ಗದಗ ;-ಬಾವಿಗೆ ಹಾರಿ ಸರಕಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಜರುಗಿದೆ. 45 ವರ್ಷದ ಕುಮಾರ್ ಸ್ವಾಮಿ ಚಿದಾನಂದಯ್ಯ ಬರದೂರಮಠ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೈದ್ಯ, ತಡರಾತ್ರಿ ತಮ್ಮ ಸ್ವಂತ ಜಮೀನಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಸಾಕಷ್ಟು ದಿನಗಳಿಂದ ಪಾಶ‌್ವ೯ವಾಯು ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಪಾಶ‌್ವ೯ವಾಯು ರೋಗದಿಂದ ಮಾನಸಿಕವಾಗಿ ನೊಂದು ಆತ್ಮ ಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Author: Prajatv Kannada
ಶಿಗ್ಗಾಂವಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ಜನ ಬಿಲ್ ಕಟ್ಟದ ವಿಚಾರವಾಗಿ ಕಿವಿಮಾತು ಹೇಳುವ ಮೂಲಕ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Former CM Bommai) ಎಚ್ಚರಿಕೆ ನೀಡಿದ್ದಾರೆ. ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಪೂರೈಕೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದಿದೆ. ಜನರಿಗೆ ಕುಡಿಯುವ ನೀರು, ಕೃಷಿಗೆ ನೀರು ಇಲ್ಲದೇ ಸಮಸ್ಯೆ ಆಗಿದೆ. ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಕರೆಂಟ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಆಗುತ್ತದೆ. ಹೈಡ್ರೋ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ವಿದ್ಯುತ್ ಶಕ್ತಿಯ ಕ್ಷಾಮ ಎದುರಾಗಲಿದೆ ಎಂದು ಶಿಗ್ಗಾಂವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಹೇಳಿದರು.
ದಾವಣಗೆರೆ: ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದವರು ಮುಖ್ಯಮಂತ್ರಿ ಆಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಪ್ರಸನ್ನಾನಂದಪುರಿಶ್ರೀ (Prasannanandapuri Shri)ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಠದಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರು ಮುಖ್ಯಮಂತ್ರಿ ಆಗಲು ಶ್ರಮಿಸಬೇಕಾಗಿದೆ. ಹಿಂದಿನ ಸರ್ಕಾರ ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದೆ. ಎಸ್ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ನಲ್ಲಿ ಸೇರಿಸಬೇಕು. ಈ ಬಗ್ಗೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು ಎಂದರು.
ಮೈಸೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ (Siddaramaiah) ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್‌ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ. ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ, ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಚಿಲ್ಲರೆ ಮನಸ್ಥಿತಿ ತೋರಿಸುತ್ತಿದೆ. ಸಿದ್ದರಾಮಯ್ಯ ಅವ್ರು ನನ್ನ ಹೆಗಲ ಮೇಲೆ ಗನ್ ಇಟ್ಟು ಯಾರಿಗೂ ಗುಂಡು ಹೊಡೆಯುವ ಕೆಲಸ ಮಾಡಿಲ್ಲ. ನಾನೂ ಕೂಡ ಅದಕ್ಕೆ ಆಸ್ಪದ ಕೊಟ್ಟಿಲ್ಲ. ಹೊಡೆಯೋದಿದ್ದರೆ ನಾವೇ ಡೈರೆಕ್ಟ್ ಆಗಿ ಹೊಡಿಯುತ್ತೇವೆ. ನನ್ನ ಡಿ.ಕೆ ಶಿವಕುಮಾರ್ ಸಂಬಂಧ ಉತ್ತಮವಾಗಿದೆ. ಒಂದು ವಿಚಾರ ಬಂದಾಗ ಅಭಿಪ್ರಾಯ, ಭಿನ್ನಾಭಿಪ್ರಾಯ…
ತುಮಕೂರು;– ಜಿಲ್ಲೆಯ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿರುವ ಘಟನೆ ಜರುಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಗಮಣಿ ಮತ್ತು ಮಗ ಮಿಥುನ್ ಗಾಯಾಳು ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮಗನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಗದಗ ;- ಉಚಿತ ಬಸ್ ಪ್ರಯಾಣ ಹಿನ್ನೆಲೆ ಸಾರಿಗೆ ಬಸ್ ಗಳು ಮಹಿಳಾ ಮಣಿಗಳಿಂದ ತುಂಬಿ ತುಳುಕ್ಕುತ್ತಿವೆ. ಇದರಿಂದ ಬಾಲಕನೊಬ್ಬ ಬಸ್ ಏರಲು ನಿರಾಕರಣೆ ಮಾಡಿ ಕಣ್ಣೀರು ಹಾಕ್ತಾಯಿರುವ ದೃಶ್ಯ ಸೆರೆಯಾಗಿದೆ. ಗದಗ ತಾಲೂಕಿನ ಮುಳಗುಂದ ಬಳಿಯ ದಾವಲ್ ಮಲ್ಲಿಕ್ ದರ್ಗಾ ಕ್ಕೆ ಬಂದ ಮಹಿಳೆಯೊಬ್ಬರು ಎಲ್ಲಾ ಬಸ್ ಗಳು ಭರ್ತಿಯಾಗಿ ಹೋಗುತ್ತಿರುವದನ್ನು ನೋಡಿ ಕಂಗಾಲಾಗಿದ್ದರು. ಈ ವೇಳೆ ನೂಕು ನುಗ್ಗಲಿನಲ್ಲಿ ನಾ ಬರಲು ಒಲ್ಲೆ ಎಂದು ಬಾಲಕ ಹಠ ಹಿಡಿದಿದ್ದಾನೆ. ಈ ವೇಳೆ ಬಾಲಕನನ್ನು ಸಮಾಧಾನ ಮಾಡಲು ತಾಯಿ ಹರಸಾಹಸ ಪಟ್ಟಿದ್ದಾರೆ, ವೀಕೆಂಡ್ ಹಾಗೂ ಅಮವಾಸ್ಯೆ ಇರೋದರಿಂದ ಹೆಚ್ವಿನ ಸಂಖ್ಯೆಯಲ್ಲಿ ನಿನ್ನೆ ಮಹಿಳೆಯರು ಪ್ರಯಾಣ ಬೆಳೆಸಿದ್ದಾರೆ.
ಗದಗ ; ಕೇಂದ್ರ ಸರ್ಕಾರದ ವಿರುದ್ಧ ವಿರುದ್ಧ ಸಚಿವ ಎಚ್ ಕೆ ಪಾಟೀಲ್ ಕಿಡಿಕಾರಿದ್ದಾರೆ. ಗದಗನಲ್ಲಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ರಾಜ್ಯ ಸರ್ಕಾರ ಜೂನ್ 12ರಂದು ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಪತ್ರ ಬರೆದಿತ್ತು. ಬೇಡಿಕೆಯಷ್ಟು ಅಕ್ಕಿ ಕೊಡುವುದಾಗಿ ಎಫ್‌ಸಿಐ ಭರವಸೆ ನೀಡಿತ್ತು. ಅಲ್ಲಿನ ಮುಖ್ಯಸ್ಥರ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮಾತನಾಡಿದ್ದರು. ಇನ್ನೇನು ಪ್ರಕ್ರಿಯೆ ಆರಂಭಿಸಬೇಕು ಎನ್ನುವಷ್ಟರಲ್ಲಿ 13ರಂದು ಪತ್ರ ಬರೆದು ಈಶಾನ್ಯ ರಾಜ್ಯ ಹೊರತುಪಡಿಸಿ, ಬೇರೆ ರಾಜ್ಯಗಳಿಗೆ ಅಕ್ಕಿ ಕೊಡಲ್ಲ ಎಂದು ತಿಳಿಸಿದೆ’ ಎಂದು ಕಿಡಿಕಾರಿದರು. ‘ನಾವೇನು ಉಚಿತವಾಗಿ ಅಕ್ಕಿ ಕೇಳಿಲ್ಲ. ನಮಗೆ ಸಾಂವಿಧಾನಿಕ ಹಕ್ಕಿದೆ. ರಾಜ್ಯದ ಸಂಪತ್ತಿನಿಂದ ಹಣ ಖರ್ಚು ಮಾಡುತ್ತೇವೆ. ಆದರೆ, ರಾಜ್ಯಗಳಿಗೆ ಕೊಡಬೇಡಿ; ಖಾಸಗಿಯವರಿಗೆ ಮಾರಾಟ ಮಾಡಿ ಅಂತಿದ್ದಾರೆ’ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (B.S.Yediyurappa) ಕಾಂಗ್ರೆಸ್ (Congress) ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ ಎಂದು ಕಿಡಿಕಾರಿದರು. ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ. ಯಾವುದೇ ಸಮಯದಲ್ಲೂ ಮೋದಿಯವರು ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಈಗ ಕೊಡುತ್ತಿರುವುದು ಕೂಡ ಕೇಂದ್ರ ಸರ್ಕಾರ, ಅದು ಉಚಿತವಾಗಿ…
