ಬೆಂಗಳೂರು ;– ಇಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿರುವ ಕಾರ್ಗಿಲ್ ವೀರ ಭೂಮಿಯಲ್ಲಿ ಸಕಲ ಸಿದ್ದತೆ ನಡೆಸಲಾಗಿದೆ. ಕಾರ್ಗಿಲ್ ವೀರ ಭೂಮಿಯನ್ನು ಹೂಗಳಿಂದ ಅಲಂಕಾರಗೊಳಿಸಲಾಗಿದ್ದು, 9.55ಕ್ಕೆ ವೀರಭೂಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ವೀರಭೂಮಿಗೆ ಪುಷ್ಪಗುಚ್ಚ ನಮನ ನಡೆಯಲಿದೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : ಬೆಂಗಳೂರಿನಲ್ಲಿ ಮತ್ತೆ ವಿದ್ಯಾರ್ಥಿಗಳ ಡ್ರಗ್ಸ್ ಮಾರಾಟ : 20 ಲಕ್ಷ ರೂ. ಮೌಲ್ಯದ ಡ್ರಗ್ ಪತ್ತೆ!
Author: Prajatv Kannada
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಸವನಗುಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ . ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್ ಮಾರಾಟ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆ ದಾಳಿ ಮಾಡಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಯಿಂದಲೇ ಇತರ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟವಾಗುತ್ತಿರುವುದು ತಿಳಿದು ಬಂದಿದೆ. ಅದರಂತೆ ಕೇರಳ ಮೂಲದ ಪೆಡ್ಲರ್ ಆಗಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿ ಬಿಸ್ಟೀನ್ ರಾಯ್ ಎಂಬಾತ ಬಸವನಗುಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಆರೋಪಿ ಬಂಧನದ ವೇಳೆ 20 ಲಕ್ಷ ರೂ ಮೌಲ್ಯದ ಡ್ರಗ್ ಪತ್ತೆಯಾಗಿದೆ. ಇವರು ಹೊರಗಿನಿಂದ ಡ್ರಗ್ ತರಿಸಿಕೊಂಡು, ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಓರ್ವನನ್ನ ಬಂಧಿಸಿದ ಬಸವನಗುಡಿ ಪೊಲೀಸರು. ಆತನ ಬಂಧನದ ಬಳಿಕ ಉಳಿದ ಏಳು ಮಂದಿ ನಾಪತ್ತೆಯಾಗಿದ್ದು, ಇದೀಗ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ : ಮನೆ ದೋಚಿ…
ಬೆಂಗಳೂರು: ಮನೆ ದೋಚಿ ನಿಂಬೆಹಣ್ಣು ಇಡ್ತಿದ್ದ ಜ್ಯೋತಿಷಿ ವಿರುದ್ದ ಪ್ರಕರಣ ದಾಖಲು ಅಮವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗನಾಣ್ಯ ದೋಚಿ ನಿಂಬೆಹಣ್ಣು ಇಟ್ಟು ಮಾಟ ಮಾಡಿಸಿದ್ದಾರೆ ಎಂದೇಳಿ ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆಯ ಸುರೇಶ್ ಪಾಟೀಲ್ ವಿರುದ್ದ ಮನೆಯೊಡತಿ ಇಂದಿರಾ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗಂಡ-ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಇಂದಿರಾ ವಾಸವಾಗಿದ್ದು ಜೀವನಕ್ಕಾಗಿ ಮನೆಕೆಲಸ ಮಾಡುತ್ತಿದ್ದರು. ಮಗಳನ್ನ ಕುಣಿಗಲ್ ನ ಹೆಬ್ಬೂರು ನಿವಾಸಿ ಗೋವಿಂದಗೌಡ ಎಂಬುವರೊಂದಿಗೆ ಮದುವೆ ಮಾಡಿಸಿ ಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆ ತವರು ಮನೆಗೆ ಬರುತ್ತಿದ್ದ ಮಗಳನ್ನ ಕಂಡು ಇಂದಿರಾ ಚಿಂತಾಕ್ರಾಂತಗಿದ್ದಳು. ಈ ಬಗ್ಗೆ ತನ್ನ ತಾಯಿಯೊಂದಿಗೆ ಮನದ ದುಃಖವನ್ನ ಇಂದಿರಾ ವ್ಯಕ್ತಪಡಿಸಿದ್ದಳು. ಸಮಸ್ಯೆಗೆ ಪರಿಹಾರವೆಂಬತೆ ಆಕೆಯ ತಾಯಿಯು ತನಗೆ ಜ್ಯೋತಿಷಿ ಸುರೇಶ್ ಪಾಟೀಲ್ ಪರಿಚಯವಿದ್ದು ಅವರಿಗೆ ಶಾಸ್ತ್ರ…
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕಮಾಂಡ್ ಭೇಟಿಗಾಗಿ ನವದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿಗೆ ಸಮಯ ಕೇಳಿದ್ದಾರೆ. ರಾಜ್ಯ ರಾಜಕೀಯದ ವಿಚಾರ ಚರ್ಚೆ ನಡೆಸಲು ವರಿಷ್ಠರ ಭೇಟಿ ಮಾಡಲಿದ್ದಾರೆ. ಬಿಜೆಪಿ ಪಕ್ಷದಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿದ್ದುಹಾಗೆ ರಾಜ್ಯಾಧ್ಯಕ್ಷ ಸ್ಥಾನ ಮಾನ ಬಗ್ಗೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಯತ್ತ ಪಯಾಣ ಬೆಳಸಿದ್ದಾರೆ. ಆದರೂ ಮುಂದಿನ ದಿನಗಳಲ್ಲಿ ಏನಾಗುತ್ತೆ ಅಂತಾ ಕಾದುನೋಡಬೇಕಿದೆ. ಇದನ್ನೂ ಓದಿ : ಕೋಲಾರ ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ!
