ಬೆಂಗಳೂರು ;– ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕಾಂಗ್ರೆಸ್ ಜತೆ ಸೇರಿಕೊಂಡು ಸುಳ್ಳು ಆರೋಪಗಳನ್ನು ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಲ್ಲಿ ಹೋಗಿದ್ದಾರೆ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು ಒಂದು ತಿಂಗಳು ಕಳೆದರೂ ಯಾರೂ ತಮ್ಮ ಇಲಾಖೆಗಳ ಪ್ರಗತಿಯ ಬಗ್ಗೆ ಮಾತನಾಡುತ್ತಿಲ್ಲ. ಮಳೆಗಾಲ ಆರಂಭವಾಗುತ್ತಿದೆ, ಒಂದು ವರ್ಷದ ಕಾಮಗಾರಿಗಳನ್ನು ಅಸ್ತವ್ಯಸ್ತಗೊಳಿಸಲು ಮುಂದಾಗಿದ್ದಾರೆ’ ಎಂದರು. ‘ಅಧಿಕಾರಕ್ಕೆ ಬಂದ ದಿನದಿಂದಲೇ ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ. ಉಚಿತ ಬಸ್ ಪ್ರಯಾಣವೂ ಸೇರಿ ಗ್ಯಾರಂಟಿ ಯೋಜನೆಗಳು ಅಧ್ವಾನ ಆಗಿವೆ’ ಎಂದು ಟೀಕಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸುವ ಸಾಧ್ಯತೆ ಇಲ್ಲ ಎಂದು ಅವರ ಸಂಪುಟ ಸಹೋದ್ಯೋಗಿಗಳೇ ಹೇಳುತ್ತಿದ್ದಾರೆ ಎಂದೂ ಬೊಮ್ಮಾಯಿ ಹೇಳಿದರು. ಇನ್ನೂ ನಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಜತೆ ಸೇರಿಕೊಂಡು ಸುಳ್ಳು ಆರೋಪಗಳನ್ನು ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಲ್ಲಿ ಹೋಗಿದ್ದಾರೆ? ಗುತ್ತಿಗೆದಾರರ ಬಿಲ್‌ನ ಒಂದು…
Author: Prajatv Kannada
ಬೆಂಗಳೂರು ;-ನಗರದ ಆನಂದ್ ರಾವ್ ವೃತ್ತದಲ್ಲಿ ಮಾಜಿ ಸಚಿವ ಆರ್. ಅಶೋಕ್ ನೇತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಒಂದೆಡೆ ಮಳೆ, ಇನ್ನೊಂದೆಡೆ ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಿಜೆಪಿ ನಾಯಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮಾಜಿ ಸಚಿವ ಆರ್. ಅಶೋಕ್, ಎಂ ಎಲ್ ಸಿ ರವಿಕುಮಾರ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಒಂದೆಡೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬೆಂಗಳೂರು ;- ಮಾಜಿ ಶಾಸಕ ನಂದೀಶ್ ರೆಡ್ಡಿ ಅವರು ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿರುವ ಆರೋಪ ಕೇಳಿ ಬಂದಿದ್ದು, ಹೀಗಾಗಿ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಸೂಚಿಸಿದ್ದೇನೆ. ಮಹದೇವಪುರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದ್ದೇನೆ. ಕಾರ್ಯಾಚರಣೆಗೆ ಯಾರೇ ಅಡ್ಡಿಪಡಿಸಿದರೂ ದೂರು ದಾಖಲಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ನಿನ್ನೆ ಮಹದೇವಪುರ ವಲಯ ದೊಡ್ಡನೆಕ್ಕುಂದಿಯ 24/1,3,4 ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ಒತ್ತುವರಿ ಮಾಡಿಕೊಂಡಿರುವ ಐಶಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ತೆರವು ಕಾರ್ಯಚರಣೆ ವೇಳೆ ನಿವಾಸಿಗಳು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಜೆಸಿಬಿ ಕೀ ಕಿತ್ತುಕೊಂಡು ತೆರವಿಗೆ ಅಡ್ಡಿಪಡಿಸಿದ್ದರು. ಹೀಗಾಗಿ ಬಿಬಿಂಪಿ ದೂರು ದಾಖಿಸಲು ಮುಂದಾಗಿದೆ.
