ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಆಗಸ್ಟ್ 3ವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಎಚ್ಚರಿಕೆ ಮಾಹಿತಿಯನ್ನು ರವಾನಿಸಲಾಗಿದೆ. ರಾಜ್ಯದ ಜನರು ಜೂನ್ ನಲ್ಲಿ ಮಳೆ ಕೊರತೆ ಅನುಭವಿಸಿದ್ದರು. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಇನ್ನು ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 3ರವರೆಗೆ ಕರಾವಳಿ, ಮಲೆನಾಡು ಭಾಗ ವಾಡಿಕೆಗಿಂತ ಪ್ರತಿದಿನ 2 cm ಮಳೆ ಸಾಧ್ಯತೆ. ಉತ್ತರ ಒಳನಾಡಿನಲ್ಲಿ ಅನೇಕ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಉಳಿದ ಜಿಲ್ಲೆಯಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಆಗಸ್ಟ್ 04ರಿಂದ ಅಗಸ್ಟ್ 10ರವರೆಗೆ ಇಡೀ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಆ. 11ರಿಂದ 17ರ ವರೆಗೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮತ್ತೆ ಹೆಚ್ಚಾಗಿ ಬರಲಿದೆ. ದಕ್ಷಿಣ ಒಳನಾಡಿನ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು ವಾಡಿಕೆ…
Author: Prajatv Kannada
ಕೂಡ್ಲಿಗಿ: ನಾಲ್ಕೂ ಕಾಲುಗಳನ್ನು ಹೊಂದಿರುವ ಪ್ರಾಣಿಗಳನ್ನು ಕಂಡಿದ್ದೇವೆ. ಆದರೆ ಇಲ್ಲೊಂದು ಹಸು ಅಪರೂಪದ ವಿಶಿಷ್ಟ ಎರಡು ಕಾಲು ಹೊಂದಿರುವ ಹೆಣ್ಣುಮರಿಗೆ ಜನ್ಮ ನೀಡಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ರೈತ ಪುಂಡಿ ವಿಜಯಕುಮಾರ್ ಎಂಬವರಿಗೆ ಸೇರಿದ ಹಸು ಎರಡೇ ಕಾಲುಗಳಿರೋ ಹೆಣ್ಣುಗರಕ್ಕೆ ಜನ್ಮ ನೀಡಿದೆ. ಕರುವಿಗೆ ಎರಡೇ ಕಾಲು ಇರೋದು ಕಂಡು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ. ಸದ್ಯ ಕರು ಹಾಗೂ ತಾಯಿ ಹಸು ಆರೋಗ್ಯವಾಗಿದೆ.ಎಂದು ಕುಟುಂಬದ ಮೂಲಗಳು ತಿಳಿಸಿವೆ.ಕಳೆದ ವರ್ಷಗಳ ಹಿಂದೆ ತಾಲೂಕಿನ ಚೌಡಪುರ ಗ್ರಾಮದಲ್ಲೂ ಎರಡು ಕಾಲು ಇರೋ ಕರು ಜನನವಾಗಿತು, ಇಂತಹ ಅಪರೂಪದ ಕರು ಇದೀಗ ಗುಡೇಕೋಟೆ ಗ್ರಾಮದಲ್ಲಿ ಜನಿಸಿದೆ.
ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ ನೀಡುವ ಹೊಸ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ಬುಧವಾರ ತಿಳಿಸಿದ್ದಾರೆ. ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (SSCSOA) ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಉದ್ಯೋಗಿಗಳಿಗೆ ಈ ಹೊಸ ಪ್ರಯೋಜನವನ್ನು ಶೀಘ್ರವೇ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಇದು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಮತ್ತು ಕುಟುಂಬವನ್ನು ಉತ್ತಮವಾಗಿ ನೋಡಿಕೊಳ್ಳಲು ಸಹಾಯ ಮಾಡಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹೆರಿಗೆ ಪ್ರಯೋಜನ ಕಾಯಿದೆ 1961ರ ಪ್ರಕಾರ ಕೆಲಸ ಮಾಡುವ ಮಹಿಳೆ 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆಗೆ ಅರ್ಹಳಾಗಿರುತ್ತಾಳೆ. ಹಿಮಾಲಯದ ತಪ್ಪಲಿನಲ್ಲಿರುವ ಸಿಕ್ಕಿಂ, ಭಾರತದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಸುಮಾರು 6.32 ಲಕ್ಷ ಜನರು ನೆಲೆಸಿದ್ದಾರೆ. ಸಿಕ್ಕಿಂ…
ಸಿಕರ್: 2024ರ ಲೋಕಸಭೆ ಚುನಾವಣೆಯನ್ನು ಒಗ್ಗೂಡಿ ಎದುರಿಸಲು ಪ್ರತಿಪಕ್ಷಗಳು ಬೆಂಗಳೂರಿನಲ್ಲಿ ಇತ್ತೀಚೆಗೆ ರಚನೆ ಮಾಡಿಕೊಂಡಿರುವ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ದೇಶಭಕ್ತಿಯನ್ನು ತೋರಿಸುವ ಉದ್ದೇಶದಿಂದ ‘ಇಂಡಿಯಾ’ ಹೆಸರು ಇಟ್ಟಿಲ್ಲ. ದೇಶವನ್ನು ದೋಚುವ ದುರುದ್ದೇಶದಿಂದ ಆ ಹೆಸರು ಬಳಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ (Assembly Election) ನಡೆಯಲಿರುವ ರಾಜಸ್ಥಾನದ (Rajasthan) ಸಿಕರ್‌ನಲ್ಲಿ ರಾರಯಲಿ ಉದ್ದೇಶಿಸಿ ಮಾತನಾಡಿದ ಅವರು, ವಂಚಕ ಕಂಪನಿಗಳು ಈ ಹಿಂದೆ ಹೆಸರು ಬದಲಾವಣೆ ಮಾಡಿಕೊಳ್ಳುತ್ತಿದ್ದವು. ಅದೇ ರೀತಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಹೆಸರನ್ನು ಬದಲಿಸಿಕೊಂಡಿವೆ. ಕಾಂಗ್ರೆಸ್ ಎಂಬುದು ದಿಕ್ಕು ದಿಸೆ ಇಲ್ಲದ ಪಕ್ಷವಾಗಿದೆ ಎಂದು ಹರಿಹಾಯ್ದರು. ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ ಎಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಘೋಷಣೆ ಹಾಕಲಾಗಿತ್ತು. ಆಗ ಜನರು ಕಾಂಗ್ರೆಸ್ ಪಕ್ಷವನ್ನು ಬುಡಮೇಲು ಮಾಡಿದ್ದರು ಎಂದರು.