ಬೆಂಗಳೂರು: ಡಿಜೆಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ ದಾಳಿಯಲ್ಲಿ ಪ್ರಕರಣ ದಾಖಲಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸತ್ಯಾಂಶ, ಕಾನೂನಾತ್ಮಕ ಅಂಶಗಳಿದ್ದರೆ ಮಾತ್ರ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಗಲಭೆ ಆರೋಪಿಗಳ ಕೇಸ್ ವಾಪಸ್ ಬಗ್ಗೆ ಸಚಿವ ಸಂಪುಟ ಉಪಸಮತಿ ವರದಿ ನೀಡುತ್ತೆ. ನಂತರ ಸಚಿವ ಸಂಪುಟದಲ್ಲಿ ತೀರ್ಮಾನವಾಗುತ್ತೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ಯಾಕೆ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ ಎಂದು ಕಾಣಿಸುತ್ತದೆ. ಹೀಗಾಗಿ ಸಣ್ಣ ಸಣ್ಣ ವಿಷಯಗಳಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬರದ ಬಗ್ಗೆ ಪ್ರವಾಹದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು. ಕರ್ನಾಟಕದ(Karnataka) ವಿವಿಧೆಡೆ ಪ್ರತಿಭಟನೆ, ಗಲಭೆ(violence)) ಪ್ರಕರಣಗಳಲ್ಲಿ ಬಂಧಿತರಾಗಿರುವ ಯುವಕರು ಹಾಗೂ ವಿದ್ಯಾರ್ಥಿಗಳ (Students) ವಿರುದ್ಧದ ಕೇಸ್ಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್(Tanveer Sait) , ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ : ಕೋಲಾರ ಜಿಲ್ಲೆಗೆ ಸಚಿವ…
ಬೆಂಗಳೂರು: ಕೋಲಾರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಡಿಜಿಟಲ್ ನರ್ವ್ ಸೆಂಟರ್ ವೀಕ್ಷಿಸಿದ್ದಾರೆ. ಟಾಟಾ ಪ್ರೈಮರಿ ಮತ್ತು ಸೆಕೆಂಡರಿ ಹೆಲ್ತ್ ಕೇರ್ ಟ್ರಾನ್ಸ್ ಫಾರ್ ಮೆಷಿನ್ ಕೇಂದ್ರಕ್ಕೆ ಭೇಟಿ ನೀಡಿದ್ದು ಸಚಿವರಿಗೆ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಸಾಥ್ ನೀಡಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ : ಗೃಹಲಕ್ಷ್ಮಿ ಯೋಜನೆ ನೋಂದಣಿಗಾಗಿ ಎಸ್‌ಎಂಎಸ್‌ಗೆ ಕಾಯಬೇಕಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದೆ. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್‌ಎಂಎಸ್ ಅವಲಂಭಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ. ಯೋಜನೆಗೆ ಚಾಲನೆ ಸಿಕ್ಕ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು. ಅಲ್ಲದೆ, ಗೃಹ ಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಸ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ : ಇಲ್ಲಿದ್ದೆ ನಮ್ಮ ಸರಕಾರವನ್ನ…
ಬೆಂಗಳೂರು : ಐದು ವರ್ಷಗಳ ಕಾಲ ನಮ್ಮ ಸರಕಾರವನ್ನ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಇಲ್ಲಿದ್ದೆ ಅವರು ಏನು ಮಾಡೋಕೆ ಆಗಿಲ್ಲ ಸಿಂಗಾಪುರದಲ್ಲಿ ಕುಳಿತು ಏನು ಮಾಡಲು ಸಾಧ್ಯ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇಂತಹ ರಾಜಕಾರಣವನ್ನ ನಾವು ಬಹಳಷ್ಟು ನೋಡಿದ್ದೇವೆ ಕಂಡಿದ್ದೇವೆ. ನಮ್ಮ ಸರಕಾರ ಹೋಗುವ ವೇಗನೋಡಿ ವಿರೋಧ ಪಕ್ಷಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಕೊಟ್ಟ ಐದು ಭರವಸೆ ಈಡೇಸಿದ್ದೇವೆ ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ಭಯ ಅವನ್ನ ಕಾಡುತ್ತಿದೆ. ಹೀಗಾಗಿ ನಾವು ಓಡುವ ಸ್ಫೀಡ್ ಕಡಿಮೆ ಮಾಡಬೇಕೆಂದು ವಿರೋಧ ಪಕ್ಷದವರು ಕುತಂತ್ರ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ : ನನ್ನ ಸ್ವಾಭಿಮಾನಕ್ಕೆ ಬಿಜೆಪಿಯಿಂದ ಧಕ್ಕೆ ಉಂಟಾಗಿದೆ : ಶೆಟ್ಟರ್ ಅಸಮಾಧಾನ!