ಬೆಂಗಳೂರು;– ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಹೀಗಾಗಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರ್ಪೋರೇಷನ್, ಮಜೆಸ್ಟಿಕ್, ಹೆಬ್ಬಾಳ, ಶಾಂತಿನಗರ, ವಿಲ್ಸನ್‌ಗಾರ್ಡನ್ ಸೇರಿದಂತೆ ಹಲವಡೆ ಧಾರಾಕಾರ ಮಳೆ ಹಿನ್ನೆಲೆ ಭಾರಿ ಟ್ರಾಫಿಕ್ ಜಾಮ್ ಆಗಿದೆ. ನೂರಾರು ವಾಹನಗಳು ಜಾಮ್‌ನಲ್ಲಿ ಸಿಲುಕಿದ್ದು, ಗಂಟೆಗಟ್ಟಲೆ ವಾಹನಗಳು ಟ್ರಾಫಿಕ್‌ನಲ್ಲಿ ನಿಂತಿದ್ದವು. ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಮೈಸೂರು ರಸ್ತೆ, ಕೆ.ಆರ್.ಮಾರುಕಟ್ಟೆ, ಮಾಗಡಿ ರಸ್ತೆ, ವಿಜಯನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಔಟರ್ ರಿಂಗ್ ರೋಡ್ ಬಿಇಎಲ್ ವೃತ್ತದಿಂದ ಕುವೆಂಪು ವೃತ್ತದಿಂದ ಹೆಬ್ಬಾಳ ಫ್ಲೈಓವರ್‌ವರೆಗೆ ರಸ್ತೆ ಜಲಾವೃತವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ವೃತ್ತ ಮತ್ತು ರಾಣಿ ಪ್ರತಿಮೆ ಬಳಿಯೂ ಜಲಾವೃತವಾಗಿದೆ. ಮಳೆರಾಯನ ಆರ್ಭಟ ಜೋರದ ಹಿನ್ನೆಲೆ ಬೆಂಗಳೂರಿಗರು ರಸ್ತೆಗಳಲ್ಲಿ ಸುರಕ್ಷಿತವಾಗಿ ಮತ್ತು ನಿಧಾನವಾಗಿ ಸಂಚರಿಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ. ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸ್…
ಬೆಂಗಳೂರು ;– ರಾಜ್ಯ ಕಾಂಗ್ರೆಸ್ ನಾಯಕರು ಮೋದಿ ಕಡೆ ಬೆರಳು ಮಾಡದೆ ಅಕ್ಕಿ ಕೊಡಿ ಎಂದು ಮಾಜಿ ಶಾಸಕ ಸಿ ಟಿ ರವಿ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಪೂರೈಸಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು. ಕೇಂದ್ರ ಸರ್ಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿಯನ್ನು ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ. ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರ್ಕಾರವೇ ಪೂರೈಸುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಬಡ ಕುಟುಂಬಗಳಿಗೆ…
ಸಿಯೋಲ್: ಉತ್ತರ ಕೊರಿಯಾದ ಉನ್ನತ ಅಧಿಕಾರಿಗಳು ದೇಶದ ಪ್ರಥಮ ಗೂಢಚರ್ಯೆ ಉಪಗ್ರಹ ಉಡಾವಣೆಯ ವೈಫಲ್ಯ ಈ ವರ್ಷದ ಅತ್ಯಂತ ಗಂಭೀರ ಲೋಪ ಎಂದು ಕರೆದಿದ್ದು ಇದಕ್ಕೆ ಜವಾಬ್ದಾರರಾದವರನ್ನು ಕಠಿಣ ಶಬ್ದಗಳಿಂದ ದೂಷಿಸಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿದೆ. ಮೇ ತಿಂಗಳ ಕೊನೆಯಲ್ಲಿ ಮಿಲಿಟರಿ ಗುಪ್ತಚರ ಉಪಗ್ರಹವನ್ನು ಹೊತ್ತಿದ್ದ ಉತ್ತರ ಕೊರಿಯಾದ ರಾಕೆಟ್ ಉಡಾವಣೆಗೊಂಡ ಕೆಲವೇ ಹೊತ್ತಿನಲ್ಲಿ ಪತನಗೊಂಡಿತ್ತು. ಇದು ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಮೇಲೆ ನಿಗಾ ಇರಿಸಲು ಬಾಹ್ಯಾಕಾಶ ಆಧರಿತ ಕಣ್ಗಾವಲು ವ್ಯವಸ್ಥೆಯನ್ನು ಸ್ಥಾಪಿಸುವ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್-ಜಾಂಗ್-ವುನ್ ಅವರ ಮಹತ್ವಾಕಾಂಕ್ಷೆಗೆ ಹಿನ್ನಡೆ ಉಂಟು ಮಾಡಿತ್ತು.
