ಕಲಬುರ್ಗಿ:– ಕೇಂದ್ರದಿಂದ ವಿಪಕ್ಷಗಳ ಒಗ್ಗಟ್ಟು ಒಡೆಯಲು ಯತ್ನಿಸಲಾಗುತ್ತಿದೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. ಈ ಸಂಬಂಧ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರನ್ನು ದಮನಿಸಲಾಗುತ್ತದೆ. ಆದರೆ ಈ ಬೆದರಿಕೆಗಳಿಗೆಲ್ಲ ವಿರೋಧ ಪಕ್ಷಗಳು ಬಗ್ಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಮೊದಲೇ ಕೇಂದ್ರ ಸರ್ಕಾರ ಅದನ್ನು ಹತೋಟಿಗೆ ತಂದಿದ್ರೆ ಪ್ರಾಣಹಾನಿ ಸಂಭವಿಸುತ್ತಿರಲಿಲ್ಲ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಲೇ ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು. ಈಗಾಗಲೇ ರಾಷ್ಟ್ರಪತಿಯವರಿಗೆ ನಿಯೋಗದ ಮೂಲಕ ಹೋಗಿ ಅಲ್ಲಿನ ಸ್ಥಿತಿ ಗತಿಯ ಬಗ್ಗೆ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದೆ. ಇನ್ನೂ ವಿರೋಧ ಪಕ್ಷಗಳ ಒಗ್ಗಟ್ಟು ಒಡೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
Author: Prajatv Kannada
ವಿಜಯನಗರ: ಶಾಲೆಗೆ ತೆರಳುತ್ತಿರುವ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಆಗಿ ಬಸ್ಗೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಹೊಗೆ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಮತ್ತು ಚಾಲಕ ಜಾಣ್ಮೆಯಿಂದ ಮಕ್ಕಳನ್ನು ಬಸ್ನಿಂದ ಕೆಳಗಿಳಿಸಿದ ಕಾರಣ ಅವಘಡ ಸಂಭವಿಸಿಲ್ಲ. ಅದೃಷ್ಟವಶಾತ್ ಮಕ್ಕಳು ಈ ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ರೀತಿಯಲ್ಲಿ ಪ್ರಾಣಾಪಾಯವಾಗಿಲ್ಲಾ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ ಕರೆ ಮಾಡಿದ ತಕ್ಷಣ ಅಲ್ಲಿ ನೆರವು ನೀಡಿದ್ದಾರೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಸೋಲಿನ ಶಾಕ್ ನಿಂದ ಇನ್ನೂ ಬಿಜೆಪಿ ಹೊರ ಬಂದಿಲ್ಲ ಎಂದು ಕಾಂಗ್ರೆಸ್ ಟೀಕೆ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆ ನಡೆದು ಒಂದು ತಿಂಗಳ ನಂತರವೂ ಬಿಜೆಪಿ ಸೋಲಿನ ಶಾಕ್ ನಿಂದ ಹೊರಬಂದಿಲ್ಲ, ಒಂದು ವರ್ಷ ಕಳೆದರೂ ಹೊರಬರುವುದಿಲ್ಲ ಆ ಮಟ್ಟಿಗೆ ಶಾಕ್ ಹೊಡೆದಿದೆ. ನಂತರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಹುದೊಡ್ಡ ಶಾಕ್ ಹೊಡೆಯಲಿದೆ. ಇದರ ಮುನ್ಸೂಚನೆ ಅರಿತೇ ಪ್ರತಾಪ್ ಸಿಂಹ ರೋಧನೆ ಶುರುವಾಗಿದೆ. ಈ ಶೋಕಾಚರಣೆ ಇನ್ಮುಂದೆ ಬಿಜೆಪಿಗೆ ನಿರಂತರವಾಗಿರಲಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಟಾಂಗ್ ನೀಡಿದೆ. ಗೆಲುವಿನ ಹೊಣೆಯನ್ನು ಮೋದಿ ಹೊರುತ್ತಿದ್ದರು, ಈಗ ಸೋಲಿನ ಹೊಣೆಯನ್ನು ಯಾರು ಹೊರುತ್ತಾರೆ ಬಿಜೆಪಿ ? ರಮೇಶ್ ಜಿಗಜಣಗಿ ಹೇಳಿದಂತೆ, ಯಾರನ್ನು ನೇಣಿಗೆ ಹಾಕುವಿರಿ, ಯಾರ ಕಾಲು ಕಡಿಯುವಿರಿ? ಜೋಶಿ, ಸಂತೋಷ್ ತಲೆಮರೆಸಿಕೊಂಡಿರುವುದು ನೇಣಿನ ಭಯಕ್ಕೋ, ಕಾಲು ಕಡಿಯುವ ಭಯಕ್ಕೋ? ಅಂದಹಾಗೆ ನಿಮ್ಮ ‘ಚಾಣಕ್ಯ’ ಎಲ್ಲಿ, ಪತ್ತೆಯೇ ಇಲ್ಲವಲ್ಲ? ಎಂದು ಪ್ರಶ್ನಿಸಿದೆ. ಶಕ್ತಿ…
ಬೆಂಗಳೂರು:- ಬೆಂಗಳೂರಿನ ಪದ್ಮನಾಭ ನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಸಂಸದ ತೇಜಸ್ವಿ ಸೂರ್ಯ ಬುಧವಾರ ಭೇಟಿ ಮಾಡಿದ್ದಾರೆ. ಸೂರ್ಯ ಅವರ ಈ ಭೇಟಿಯು ಮಹಾ ಜನ ಸಂಪರ್ಕ ಅಭಿಯಾನದ ಭಾಗವಾಗಿದ್ದು, ಇದರಲ್ಲಿ ಬಿಜೆಪಿಯ ಪ್ರತಿಯೊಬ್ಬ ಸಂಸದರು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಿ ಕಳೆದ 9 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಚರ್ಚಿಸಬೇಕಿದೆ. ಅದರಂತೆ ತೇಜಸ್ವಿ ಸೂರ್ಯ ದೇವೇಗೌಡರ ಜೊತೆ ಮಾತುಕತೆ ನಡೆಸಿ ಕೆಲಕಾಲ ಚರ್ಚಿಸಿದ್ದಾರೆ. ಬಸವನಗುಡಿಯ ಎನ್.ಆರ್. ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನ ಠೇವಣಿದಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ತಂದಿರುವ ಸುಧಾರಣೆಗಳ ಕುರಿತು ಸಂಸದ ಸೂರ್ಯ ಮಾಜಿ ಪ್ರಧಾನಿಗೆ ವಿವರಿಸಿದರು. ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪೂರ್ಣಗೊಳಿಸಲು, ವಿಶೇಷವಾಗಿ ಕನಕಪುರ ರಸ್ತೆಯಲ್ಲಿರುವ ಮಂತ್ರಿ ಸೆರಿನಿಟಿ ಯೋಜನೆಯನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸ್ವನಿಧಿಯ ಮೂಲಕ ತಂದ ಮಧ್ಯಸ್ಥಿಕೆಗಳ ಕುರಿತು ಅವರು ಮಾತನಾಡಿದರು. ಇದರೊಂದಿಗೆ, ನಗರದ ಅಭಿವೃದ್ಧಿಯ…
ಬೆಂಗಳೂರು:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಬುಧವಾರ ಭೇಟಿ ಮಾಡಿದ್ದಾರೆ. ಸದಾಶಿವ ನಗರದ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ ವೇಳೆ ಸಂಘದ ಪದಾಧಿಕಾರಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿ ಗೌರವಿಸಿದರು. ಬಳಿಕ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಡಾ ವಿವೇಕ್ ದೊರೈ, ಡಾ ರವೀಂದ್ರನಾಥ್ ಮೇಟಿ, ಡಾ ದೇಸಾಯಿ, ಡಾ ಚಂದ್ರ ಮೋಹನ್, ಡಾ ನರಸಿಂಹ ಮೂರ್ತಿ, ಡಾ ಪದ್ಮ, ಡಾ ಮಂಜುನಾಥ್ ಇದ್ದರು.
