ಬೆಂಗಳೂರು ;- ಡ್ರೋನ್ ಬಳಸಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣ ಮಾಡಲಾಗುತ್ತದೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಂಚಾರ ವಿಭಾಗದ ಪೊಲೀಸರಿಗೆ ಮೂರು ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ‘ಸಂಚಾರ ಸಮಸ್ಯೆ ಮುಕ್ತ’ವಾಗಿಸುವ ಗುರಿ ನೀಡಲಾಗಿದ್ದು, ಇನ್ಮುಂದೆ ರಸ್ತೆಗಳಲ್ಲಿ ಡ್ರೋನ್ ಕ್ಯಾಮರಾಗಳನ್ನು ಬಳಸಿ ಸಂಚಾರ ದಟ್ಟಣೆ ತಗ್ಗಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆಯು ಮೂಲಭೂತ ಸಮಸ್ಯೆಯಾಗಿದೆ. ಸಂಚಾರ ದಟ್ಟಣೆಯಿಂದ ಜಾಗತಿಕ ಮಟ್ಟದಲ್ಲಿ ನಗರಕ್ಕೆ ಅಪಕೀರ್ತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂಚಾರ ಸಮಸ್ಯೆ ನಿವಾರಣೆಗೆ ಕಾಲಮಿತಿ ನಿಗದಿಪಡಿಸಲಾಗಿದೆ. ಇನ್ನು ಮೂರು ತಿಂಗಳಲ್ಲಿ ಬೆಂಗಳೂರು ನಗರವನ್ನು ಸಂಚಾರ ಮುಕ್ತವಾಗಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ್ರತಿ ದಿನ ಪಿಕ್ ಅವರ್‌ನಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಎರಡು ಗಂಟೆಗಳು ಡಿಸಿಪಿ ಆದಿಯಾಗಿ ಸಂಚಾರ ವಿಭಾಗದ ಎಲ್ಲ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಸಂಚಾರ ದಟ್ಟಣೆ ಉಂಟಾದರೆ ಡಿಸಿಪಿ ಹಾಗೂ ಎಸಿಪಿ ಅವರನ್ನು ಸಹ ಹೊಣೆ ಮಾಡಲಾಗುತ್ತದೆ ಎಂದು…
Author: Prajatv Kannada
ಬೆಂಗಳೂರು: 5 ಗ್ಯಾರಂಟಿಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಷರತ್ತುಗಳನ್ನು ವಿಧಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದೆ. ಜೊತೆಗೆ ವಿದ್ಯುತ್ ದರ ಹೆಚ್ಚಿಸಿ ಬರೆ ಎಳೆಯುತ್ತಿದೆ. ವಿದ್ಯುತ್ ದರ ಏರಿಕೆ ಖಂಡಿಸಿ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ.ಹಾಗಾಗಿ ಇಂಧನ ಇಲಾಖೆ ಪ್ರಕಟಣೆ ಹೊರಡಿಸಿದೆ. ‘ಗೃಹಜ್ಯೋತಿ’ ಯೋಜನೆ ಬಗ್ಗೆ ಬಾಡಿಗೆ ಮನೆಯಲ್ಲಿ ವಾಸಿಸುವ ಜನರಿಗೆ ಹಲವಾರು ಗೊಂದಲಗಳಿವೆ. ಇದಕ್ಕೆ ಇಂಧನ ಇಲಾಖೆ ಸ್ಪಷ್ಟೀಕರಣ ನೀಡಿದೆ.ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ ವಿನೋದ್ ಕುಮಾರ್ ಅವರು ಬಾಡಿಗೆ ಮನೆಯಲ್ಲಿ ವಾಸಿಸುವ ಜನರ ಸಾಮಾನ್ಯ ಗೊಂದಲಗಳನ್ನು ಪರಿಹರಿಸಿದ್ದಾರೆ. ಈ ಕುರಿತು ಪ್ರಕಟಣೆ ಮೂಲಕ ಅವರು ಮಾಹಿತಿ ನೀಡಿದ್ದಾರೆ. ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಸದರಿ ಸೌಲಭ್ಯವನ್ನು ಪಡೆಯುವುದು. ಗೃಹ ಬಳಕೆದಾರರು/ ಫಲಾನುಭವಿಗಳು ಯಾವುದಾದರೂ ತಿಂಗಳಿನಲ್ಲಿ 200 ಯುನಿಟ್‌ಗಳ ಬಳಕೆಯ ಮಿತಿಯನ್ನು ಮೀರಿದಲ್ಲಿ, ಯೋಜನೆಯಲ್ಲಿ ಮುಂದುವರೆಯುವರೇ?. ಹೌದು, 200 ಯುನಿಟ್‌ಗಳ…
ಸೂರ್ಯೋದಯ: 05.54 AM, ಸೂರ್ಯಾಸ್ತ : 06.47 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಚತುರ್ದಶಿ 09:11 AM ತನಕ ನಂತರ ಅಮವಾಸ್ಯೆ ನಕ್ಷತ್ರ: ಇವತ್ತು ರೋಹಿಣಿ 04:25 PM ತನಕ ನಂತರ ಮೃಗಶಿರ ಯೋಗ: ಇವತ್ತು ಧೃತಿ01:23 AM ತನಕ ನಂತರ ಶೂಲ ಕರಣ: ಇವತ್ತು ಶಕುನಿ 09:11 AM ತನಕ ನಂತರ ಚತುಷ್ಪಾದ 09:36 PM ತನಕ ನಂತರ ನಾಗವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 01.03 PM to 02.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:50 ನಿಂದ ಮ.12:43 ವರೆಗೂ ಮೇಷ ರಾಶಿ: ಫ್ರಾಂಚೈಸಿ ಉದ್ಯಮ ಪ್ರಾರಂಭ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ,ದಂಪತಿಗಳಿಗೆ ಸಂತಾನದ ಯೋಚನೆ,ಮದುವೆ ಕಾರ್ಯಗಳಲ್ಲಿ ಅಡತಡೆ ಸಂಭವ, ವಿದೇಶಕ್ಕೆ ಹೋಗುವ ಕನಸು…
ಬೆಂಗಳೂರು:- ಯದ್ವಾತದ್ವಾ ಕರೆಂಟ್ ಬಿಲ್ ನೋಡಿ ಗ್ರಾಹಕರು ಶಾಕ್ ಆಗಿದ್ದು, ಗೃಹ ಜ್ಯೋತಿ ಅನುಷ್ಠಾನ ಮುನ್ನವೇ ಬೆಸ್ಕಾಂ ಗ್ರಾಹಕರ ಬಳಿ ವಸೂಲಿಗೆ ನಿಂತು ಬಿಡ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ವಿದ್ಯುತ್ ಸರಬರಾಜು ಕಂಪನಿಯ ಲೂಟಿಯೂ.. ಡಿಜಿಟರ್ ಮೀಟರ್ ಲೋಪವೋ..? ದುಪ್ಪಟ್ಟು ಬಿಲ್ ಕೊಟ್ಟ ಬೆಸ್ಕಾಂ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿದೆ. ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಎಸ್ಕಾಂಗಳು ದುಪ್ಪಟ್ಟು ಬಿಲ್ ನೀಡ್ತಿದ್ದು, ಕಳೆದ ತಿಂಗಳಿಗಿಂತ ಈ ಬಾರಿ ದಿಢೀರ್ ಅಂತ ದುಪ್ಪಟ್ಟು ಬಿಲ್ ಗೆ ಗ್ರಾಹಕರು ಸಿಡಿಮಿಡಿಗೊಂಡಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ 2 ಪಟ್ಟು ವಿದ್ಯುತ್ ಬಿಲ್ ಹೆಚ್ಚಳವಾಗಿದ್ದು, ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಮೇ ತಿಂಗಳ ಬಿಲ್ ಕಟ್ಟೋದಿಲ್ಲ, ಸರ್ಕಾರ ಮೋಸ ಮಾಡ್ತಿದೆ ಎಂದು ಗ್ರಾಹಕರು ಹೇಳುತ್ತಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲೂ ವಿದ್ಯುತ್ ಬಿಲ್ ದುಬಾರಿ ಆಗಿದ್ದು, ತಿಂಗಳಿಗೆ ,850-900 ರೂ ಬರ್ತಿದ್ದ ಬಿಲ್ ಏಕಾಏಕಿ 1700 ಕ್ಕೆ ಏರಿಕೆ ಆಗಿದೆ. ಬಿಲ್ ನಲ್ಲಿ ಆಗುತ್ತಿರುವ ಗೊಂದಲದಿಂದ ಜನರು ಕಂಗಾಲಾಗಿದ್ದು, ಫ್ರೀ…
