ಬೆಂಗಳೂರು: ಆಟೋ ಬಾಡಿಗೆ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ. ಬಾಡಿಗೆ ವಿಚಾರಕ್ಕೆ ಆಟೋ ಚಾಲಕ ಅಶ್ವಥ್ ಎನ್ನುವಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ. ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದ ಯುವಕ. ಮತ್ತೊಬ್ಬ ಯುವಕ ಅಯೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಅಹ್ಮದ್ ಮತ್ತು ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು. ಇವರಿಬ್ಬರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಯಶವಂತಪುರದಲ್ಲಿ ವಾಸವಿದ್ದರು. ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಆಟೋ ಹಿಡಿದು ಮನೆಗೆ ಹೊರಟ್ಟಿದ್ದಾರೆ. ಆಟೋ ಹತ್ತಿಸಿಕೊಂಡು ಚಾಲಕ, ಡಬಲ್ ಬಾಡಿಗೆ ಕೇಳಿದ್ದಾನೆ. ಈ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಆಟೋ ಚಾಲಕ ಮಾರಾಕಾಸ್ತ್ರಗಳಿಂದ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಅಹ್ಮದ್ ಮೃತಪಟ್ಟಿದ್ದು, ಅಯೂಬ್ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…
Author: Prajatv Kannada
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ತೊಳೆಯುತ್ತೇವೆ ಎಂದು ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ಶಿಕ್ಷಣ ವಿಚಾರದಲ್ಲಿ ಬಿಜೆಪಿ ಮಕ್ಕಳಾಟವಾಡಿದ ಪರಿಣಾಮ ಸರ್ಕಾರಿ ಶಾಲೆ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟು ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡ್ತೇವೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ.
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಸಂಸದ ಬಿ ವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ಕ್ಷೇತ್ರದ ವಿವಿಧ ಕೆಲಸಗಳ ವಿಚಾರವಾಗಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ರಾಘವೇಂದ್ರ. ಹಾಗೆ ಮಾತನಾಡಿದ ಅವರು ಕಾಂಗ್ರೆಸ್ಗೆ ಸಂಪೂರ್ಣ ಬಹುಮತದ ನಂತರ ಗ್ಯಾರೆಂಟಿ ಅನುಷ್ಠಾನಕ್ಕೆ ತರುತ್ತಿದ್ದಾರೆ. ನಾನು ಸರ್ಕಾರಕ್ಕೆ ಆಗ್ರಹಿಸೋದು ಅಂದ್ರೆ ಕೊಟ್ಟಿರುವ ಭರವಸರ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ ಆಗಬಾರದು. ಒಂದು ಕಡೆ ಹೊರೆ ಇನ್ನೊಂದು ಬರೆ ಕೊಡುವ ಕೆಲಸ ಆಗಬಾರದು ಎಂದು ಹೇಳಿದರು.
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil) ಅವರು ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ (ಕೊಠಡಿ ನಂ.344) ದೇವತಾಪೂಜೆ ನೆರವೇರಿಸಿದರು. ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳ ನೇತೃತ್ವದ ತಂಡವು ಈ ಕಾರ್ಯವನ್ನು ನೆರವೇರಿಸಿತು. ಈ ಸಂದರ್ಭದಲ್ಲಿ ಸಚಿವರ ಪತ್ನಿ ಆಶಾ ಪಾಟೀಲ್ ಮತ್ತು ಮಕ್ಕಳಾದ ರಾಹುಲ್ ಪಾಟೀಲ್ (Rahul Patil) ಹಾಗೂ ಧ್ರುವ ಪಾಟೀಲ್ (Dhruva Patil) ಪೂಜೆಯಲ್ಲಿ ಪಾಲ್ಗೊಂಡು ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ್, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಹೆಸರಾಂತ ಚಿತ್ರನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ಅವರು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಜಗ್ಗೇಶ್ ದಂಪತಿ ಭೇಟಿ ಮಾಡಿದ್ದಾರೆ. ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ಜಗ್ಗೇಶ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಎಂಟು ಜಿಲ್ಲೆಗಳ ಡಿಸಿಗಳು, ಜಿ.ಪಂ. ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜ್ಯ ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿದ್ದು 8 ಜಿಲ್ಲೆಗಳ ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಿದ್ದಾರೆ.
ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ (Tamil PM) ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಭಾನುವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಭಾಗಿಯಾದ ಹಿರಿಯ ನಾಯಕರು ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ. ಮುಂಬರುವ ದಿನಗಳಲ್ಲಿ ತಮಿಳುನಾಡಿನ ವ್ಯಕ್ತಿ ಈ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುವ ರೀತಿಯ ಮಾತುಗಳನ್ನು ಆಡಿದ್ದಾರೆ. ಆದರೆ ಈ ಕುರಿತು ಅಮಿತ್ ಶಾ ಹೆಚ್ಚಿನ ವಿವರ ನೀಡಲಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆ ತಮಿಳರಿಗೆ ಪ್ರಧಾನಿಯಾಗುವ ಅವಕಾಶ ಎರಡು ಬಾರಿ ಸಿಕ್ಕಿತ್ತು. ಆದರೆ ಡಿಎಂಕೆಯಿಂದಾಗಿ (DMK) ಈ ಅವಕಾಶ ಕೈತಪ್ಪಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 20 ಸ್ಥಾನ ಗೆಲ್ಲಲು ಪ್ರಯತ್ನಿಸಬೇಕು ಎಂದು ಕರೆ ನೀಡಿದ್ದಾರೆ.…
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ (Social Media) ಈಗ ರೀಲ್ಸ್ ಹವಾ ಜಾಸ್ತಿಯಾಗಿದೆ. ಅದರಲ್ಲೂ ಕೆಲ ಯುವತಿಯರು ಹಾಟ್ ಉಡುಗೆಗಳನ್ನ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸುವಂತೆ ಡ್ಯಾನ್ಸ್ (Dance) ಮಾಡಿ ರೀಲ್ಸ್ ಕ್ರಿಯೇಟ್ ಮಾಡುವುದು ಟ್ರೆಂಡ್ ಆಗಿಬಿಟ್ಟಿದೆ. ಹೆಚ್ಚಿನ ವೀವ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಅಂತಹ ಸ್ಥಳಗಳ ಪೈಕಿ ದೆಹಲಿ ಮೆಟ್ರೋ (Delhi Metro) ತಾಣವೂ ಒಂದಾಗಿದೆ. ಹೌದು. ದೆಹಲಿ ಮೆಟ್ರೋದಲ್ಲಿ ನಡೆಯುವ ಘಟನೆಗಳು ಆಗಾಗ್ಗೆ ಸದ್ದು ಮಾಡುತ್ತಲೇ ಇವೆ. ಕೆಲ ದಿನಗಳ ಹಿಂದೆಯಷ್ಟೇ ಯುವತಿಯೊಬ್ಬಳು ಮಾಜಿ ಬಿಗ್‌ಬಾಸ್ ತಾರೆ ಉರ್ಫಿ ಜಾವೇದ್ ನಂತೆಯೇ ಬಿಕಿನಿ ತೊಟ್ಟು ಓಡಾಡಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ನಂತರ ಮೆಟ್ರೋ ಪ್ಲಾಫ್‌ಫಾರ್ಮ್‌ನಲ್ಲೇ ಪ್ರೇಮಿಗಳಿಬ್ಬರು ಲಿಪ್ ಲಾಕ್ ಮಾಡಿದ್ದ ದೃಶ್ಯ ವೈರಲ್ ಆಗಿತ್ತು. https://www.instagram.com/reel/Csecvu1NX8_/?utm_source=ig_embed&ig_rid=21cd4e7e-6725-447b-a6a7-e6c5a38c2e65 ಇದೀಗ ದೆಹಲಿ ಮೆಟ್ರೋ ಒಳಗೆ ಯುವತಿಯೊಬ್ಬಳು ಮೈಕಾಣುವ ಹಾಗೆ ಕಪ್ಪು ಬಣ್ಣದ ಟ್ರಾನ್ಸ್ಪರೆಂಟ್ ಬಟ್ಟೆ ಧರಿಸಿ, ಬಾಲಿವುಡ್ನ ಗುಂಡೆ ಚಿತ್ರದ ಅಸ್ಸಲಾಮೆ ಇಷ್ಕ್ ಹಾಡಿಗೆ ಡ್ಯಾನ್ಸ್…
ಶಿವಮೊಗ್ಗ: ಜಿಲ್ಲೆಯ ಸಾಗರದ (Sagara) ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಕಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥ ಮಂಜಪ್ಪ (Manjappa) ಎಂಬುವರ ವಿರುದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ (Pocso Case) ಪ್ರಕರಣ ದಾಖಲಿಸಿ ಅರೆಸ್ಟ್ ಮಾಡಿದ್ದಾರೆ. ಖಾಸಗಿ ವಸತಿ ಶಾಲೆಯಲ್ಲಿ ಕಳೆದ ಮೂರು ದಿನದ ಹಿಂದೆ ನಡೆದಿದ್ದ 8ನೇ ತರಗತಿ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಪೋಷಕರು ಹಾಗೂ ಸಂಘ ಸಂಸ್ಥೆಯ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದರು. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಲೆಯ ಸಂಸ್ಥಾಪಕ, ಮುಖ್ಯಸ್ಥ ಮಂಜಪ್ಪ ವಿರುದ್ದ ಪೋಕ್ಸೋ ಕಾಯ್ಸೆಯಡಿ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪೊಲೀಸರು ಮಂಜಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತುಮಕೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ (power tariff) ಮಾಡಿದ್ದು ಹಿಂದಿನ ಸರ್ಕಾರ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹೆಚ್ಚಾಗಿ ವಿದ್ಯುತ್ ಬಳಸಿದ್ದರೆ ಹಣ ಕಟ್ಟಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಬಿಲ್ ಹೆಚ್ಚು ಇದು ಕೆಲವರು ಕ್ರಿಯೆಟ್ ಮಾಡುತ್ತಿದ್ದಾರೆ. ವಿದ್ಯುತ್ ಬಳಸಿದ್ದರೇ ಅದಕ್ಕೆ ಹಣ ಕಟ್ಟಬೇಕು ಎಂದಿದ್ದಾರೆ.ಸರ್ಕಾರದಿಂದ ಯಾವುದೇ ಬಿಲ್ ಹೆಚ್ಚಳ ಮಾಡಿಲ್ಲ. ಮೀಟರ್ ಜಾಸ್ತಿ ಬಂದಾಗ ಅವರು ಕಟ್ಟಲೇಬೇಕು. ನಾವು ಯಾವುದೇ ಬಿಲ್ ಹೆಚ್ಚಿಸಿಲ್ಲ. ಹಿಂದಿನ ಸರ್ಕಾರ ಮಾಡಿದ್ದು ಅಷ್ಟೇ. ಎಲ್ಲಾ ಯೋಜನೆ ಮುಂದುವರೆಯಲಿದೆ. ಯಾವುದು ಕೂಡ ನಿಲ್ಲುವುದಿಲ್ಲ ಎಂದು ಹೇಳಿದರು.