ದಕ್ಷಿಣ ಅಮೇರಿಕ: ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಶವ ಪೆಟ್ಟಿಗೆಯಲ್ಲಿ ಇರಿಸಿ ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಎನ್ನುವಷ್ಟರಲ್ಲಿ ಮೃತ ಮಹಿಳೆಯೇ ಶವಪೆಟ್ಟಿಗೆಯ ಬಾಗಿಲು ಬಡಿದ ಘಟನೆ ದಕ್ಷಿಣ ಅಮೇರಿಕದ ಈಕ್ವೆಡಾರ್ ಪ್ರದೇಶದಲ್ಲಿ ನಡೆದಿದೆ. 76 ವರ್ಷದ ಬೆಲ್ಲಾ ಮೊಂಟೊಯಾ ಎಂಬ ಮಹಿಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಏಳು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದರು ಮಹಿಳೆ ಜೂನ್ 8 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದರಿಂದ ಆಕೆಯ ಕುಟುಂಬಸ್ಥರು ಅಂತ್ಯಕ್ರಿಯೆಗೆ ತಯಾರಿ ನಡಿಸಿದ್ದಾರೆ. ಮಹಿಳೆಯನ್ನು ಶವ ಪೆಟ್ಟಿಗೆಯಲ್ಲಿ ಇರಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಶವ ಪೆಟ್ಟಿಗೆಯ ಬಾಗಿಲು ಬಡಿದ ಸದ್ದು ಕೇಳಿದೆ ಇದನ್ನು ಗಮನಿಸಿದ ಕುಟುಂಬ ಸದಸ್ಯರು ಶವ ಪೆಟ್ಟಿಗೆ ಬಾಗಿಲು ತೆರೆದಾಗ ಮೃತ ಮಹಿಳೆ ಜೀವಂತವಾಗಿ ಎದ್ದು ಕೂತಿದ್ದಾರೆ, ಇದನ್ನು ಕಂಡ ಕುಟುಂಬ ಸದಸ್ಯರಿಗೆ ಒಂದು ಕಡೆ ಖುಷಿ, ಇನ್ನೊಂದು ಕಡೆ ಇದು ಹೇಗೆ ಸಾಧ್ಯ ಎಂಬ ಆತಂಕ ಎದುರಾಗಿದೆ, ಕೂಡಲೆ ಮಹಿಳೆಯನ್ನು ಹತ್ತಿರದ…
ಇಸ್ಲಾಮಾಬಾದ್: ಜೂನ್ 14ರಂದು ಗ್ರೀಸ್‌ನ ಕರಾವಳಿ ಪ್ರದೇಶದಲ್ಲಿ ನಡೆದ ದೋಣಿ ದುರಂತದಲ್ಲಿ 300 ಮಂದಿ ಪಾಕಿಸ್ತಾನದ ನಾಗರೀಕರು ಸಾವನ್ನಪ್ಪಿದ್ದು, ಕೇವಲ 12 ಮಂದಿ ಮಾತ್ರವೇ ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು ಪಾಕಿಸ್ತಾನ ಸಚಿವಾಲಯ ತಿಳಿಸಿದೆ. ಪ್ರತಿ ವರ್ಷ ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಯುವ ಸಮೂಹ ಉತ್ತಮ ಜೀವನ ಕಂಡುಕೊಳ್ಳುವ ಕಾರಣದಿಂದಾಗಿ ಯೂರೋಪ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಕಳೆದ ವಾರ ವಲಸೆ ಹೋಗುತ್ತಿದ್ದ ವೇಳೆ ಗ್ರೀಸ್ ನ ಕರಾವಳಿ ಪ್ರದೇಶದಲ್ಲಿ ನೂರಾರು ಜನರಿದ್ದ ಬೋಟ್ ಮುಳುಗಿ 300 ಮಂದಿ ಪಾಕ್ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ಪಾಕ್ ಪ್ರಜೆಗಳು ಮಾತ್ರ ಬದುಕುಳಿದಿದ್ದಾರೆ ಎಂದು ಪಾಕ್ ಸಚಿವಾಲಯ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ 10 ಮಂದಿಯನ್ನ ಬಂಧಿಸಲಾಗಿದ್ದು, ಪಾಕ್ ಆಡಳಿತ ಕಾಶ್ಮೀರದ 9 ಜನರನ್ನು ಬಂಧಿಸಲಾಗಿದೆ. ಅಲ್ಲದೆ ಮತ್ತೋರ್ವನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ. ಬೋಟ್ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಪಾಕ್ ನಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಯಿತು.…