ಹುಬ್ಬಳ್ಳಿ ತಾಲೂಕಿನ ಶೇರೆವಾಡ ಗ್ರಾಮದಲ್ಲಿ ಸರಿಯಾಗಿ ಬಸ್ ಬರದೇ ಇರುವುದು ಸೇರಿದಂತೆ ಶಾಲಾ ಮಕ್ಕಳ ಸಮಸ್ಯೆಗಳನ್ನ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಶುಕ್ರವಾರ ಆಲಿಸಿದರು. ನಮಗೆ ಸಮಯಕ್ಕೆ ಸರಿಯಾಗಿ ಬಸ್ ಬರಲ್ಲ ಬಂದರೂ ಬಸ್ ತುಂಬಾ ತುಂಬಿರುತ್ತೇವೆ ಆದ್ದರಿಂದ ಶಾಲೆಗೆ ಹೋಗಲು ತೊಂದರೆ ಆಗುತ್ತದೆ̤ ಇದರ ಜೊತೆಗೆ ಸರಿಯಾಗಿ ರಸ್ತೆ ಇಲ್ಲಾ ದುರಸ್ತಿ ಮಾಡಿಸಲು ಸಚಿವ ಸಂತೋಷ ಲಾಡ್ ಬಳಿ ಮನವಿ ಮಾಡಿದರು. ಮನವಿ ಆಲಿಸುವ ಜೊತೆಗೆ ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ಸರಿಯಾಗಿ ಬಸ್ ವ್ಯವಸ್ಥೆಗೆ ಸೂಚಿದರು. ಶಾಸಕ ಎಂ ಆರ್ ಪಾಟೀಲ್ , ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು
ಮೊಹರಂ ಸೂರ್ಯೋದಯ: 06.04 AM, ಸೂರ್ಯಾಸ್ತ : 06.48 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ದಶಮಿ 02:51 PM ತನಕ ನಂತರ ಏಕಾದಶಿ ನಕ್ಷತ್ರ: ಇವತ್ತು ವಿಶಾಖ 01:28 AM ತನಕ ನಂತರ ಅನುರಾಧ ಯೋಗ: ಇವತ್ತು ಶುಕ್ಲ 11:57 AM ತನಕ ನಂತರ ಬ್ರಹ್ಮ ಕರಣ: ಇವತ್ತು ತೈತಲೆ 03:25 AM ತನಕ ನಂತರ ಗರಜ 02:51 PM ತನಕ ನಂತರ ವಣಿಜ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 02.45 PM to 04.19 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:57 ನಿಂದ ಮ.12:48 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc…
ಬೆಂಗಳೂರು: ನನ್ನ ಹೇಳಿಕೆಯನ್ನೇ ಬಿಜೆಪಿಯವರು ಪ್ರಚಾರಕ್ಕೆ ಬಳಸಿದರೆ ಬಳಸಿಕೊಳ್ಳಲಿ.. ಸರ್ಕಾರ ನಡೆಸುವ ನಾವು ಇಂಥ ಘಟನೆ ಲಘುವಾಗಿ ಸ್ವೀಕರಿಸೋದಿಲ್ಲ ಎಂದು ಹೇಳಿದರು. ಆದರೆ ಇವರು ಬೇರೆ ಬೇರೆ ಅರ್ಥ ಕಲ್ಪಿಸೋದು ಸರಿಯಲ್ಲ, ಅವರು ಹೇಳಿದಕ್ಕೆ, ವ್ಯಾಖ್ಯಾನಕ್ಕೆ ಉತ್ತರ ಕೊಡಲು ಆಗಲ್ಲ ಎಂದು ಮಾಧ್ಯಮಗಳ ಎದುರು ಗೃಹ ಸಚಿವ ಜಿ.ಪರಮೇಶ್ವರ್ ಕಿಡಿ ಕಾರಿದರು. ಹಾಗೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಬಗ್ಗೆ ಮಾತನಾಡಿದ ಅವರು, ಸಿಎಲ್ ಪಿ ಸಭೆಯಲ್ಲಿ ಬಿ.ಆರ್.ಪಾಟೀಲ್ ರಾಜೀನಾಮೆ ಕೊಡುತ್ತೇನೆ ಎಂದಿದ್ದ ವಿಚಾರ ಸುಳ್ಳು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಕೆಲವು ಶಾಸಕರು ಸಿಎಂ ಗೆ ಪತ್ರ ಬರೆದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೇಳಿಕೊಂಡಿದ್ರು.. ಹಿಂದಿನ ಶಾಸಕಾಂಗ ಪಕ್ಷದ ಸಭೆ ಅರ್ಧದಲ್ಲೇ ನಿಂತಿತ್ತು. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ನಿಂತಿತ್ತು, ಹಾಗಾಗಿ ಶಾಸಕರು ಪತ್ರ ಬರೆದಿದ್ದರು ಎಂದು ಹೇಳಿದರು. ಪತ್ರ ಬರೆಯೋದು ಅಷ್ಟೊಂದು ಸೂಕ್ತ ಅಲ್ಲ ಎಂದು ಸಿಎಂ ಶಾಸಕರಿಗೆ ಸೂಚಿಸಿದ್ದಾರೆ.