ಬೆಂಗಳೂರು ;- ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ಬದಲು ಹೊರ ರಾಜ್ಯಗಳಿಂದ ಸರ್ಕಾರ ಅಕ್ಕಿ ಖರೀದಿ ಮಾಡುತ್ತಿರುವ ಹಿಂದೆ ಕಮಿಷನ್ ಹುನ್ನಾರ ಇದೆ ಎಂದು ಶಾಸಕ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯಗಳಿಗೆ ನಮ್ಮ ರಾಜ್ಯದಿಂದಲೇ ಅಕ್ಕಿ ಸಾಗಾಣೆ ಆಗುತ್ತಿರುವಾಗ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವ ಉದ್ದೇಶವೇನು? ರಾಜ್ಯದ ರೈತರ ಅಲ್ಲಿ ಗುಣಮಟ್ಟದ ಅಕ್ಕಿ ಲಭ್ಯವಿದ್ದು, ಇಲ್ಲಿಯೇ ಖರೀದಿಸಬಹುದು. ಆದರೆ, ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸಲು ಮುಂದಾಗಿರುವುದರ ಹಿಂದೆ ಕಮಿಷನ್ ಪಡೆಯುವ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದ್ದು, ಹೆಚ್ಚುವರಿ 5 ಕೆಜಿಯನ್ನು ಎಲ್ಲಾದರೂ ಖರೀದಿಸಬಹುದು. ಅದನ್ನು ಬಿಟ್ಟು ಪ್ರಧಾನಿಯವರ ಮೇಲೆ ಆರೋಪ ಹೊರಿಸಲಾಗುತ್ತಿದೆ. ಮುಖ್ಯಮಂತ್ರಿಗಳಿಗೆ ವಾಸ್ತವ ಸ್ಥಿತಿ ಅರಿವಾಗಿದ್ದು, ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗದೆ ಕಾಂಗ್ರೆಸ್ ಒದ್ದಾಡುತ್ತಿದೆ ಎಂದು ಟೀಕಿಸಿದ್ದಾರೆ.
ಬೆಂಗಳೂರು: ಕಿಚ್ಚ ಸುದೀಪ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಿದರು. ನಾನಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಸುದೀಪ್, ವರುಣಾ ಕ್ಷೇತ್ರಕ್ಕೆ ಹೋಗಿರಲಿಲ್ಲ. ಈ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಗೆಲ್ಲುವುದಕ್ಕಾಗಿ ನಾನಾ ರೀತಿಯ ಹೊಂದಾಣಿಕೆಗಳನ್ನು ಮಾಡಿಕೊಂಡರು. ತಮ್ಮ ಬಗ್ಗೆ ತೀಕ್ಷ್ಮವಾಗಿ ಪ್ರತಿಕ್ರಿಯೆ ಬಾರದಂತೆ ನೋಡಿಕೊಂಡರು. ಸುದೀಪ್ ಅವರು ವರುಣಾ ಕ್ಷೇತ್ರದ ಪ್ರಚಾರಕ್ಕೆ ಬಾರದಂತೆ ತಡೆಹಿಡಿದರು ಎಂದು ಸಿಂಹ ಆರೋಪಿಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುದೀಪ್ ಬಿಜೆಪಿಗೆ ಬೆಂಬಲಿಸಿದ್ದಕ್ಕಾಗಿ ಅನೇಕರು ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಬಿಜೆಪಿ ಪಕ್ಷದಲ್ಲಿತ್ತು. ಸುದೀಪ್ ಪತ್ರಿಕಾಗೋಷ್ಠಿ ಮಾಡಿ, ತಾವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು. ಜಾತಿ ಲೆಕ್ಕಾಚಾರವನ್ನು ಗಣನೆಗೆ ತಗೆದುಕೊಂಡು ಸುದೀಪ್ ಅವರನ್ನು ಕೆಲ ಕ್ಷೇತ್ರಗಳಿಗೆ ಮಾತ್ರ ಪ್ರಚಾರಕ್ಕೆ ಕಳುಹಿಸಲಾಗಿತ್ತು.
