Author: Prajatv Kannada

ಇಸ್ಲಾಮಾಬಾದ್: ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಗೆಳೆಯನನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಇಬ್ಬರು ಮಕ್ಕಳ ತಾಯಿ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಬಳಿಕ ತನ್ನ ಪಾಕಿಸ್ತಾನಿ ಸ್ನೇಹಿತನನ್ನು ವಿವಾಹವಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. 34 ವರ್ಷದ ಅಂಜು ತನ್ನ ಪಾಕಿಸ್ತಾನಿ ಸ್ನೇಹಿತನಾದ 29 ವರ್ಷದ ನಸ್ರುಲ್ಲಾ ಎಂಬಾತನನ್ನು ಭೇಟಿ ಮಾಡುವ ಸಲುವಾಗಿ ಕಾನೂನು ಬದ್ದವಾಗಿ ಪಾಕಿಸ್ತಾನಕ್ಕೆ ತೆರಳಿದ್ದು, ಆತನ ಮನೆಯಲ್ಲಿಯೇ ತಂಗಿದ್ದಳು. 2019ರಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಂಜು ಹಾಗೂ ನಸ್ರುಲ್ಲಾ ಸ್ನೇಹಿತರಾಗಿದ್ದು, ಮಂಗಳವಾರ ಪಾಕ್ ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸ್ಥಳೀಯ ನ್ಯಾಯಾಲಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಅಂಜು, ನಸ್ರುಲ್ಲಾ ಹಾಗೂ ಆತನ ಕುಟುಂಬಸ್ಥರು ಪೊಲೀಸ್ ಸಿಬ್ಬಂದಿ ಮತ್ತು ವಕೀಲರ ಸಮ್ಮುಖದಲ್ಲಿ ದಿರ್ ಬಾಲಾದಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮಲಕಂಡ್ ವಿಭಾಗದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ, ಅಂಜು ಮತ್ತು ನಸ್ರುಲ್ಲಾ ಅವರ ಮದುವೆಯನ್ನು ದೃಢಪಡಿಸಿದ್ದಾರೆ. ಇಸ್ಲಾಂಗೆ ಮತಾಂತರಗೊಂಡ ಅಂಜುಗೆ ಫಾತಿಮಾ ಎಂದು…

Read More

ನವದೆಹಲಿ: ಮುಂಬರಲಿರುವ ಭಾರತೀಯ ಕುಸ್ತಿ ಫೆಡರೇಷನ್​ನ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಮಗ ಕರಣ್ ಹೆಸರನ್ನು ಕೈಬಿಡಲಾಗಿದೆ. ಆಗಸ್ಟ್ 12 ರಂದು ನಡೆಯಲಿರುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬ್ರಿಜ್ ಭೂಷಣ್ ಅವರ ಕಿರಿಯ ಪುತ್ರ ಉತ್ತರ ಪ್ರದೇಶ ಕುಸ್ತಿ ಸಂಘದ ಅಧ್ಯಕ್ಷರಾಗಿರುವ ಕರಣ್ ಹೆಸರನ್ನು ಅಂತಿಮ ಪಟ್ಟಿಯಿಂದ ಕೈ ಬಿಡಲಾಗಿದೆ. ಚುನಾವಣಾ ಅಧಿಕಾರಿ ನಿವೃತ್ತ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅರ್ಹ ಮತದಾರರ ಪಟ್ಟಿಯನ್ನು ಅಂತಿಮ ಪಡಿಸಿದ್ದಾರೆ. ಇವರಿಬ್ಬರ ಬಲದಾಗಿ ಪ್ರೇಮ್ ಕುಮಾರ್ ಮಿಶ್ರಾ ಮತ್ತು ಸಂಜಯ್ ಸಿಂಗ್ ಮತದಾನ ಮಾಡಲಿದ್ದಾರೆ. ಆದರೆ ಬ್ರಿಜ್ ಭೂಷಣ್ ಅಳಿಯ ವಿಶಾಲ ಪ್ರತಾಪ್ ಸಿಂಗ್ ಹೆಸರು ಪಟ್ಟಿಯಲ್ಲಿದೆ. ರಾಜ್ಯದ ಪರವಾಗಿ ವಿನಯ್ ಕುಮಾರ್ ಸಿಂಗ್ ಜತೆ ವಿಶಾಲ್ ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.2023ರಿಂದ 2026ರ ಅವಧಿಗೆ ಪದಾಧಿಕಾರಿ ಹುದ್ದೆಗಳಿಗೆ ಸ್ಪರ್ಧಿಸಲು ಅರ್ಹತೆ ಪಡೆದವರ ಪಟ್ಟಿಯಲ್ಲಿ , ರೈಲ್ವೆ ಕ್ರೀಡಾ ಉತ್ತೇಜನ ಮಂಡಳಿಯ ಕಾರ್ಯದರ್ಶಿ ಪ್ರೇಮ್ ಚಂದ್ ಲೊಚಾಬ್ ಅವರ ಹೆಸರು ಕೂಡ ಒಂದು. ಹರ್ಯಾಣ ಹಾಗೂ ರಾಜಸ್ಥಾನದ ಜಾಟ್ ಸಮುದಾಯದ ಮೇಲೆ ಉತ್ತಮ ನಿಯಂತ್ರಣ ಹೊಂದಿರುವ ಇವರು ಗುಜರಾತ್​ನಿಂದ ಐಡಿ ನಾನಾವತಿ ಅವರೊಂದಿಗೆ ಮತ ಚಲಾಯಿಸುವ ಅಧಿಕಾರ ಪಡೆದಿದ್ದಾರೆ. ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಹಾಗೆಯೇ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಹಾಗೂ ಬಂಧಿಸುವಂತೆ ಒತ್ತಾಯಿಸಿ ತಿಂಗಳುಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