ಟಾಲಿವುಡ್ನ ರೆಬೆಲ್ ಸ್ಟಾರ್ ಪ್ರಭಾಸ್ ಅವರ ಅಧಿಕೃತ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ತಮ್ಮ ಅಭಿಮಾನಿಗಳಿಗೆ ಇನ್ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಲ್ಲಿ ನನ್ನ ತಂಡ ಮುಂದಾಗಿದೆ. ಶೀಘ್ರವೇ ಪ್ರೊಫೈಲ್ ಮೇಲೆ ನಿಯಂತ್ರಣ ಪಡೆಯಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಸದ್ಯ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ತಯಾರಾಗಿರುವ ಸಲಾರ್ ಚಿತ್ರ ವಿಶ್ವದಾದ್ಯಂತ ಸೆಪ್ಟೆಂಬರ್ 28, 2023 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ವ್ಯಕ್ತವಾಗಿದೆ. ಚಿತ್ರದಲ್ಲಿ ಪ್ರಭಾಸ್ಗೆ ಜೋಡಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಕಮಲ್ ಹಾಸನ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ,
ಟಾಲಿವುಡ್ ಬ್ಯೂಟಿ ನಟಿ ತಮನ್ನಾ ಇತ್ತೀಚಿಗೆ ಸಖತ್ ಸದ್ದು ಮಾಡ್ತಿದ್ದಾರೆ. ಸಿನಿಮಾಗಳ ಜೊತೆ ಜೊತೆಗೆ ಫರ್ಸನಲ್ ವಿಷಯದಲ್ಲೂ ಸುದ್ದಿಯಾಗುತ್ತಿರುವ ನಟಿ ಲಸ್ಟ್ ಸ್ಟೋರಿಸ್ 2, ಜೀ ಕರ್ದಾ, ಕಾವಾಲಾ ಹಾಡಿನ ಸಕ್ಸಸ್ ನಂತರ ಮತ್ತಷ್ಟು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ತಮನ್ನಾ ಹಾಟ್ ಹಾಟ್ ಫೋಟೋಶೂಟ್ ಮಾಡಿಸಿದ್ದು ನಟಿಯ ನಯಾ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಲಸ್ಟ್ ಸ್ಟೋರಿಸ್ 2, ಜೀ ಕರ್ದಾ ಪ್ರಾಜೆಕ್ಟ್‌ನಲ್ಲಿ ನಟಿ ತಮನ್ನಾ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಂಚಲನ ಮೂಡಿಸಿದ್ದರು. ತಮನ್ನಾ ಹಸಿ ಬಿಸಿ ದೃಶ್ಯಕ್ಕೆ ಕೆಲವರು ವಿರೋಧಿಸಿದ್ರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದರು. ಇತ್ತೀಚಿಗೆ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾದಲ್ಲಿ ತಮನ್ನಾ ಸ್ಪೆಷನಲ್ ಹಾಡಿಗೆ ಹಾಡಿ ಕುಣಿದಿದ್ದು, ಈ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಜೈಲರ್ ಸಿನಿಮಾದ ಕಾವಾಲಾ ರಿಲೀಸ್ ಈವೆಂಟ್‌ಗೆ ತಮನ್ನಾ ಭಾಗಿಯಾಗಿದ್ದಾರೆ. ಅದಕ್ಕಾಗಿ ಸಖತ್ ಹಾಟ್ ಎಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬಿಳಿ ಬಣ್ಣದ ಟಾಪ್ ಹಾಗೂ ಕಂದು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೊಸ್ಟ್ ಮಾಡಿದ ಮಹಿಳೆಯನ್ನು ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ವಿಡಿಯೋ ವಿಚಾರವಾಗಿ ಸಿಎಂ ವಿರುದ್ದ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಆದರೆ ಇದನ್ನ ಬಿಜೆಪಿ ಕಾರ್ಯಕರ್ತೆ ಶಕುಂತಾಳ ಇದನ್ನ ಶೇರ್ ಮಾಡಿ ಇದನ್ನೆ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶಕುಂತಾಳ ವಿರುದ್ಧ ದೂರು ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.