ಬೆಂಗಳೂರು:– ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿ, ಈ ವಿಷಯ ತಿಳಿಸಿದರು. ಇದಲ್ಲದೆ 10 ಹೆಚ್.ಪಿ. ವರೆಗಿನ ಘಟಕಗಳಿಗೆ 250 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಇದಲ್ಲದೆ ಹಿಂದುಳಿದ ವರ್ಗಗಳ 2 ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಯವರನ್ನು ಭೇಟಿಯಾದ ನೇಕಾರರು ತಮ್ಮ ವೃತ್ತಿಪರ ಚಟುವಟಿಕೆಗಳಿಗೆ ಮುಖ್ಯಮಂತ್ರಿಯವರು ಹಿಂದಿನಿಂದಲೂ ಬೆಂಬಲ ನೀಡಿದ್ದನ್ನು ಸ್ಮರಿಸಿ, ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನೂ ನೀಡುವಂತೆ ಮನವಿ ಮಾಡಿದರು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ…
Author: Prajatv Kannada
ಬೆಂಗಳೂರು: ಚಿತ್ರದುರ್ಗದ ಭಗೀರಥ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರಾದ ಜಗದ್ಗುರು ಶ್ರೀ ಡಾ:ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಪ್ಪಾರ ಸಮಾಜದ ಮುಖಂಡರ ನಿಯೋಗವು ಇಂದು( ಸೋಮವಾರ) ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು. ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಪ್ರವರ್ಗ 1 ರಲ್ಲಿರುವ ಸಮಾಜವಾದ ಉಪ್ಪಾರ ಜನಾಂಗಕ್ಕೆ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಸ್ವೀಕಾರ ಮಾಡಿ ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಶಿಕ್ಷಣ ಸಂಸ್ಥೆಗೆ ಜಮೀನು ಮಂಜೂರು ಮಾಡುವುದು, ರಾಜಕೀಯ ಪ್ರಾತಿನಿಧ್ಯ, ಶ್ರೀ ಭಗೀರಥ ಗುರುಪೀಠದ ಆಶ್ರಯದಲ್ಲಿ ಮಧುರ ಕಣಿವೆ ಸಹಕಾರ ಸಾಮುದಾಯಿಕ ಬೇಸಾಯ ಸಂಘಕ್ಕೆ 500 ಎಕರೆ ಜಮೀನು ಗುತ್ತಿಗೆ ಅವಧಿ ಮುಗಿದಿದ್ದು ಗುರುಪೀಠಫಾ ಶಿಕ್ಷಣ ಸಂಸ್ಥೆಗಳ ಟ್ರಸ್ಟ್ ಹೆಸರಿಗೆ ಖಾಯಂ ಆಗಿ ಮಂಜೂರು ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಸಲ್ಲಿಸಿದರು.
ಬೆಂಗಳೂರು ;- ಮಳೆಗೆ ಜನಜೀವನ, ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚನೆ ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸಚಿವರು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80 ರಷ್ಟು ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಾದ ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿ ನಷ್ಟವಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಉತ್ತರ ಒಳನಾಡು ಭಾಗಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆಗಿಂತ ಶೇ.170 ರಷ್ಟು ಅಧಿಕ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ. 300, ಯಾದಗಿರಿ ಶೇ.160, ಬೀದರ್ ಶೇ.155, ಬೆಳಗಾವಿಯಲ್ಲಿ ಶೇ.186, ಬಾಗಲಕೋಟೆ ಶೇ.174, ವಿಜಯಪುರ ಶೇ.185 ಹಾಗೂ ಗದಗ ಜಿಲ್ಲೆಯಲ್ಲಿ ಶೇ.166…
