ತುಮಕೂರು: ಜಿಲ್ಲೆಯ ಗೊಲ್ಲರಹಟ್ಟಿಯಲ್ಲಿ ಮೂಢನಂಬಿಕೆಯಲ್ಲಿ( Superstition) ಮುಳುಗಿದ್ದ ಕುಟುಂಬಸ್ಥರಿಂದ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಪರೀತ ಶೀತದಿಂದ ಬಳಲಿ ಮಗು(Death) ಮೃತಪಟ್ಟಿದೆ. ತುಮಕೂರು ತಾಲೂಕಿನ ಮಲ್ಲೇನಹಳ್ಳಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿಯಾಗಿದೆ. ದೇವರಿಗೆ ಸೂತಕ ಆಗುತ್ತೆ ಎಂದು ಬಾಣಂತಿ, ಮಗುವನ್ನು ಊರಿನ ಹೊರಗೆ ಗುಡಿಸಲಲ್ಲಿಟಲಾಗಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಕುಟುಂಬಸ್ಥರ ಮೂಢನಂಬಿಕೆಗೆ 1 ತಿಂಗಳ ಕಂದಮ್ಮ ಸಾವನ್ನಪ್ಪಿದೆ. ಘಟನೆ ಹಿನ್ನೆಲೆ ಕಾಡುಗೊಲ್ಲ ಸಮುದಾಯದ ಸೂತಕದ ಸಂಪ್ರದಾಯ ಆಚರಣೆ ಈ ಕಾಲದಲ್ಲೂ ಮುಂದುವರೆದಿದೆ. ತುಮಕೂರು ತಾಲೂಕು ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಿನಿಂದ ಹೊರಗಿಟ್ಟು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಕಟ್ಟಪ್ಪಣೆ ಮಾಡಿತ್ತು. ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತಾ ಮೌಡ್ಯಾಚರಣೆ ಮಾಡಲಾಗಿತ್ತಿ. ಆದ್ರೆ ಈಗ ಮಗುವಿಗೆ…
Author: Prajatv Kannada
ಬೆಂಗಳೂರು: ಸ್ನೇಹಿತರಲ್ಲಿ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂದು ಹೇಳಿದ್ದು, ಅಂತಹ ಘಟನೆ ಕುರಿತು ಪ್ರಿನ್ಸಿಪಾಲ್ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದಾದರೇ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂದರು. ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತೆ, ಸತ್ಯಾ ಸತ್ಯತೆ ಹೊರ ಬರುತ್ತೆ ಎಂದಿದ್ದಾರೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ ಮನೆಗೆ ಮುತ್ತಿಗೆ ಹಾಕುವ ನಿರ್ಧಾರ ಹಿನ್ನಲೆ ಸಚಿವರ ಮನೆ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅದರಂತೆ ಸದಾಶಿವನಗರ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿರುವ ಪೊಲೀಸರು, ಒಂದು ಕೆಎಸ್ಆರ್ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ : ಅರ್ಜಿ ಸಲ್ಲಿಸಿದವರಿಗೆ ನೂತನ ಬಿಪಿಎಲ್ ಕಾರ್ಡ್ ಶೀಘ್ರವೇ ವಿತರಣೆ –…
ಬೆಂಗಳೂರು ;- ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಡ್‌ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆ ನಡೆಸಲಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದರು. ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಅದರಲ್ಲಿ ಕೆಲವರು ಪಡಿತರ ಬೇಡ ಆರೋಗ್ಯ ಯೋಜನೆಗಳ ಲಾಭಕ್ಕಾಗಿ ಪಡಿತರ ಚೀಟಿ ನೀಡಿ ಎಂದು ಕೋರಿದ್ದಾರೆ. ಹಾಗಾಗಿ, ಇಂತಹವರಿಗೆ ಆದಷ್ಟು ಬೇಗ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸುವವರಿಗೆ ಬಿಪಿಎಲ್‌ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತಹವರಿಗೆ ಪಡಿತರ ಯೋಜನೆ ಲಾಭ ಇರುವುದಿಲ್ಲ. ಆದರೆ, ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ಈ ಬಿಪಿಎಲ್ ಕಾರ್ಡ್ ಅನ್ನು ಬಳಸಿಕೊಳ್ಳಬಹುದು. ಆರೋಗ್ಯ ಯೋಜನೆಗಾಗಿಯೇ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಕಾರ್ಡ್ ವಿತರಿಸಲು ಕ್ರಮ…
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ದೊರೆಯುತ್ತಿದ್ದಂತೆ ಮಹಿಳೆಯರು ರಾಜ್ಯದ ಪ್ರಸಿದ್ಧ ದೇವಸ್ಥಾನ ಮತ್ತು ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದಾರೆ. ಇದೀಗ ದೇವಸ್ಥಾನದ ಟ್ರಿಪ್ ಮುಗಿಯುತ್ತಿದ್ದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆಯರ ಕಾರುಬಾರು ಶುರುಮಾಡಿದ್ದಾರೆ.. ಬಸ್ ಫ್ರೀ ಅಂತ ಚಿಕ್ಕಪುಟ್ಟ ಚಿಕಿತ್ಸೆಗೂ ಮಹಿಳೆಯರು ನಗರದ ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಇದರಿಂದ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಾದ ವಾಣಿ ವಿಲಾಸ್, ಕಿದ್ವಾಯಿ, ಕೆ.ಸಿ ಜನರಲ್ ಆಸ್ಪತ್ರೆ, ಜಯದೇವ ಆಸ್ಪತ್ರೆಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹೊರ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಪ್ರತಿ ಆಸ್ಪತ್ರೆಗಳಲ್ಲಿಯೂ ಕಳೆದ ಒಂದು ತಿಂಗಳಿನಿಂದ ಶೇ 35 ರಿಂದ 40 ರಷ್ಟು ಹೊರ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ರಾಮನಗರ, ಕೋಲಾರ, ತುಮಕೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಚಿಕ್ಕಮಗಳೂರು ಸೇರಿದಂತೆ ಹಲವು ಭಾಗದಿಂದ ರೋಗಿಗಳು ಬಸ್ ಫ್ರೀ…
ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ರಾಜಕೀಯ ಬಣ್ಣ ಬೇಡ, ಮಕ್ಕಳ ಹಿತದೃಷ್ಟಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಇಂತ ಪ್ರಕರಣಗಳು ಸಮಾಜಕ್ಕೆ ಕಳಂಕ, ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಯಾವುದೇ ಜಾತಿ ಧರ್ಮ ಮುಖ್ಯ ಅಲ್ಲ, ಮಕ್ಕಳ ಹಿತಾಸಕ್ತಿ ಮುಖ್ಯ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದರು. ಮಣಿಪುರ ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ, ಅದ್ರ ಬಗ್ಗೆ ತಲೆಕೆಡಿಸಿಕೊಳ್ಳದ ರಾಜ್ಯದ ವಿರೋಧ ಪಕ್ಷ, ಉಡುಪಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಯತ್ನಿಸುತ್ತಿದೆ ಎಂದು ಸಚಿವರು ಕಿಡಿ ಕಾರಿದರು. ಇದನ್ನೂ ಓದಿ : ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ : ವಾಹನ ತೆರಿಗೆ ಪರಿಷ್ಕರಣೆಯಲ್ಲಿ ಯಾವುದಕ್ಕೆ ಎಷ್ಟು ಏರಿಕೆ ಗೊತ್ತಾ?