Read More

ನವದೆಹಲಿ: ಮಣಿಪುರ (Manipur) ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ (No Trust Motion) ಸಲ್ಲಿಸಲಾಗಿದೆ. ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಬುಧವಾರ ನೋಟಿಸ್‌ಗಳನ್ನು ಸಲ್ಲಿಸಿವೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕಚೇರಿಗೆ ನೋಟಿಸ್ ಸಲ್ಲಿಸಿದ್ದಾರೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರತ್ಯೇಕ ನೋಟಿಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಸಂಸದ ನಾಗೇಶ್ವರ್ ರಾವ್ ಅವರು ಸ್ಪೀಕರ್‌ಗೆ ಸಲ್ಲಿಸಿದ್ದಾರೆ. ಮುಂದಿನ ಹಂತದಲ್ಲಿ ಲೋಕಸಭೆಯ ಸ್ಪೀಕರ್ ಕ್ರಮಬದ್ಧವಾಗಿ ನಿರ್ಣಯವನ್ನು ಸದನದಲ್ಲಿ ಓದಲಿದ್ದಾರೆ. ಬಳಿಕ ಅದನ್ನು ಮತಕ್ಕೆ ಹಾಕಲಿದ್ದಾರೆ. ವಿಪಕ್ಷಗಳ ಈ ಕಸರತ್ತಿನಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯಗಳಿಲ್ಲ. ಎನ್‌ಡಿಎ ಒಕ್ಕೂಟಕ್ಕೆ 332 ಸದಸ್ಯರ ಬೆಂಬಲವಿದ್ದು, ವಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ 144 ಅಸುಪಾಸಿನ ಬೆಂಬಲವಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸದನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸುತ್ತಿರುವ ಪ್ರತಿಪಕ್ಷ ನಾಯಕರು ಪ್ರತಿಭಟನೆ…

Read More

ನವದೆಹಲಿ: ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ ಎಂದು ವಿಪಕ್ಷಗಳ I.N.D.I.A ಒಕ್ಕೂಟಕ್ಕೆ ಟಾಂಗ್‌ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ತಿರುಗೇಟು ನೀಡಿದ್ದಾರೆ. ಮಿಸ್ಟರ್‌ ಮೋದಿ ಅವರೇ, ನಿಮಗೆ ಹೇಗೆ ಬೇಕೋ ಹಾಗೆ ನಮ್ಮನ್ನು ಕರೆಯಿರಿ. ನಾವು INDIA. ಮಣಿಪುರ ಸಂಘರ್ಷ ಸರಿಪಡಿಸಲು ಮತ್ತು ಪ್ರತಿ ಮಹಿಳೆ, ಮಗುವಿನ ಕಣ್ಣೀರು ಒರೆಸಲು ಸಹಾಯ ಮಾಡುತ್ತೇವೆ. ಎಲ್ಲ ಜನರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುತ್ತೇವೆ. ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭಗೊಂಡಿದ್ದು, ಪ್ರತಿಪಕ್ಷಗಳು ಮಣಿಪುರದ ಬಗ್ಗೆ ವಿಸ್ತೃತ ಚರ್ಚೆಗೆ ಒತ್ತಾಯಿಸಿವೆ. ಮಣಿಪುರ ಸಂಘರ್ಷ ವಿಚಾರವಾಗಿ ಸದನದಲ್ಲಿ ಗದ್ದಲ ಉಂಟಾಗಿದೆ. ಈ ವಿಷಯದ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು…

