ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರ್ಷಧಾರೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ಒಂದು ದಿನದ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಆರೆಂಜ್ ಅಲರ್ಟ್ ಆಗಿ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ.ಶಿವಮೊಗ್ಗ ಜಿಲ್ಲೆಯನ್ನು ಆರಂಜ್ ಅಲರ್ಟ್ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಜಿಲ್ಲೆಯಲ್ಲಿ ಗಾಳಿ ಮಳೆಗೆ ರಸ್ತೆ ಬದಿಯ ಮರಗಳು ವಿದ್ಯುತ್ ಕಂಬಗಳು ಕುಸಿದಿದ್ದು ವಿದ್ಯುತ್ ವ್ಯತ್ಯಯ ಗೊಂಡಿದೆ.ಶಿವಮೊಗ್ಗ ನಗರದಲ್ಲಿ ಸುರಿಯುತ್ತಿದ್ದ ಮಳೆ ಕೊಂಚ ಬಿಡುವು ನೀಡಿದೆ. ಆದರೆ ತೀರ್ಥಹಳ್ಳಿ ಆಗುಂಬೆ ಮಾಸ್ತಿಕಟ್ಟೆ ಹುಲಿಕಲ್ ಯಡೂರ್ ಮಾಣಿ ಪಾತ್ರದಲ್ಲಿ 170 ಮಿಲಿಮೀಟರ್ ಗೂ ಅಧಿಕ ಮಳೆಯಾಗುತ್ತಿದ್ದು. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸೂಚನೆಯನ್ನು ಹನಾಮನ ಇಲಾಖೆ ನೀಡಿದೆ. .ಲಿಂಗನಮಕ್ಕಿ ಜಲಾಶಯಕ್ಕೆ,ಈ ವರ್ಷ ದಾಖಲೆ ಪ್ರಮಾಣದಲ್ಲಿ…
Author: Prajatv Kannada
ಬಾಗಲಕೋಟೆ: “ಅವನೊಬ್ಬ ಯಾವುದೋ ಒಂದು ಸಭೆಯಲ್ಲಿ ಹೇಳಿದ್ದಾನೆ. ಅದನ್ನು ನೋಡಿ ನೋಡಿ ಸಾಕಾಗಿದೆ. ನೂರು ಜನ ಎಂಎಲ್ಎ ಗಳು ಹೇಳಿದ್ದಾರಾ?`” -ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಅಸಮಾಧಾನ ಸ್ಪೋಟ ವಿಚಾರವಾಗಿ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪೂರ ಅವರ ಪ್ರತಿಕ್ರಿಯೆ. ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ರರಿಸಿದ ಅವರು, ಅವರ (ಹರಿಪ್ರಸಾದ್) ಶಕ್ತಿ ನಮಗೆ ಗೊತ್ತಿಲ್ಲ.ಎಂ.ಎಲ್.ಎಗಳು, ಹೈಕಮಾಂಡ್ ಹೇಳಿದ್ರೆ ಅದು ಒಂದು ಶಕ್ತಿ ಅಂತೀವಿ. ಎಂ.ಎಲ್.ಎ ಗಳೆಲ್ಲ ಸಿದ್ದರಾಮಯ್ಯ ಗೆ ಸಪೋರ್ಟ್ ಇದ್ದೀವಿ, ನಮ್ಮ ಹೈ ಕಮಾಂಡ್ ಸ್ಟ್ರಾಂಗ್ ಇದೆ ಎಂದು ಹೇಳಿದರು.ಹರಿಪ್ರಸಾದ್ ಹೇಳಿಕೆಯಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಎರಡು ಗುಂಪಾಗುತ್ತಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲವೂ ಭ್ರಮೆ, ಸುಳ್ಳು. ಸುಮ್ಮನೆ ತವಡು ಕುಟ್ತಿದ್ದಾರೆ. ಎಲ್ಲೋ ಒಂದು ಕಡೆ ಕ್ರಿಯೆಟ್ ಮಾಡಲು ಗುದ್ದಾಡ್ತಿದ್ದಾರೆ. ಬಿಜೆಪಿ ಯವರು.ಆದ್ರೆ ಏನೂ ಆಗ.