ಬೆಂಗಳೂರು: ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಬಿಜೆಪಿಯಿಂದ ಹೊರಬಂದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜ್ಯದಲ್ಲಿ ಇಂದು ಭಾರತೀಯ ಜನತಾ ಪಕ್ಷದ ಸ್ಥಿತಿ ಏನಾಗಿದೆ? ಬಿಜೆಪಿಗೆ ಓರ್ವ ವಿಪಕ್ಷ ನಾಯಕರನ್ನು ನೇಮಿಸಲು ಆಗ್ತಿಲ್ಲ. ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳಿಗೆ ಕುಸಿದಿದ್ದಾರೆ. ರಾಜ್ಯಾಧ್ಯಕ್ಷರ ಅವಧಿ ಮುಗಿದಿದ್ರು ಇನ್ನೂ ನೇಮಕ ಮಾಡ್ತಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಲೀಡರ್ಗಳೇ ಸಿಗ್ತಿಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು. ಯಾವ ಪಕ್ಷದಲ್ಲಿಯೂ ಸಿದ್ಧಾಂತ, ನೈತಿಕತೆ ಎಂಬುದು ಉಳಿದಿಲ್ಲ. ಬಿಜೆಪಿಯವರು ರೌಡಿಶೀಟರ್ಗಳನ್ನು ಎಲೆಕ್ಷನ್ಗೆ ನಿಲ್ಲಿಸುತ್ತಾರೆ. ಆ ಪಕ್ಷದಲ್ಲಿ ಏನ್ ನೈತಿಕತೆ ಉಳಿದಿದೆ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ : ಮದುವೆಯಾಗಿ ಆರೇ ತಿಂಗಳಿಗೆ ಪತ್ನಿ ಹತ್ಯೆಗೈದು ಪತಿಯ ಹೈಡ್ರಾಮ!
ಬೆಂಗಳೂರು: ಪತ್ನಿಯ ಹತ್ಯೆಗೈದು ಪತಿ ಹೈಡ್ರಾಮ ಮಾಡಿದ್ದಾನೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಅಸಲಿ ಸಂಗತಿ ಬಯಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್ ಆರ್ ಬಿಆರ್ ಲೇಔಟಲ್ಲಿ ಘಟನೆ ನಡೆದಿದೆ. ಕೆಂಚಮ್ಮ (19) ಕೊಲೆಯಾದವರು. ಕಳೆದ ಆರು ತಿಂಗಳ ಹಿಂದೆ ಸಿದ್ದಪ್ಪ ಬಸವರಾಜ್ ಬೆನ್ನೂರು ಜೊತೆ ಕೆಂಚಮ್ಮ ಮದುವೆಯಾಗಿತ್ತು. ಮದುವೆಯಾದಗಿನಿಂದಲೂ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ತಡರಾತ್ರಿ 2 ಗಂಟೆಗೆ ಹೆಂಡತಿಯ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬೀಗಿದು ಪತಿ ಹೈಡ್ರಾಮ ಮಾಡಿದ್ದಾನೆ. ಕೆಂಚಮ್ಮ ನೇಣುಬಿಗಿದುಕೊಂಡಿದ್ದಾಳೆ ಎಂದು ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಸದ್ಯ ಪೊಲೀಸರ ಪರಿಶೀಲನೆ ವೇಳೆ ಕೊಲೆ ಎಂಬ ಅನುಮಾನ ವ್ಯಕ್ತವಾಗಿದ್ದು ಸಿದ್ದಪ್ಪನನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ : ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