ಹುಬ್ಬಳ್ಳಿ: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರತಿ ಕುಟುಂಬಕ್ಕೆ ತಲಾ 10 ಕೆಜಿ ಅಕ್ಕಿ ವಿತರಣೆಗೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು, ಏಕೆಂದರೆ ನಾವು ಅಂದರೆ ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಾ ಇದೆ, ಮತ್ತೆ ಕೇಂದ್ರ ಸರ್ಕಾರವೇ ಕೊಡಬೇಕು ಅಂದ್ರೆ ಹೇಗೆ?, ಸುಖಾಸುಮ್ಮನೆ ಜನರನ್ನ ಅಡ್ಡದಾರಿಗೆ ಎಳೆಯಬೇಡಿ, ಇದೀಗ ಅಕ್ಕಿ ಬರಲ್ಲ, ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎಂದು ಕುಂಟು ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ನೀವು ಹೀಗೆ ಮಾಡುತ್ತಿದ್ದರೆ, ನೀವು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಸರಿದಂತೆ ಅರ್ಥ ಆಗುತ್ತದೆ ಎಂದರು. ರಾಜ್ಯ ಸರ್ಕಾರ ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎಂದು ಹೇಳುತ್ತಿದ್ದಾರೆ. ಎಲ್ಲಿಂದಾದರೂ ಅಕ್ಕಿ ತರಿಸಲಿ, ನಮಗೆ ಬಡಜನರಿಗೆ ಒಳ್ಳೆದಾದ್ರೆ ಸಾಕು, ಎಲ್ಲಿಂದ…
ಬೆಂಗಳೂರು ;- ಬೆಂಗಳೂರಿನ ಆರ್.ಆರ್ ನಗರದ ಮೆಟ್ರೋ ನಿಲ್ದಾಣದ ಬಳಿ ಹಿಟ್ ಆಯಂಡ್ ರನ್ಗೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜರುಗಿದೆ. ಪವನ್ ಮೃತ ಡೆಲಿವರಿ ಬಾಯ್ ಎಂದು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕ ವಿನಾಯಕ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ರಾಜಾಜಿನಗರದ ಮಹೀಂದ್ರ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ವೀಕೆಂಡ್ ಹಿನ್ನೆಲೆ ಗೆಳೆಯರ ಜೊತೆ ಪಾರ್ಟಿ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಬಳಿಕ ಗೆಳೆಯ ಗೆಳೆಯ ಸಾಗರ್ ಎಂಬವನಿಗೆ ಡ್ರಾಪ್ ನೀಡಲು ಕಾರಿನಲ್ಲಿ ಮೂವರು ಯುವತಿರು ಓರ್ವ ಯುವಕ ತೆರಳಿದ್ದಾರೆ. ವಿನಾಯಕ್ ಕುಡಿದ ಮತ್ತಿನಲ್ಲೇ ಕಾರು ಚಲಾಯಿಸುತ್ತಿದ್ದು, ತಡರಾತ್ರಿ 1:45ರ ಸುಮಾರಿಗೆ ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಮುಂದೆ ಹೋಗುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಪವನ್ ಬೈಕ್ಗೆ ಹಿಂದಿನಿಂದ ಗುದ್ದಿದ್ದಾನೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪವನ್ನನ್ನು ಕಾರು 100 ಮೀಟರ್ ಎಳೆದೊಯ್ದಿದೆ. ನಂತರ ಪವನ್ ಬಿಟ್ಟು ಕಾರು ಸಮೇತ ಯುವಕ, ಯುವತಿಯರು ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಕಂಡ…