ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ‘ಡೇರ್ ಡೆವಿಲ್ ಮುಸ್ತಾಫಾ’ ಕೃತಿ ಆಧರಿತ ಶಶಾಂಕ್ ನಿರ್ದೇಶನದ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಮನವಿ ಸಲ್ಲಿಸಿತ್ತು. ಚಿತ್ರತಂಡದ ಮನವಿಯನ್ನು ಪುರಸ್ಕರಿಸಿರುವ ಸಿದ್ದು ಇದೀಗ ಚಿತ್ರಕ್ಕೆ ರಿಯಾಯಿತಿ ನೀಡಿದ್ದಾರೆ. ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದರೆ, ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಾಧ್ಯವಾಗಬಹುದು ಹಾಗೂ ಕಡಿಮೆ ದರದಲ್ಲಿ ಚಿತ್ರ ತೋರಿಸಲು ಉತ್ಸಾಹ ಬರಬಹುದು ಎಂದು ಚಿತ್ರತಂಡ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿತ್ತು. ಚಿತ್ರದ ಚಿತ್ರಕಥಾ ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಸೇರಿದಂತೆ ಹಲವರು ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ‘ತೇಜಸ್ವಿಯವರ ಓದುಗರು, ಅಭಿಮಾನಿಗಳು, ತೇಜಸ್ವಿಯವರ ಕುಟುಂಬ ವರ್ಗ ಈ ಸಿನಿಮಾವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಕರ್ನಾಟಕ ರಾಜ್ಯವು ಸರ್ವಜನಾಂಗದ ಶಾಂತಿಯ ತೋಟವಾಗಲು ಇಂತಹ ಸಿನಿಮಾಗಳು ಜನರಿಗೆ ಹೆಚ್ಚುಹೆಚ್ಚು ತಲುಪಬೇಕು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ತಾವು ಸಾಧ್ಯವಾದಲ್ಲಿ ಬಿಡುವು ಮಾಡಿಕೊಂಡು ಈ…
Author: Prajatv Kannada
ಗದಗ : ಕಳೆದ 7 ವರ್ಷದಿಂದ ಮದುವೆಯಾಗೋದಕ್ಕೆ ಹುಡುಗಿ ಸಿಗದೇ ಬೇಸರಗೊಂಡು ಯುವಕನೊಬ್ಬ ಗ್ರಾಮ ಪಂಚಾಯತಿ ಪಿಡಿಒಗೆ ಮೊರೆ ಹೋದ ಘಟನೆಯೊಂದು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆಸಿದೆ. ನೀರಿನ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸಮಸ್ಯೆ, ಮೂಲಭೂತ ಸೌಕರ್ಯ ಕೊಡಿ ʻಎಂದು ಹೆಚ್ಚಿನ ಜನರು ಮನವಿ ಮಾಡೋದನ್ನು ನೀವು ಕೇಳಿರಬಹುದು. ಅದ್ರೆ ಇಲೊಬ್ಬ ಸಿದ್ದರಾಮಯ್ಯ ಸರ್ಕಾರ ಸಂದರ್ಭದಲ್ಲೇ ” ಕನ್ಯೆಯನ್ನು ಹುಡುಕಿಕೊಡಿ ʼ ಎಂದು ಗ್ರಾಮ ಪಂಚಾಯತ್ ಪಿಡಿಒಗೆ ಮುತ್ತು ಹೂಗಾರ (28) ಎಂಬಾತ ಮನವಿ ಮಾಡಿದ್ದಾನೆ. ಈತ ಮುತ್ತು ಹೂಗಾರ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ 50 ಸಾವಿರ ರೂಪಾಯಿ ಆದಾಯ ಗಳಿಸುತ್ತಿದ್ದಾನೆ ಆದರೂ ಹುಡುಗಿ ಸಿಗದೇ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಚಿಕ್ಕಮಗಳೂರು : ಸಿಎಂ ಸಿದ್ದರಾಮಯ್ಯ ತಾವು ಸುಳ್ಳರಾಮಯ್ಯ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಸಿ.ಟಿ.ರವಿ(CT Ravi) ವಾಗ್ದಾಳಿ ನಡೆಸಿದರು. ಬಡವರಿಗೆ ಉಚಿತ ಅಕ್ಕಿ ಕೊಡುವ ಸಂಬಂಧ ಕೇಂದ್ರದ ಮೇಲೆ ಕಾಂಗ್ರೆಸ್ ಆರೋಪಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ ಅವರು, ಸಿಎಂ ಸಿದ್ದರಾಮಯ್ಯ ‘ಸುಳ್ಳುರಾಮಯ್ಯ’ ಅಲ್ಲಾ ಅನ್ನೋದಾದರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ. ಅಕ್ಕಿ ಕಳಿಸುತ್ತೇವೆ ನಿಮ್ಮ ಹೆಸರು ಹಾಕ್ಕೊಂಡು ಕೊಡಿ ಅಂತ ಲೆಟರ್ ಕಳಿಸಿಲ್ಲ. ಕಳಿಸಿದ್ದರೆ ಎಲ್ಲಿದೆ ಆ ಕಮಿಟ್ಮೆಂಟ್ ಲೆಟರ್ ತೋರಿಸಲಿ ಎಂದು ಸವಾಲು ಹಾಕಿದರು. ಎಫ್.ಸಿ.ಐ. ನಿಮಗೆ ಅಗತ್ಯವಿರುವ ಅಕ್ಕಿ ಕಳಿಸುತ್ತೇವೆ ಎಂದು ಹೇಳಿದ್ದಾರಾ, ಲೆಟರ್ ತೋರಿಸಿ. ಅಧಿಕಾರಕ್ಕೆ ಬರಲು ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದಾರೆ. ಆದರೆ ಬೇಕಾಗುವಷ್ಟು ಅಕ್ಕಿ ಸಂಗ್ರಹ ಇಲ್ಲ. ಇದೊಂದೇ ಯೋಜನೆ ಅಲ್ಲ. ಕಾಂಗ್ರೆಸ್ ಗ್ಯಾರಂಟಿಯ ಐದು ಯೋಜನೆಗಳೂ ಹೀಗೆ ಸುಳ್ಳು ಹೇಳಿ ಜನರನ್ನು ವಂಚಿಸಲಾಗಿದೆ. ಅನ್ನಭಾಗ್ಯಕ್ಕೆ ಸಾಕಾಗುವಷ್ಟು ಅಕ್ಕಿ ಇಲ್ಲದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.ತನ್ನ ಕೈನಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ…
v ಕೊಪ್ಪಳ: ಅದೆಷ್ಟೋ ಜನರಿಗೆ ಮಕ್ಕಳು ಬೇಕು ಎಂದು ಹಾಸ್ಪಿಟಲ್ಗೆ, ದೇವಸ್ಥಾನಗಳಿಗೆ ಹೋಗಿ ಮಕ್ಕಳಿಗಾಗಿ ಪ್ರಾರ್ಥನೆ ಮಾಡುವ ಜನರು ಒಂದು ಕಡೆಯಾದರೆ ಮತ್ತೊಂದು ಕಡೆ ಹುಟ್ಟಿದ ಮಗುವನ್ನು ರಸ್ತೆ ಬದಿಯಲ್ಲಿ ಇಟ್ಟು ನಮಗೆ ಸಂಬಂಧವಿಲ್ಲ ಎನ್ನುವ ಜನರು ಕೂಡ ಇದ್ದಾರೆ. ಅದೇ ರೀತಿ ಹೆಣ್ಣು ಮಗು ಎಂಬ ಕಾರಣಕ್ಕೆ ಆಗ ತಾನೇ ಹುಟ್ಟಿದ್ದ ಮಗುವನ್ನು ಎಸೆದು ಹೋಗಿದ್ದ ಘಟನೆ ತಾಲೂಕಿನ ಪ್ರಗತಿ ನಗರದಲ್ಲಿ ನಡೆದಿತ್ತು. ಬಳಿಕ ಮಗುವನ್ನು ಮಹಿಳೆಯರು ರಕ್ಷಣೆ ಮಾಡಿದ್ದರು. ಇದೀಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಸುರಕ್ಷಿತವಾಗಿದೆ. ಮಗುವಿಗೆ ಕೊಪ್ಪಳದ ಜಿಲ್ಲಾ ಆಸ್ಪತ್ರೆಯ ನವಜಾತ ಶಿಶುಗಳ ವಿಭಾಗದಲ್ಲಿ ಆರೈಕೆ ಮಾಡಲಾಗಿದೆ. ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಮಗು 2.5 ಕೆ.ಜಿ ತೂಕವಿದ್ದು ಆರೋಗ್ಯದ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪಾಲಕರ ಪತ್ತೆಗೆ ಈಗಾಗಲೇ ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳ ಗಮನಕ್ಕೆ ತರಲಾಗಿದೆ. ಜನರ ನೆರವು ಕೋರಲಾಗಿದೆ. ಪಾಲಕರು ಸಿಕ್ಕಲ್ಲಿ ಸೂಕ್ತ ದಾಖಲೆ,…
ಬೆಳಗಾವಿ: ಅಕ್ಕಿ ವಿಚಾರವಾಗಿ ಕೇಂದ್ರದ ಮೇಲೆ ಸಿಎಂ ಸಿದ್ದರಾಮಯ್ಯ (Siddaramaiah) ಆರೋಪ ವಿಚಾರದ ಕುರಿತು ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಅವರು, ಕೇಂದ್ರ ಸರ್ಕಾರದಿಂದ ಬರಬೇಕಾದ ಐದು ಕೆಜಿ ಅಕ್ಕಿ ಬಂದೇ ಬರುತ್ತದೆ ಎಂದರು. ಬೆಳಗಾವಿ (Belagavi) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿಯನ್ನು ಕೊಡಬೇಕು ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದೆ. ಅದರ ಬಗ್ಗೆ ಆಹಾರ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಎಲ್ಲೆಲ್ಲಿ ಲಭ್ಯತೆ ಇದೆ ಅದನ್ನು ಪಡೆದುಕೊಂಡಾದರೂ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು. ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂಬ ಕಾರಣಕ್ಕೆ ನಾವೇನು ಆ ಯೋಜನೆ ನಿಲ್ಲಿಸುವುದಿಲ್ಲ. ಖಂಡಿತ ಆ ಯೋಜನೆಯನ್ನು ಪ್ರಾರಂಭ ಮಾಡಿಯೇ ಮಾಡುತ್ತೇವೆ. ಅಕ್ಕಿ ಬೆಳೆಯುವ ರಾಜ್ಯಗಳು ಕಡಿಮೆ ಇವೆ. ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಅವರೇನು ಮಾಹಿತಿ ತೆಗೆದುಕೊಂಡು ಹೇಳಿದ್ದಾರೆ ಗೊತ್ತಿಲ್ಲ. ಮುಖ್ಯಮಂತ್ರಿಗಳು…
ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಶಿವಮೊಗ್ಗದಲ್ಲಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಹೌದು ವಿದ್ಯುತ್ ದರ ಏರಿಕೆ ಖಂಡಿಸಿ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಬಿವೈ ರಾಘವೇಂದ್ರ (BY Raghavendra) ಹಾಗೂ ಇತರ ಹಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಾ ನಗರದಲ್ಲಿರುವ ಮೆಸ್ಕಾಂ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನದಲ್ಲಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ಸುಳ್ಳು ಭರವಸಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು. ಇದೇ ತಿಂಗಳು 18ರಂದು ಬಿಜೆಪಿ ಕಾರ್ಯಕರ್ತರು ವಿದ್ಯುತ್ ಬೆಲೆಯೇರಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS EShwarappa) ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಲಿದ್ದಾರೆ.
ಗದಗ: ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆಯ್ತು, ಈಗ ಮದ್ಯ ತರಲು ಅವಕಾಶ ಕೊಡಿ ಅಂತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯರು..! ಹೌದು ಕಾಂಗ್ರೆಸ್ ಸರ್ಕಾರ ಆರಂಭಿಸಿದ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಉಚಿತ ಪ್ರಯಾಣದ (Free Bus service) ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರು (Woman Passengers) ಮತ್ತು ಕಂಡಕ್ಟರ್ ನಡುವೆ ಜಗಳ ಎನ್ನುವುದು ನಿತ್ಯಕಥೆಯಾಗಿದೆ. ಈ ನಡುವೆ ಗದಗದಲ್ಲಿ ಇನ್ನೊಂದು ಕಿರಿಕ್ ನಡೆದಿದೆ. ಅದೇನೆಂದರೆ ಬಸ್ಸಿನಲ್ಲಿ ಮದ್ಯ ಸಾಗಿಸಲು ತಮಗೆ ಅವಕಾಶ ಕೊಡಬೇಕು ಎಂದು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ! ಇಬ್ಬರು ಮಹಿಳೆಯರು ಬಸ್ಸಿನಲ್ಲಿ ಮದ್ಯದ ಬಾಟಲ್ ಕೊಂಡೊಯ್ಯುತ್ತಿದ್ದುದನ್ನು ಕಂಡಕ್ಟರ್ ಆಕ್ಷೇಪಿಸಿ ಅವರನ್ನು ಬಸ್ಸಿನಿಂದ ಇಳಿದ ಬಳಿಕ ಹೈಡ್ರಾಮಾ ಸೃಷ್ಟಿಯಾಗಿದ್ದು, ಬಸ್ ನಿರ್ವಾಹಕನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಹಿಳೆಯರು ಸರ್ಕಾರದ ಉಚಿತ ಯೋಜನೆಯಡಿ ಪ್ರಯಾಣ ಮಾಡುತ್ತಿದ್ದರು ಎನ್ನುವುದು ಚರ್ಚೆಗೆ ಮತ್ತೊಂದು ಆಯಾಮ ಒದಗಿಸಿದೆ. ಗದಗ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಹೈಡ್ರಾಮಾ ನಡೆದಿದ್ದು, ತಮಗೆ ಬಸ್ಸಿನಲ್ಲಿ…
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ (Kanakagiri) ಪಟ್ಟಣದಲ್ಲಿ ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಆಂಜನೇಯ ಮೃತ ಬಾಲಕ. ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸಚಿವ ಸಂಪುಟ ನಿರ್ಧಾರ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಲೋಕಸಭೆ, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವಿಚಾರ ತೆಗೆದುಕೊಂಡು ಹೋಗುತ್ತೇವೆ. ಜನರ ಮುಂದೆ ಈ ವಿಚಾರ ಇಡುತ್ತೇವೆ. ನಿಮಗೆ ದೇಶ ಭಕ್ತಿ ಇದ್ದರೆ, ತಾಕತ್ ಇದ್ದರೆ ಅಂಬೇಡ್ಕರ್ ಕಾಂಗ್ರೆಸ್ ಬಗ್ಗೆ ಏನು ಹೇಳಿದರು ಅದನ್ನು ಪ್ರಕಟಿಸಿ. ಸಾವರ್ಕರ್ ಪಾಠ ಓದಿದರೆ ಮಕ್ಕಳು ದೇಶ ದ್ರೋಹಿ ಆಗುತ್ತಾರಾ? ಸಾವರ್ಕರ್ ಹೇಡಿ ಅಲ್ಲ, ಕಾಂಗ್ರೆಸ್ನವರು ರಣ ಹೇಡಿಗಳು. ಮಾತ್ರವಲ್ಲದೆ, ದೇಶದ್ರೋಹಿಗಳು. ಟಿಪ್ಪು ಪಾಠ ಕಾಂಗ್ರೆಸ್ನವರಿಗೆ ಬೇಕು. ಏಕೆಂದರೆ ತುಷ್ಟಿಕರಣ ಮಾಡಲು ಎಂದು ಆಕ್ರೋಶ ಹೊರಹಾಕಿದರು.
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೌಟಿಂಬಿಕ ಕಲಹದ ಹಿನ್ನಲೆ ನಡೆಯೋ ಕೊಲೆಗಳ ಸಂಖ್ಯೆ ಹೆಚ್ಚಾಗ್ತಿದೆ.. ಕೆಲ ದಿನಗಳ ಹಿಂದಷ್ಟೇ ತಾಯಿಯನ್ನೇ ಕೊಲೆ ಮಾಡಿದ ಮಗಳು ಮೃತದೇಹವನ್ನ ಪೊಲೀಸ್ ಠಾಣೆಗೆ ತಂದಿದ್ಲು.. ಆದ್ರೀಗ ಆ ಘಟನೆ ಮಾಸೊ ಮುನ್ನವೇ ಮತ್ತೊಂದು ಕೊಲೆ ನಡೆದಿದ್ದು, ತಂದೆಯನ್ನೇ ಹತ್ಯೆ ಮಾಡಿದ ಮಗ ಪೊಲೀಸರ ಮುಂದೆ ಹೈಡ್ರಾಮಾ ಮಾಡಿ ಕೊನೆಗೂ ಲಾಕ್ ಆಗಿದ್ದಾನೆ. ಬೆಂಗಳೂರಿನಲ್ಲಿ ಇತ್ತಿಚಿಗೆ ಸಂಬಂಧಗಳಿಗೆ ಬೆಲೆಯೇ ಇಲ್ಲವೇನೋ ಅನ್ನೊ ಮಟ್ಟಿಗೆ ವಾತಾವರಣ ಸೃಷ್ಟಿಯಾಗಿದೆ.. ಒಂದಲ್ಲ ಒಂದು ರೀತಿ ಗಲಾಟೆ ತಗಾದೆಗಳ ನಡುವೆ ಸಾಲು ಸಾಲು ಹಲ್ಲೆ ಕೊಲೆ ಪ್ರಕರಣಗಳು ನಡೆಯುತಿದ್ದು, ಇದರ ನಡುವೆ ಇಂದು ತಂದೆಯನ್ನೇ ಕೊಲೆ ಮಾಡಿದ ಮಗ ಕೆಲ ಗಂಟೆ ಪೊಲೀಸರ ಮುಂದೆ ನಾಟಕವಾಡಿ ತಗಲಾಕಿಕೊಂಡಿದ್ದಾನೆ.. ಈತನೇ ನೋಡಿ ತಂದೆಯನ್ನೇ ಕೊಲೆ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದ ಪುತ್ರ.. ಹೆಸರು ಚೇತನ್.. ಮಾಗಡಿರಸ್ತೆಯ ಗೊಪಾಲಪುರದ ಎರಡನೇ ಕ್ರಾಸ್ ನಲ್ಲಿ ತನ್ನ ತಂದೆ, ತಾಯಿ ಹಾಗೂ ಸಹೋದರನ ಜೊತೆ ವಾಸವಿದ್ದಾನೆ.. ಕಾಂಟ್ರಾಕ್ಟ್ ಬೇಸ್ ನಲ್ಲಿ ಸ್ವೀಪರ್ ಆಗಿ…