ಹುಬ್ಬಳ್ಳಿ: ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಜಾರಿಯಿಂದ ಅಟೋ ಚಾಲಕರು ಸಂಕಷ್ಟಕ್ಕೆ ಗುರಿಯಾಗಿದ್ದು ವಿವಿಧೆ ಬೇಡಿಕೆ ಈಡೇರಿಸಲು ಆಗ್ರಹಿಸಿ ಇಂದು ನಗರದಲ್ಲಿ ಅಟೋ ಚಾಲಕರು ಪ್ರತಿಭಟನೆ ಮಾಡಿದರು. ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಆದೇಶ ಹೊರಡಿಸಿತ್ತು. ಇದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹ ಲಕ್ಷ್ಮಿ ಯೋಜನೆ ಅಡಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ, ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಇರುವ ಕುಟುಂಬದ ಪ್ರತಿ ಸದಸ್ಯನಿಗೂ ತಿಂಗಳಿಗೆ 10 ಕೆ. ಜಿ. ಉಚಿತ ಅಕ್ಕಿ ವಿತರಣೆ, ಗೃಹ ಜ್ಯೋತಿ ಯೋಜನೆ ಅಡಿ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡಿರುವ ಸಿಎಂ ಸಿದ್ದರಾಮಯ್ಯ ಸಾರಥ್ಯದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿದವರ ಬಗ್ಗೆ ಚಿಂತನೆ ಮಾಡಲೇ ಇಲ್ಲ. ಚುನಾವಣಾ ಸಂದರ್ಭದಲ್ಲಿ ಗೆಲುವು…
Author: Prajatv Kannada
ಗದಗ: ಉಚಿತ ಬಸ್ ಪ್ರಯಾಣ ಜಾರಿ ಹಿನ್ನೆಲೆ ಗದಗ ಬಸ್ ನಿಲ್ದಾಣದ ತುಂಬೆಲ್ಲ ಬರೀ ಹೆಣ್ಮಕ್ಕಳದ್ದೇ ಹವಾ ಆಗಿದೆ. ಹೌದು ಪ್ರತಿ ಬಸ್’ನಲ್ಲೂ ಶೇ.50ಕ್ಕಿಂತಲೂ ಹೆಚ್ಚು ಹೆಣ್ಣುಮಕ್ಕಳ ಪ್ರಯಾಣ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬರದೇ ಕಾಯುತ್ತಾ ಬಂದ ಬಸ್ ಅತ್ತಿ ಬಸ್ ನಲ್ಲಿ ಸೀಟ್ ಪಡೆಯಲು ಮಹಿಳೆಯರು ಹರಸಾಹಸ ಪಟ್ಟಿದ್ದಾರೆ. ಅದಲ್ಲದೆ ಬಸ್ ಪ್ರಯಾಣ ಫ್ರೀ ಅಷ್ಟೇ ಅಲ್ಲ ಸರಿಯಾಗಿ ಬಸ್ ವ್ಯವಸ್ಥೆ ಆಗಲಿ ಅಂತಾರೆ ಮಹಿಳೆಯರು.
ತುಮಕೂರು: ಗುಬ್ಬಿ ತಾಲೂಕಿನ ಬಾಡೇನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮದಲ್ಲಿ ಹಲವು ಮನೆಗಳಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಹಲವರ ಮನೆಗಳಲ್ಲಿ ಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿವೆ. ಗ್ರಾಮದ ಲೋಕೇಶ್ ಎಂಬುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೈಸೂರು : ಮೈಸೂರಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಂದ ಕಾಮಗಾರಿ ಇಂದು ವೀಕ್ಷಣೆ ಮಾಡಿದರು. ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಸ್ಥಳ ವೀಕ್ಷಿಸಿ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಸುಮಾರು 4 ಎಕರೆ ಪ್ರದೇಶದಲ್ಲಿ ಅಂದಾಜು 82.56 ಕೋಟಿ ರೂಪಾಯಿ, ಮೊತ್ತದಡಿ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ನಿರ್ಮಾಣವಾಗುತ್ತಿದೆ. ಕಟ್ಟಡ ನಿರ್ಮಾಣ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿ ವೀಕ್ಷಿಸಿದರು. ಸರಸ್ವತಿಪುರಂ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯ ಕಟ್ಟಡ ತಲೆ ಎತ್ತಲಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ JDS ಮೈತ್ರಿ ವಿಚಾರಕ್ಕೆ ಸಂಬಂಧಿಸಿ ರಾಜಕಾರಣದಲ್ಲಿ ಚರ್ಚೆ, ಊಹಾಪೋಹ ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಗಾಗಿ ಚರ್ಚೆ ಮಾಡ್ತಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇದಕ್ಕೆಲ್ಲ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ನನ್ನ ಮುಂದೆ ಚರ್ಚೆ ಆಗಿಲ್ಲ. ಸದ್ಯಕ್ಕೆ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ ಮಾಡಿದ್ದೇನೆ. ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ. ಏನು ಮಾಡಬೇಕೆಂದು ಆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳು ತ್ತೇವೆ. ನನಗೆ ರಾಜಕಾಣವೇ ಒಲವಿಲ್ಲ, ಕಾರ್ಯಕರ್ತರಿಗಾಗಿ ಇದ್ದೇನೆ. ಸಿಎಂ ಸ್ಥಾನದಿಂದ ಕೆಳಗಿಳಿದಾಗಲೇ ತೀರ್ಮಾನ ಮಾಡಬೇಕೆಂದಿದ್ದೆ. ಸಿಎಂ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ತೇವೆ ಎಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿ ಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಮ್ಮ ಆರನೇ ಗ್ಯಾರಂಟಿಯನ್ನು ಇತ್ತೀಚೆಗೆ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮೈಸೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ವಿಪಕ್ಷಗಳ ಟೀಕೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಮಾನತೆ ವಿರೋಧಿಸಿದವರೇ ಶಕ್ತಿ ಯೋಜನೆ ವಿರೋಧಿಸ್ತಿದ್ದಾರೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.H.C.ಮಹದೇವಪ್ಪ ವಾಗ್ದಾಳಿ ನಡೆಸಿದರು. ಅಂದು ಮನುವಾದಿಗಳು ಮಹಿಳೆಯರ ಸಮಾನತೆಯನ್ನ ವಿರೋಧಿಸಿದ್ದರು. ಇಂದು ಮಹಿಳೆಯರ ಉಚಿತ ಬಸ್ ಸೌಲಭ್ಯವನ್ನೂ ಟೀಕೆ ಮಾಡ್ತಿದ್ದಾರೆ. ಮಹಿಳೆಯರ ಉಚಿತ ಬಸ್ ಸೌಲಭ್ಯದ ಬಗ್ಗೆಯೂ ವ್ಯಂಗ್ಯವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚಿತ್ರದುರ್ಗ: ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿಯಾಗಿ ಪರಿಣಾಮ ಮೂರು ತಿಂಗಳ ಕಂದಮ್ಮ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಘಟನೆಯು ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅತೀ ವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಮೃತಪಟ್ಟಿ ದ್ದಾರೆ. ಮೃತರನ್ನು ಜಾಕೀರ್ ಆಹಮದ್,( 60) ತಬಸಮ್, (28)ಮತ್ತು ಹಯತ್ ಫಾತೀಮಾ (03) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಜೀಯಾ (22), ಇಮ್ರಾನ್ ಖಾನ್ (32) ಶೋಯೆಬ್ ಆಹಮದ್( 30) ತಬ್ರೇಜ್ ಆಹಮದ್ (27) ಮತ್ತು ಸಬಾ (26) ಎಂದು ಗುರುತಿಸಿದ್ದು, ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಕೂಡ ಗೋವಾದಿಂದ ಬೆಂಗಳೂ ರಿಗೆ ಪ್ರಯಾಣ ಮಾಡುತ್ತಿದ್ದರು. ಎಂದು ತಿಳಿದು ಬಂದಿದೆ. ಭರ ಮಸಾಗರ ಪೊಲೀಸರು ಪರಿ ಶೀಲ ನೆ ನಡೆಸುತ್ತಿದ್ದಾರೆ.
ಬೆಂಗಳೂರು: ಶಕ್ತಿ ಯೋಜನೆಯನ್ನು ಮತ್ತಷ್ಟು ಸರಳೀಕೃತ ಮಾಡಿದ ಸರ್ಕಾರ.ಫ್ರೀ ಬಸ್ ಸಂಚಾರಕ್ಕೆ ಮೂಲ ಗುರುತಿನ ಚೀಟಿ ಕಡ್ಡಾಯ ಇಲ್ಲ ಇನ್ಮೇಲೆ ಐಡಿ ಕಾರ್ಡ್ ನಕಲಿ ಪ್ರತಿಯನ್ನ ತೋರಿಸಿ ಪ್ರಯಾಣ ಮಾಡಬಹುದು. ಹಾರ್ಡ್ ಅಥವಾ ಸಾಫ್ಟ್ ಕಾಪಿ ಹಾಜರಿ ಪಡಿಸಿ ಟಿಕೆಟ್ ಪಡೆಯಲು ಅವಕಾಶ ಈ ಮೊದಲು ಮೂಲ ಗುರುತಿನ ಚೀಟಿ ಕಡ್ಡಾಯ ಎಂದಿದ್ದ ಸಾರಿಗೆ ನಿಗಮಗಳು. ಇದೀಗ ಮತ್ತಷ್ಟು ಸರಳೀಕೃತ ಗೊಳಿಸಿ ಆದೇಶ ಹೊರಡಿಸಿದ ಕೆಎಸ್ಆರ್ಟಿಸಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ(Congress Government) ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ(Free Bus Travel For Women Scheme) ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳು ಫುಲ್ ಆಗಿದ್ದು ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಇದೀಗ ವರದಿ ಬಗ್ಗೆ ಕೇಂದ್ರ ಸರ್ಕಾರವೂ ಉತ್ತರ ನೀಡಿದೆ. ಈಗ ಅದಕ್ಕೆ ಕರ್ನಾಟಕ ಸರ್ಕಾರ ಮರು ಉತ್ತರ ಕೊಡಬೇಕಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆಗ್ರಹಿಸಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಲಿಂಗಾಯತ ಧರ್ಮ ವಿಚಾರದಲ್ಲಿ ಏನೆಲ್ಲ ನಡೆದಿದೆ ಗೊತ್ತು. ಹೆಚ್.ಡಿ ಕುಮಾರಸ್ವಾಮಿ ಲಿಂಗಾಯತ ಧರ್ಮದ ಫೈಲ್ ಮುಟ್ಟಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ. ಬಿಎಸ್ ಯಡಿಯೂರಪ್ಪ ಸಹ ಲಿಂಗಾಯತ ವಿರೋಧಿಗಳಂತೆ ನಡೆದುಕೊಂಡರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏನೆಲ್ಲ ಮಾಡಿದ್ರು ಅಂತಾ ಗೊತ್ತಿದೆ. ಲಿಂಗಾಯತ ಧರ್ಮದ ವಿಚಾರವಾಗಿ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ಹಲವು ಹೋರಾಟಗಳು ನಡೆದಿವೆ ಎಂದರು.