Read More

ಇಂದು ಕಾರ್ಗಿಲ್ ವಿಜಯ ದಿವಸ್. ಭಾರತೀಯರು ಎಂದು ಮರೆಯದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಕೂಡಾ ಹೌದು. ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ. ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ವನ್ನು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ ದಿವಸದ ಇತಿಹಾಸವೇನು? 1999ನೇ ಇಸವಿಯ ಜಿಲೈ 26ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 23 ವರ್ಷ ತುಂಬುತ್ತದೆ. ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಲು ದೇಶವು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್‌ ಆಚರಿಸಲಾಗುತ್ತದೆ.…

Read More

ಗದಗ;- ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಲವು ಗ್ರಾಮದ ಹತ್ತಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಶಿರಹಟ್ಟಿ ತಾಲೂಕಿನ ಮಾಚೇನಹಳ್ಳಿ, ನವೆಬಾವನೂರು, ತೆಗ್ಗಿನ ಭಾವನೂರು, ಮಂಚೂರು, ರಟ್ಟೂರು ಸೇರಿ ಹಲವು ಹಳ್ಳಿಗಳ ರೈತರು ಕಂಗಾಲಾಗಿದ್ದಾರೆ. ನಿರಂತರ ಮಳೆಗೆ ಹತ್ತಿ ಬೆಳೆ ಕೊಳೆತು ಹೋಗುತ್ತಿದ್ದು, ಮಳೆ ಗಾಳಿಗೆ ಬಿಳಿ ಹತ್ತಿಕಾಯಿಗಳು ನೆಲಕ್ಕೆ ಉದುರಿಬಿದ್ದಿವೆ. ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿರೋ ರೈತರ ನೆರವಿಗೆ ಬರಬೇಕು ಅಂತ ರೈತರು ಒತ್ತಾಯ ಮಾಡಿದ್ದಾರೆ. ಬಿಟ್ಟಿ ಭಾಗ್ಯಗಳನ್ನ ಕೊಡುವ ಬದಲು ರೈತರಿಗೆ ಸಹಾಯ ಮಾಡಿ ಅಂತ ಸಿಎಂಗೆ ರೈತರು ಮನವಿ ಮಾಡಿದ್ದಾರೆ. ಹತ್ತಿ ಬೆಳೆ ಅಷ್ಟೇ ಅಲ್ಲ, ಮೆಕ್ಕೆಜೋಳ, ಸೂರ್ಯಕಾಂತಿ ಸೇರಿ ಹಲವು ಬೆಳೆ ಮಳೆಗೆ ಹಾನಿಯಾಗಿದೆ. ಇದನ್ನೂ ಓದಿ : ಶಾಲಾ ಮಕ್ಕಳಿಗೆ ರಾತ್ರಿಯಲ್ಲಿ ಓದಲು ತೊಂದರೆ ಆಗ್ತಿದ್ದು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹಂದಿ ಜೋಗಿ ಕುಟುಂಬಗಳಿಂದ ಒತ್ತಾಯ..!

Read More

ತುಮಕೂರು ;- ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ತುಮಕೂರಿನ ಬನಶಂಕರಿ ಬಳಿ ವಾಸವಾಗಿರುವ ಸುಮಾರು 60 ಹಂದಿ ಜೋಗಿ ಕುಟುಂಬಗಳು ಒತ್ತಾಯ ಮಾಡಿದ್ದಾರೆ. ಬಿಡಾರಗಳ‌ನ್ನ ನಿರ್ಮಿಸಿಕೊಂಡು ಈ ಕುಟುಂಬಗಳು ವಾಸವಿದ್ದು, ಕೂಲಿ ನಾಲಿ ಮಾಡಿಕೊಂಡು ವಾಸವಿರುವ ಕುಟುಂಬಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಒತ್ತಾಯ ಮಾಡಲಾಗಿದೆ. 20ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದು ರಾತ್ರಿಯಲ್ಲಿ ಓದಲು ತೊಂದರೆ ಆಗ್ತಿದ್ದು, ದೀಪದ ಬೆಳಕಿನಲ್ಲಿ ಮಕ್ಕಳು ಓದುತ್ತಿರುವ ದೃಶ್ಯ ಸೆರೆಯಾಗಿದೆ. ಓದಲು ಕೂಡ ಸಮಸ್ಯೆ ಆಗ್ತಿದೆ ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಹಂದಿ ಜೋಗಿ ಕುಟುಂಬಗಳಿಂದ ಮನವಿ ಮಾಡಲಾಗಿದೆ. ಇದನ್ನೂ ಓದಿ : ಸರ್ಕಾರದ ಆಡಳಿತ ಗೊಂದಲದ ಗೂಡಾಗಿದೆ – ಮಾಜಿ ಸ್ಪೀಕರ್ ಕಾಗೇರಿ

Read More

ಶಿರಸಿ ;- ಸರ್ಕಾರದ ಆಡಳಿತ ಗೊಂದಲದ ಗೂಡಾಗಿದೆ. ಸ್ಪಷ್ಟತೆ, ಪಾರದರ್ಶಕತೆ ಇಲ್ಲ. ಬೆಲೆ ಏರಿಕೆ ಒಂದೆಡೆಯಾದರೆ, ಅಭಿವೃದ್ಧಿ ಶೂನ್ಯ. ಅವರ ಗ್ಯಾರಂಟಿಗಳೇ ಗೊಂದಲಮಯವಾಗಿವೆ. ಉಳಿದ ಮಂತ್ರಿಗಳು ತಮ್ಮ ಇಲಾಖೆಯ ಕಾರ್ಯವಿಧಾನವನ್ನು ಸಹ ಇದುವರೆಗೆ ತಿಳಿದುಕೊಂಡಿಲ್ಲ. ಚುನಾವಣೆ ಪೂರ್ವ ಹೇಳಿದಂತೆ ಯಾವ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನ ಆಗಿಲ್ಲ. 200 ಯುನಿಟ್‌ ಫ್ರೀ ವಿದ್ಯುತ್‌ ಎಂಬ ಭರವಸೆ ಅವರದ್ದಾಗಿತ್ತಾದರೂ, ವಿದ್ಯುತ್‌ ದರವನ್ನು ಎರಡು ಪಟ್ಟು ಏರಿಕೆ ಮಾಡಿದ್ದಾರೆ. ವಿದ್ಯುತ್‌ ಬಿಲ್‌ ನಿರೀಕ್ಷೆಗೂ ಮೀರಿ ಬರುತ್ತಿದೆ. ಇದರಿಂದಾಗಿ ಸಣ್ಣ ಕೈಗಾರಿಕೆ ನಡೆಸುವುದು ಕಷ್ಟವಾಗಿದೆ ಎಂದು ಹೇಳಿದರು. ಉಚಿತ ಬಸ್‌ ಆರಂಭಿಸುವ ಮುನ್ನ ಸೂಕ್ತ ಸಿದ್ಧತೆಯನ್ನು ಸರ್ಕಾರ ಮಾಡಿಕೊಂಡಿಲ್ಲ. ಹೆಚ್ಚುವರಿ ಚಾಲಕ-ನಿರ್ವಾಹಕರನ್ನು ಸಂಸ್ಥೆಗೆ ನೀಡಿಲ್ಲ. ಖಾಸಗಿ ವಾಹನ ಪರಿಸ್ಥಿತಿ ಏನು ಎಂದು ಅರಿಯದೇ ಯೋಜನೆ ಜಾರಿಗೆ ತಂದಿದ್ದಾರೆ. ಆಟೋ, ಬಾಡಿಗೆ ವಾಹನಕ್ಕೆ ಸಮಸ್ಯೆ ಆಗಿದೆ. ಇನ್ನೊಂದೆಡೆ ಗೃಹ ಲಕ್ಷ್ಮೀ ಸರ್ವರ್‌ ಸರಿ ಇಲ್ಲ. ಕಾಂಗ್ರೆಸ್‌ ಈಗ ಅಧಿಕಾರಿಗಳ ವರ್ಗಾವಣೆಯಲ್ಲಿ ಬ್ಯೂಸಿ ಆಗಿದೆ. ಆರಂಭದಲ್ಲಿಯೇ ಈ ರೀತಿ ಭ್ರಷ್ಟಾಚಾರ ಆರಂಭ…