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಬಜೆಟ್‍ನಲ್ಲಿ (Karnataka Budget) ಘೋಷಿಸಿದಂತೆ ಮೋಟಾರ್ ವಾಹನ ತೆರಿಗೆಯನ್ನು (Motor Vehicle Tax) ಪರಿಷ್ಕರಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ. ಶಾಲೆ-ಕಾಲೇಜು ವಾಹನ, ಕ್ಯಾಬ್, ಟ್ರಕ್‍ಗಳ ಮೇಲೆ ವಿಧಿಸುವ ತೆರಿಗೆಯನ್ನು ಹೆಚ್ಚಿಸಲಾಗಿದೆ. 15 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ಕ್ಯಾಬ್‍ಗಳಿಗೆ ಆ ವಾಹನದ 15% ರಷ್ಟು ತೆರಿಗೆ, 10 ಲಕ್ಷ ರೂ. ನಿಂದ 15 ಲಕ್ಷ ರೂ. ಬೆಲೆಯ ಕ್ಯಾಬ್‍ಗಳಿಗೆ ಅದರ ಮೌಲ್ಯದ 9% ರಷ್ಟು ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಹೆಚ್ಚಳದಿಂದ 472 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಜುಲೈ 7ರಂದು ಮಂಡಿಸಿದ್ದ ಬಜೆಟ್‌ನಲ್ಲಿ ಆಯ್ದ ವಾಹನಗಳ ತೆರಿಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಕಟಿಸಿದ್ದರು. ಅದಕ್ಕೆ ಪೂರಕವಾಗಿ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ 2023’ಕ್ಕೆ ಸದನದಲ್ಲಿ ಒಪ್ಪಿಗೆ ಪಡೆಯಲಾಗಿತ್ತು ಯಾವುದಕ್ಕೆ ಎಷ್ಟು? ಆವರಣದಲ್ಲಿರುವುದು ಹಿಂದಿನ ತೆರಿಗೆ 1.5-2 ಟನ್ ವಾಹನ…
ಬೆಂಗಳೂರು ;– 30 ಶಾಸಕರು ಸಚಿವರ ವಿರುದ್ಧ ಸಹಿ ಸಂಗ್ರಹಿಸಿದ ಬೆಳವಣಿಗೆಯ ಬೆನ್ನಲ್ಲೇ ಗುರುವಾರ (ಇಂದು) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆಯು ಇಂದು ಸಂಜೆ 6.30 ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ನಡೆಯಲಿದ್ದು, ಒಗ್ಗಟ್ಟಾಗಿ ತಮ್ಮ ದುಮ್ಮಾನ ಹೇಳಿಕೊಳ್ಳಲು ಶಾಸಕರೂ ಸಹ ತಯಾರಾಗಿದ್ದಾರೆ. ಪಕ್ಷವು ಲೋಕಸಭೆ ಚುನಾವಣೆಗೆ ತಯಾರಿಗೆ ಗುರಿಗಳನ್ನು ನೀಡಲು, ಕೇಂದ್ರ ವಿರುದ್ಧ ನಿರಂತರ ಹೋರಾಟ ಸಂಘಟಿಸಲು ಶಾಸಕರಿಗೆ ಸೂಚನೆಗಳನ್ನು ನೀಡಲಿದೆ. ಇದೇ ಕಾರಣಕ್ಕೆ ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಸಭೆಗೆ ಆಗಮಿಸುತ್ತಿದ್ದಾರೆ. ಇತ್ತ ಶಾಸಕರು ಕಳೆದ ಎರಡು ತಿಂಗಳಲ್ಲಿ ತಾವು ಅನುಭವಿಸಿದ ಸಂಕಟವನ್ನು ಸರ್ಕಾರ ಹಾಗೂ ಪಕ್ಷದ ಗಮನಕ್ಕೆ ತರಲು ಸಂಘಟಿತರಾಗಿದ್ದಾರೆ. ಸರ್ಕಾರಿ ನೌಕರರ ವರ್ಗಾವಣೆ ವಿಷಯದಲ್ಲಿ ಹಲವು ಸಚಿವರು ಶಾಸಕರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ಅನುದಾನ ವಿಷಯದಲ್ಲಿ ಸಚಿವರು ಶಾಸಕರ ಮನವಿಗಳಿಗೆ ಸ್ಪಂದಿಸುತ್ತಿಲ್ಲ, ಗ್ಯಾರೆಂಟಿ ಸರ್ಕಾರ ಹಾಗೂ ಪಕ್ಷದ ವರ್ಚಸ್ಸು ಹೆಚ್ಚಿಸಬಹುದು. ಆದರೆ, ಜನರ ಬೇಡಿಕೆ ಈಡೇರಿಸಲು ವಿಶೇಷ ಅನುದಾನ ಕೊಡಲೇಬೇಕು ,…
ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದ್ರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರ್ತಾರೆ. ಇನ್ನು ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್ ಈಗಾಗಲೇ ಸಾಕಷ್ಟು ಸಾಮಾನ್ಯ ಜನರಿಗೆ ನೇಮ್, ಫೇಮ್ ತಂದುಕೊಟ್ಟಿದೆ. ಇದೀಗ ಸೋಶಿಯಲ್ ಮೆಡಿಯದಲ್ಲಿಯೇ ಇನ್ಸ್ಟಾಗ್ರಾಮ್ ನ ಬಗ್ಗೆ ಆಘಾತಕಾರಿ ವಿಷಯವೊಂದು ವೈರಲ್ ಆಗುತ್ತಿದೆ. ಭಾರತದಲ್ಲಿ ಬ್ಯಾನ್ ಆಗುವ ಭೀತಿಯಲ್ಲಿ ಇನ್ಸ್ಟಾಗ್ರಾಮ್ ವಿಶ್ವದಾದ್ಯಂತ ಅದೆಷ್ಟೋ ಮಿಲಿಯನ್ ನಷ್ಟು ಜನರು ಇನ್ಸ್ಟಾಗ್ರಾಮ್ ಅನ್ನು ಬಳಸುತ್ತಾರೆ. ಇನ್ಸ್ಟಾಗ್ರಾಮ್ ಫೋಟೋ ಹಾಗೂ ವಿಡಿಯೋ ಹಂಚಿಕೆಗೆ ಉತ್ತಮ ಪ್ಲಾಟ್ ಫಾರ್ಮ್ ಆಗಿದೆ. ಇದೀಗ ಇನ್ಸ್ಟಾಗ್ರಾಮ್ ಭಾರತದಲ್ಲಿ ಬ್ಯಾನ್ (Instagram Ban) ಆಗುವ ಭೀತಿಯನ್ನು ಎದುರಿಸುತ್ತಿದೆ. ಕಳೆದ ಎರಡು ತಿಂಗಳುಗಳಿಂದ ಕೇಂದ್ರದ ಸರ್ಕಾರ ಇನ್ಸ್ಟಾಗ್ರಾಮ್…
ಸೂರ್ಯೋದಯ: 06.04 AM, ಸೂರ್ಯಾಸ್ತ : 06.48 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ಅಷ್ಟಮಿ 03:52 PM ತನಕ ನಂತರ ನವಮಿ ನಕ್ಷತ್ರ: ಇವತ್ತು ಚಿತ್ತ 12:03 AM ತನಕ ನಂತರ ಸ್ವಾತಿ ಯೋಗ: ಇವತ್ತು ಸಾಧ್ಯ 02:39 PM ತನಕ ನಂತರ ಶುಭ ಕರಣ: ಇವತ್ತು ವಿಷ್ಟಿ 03:36 AM ತನಕ ನಂತರ ಬವ 03:52 PM ತನಕ ನಂತರ ಬಾಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 03.58 PM to 05.38 PM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ಮೇಷ ರಾಶಿ : ಮದುವೆ ಸಂದೇಶ ಕೇಳಿ ತುಂಬಾ ಹರುಷ, ಆಕಸ್ಮಿಕ ಧನ ಲಾಭದಿಂದ ಖುಷಿ,ನಂಬಿದ ಪಾಲುದಾರಿಕೆ…
ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್) : ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ. ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಾಲ್ಕನೇ ದಿನದಾಟದಲ್ಲಿ ವಿಂಡೀಸ್ ನಾಯಕ ಕ್ರೇಗ್ ಬ್ರಾಥ್‌ವೆಟ್ ಹಾಗೂ ಡೆಬ್ಯೂಟೆಂಟ್ ಕಿರ್ಕ್ ಮೆಕೆಂಜಿ ವಿಕೆಟ್ ಕಬಳಿಸಿದ ಅಶ್ವಿನ್, ಈ ದೊಡ್ಡ ಸಾಧನೆ ಮಾಡಿದ್ದಾರೆ. ದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ 17 ಟೆಸ್ಟ್ ಪಂದ್ಯಗಳಿಂದ 75 ವಿಕೆಟ್ ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ದಾಖಲೆಯನ್ನು ಈ ಹಿಂದೆ ಬರೆದಿದ್ದರು. ಆದರೆ, ಇದೀಗ ತಮಿಳುನಾಡು ಮೂಲದ ಆಫ್ ಸ್ಪಿನ್ನರ್ ಆರ್ ಅಶ್ವಿನ್ 13 ಪಂದ್ಯಗಳಲ್ಲಿಯೇ 75 ವಿಕೆಟ್ ಕಬಳಿಸಿ ಅನಿಲ್ ಕುಂಬ್ಳೆ…