ಬೆಂಗಳೂರು ;- ಸಿದ್ದರಾಮಯ್ಯ ದಲಿತ ವಿರೋಧಿ ಸಿಎಂ ಎಂದು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಚೇರಿಗೆ ಮೊನ್ನೆ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದಾರೆ. 250 ಜನರ ನೇಮಕ ಆಗಿದೆ. ಒಬ್ಬರೂ ಅದರಲ್ಲಿ ದಲಿತರಿಲ್ಲ. ನೀವು ರಾಜೀನಾಮೆ ಕೊಟ್ಟು ಒಬ್ಬ ದಲಿತರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿ. ನಿಮ್ಮ ಹೆಸರು ಚರಿತ್ರೆಯಲ್ಲಿ ಉಳಿಯುತ್ತದೆ. ರಾಜ್ಯದ ಕಾಂಗ್ರೆಸ್ ನಾಯಕರಾದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರರಿಗೋ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೋ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದರು. ಈ ಹಿಂದೆ ಮತ್ತೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ಮತ್ತೆ ಸ್ಪರ್ಧಿಸಿದರು. ಈ ಹಿಂದೆ ಮೊಯ್ಲಿಅವರ ಅವಧಿಯಲ್ಲಿ ಬಸವಲಿಂಗಪ್ಪ ಅವರನ್ನ ಮಂತ್ರಿ ಕೂಡ ಮಾಡಲಿಲ್ಲ. ಬ್ರೈನ್ ಹ್ಯಾಮೆರೆಜ್ ಹಾಗಿ ಹೋಗಿಬಿಟ್ಟರು. ದಲಿತರ ಉದ್ಧಾರಕ್ಕಾಗಿ ಇಟ್ಟಿರುವ ಹಣ ಅವರಿಗೇ ನೀಡಬೇಕು. ವರುಣಾ ಕ್ಷೇತ್ರದ ಜನರನ್ನೇ ಸಿದ್ದರಾಮಯ್ಯ ಕಚೇರಿಗೆ ಔಟ್ ಸೋರ್ಸ್ ನಲ್ಲಿ ಕೆಲಸಕ್ಕೆ ತಗೊಂಡಿದಾರೆ. ಆದರೆ ಅದರಲ್ಲಿ ಇಬ್ಬರೂ ಎಸ್ ಸಿಗಳು…
ಬೆಂಗಳೂರು ;- ರಾಜಕಾಲುವೆಗಳ ತೆರವಿಗೆ ಸಮಗ್ರ ನೀತಿ ಜಾರಿ ಮಾಡದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೇ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ಒತ್ತವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈವರೆಗೂ ಕೈಗೊಂಡಿರುವ ಕ್ರಮಗಳು ಕೇವಲ ಭಾಗಶಃ ಆಗಿವೆ. ಆದರೆ, ಸಮಗ್ರ ಯೋಜನೆಯನ್ನು ರೂಪಿಸಿಲ್ಲ ಎಂದು ಪೀಠ ತಿಳಿಸಿದೆ. ಪಾಲಿಕೆ ಅಧಿಕಾರಿಗಳು ನಿರೀಕ್ಷೆಯಂತೆ ಯಾವುದೇ ಸಮಗ್ರ ಯೋಜನೆಯನ್ನು ಜಾರಿ ಮಾಡಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಬೆಂಗಳೂರು;- ನಗರಕ್ಕೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ. ಬ್ರ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆಗುರುತಾಗಲಿದೆ. ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ ಸಂಸ್ಥೆ ಜೊತೆ ಕೈಜೋಡಿಸುತ್ತಿದ್ದೇವೆ. ಈ ಸಂಸ್ಥೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳ…
ಬೆಂಗಳೂರು ;- ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಲಿತೋದ್ಧಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು. ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ. ಅಗ್ನಿವೀರರಾಗಲು ಎಸ್ಸಿ, ಎಸ್‍ಟಿ ಯುವಕರಿಗೆ ತರಬೇತಿಯನ್ನು ರದ್ದು…
ಬೆಂಗಳೂರು ;- ಆಗಸ್ಟ್ 1ರಿಂದ ಹೊಟೇಲ್ ತಿಂಡಿ, ಕಾಫಿ, ಚಹಾಗಳ ಬೆಲೆಯಲ್ಲಿ ಏರಿಕೆ ಆಗಲಿದೆ ಎಂದು ಬೆಂಗಳೂರು ಹೊಟೇಲ್‌ಗಳ ಸಂಘ ತಿಳಿಸಿದೆ. ಆಗಸ್ಟ್ 1ರಿಂದ ಹಾಲಿನ ದರವು ಹಚ್ಚಾಗಲಿದೆ. ಹೀಗಾಗಿ ಕಾಫಿ ಹಾಗೂ ಚಹಾ ಬೆಲೆ 2 ರಿಂದ 3 ರೂಪಾಯಿ ಹೆಚ್ಚಳವಾಗಲಿದೆ. ತಿಂಡಿಗಳ ದರ 5 ರೂ. ಹಾಗೂ ಊಟಕ್ಕೆ 10 ರೂ ಹೆಚ್ಚಳವಾಗಲಿದೆ. ಈ ಬಗ್ಗೆ ನಾಳೆ ಅಂದ್ರೆ ಮಂಗಳವಾರ ನಡೆಯುವ ಸಂಘದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತೆ ಅಂಥ ಸಂಘದ ಕಾರ್ಯದರ್ಶಿ ವಿರೇಂದ್ರ ಕಾಮತ್ ಹೇಳಿದ್ದಾರೆ. ಇತ್ತ ಈಗಾಗಲೇ ಕೆಲ ಹೊಟೇಲ್‌ಗಳಲ್ಲಿ ದರಗಳನ್ನ ಹೆಚ್ಚಿಸಲಾಗಿದೆ. ಅಧಿಕೃತವಾಗಿ ಆಗಸ್ಟ್ 1ರಿಂದ ದರಗಳಲ್ಲಿ ಹೆಚ್ಚಳವಾಗಲಿದೆ ಅಂತ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.