ಬೆಂಗಳೂರು:- ಬಿಗ್ ಬಾಸ್ ಮಾಜಿ ಸ್ಪರ್ಧಿ `ಪ್ರಶಾಂತ್ ಸಂಬರ್ಗಿ’ ವಿರುದ್ಧ `FIR’ ದಾಖಲಾಗಿದೆ. ಸುಳ್ಳು ದೂರು ಸಲ್ಲಿಸಿ ವಂಚನೆ ಎಸಗಿದ ಆರೋಪದ ಹಿನ್ನೆಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ. ಪ್ರಶಾಂತ್ ಸಂಬರ್ಗಿ ವಿರುದ್ಧ ಉದ್ಯಮಿ ದೇವನಾತ್ ವೈಕ್ಯೆ ಅವರು ದೂರು ನೀಡಿದವರು. ಈ ದೂರನ್ನು ಆಧರಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. 2017ರ ಜುಲೈನಲ್ಲಿ ದೇವನಾತ್ ಅವರು ಸಂಬರಗಿಯಿಂದ ಸಾಲ ಪಡೆದಿದ್ದರು. ಮನೆಯ ಅಸಲಿ ದಾಖಲೆ, ಖಾಲಿ ಚೆಕ್ ಕೊಟ್ಟು ಶ್ಯೂರಿಟಿ ನೀಡಿದ್ದರು. ಬಳಿಕ 2017ರ ಡಿಸೆಂಬರ್‌ನಲ್ಲಿ ಪ್ರಶಾಂತ್ಗೆ ದೇವನಾಥ್ ಹಣ ವಾಪಸ್ ನೀಡಿದ್ದರು. ಆದರೆ ದೇವನಾಥ್ ಬಳಿ ಹೆಚ್ಚಿನ ಬಡ್ಡಿ, ಹಣ ನೀಡಬೇಕೆಂದು ಮನೆ ದಾಖಲೆ ನೀಡದೆ ಪ್ರಶಾಂತ್ ಸಂಬರ್ಗಿ ಸತಾಯಿಸಿದ್ದರು. ಜೊತೆಗೆ ವಿವಿಧ ಠಾಣೆಯಲ್ಲಿ ದೇವನಾತ್ ವಿರುದ್ಧ ಸುಳ್ಳು ದೂರು ನೀಡಿದ್ದರು. ಸುಳ್ಳು ದೂರು ಹಿನ್ನೆಲೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ದೂರಿನ ಅನ್ವಯ ಪೊಲೀಸರು ತನಿಖೆ…
ಬೆಂಗಳೂರು :- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 19 ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರವರೆಗೆ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಪುತ್ತೂರು, ಮಂಗಳೂರು, ಮಾಣಿ, ಕದ್ರಾ, ಕೋಟ, ಪಣಂಬೂರು, ಉಪ್ಪಿನಂಗಡಿ, ಧರ್ಮಸ್ಥಳ, ಅಂಕೋಲಾ, ಗೋಕರ್ಣ, ಕುಮಟಾ, ಕುಂದಾಪುರ, ಭಾಗಮಂಡಲ, ದೊಡ್ಡಬಳ್ಳಾಪುರ, ಬೇಲೂರು, ತಿಪಟೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್…
ಬೆಂಗಳೂರು:- ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಬಿಡ್ತೇವೆ ಎಂಬ ಎಚ್ಚರಿಕೆಯನ್ನು ಹೈಕೋರ್ಟ್ ನೀಡಿದೆ. ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದ ತನಿಖೆಗೆ ಸೂಕ್ತ ಸಹಕಾರ ನೀಡಬೇಕು. ಇಲ್ಲದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸೌದಿ ಅರೇಬಿಯಾ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಅಲ್ಲಿಯೇ ಜೈಲುವಾಸ ಮಾಡುತ್ತಿರುವ ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್‌ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ. ಘಟನೆ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ಫೇಸ್‌ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ಸುಳ್ಳು ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ…