Read More

ರಾಯಚೂರು;- ಜಿಲ್ಲೆಯ ಮಾನ್ವಿ ಮತ್ತು ಸಿರವಾರ್ ತಾಲೂಕಿನ ಗ್ರಾಮ ಒನ್ ಸೇವೆಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಶುಲ್ಕ ರಹಿತ ಇರುವ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ 2 ರಿಂದ 300 ಜನರಿಂದ ಹಣ ಪಡೆಯುತ್ತಿರುವ ಸೇವಾ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿದೆ. ಹೀಗಾಗಿ ಸಿರವಾರ್ ಹಾಗೂ ಮಾನ್ವಿ ತಾಲೂಕಿನ ಮೂರು ಸೇವಾ ಕೇಂದ್ರಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಐಡಿ ಲಾಗ್ ಇನ್ ನಿಷ್ಕ್ರಿಯಗೊಳಿಸಲು ಐ ಡಿ ಸಿ ಎಸ್ ನಿರ್ದೇಶಕರಿಗೆ ರಾಯಚೂರು ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಸೇವ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿರುವ ಸೇವೆಗಳಿಗೆ ಯಾರಾದ್ರೂ ಹಣ ಪಡೆದರೆ ಎಫ್ ಫೈಯರ್ ಮಾಡುವ ಮೂಲಕ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ. ಇದನ್ನೂ ಓದಿ : ಅಂಗವಿಕಲರಿಗೆ ಕೃತಕ ಕಾಲು ಜೋಡಣಾ ಶಿಬಿರ..!

Read More

ಹುಬ್ಬಳ್ಳಿ: ಇಲ್ಲಿನ ಆಲ್ ಇಂಡಿಯಾ ಜೈನ ಯುಥ್ ಫೆಡರೇಶನ್‌ನ ಮಹಾವೀರ ಲಿಂಬ್‌ ಸೆಂಟರ್‌ನಲ್ಲಿ ಆಶೋಕನಗರದ ರೋಹಿತ ಅಂಬಿಕೇರ, ರೋಹಣ ಅಥಣಿ ಮತ್ತಿತರರು ಅಂಗವಿಕಲರಿಗಾಗಿ ಕೃತಕ ಕಾಲು ಜೋಡಣಾ ಶಿಬಿರವನ್ನು ಆಯೋಜಿಸಿದ್ದರು. ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಅಶೋಕನಗರದ ಯುವಕರ ಕಾರ್ಯ ಮೆಚ್ಚುವಂಥದ್ದು. ‘ಸಶಕ್ತ ಭಾರತ – ಸಶಕ್ತ ಬೂತ್’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಂತೆ ಯುವಕರು ಸೇವಾ ಕಾರ್ಯವನ್ನು ಕೈಗೊಂಡು ತಮ್ಮದು ‘ಸಶಕ್ತ ಬೂತ್’ ಎಂಬುದನ್ನು ನಿರೂಪಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಾಲಿಕೆ ಸದಸ್ಯ ವೀರಣ್ಣ ಸವಡಿ ಮಾತನಾಡಿ, ಮಹಾವೀರ ಲಿಂಬ್ ಸೆಂಟರ್‌ ಹಲವು ವರ್ಷಗಳಿಂದ ಅಂಗವಿಕಲರಿಗಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಈ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ಅಂಗವಿಕಲನೂ ಸ್ವಾವಲಂಬಿಗಳಾಗಿ ಮರಳುತ್ತಾನೆ ಎಂದರು. ಮಹಾವೀರ ಲಿಂಬ್ ಸೆಂಟರ್‌ಗೆ ಪಾಲಿಕೆಯಿಂದ ಸಹಾಯ ಹಸ್ತ ನೀಡಲು ಸದಾ ಸಿದ್ಧ ಎಂದ ಅವರು, ಮುಂಬರುವ ದಿನಗಳಲ್ಲಿ ಮತ್ತೆ ಶಿಬಿರ ಏರ್ಪಡಿಸುವುದಾದರೆ ₹50ಸಾವಿರ ಧನಸಹಾಯ ಮುಂಗಡವಾಗಿ ನೀಡುವುದಾಗಿ ತಿಳಿಸಿದರು. ಸೆಂಟರ್‌ನ ಸಂಸ್ಥಾಪಕ ಅಧ್ಯಕ್ಷರಾದ ಮಹೇಂದ್ರ…

Read More