ಬೆಂಗಳೂರು ;- ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು, ವಿದ್ಯುತ್ ದರ ಹೆಚ್ಚಳವನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು ಎಂದು ಆಗ್ರಹಿಸಿದೆ. ಎಲ್ಲ ಉದ್ಯಮಗಳ ಮಾಲೀಕರಿಗೆ ವಿದ್ಯುತ್ ದರ ಆಗಾಗ ಹೆಚ್ಚಿಸುವುದರಿಂದ ತೊಂದರೆಯಾಗುತ್ತಿದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ, ನಿಗದಿತ ಬೇಡಿಕೆ ದರ ಹೆಚ್ಚಾಗಿದೆ. ಏರಿಕೆಯಾಗಿರುವ ದರದ ಮೇಲೂ ಶೇ 9 ತೆರಿಗೆಯೂ ಹೆಚ್ಚಳವಾಗಿದೆ. ಹಾಗಾಗಿ ಈ ದರ ಹೆಚ್ಚಳವನ್ನು ಒಂದು ವರ್ಷದ ಅವಧಿಗೆ ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ವಿದ್ಯುತ್ ತೆರಿಗೆಯನ್ನು ಶೇ 9ರಿಂದ ಶೇ 3ಕ್ಕೆ ಇಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿ ಸಹಿತ ಸಂಗ್ರಹಿಸಬೇಕು. ಪ್ರಿಪೇಡ್ ಮೀಟರ್ ಅಳವಡಿಸಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು. ಅನಗತ್ಯ ಆಡಳಿತಾತ್ಮಕ ವೆಚ್ಚಗಳನ್ನು ನಿಯಂತ್ರಿಸಬೇಕು ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್, ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಅವರು ಇಂಧನ ಸಚಿವರಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ 5 ಅಂತಸ್ತಿಗೂ ಅಧಿಕ ಕಟ್ಟಡಗಳ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಡೆ ನೀಡಿದೆ. ಈ ಬಗ್ಗೆ ಮಾತಾಡಿರುವ BBMP ಆಯುಕ್ತ ತುಷಾರ್ ಗಿರಿನಾಥ್, ನಗರ ಯೋಜನೆ ನಿಯಮ ಉಲ್ಲಂಘಿಸಿ ಹಲವು ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿರುವ ಆರೋಪ BBMP ವಿರುದ್ಧ ಕೇಳಿ ಬಂದಿದೆ. ಜೊತೆಗೆ ಬೆಂಗಳೂರಿನಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗದೆ ಪ್ರವಾಹ ಪರಿಸ್ಥಿತಿ ಉಂಟಾಗಲು ಇದೇ ಕಾರಣ ಅಂತ ಹೇಳಲಾಗಿದೆ. ಹೀಗಾಗಿ ಕೆಲ ದಿನಗಳ ಮಟ್ಟಿಗೆ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ತಡೆ ಹಿಡಿಯಲಾಗಿದೆ ಎಂದಿದ್ದಾರೆ.