ಕಠ್ಮಂಡು: ಪೂರ್ವ ನೇಪಾಳದಲ್ಲಿ ಮಾನ್ಸೂನ್ – ಪ್ರಚೋದಿತ ಭೀಕರ ಪ್ರವಾಹ ಮತ್ತು ಭೂಕುಸಿತಗಳು ವಿನಾಶವನ್ನು ಉಂಟಾದ ಪರಿಣಾಮ ಇದುವರೆಗೂ ಐದು ಮಂದಿ ಮೃತ ಪಟ್ಟಿದ್ದು, ಮಂದಿ ಕಾಣೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚೈನ್‌ಪುರ್ ಪುರಸಭೆ-4ರಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ ಹೆವಾ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಮತ್ತು 21 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ಭಾನುವಾರ ಬೆಳಗ್ಗೆ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವರದಿಯಾದ ಘಟನೆಗಳ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು “ದೇಶದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ಆಸ್ತಿ ನಷ್ಟದಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಜೊತೆಗೆ ಭದ್ರತಾ ಏಜೆನ್ಸಿಗಳು ಮತ್ತು ರಾಷ್ಟ್ರೀಯ ಸೇವಾ ಸಿಬ್ಬಂದಿಗೆ ನಾಪತ್ತೆಯಾದವರನ್ನು ರಕ್ಷಿಸಲು ನಾನು ಪ್ರಾಮಾಣಿಕವಾಗಿ ಮನವಿ ಮಾಡುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಪ್ರವಾಹದ ನಂತರ…
ಖ್ಯಾತ ನಟಿ ರಶ್ಮಿಕಾ ಮಂದಣ್ಣಗೆ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದ ಆರಂಭದಿಂದಲೂ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಇದೀಗ ಆಕೆಗೆ ಬರೋಬ್ಬರಿ 80 ಲಕ್ಷ ರೂಪಾಯಿ ವಂಚಿಸಿದ್ದಾರೆ. ರಶ್ಮಿಕಾಗೇ ಗೊತ್ತಿಲ್ಲದಂತೆ ಸುಮಾರು 80 ಲಕ್ಷ ರೂಪಾಯಿಗಳಷ್ಟು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮ್ಯಾನೇಜರ್ ಮೇಲೆ ಕೇಳಿಬಂದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮ್ಯಾನೇಜರ್ ನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಆದರೆ ಈ ಮ್ಯಾನೇಜರ್ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಆಗಿದ್ದರೂ ಕೂಡ ರಶ್ಮಿಕಾ ಈ ಪ್ರಕರಣವನ್ನು ಸೈಲೆಂಟ್ ಆಗಿ ಹ್ಯಾಂಡಲ್ ಮಾಡಿದ್ದಾರೆ. ಯಾವುದೇ ಸೀನ್ ಕ್ರಿಯೆಟ್ ಮಾಡದೇ, ಮ್ಯಾನೇಜರ್ ಹುದ್ದೆಯಿಂದ ಆತನನ್ನು ಕಿತ್ತೆಸೆದಿದ್ದಾರೆ ಎನ್ನಲಾಗುತ್ತಿದೆ.