PM ತನಕ ನಂತರ ತೈತಲೆ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 07.58 PM to 09.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:51 ನಿಂದ ಮ.12:43 ವರೆಗೂ ಮೇಷ ರಾಶಿ: ವಿದೇಶದಲ್ಲಿ ನೆಲೆಸಿರುವ ನೀವು ನಿಮ್ಮದೇ ಆದ ಒಂದು ಛಾಯಾ ರೂಪಿಸುವಿರಿ, ಒಂದು ಹೊಸ ಕಂಪನಿ ಪ್ರಾರಂಭಿಸುವ ಚಿಂತನೆ, ಕೆಲವರು ಉದ್ಯೋಗ…

Read More