ಬೆಂಗಳೂರು:- ರೈಲು ಹಳಿ ಬದಿಯಲ್ಲಿ ಇಬ್ಬರು ಬೌದ್ಧ ಬಿಕ್ಕುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆಯಲ್ಲಿ ರೈಲು ಹಳಿ ಬದಿಯಲ್ಲಿ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇವರು ಕುಶಾಲನಗರದ ಗೋಲ್ಡನ್ ಟೆಂಪಲ್‌ಗೆ ಹೋಗಿ ಬೆಂಗಳೂರಿಗೆ ಬರುತ್ತಿದ್ದರು ಎಂದು ಶಂಕಿಸಲಾಗಿದೆ. ಬೌದ್ಧ ಬಿಕ್ಕುಗಳು ಮೃತಪಟ್ಟಿರುವ ವಿಚಾರ ಟ್ರ್ಯಾಕ್ ಮ್ಯಾನ್‌ನಿಂದ ಬೆಳಕಿಗೆ ಬಂದಿದೆ. ರೈಲಿನ ಬಾಗಿಲಿನಲ್ಲಿ ಕುಳಿತಿದ್ದ ವೇಳೆ ಆಯತಪ್ಪಿ ಬಿದ್ದರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹದ ಬಳಿ ಕುಶಾಲನಗರಕ್ಕೆ ಹೋಗಿರುವ ಬಸ್ ಟಿಕೆಟ್ ಪತ್ತೆಯಾಗಿದೆ. ಆದರೆ ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ. ಮೃತದೇಹಗಳನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು ;ಟೊಮ್ಯಾಟೊ’ದಲ್ಲಿ ಚಾನ್ಸ್ ಕೊಡುಸ್ತಿನಿ ಎಂದು 75 ಲಕ್ಷ ತೆಗೆದುಕೊಂಡು ಮಹಿಳೆಯ ಮರ್ಯಾದೆಯನ್ನೂ ತೆಗೆದಿರುವ ಘಟನೆ ಜರುಗಿದೆ. ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಲವ್ , ಸೆಕ್ಸ್ ,ದೋಖಾ ಬೆಳಕಿಗೆ ಬಂದಿದ್ದು, ದಿ ಕಲರ್ ಆಫ್ ಟೊಮೆಟೋ” ಚಿತ್ರ ನಿರ್ಮಾಪಕನ ವಿರುದ್ಧ ಮಹಿಳೆ ಅತ್ಯಾಚಾರ ದೂರ ದಾಖಲಿಸಿದ್ದಾರೆ. ಸಿನಿಮಾ ಮಾಡೋದಾಗಿ 75 ಲಕ್ಷ ಹಣ ಪಡೆದುಕೊಂಡಿದ್ದನಂತೆ ಸಿನಿಮಾ ರಿಲೀಸ್ ಆದ್ಮೆಲೆ ಬಿಗ್ ಹಿಟ್ ಆಗುತ್ತೆ 75 ಲಕ್ಷದ ಬದಲಾಗಿ 1.5 ಕೋಟಿ ಕೊಡ್ತಿನಿ ಎಂದು ನಂಬಿಸಿದ್ದನಂತೆ. ಈ ಮೂಲಕ ನಟನೆಗೆ ಅವಕಾಶ ಕೊಡೋದಾಗಿ ನಿರ್ಮಾಪಕ ವಂಚನೆ ಮಾಡಿದ್ದಾನೆ. The colour of tomoto ಎಂಬ ವಿಲಕ್ಷಣ ಹೆಸರಿನ ಚಿತ್ರ ನಿರ್ಮಾಪಕ ಈ ಕೃತ್ಯ ಎಸಗಿದ್ದು, 50 ಹಾಗೂ ದಿ ಕಲರ್ಸ್ ಆಫ್ ಟೊಮೋಟೋ ಎಂಬ ಎರಡು ಚಿತ್ರ ಮಾಡ್ತಿನಿ ಹೀಗಾಗಿ 75 ಲಕ್ಷ ಬೇಕು ಎಂದು ನಿರ್ಮಾಪಕ ಕುಮಾರ್ ಹೇಳಿದ್ದನಂತೆ. ಚಿತ್ರದಲ್ಲಿ ಅವಕಾಶ ಸಿಗುತ್ತೆ ಹಾಗು ಕೊಟ್ಟ ಹಣ ಡಬಲ್ ಆಗಿ…