ಕಳೆದ ಭಾನುವಾರ ಲಂಡನ್ ನ ದಿ ಓವಲ್ ಮೈದಾನದಲ್ಲಿ ಮುಕ್ತಾಯಗೊಂಡ ಐಸಿಸಿ ಆಯೋಜನೆಯ ಎರಡನೇ ಆವೃತ್ತಿಯ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 444 ರನ್ ಗಳ ಗುರಿ ಹಿಂಬಾಲಿಸಿದ ರೋಹಿತ್ ಶರ್ಮಾ ಪಡೆ 234 ರನ್ ಗಳಿಸಿ 210 ರನ್ ಗಳಿಂದ ಮುಗ್ಗರಿಸಿ ದಶಕದ ನಂತರ ಐಸಿಸಿ ಚಾಂಪಿಯನ್ಸ್ ಪಟ್ಟ ಅಲಂಕರಿಸುವಲ್ಲಿ ಮುಗ್ಗರಿಸಿತ್ತು. ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಕೆಟ್ಟ ಹೊಡೆತಗಳಿಗೆ ಕೈ ಹಾಕಿ ಔಟ್ ಆಗಿದ್ದಕ್ಕೆ ಲಿಟ್ಲ್ ಮಾಸ್ಟರ್ ಟೀಕಾಪ್ರಹಾರ ನಡೆಸಿದ್ದರು. ಈಗ ಭಾರತ ತಂಡ 2023-25 ರ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಯಣದಲ್ಲಿ ಜುಲೈ 12 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಕೆರಿಬಿಯನ್ ನಾಡಲ್ಲಿ 2 ಟೆಸ್ಟ್ ಪಂದ್ಯಗಳ ಸರಣಿಗಳನ್ನು ಆಡಲಿದೆ. ನಂತರ 3 ಏಕದಿನ ಹಾಗೂ 5 ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ. “ಈ ಹಿಂದೆ ಭಾರತ ತಂಡ 42 ರನ್ ಗಳಿಗೆ ಔಟ್ ಆದ ತಂಡದಲ್ಲಿ…
ಹಿಂದಿ ಕಿರುತೆರೆಯ ಖ್ಯಾತ ನಿರ್ದೇಶಕಿ ಏಕ್ತಾ ಕಪೂರ್ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಓಟಿಟಿ ಪ್ರಸಾರಕ್ಕಾಗಿ ನಿರ್ಮಾಣವಾಗುತ್ತಿರುವ ವೆಬ್ ಸರಣಿಯ ಪೋಸ್ಟರ್ ನಲ್ಲಿ ಹಿಂದೂ ದೇವತೆಯನ್ನು ಅವಹೇಳನ ಮಾಡಲಾಗಿದೆ ಎಂಬ ಕಾರಣಖ್ಕೆ ನೆಟ್ಟಿಗರು ಏಕ್ತಾ ಕಪೂರ್ ವಿರುದ್ಧ ಗರಂ ಆಗಿದ್ದಾರೆ. ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಕ್ಕೆ ಏಕ್ತಾ ಕ್ಷಮೆ ಕೇಳಬೇಕೆಂದು ನೆಟ್ಟಿಗರು ಪಟ್ಟು ಹಿಡಿದಿದ್ದಾರೆ. ಸದ್ಯ ಏಕ್ತಾ ಕಪೂರ್ ಮಾಲೀಕತ್ವದ ಆಲ್ಟ್ ಬಾಲಾಜಿ ಟೆಲಿಫಿಲ್ಮ್ಸ್ ‘ಗಾಂಡಿ ಬಾತ್’ ಎನ್ನುವ ವೆಬ್ ಸರಣಿಯನ್ನು ಆರಂಭಿಸಿದೆ. ಇದೀಗ 6ನೇ ಸರಣಿ ಸಿದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್‌ವೊಂದನ್ನು ರಿಲೀಸ್ ಮಾಡಲಾಗಿದೆ. ಆ ಪೋಸ್ಟರ್‌ನಲ್ಲಿ ಲಕ್ಷ್ಮಿ ದೇವತೆಗೆ ಹೋಲುವಂತಹ ಮಹಿಳೆ ಇದ್ದಾಳೆ. ಆ ಮಹಿಳೆಯ ಮೂಲಕ ಲಕ್ಷ್ಮಿ ದೇವತೆಯನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಗಾಂಡಿಬಾತ್ ವೆಬ್ ಸರಣಿಯ ಥಂಬ್ ನೈಲ್ ಪೋಸ್ಟರ್‌ನಲ್ಲಿ ಸೊಂಟದ ಬಳಿ ಕಮಲದ ಹೂವು, ಎರಡು ಬದಿಗಳಲ್ಲಿ ನವಿಲುಗಳೊಂದಿಗೆ ಇರುವ ಮಹಿಳೆ ಬಾಯಿ ಮೇಲೆ ಬೆರಳಿಟ್ಟು ‘ಶ್’ ಎನ್ನುವಂತೆ ಪೋಸ್…