ಮಂಡ್ಯ: ಕೊನೆಗೂ ಮಂಡ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಮನ್ಮುಲ್ ಹೈಡ್ರಾಮಾಕ್ಕೆ(Manmul Hydrama) ತೆರೆಬಿದಿದೆ. ಅಧ್ಯಕ್ಷ ಸ್ಥಾನವನ್ನು ತನ್ನ ತೆಕ್ಕೆಗೆ ತಗೋಳ್ಳೋದ್ರಲ್ಲಿ ಕಾಂಗ್ರೆಸ್ ಸಕ್ಸಸ್ ಆಗಿದ್ದು, ರಾಜ್ಯ ಮಟ್ಟದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ(BJP JDS Alignment) ಆಗ್ತಿದ್ರೆ, ಮನ್ ಮುಲ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಕಾಂಗ್ರೆಸ್ ಗೆ ಸಪೋರ್ಟ್ ಮಾಡೋ ಮೂಲಕ ಠಕ್ಕರ್ ಕೊಟ್ರು. ಒಂದೆಡೆ ಜೆಡಿಎಸ್ ಇಬ್ಬರು ಸದಸ್ಯರನ್ನ ಅನರ್ಹಗೊಳಿಸಿದ್ದಕ್ಕೆ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ರು. ಈ ಕುರಿತು ಒಂದು ಕಂಪ್ಲೀಟ್ ರಿಪೋಟ್ ಇಲ್ಲಿದೆ ನೋಡಿ. ಹೌದು ಇಂದು ನಡೆದ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡೀತು. ಜೆಡಿಎಸ್ 6, ಕಾಂಗ್ರೆಸ್ 2, ಬಿಜೆಪಿ 2, ಒಬ್ಬರು ನಾಮಿನಿ ನಿರ್ದೇಶಕರು ಹಾಗೂ ನಾಲ್ವರೈ ಅಧಿಕಾರಿಗಳು ಸೇರಿ ಒಟ್ಟು 17 ಮತಗಳಿರುವ ಮನ್ ಮುಲ್ ಆಡಳಿತ ಮಂಡಳಿಯಲ್ಲಿ ಕೇವಲ 4 ಚುನಾಯಿತ ಸದಸ್ಯರಿರುವ ಕಾಂಗ್ರೆಸ್ ಅಧಿಕಾರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಯ್ತು. ಕಾಂಗ್ರೆಸ್ ನ…
ಚಿತ್ರದುರ್ಗ : ಜು.24ಇಂದು ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಯಶಸ್ವಿಗೊಳಿಸಲು ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಹಕಾರ ನೀಡಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿ ಮಾಡಿದರು. ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಚಿತ್ರದುರ್ಗ ಜಿಲ್ಲಾ ನೂತನ ಉಸ್ತುವಾರಿ ಮಂತ್ರಿಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭ ಹಾಗೂ 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ನೀಡಿದ ಭರವಸೆಯಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಯೋಜನೆಗಳ ಯಶಸ್ವಿಗೆ ಸರ್ಕಾರಿ ನೌಕರರು ಹೆಚ್ಚಿನ ಸಹಕಾರ ನೀಡಬೇಕು ಎಂದರು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ್ಕೆ ಮಾತ್ರ…