ಲ್ಲ. ಸುಮ್ಮನ್ನೇ ಗಾಳಿಗೆ ಗುದ್ದಿ ಕೈ ನೋವು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಕಂಪ್ಲಿ: ಕಂಪ್ಲಿ ತಾಲೂಕಿನ ಅಂಚೆ ಕಚೇರಿಯಲ್ಲಿ ಮಹಿಳೆಯರು ಸಂಬಳಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂಚೆ ಕಚೇರಿಗೆ ಬೆಳಿಗ್ಗೆ 6:00ಗೆ ವೃದ್ದರು ಬಂದು ಸರತಿ ಸಾಲಿನಲ್ಲಿ ನಿಂತಿದ್ದಾರೆ, ಸಮಯ 11ಗಂಟೆ ಆದರೂ ಮಹಿಳೆಯರಿಗೆ ಸಂಬಳ ಸಿಗದೆ ಬೆಳಗಿನ ತಿಂಡಿಯನ್ನು ತಿನ್ನದೆ ಕೂರಲು ಸ್ಥಳವಿಲ್ಲದೆ ಬಳಲಿದ್ದಾರೆ. ಇಂದು ಅಂಚೆ ಕಚೇರಿ ಆವರಣದಲ್ಲಿ 120ಕ್ಕೂ ಹೆಚ್ಚು ಮಹಿಳೆಯರು ಕ್ಯೂ ನಲ್ಲಿ ನಿಂತಿದ್ದ ದೃಶ್ಯ ಕಂಡುಬಂತು, ವಯೋವೃದ್ಧರಿಗೆ ಬಿಪಿ ಶುಗರ್ ಸರ್ವೇ ಸಾಮಾನ್ಯವಾಗಿದ್ದು, ಹೆಚ್ಚು ಹೊತ್ತು ಸರತಿ ಸಾಲಿನಲ್ಲಿ ನಿಲ್ಲಲು ಅವರು ಅಶಕ್ತರಾಗಿರುತ್ತಾರೆ. ಈ ಬಗ್ಗೆ ಅಂಚೆ ಕಚೇರಿಯ ಅಧಿಕಾರಿಗಳೂ ಸಹ ಕ್ಯಾರೇ ಅನ್ನದೆ ನಿರ್ಲಕ್ಷ ತೋರುತ್ತಿದ್ದಾರೆ. ಪ್ರತಿ ತಿಂಗಳು ( ಮಹಿಳೆಯರು ಮತ್ತು ಪುರುಷ ) ವೃದ್ಧರು, ಅಂಚೆ ಕಚೇರಿಗೆ ಸಂಬಳ ಪಡೆಯುವುದಕ್ಕೆ ಬಂದರೆ ಅಂಚೆ ಅಧಿಕಾರಿಗಳ ತಿರಸ್ಕಾರಕ್ಕೆ ಈಡಾಗ್ತಾರೆ. 60 ವರ್ಷದ ವೃದ್ಧರಿಗೆ ಪೋಸ್ಟ್ ಮ್ಯಾನ್ ಗಳು ಪ್ರತಿ ತಿಂಗಳ ವೃದ್ದಾಪ್ಯ ವೇತನವನ್ನು ಮನೆಗೆ ಹೋಗಿ ತಲುಪಿಸುತ್ತಿಲ್ಲ. ಈ ಬಗ್ಗೆ ವೃದ್ಧರು ಪೋಸ್ಟ್ ಮ್ಯಾನ್ ಗಳಿಗೆ …
ನವದೆಹಲಿ ;- ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಜುಲೈ 22 ರಿಂದ ಅರ್ಜಿಗಳು ಪ್ರಾರಂಭವಾಗಿವೆ. 820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷಿಯನ್, 64 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (ಜಿಡಿಸಿಇ) ಕೋಟಾದಡಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 42 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯ ಅಂತಿಮ ಆಯ್ಕೆ ದಾಖಲೆ ಪರಿಶೀಲನೆಯ ನಂತರ ನಡೆಯಲಿದೆ.
ನವದೆಹಲಿ: ಜ್ಞಾನವ್ಯಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸುತ್ತಿರುವ ಸರ್ವೆ ಕಾರ್ಯಕ್ಕೆ ಬುಧವಾರ ಸಂಜೆವರೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶದ ವಿರುದ್ಧ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿದೆ. ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ತಾತ್ಕಾಲಿಕ ತಡೆ ನೀಡಿದೆ. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ. ಜಿಲ್ಲಾ ನ್ಯಾಯಾಲಯವು ಶುಕ್ರವಾರ ಸಂಜೆ 4:30 ರಂದು ಉತ್ಖನನಕ್ಕೆ ಅನುಮತಿ ನೀಡಿದೆ. ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಎಎಸ್‍ಐ ಸಮೀಕ್ಷಾ ತಂಡ ಸ್ಥಳಕ್ಕೆ ತಲುಪಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಕನಿಷ್ಠ ಒಂದು ವಾರದವರೆಗೆ ಸ್ಥಳದಲ್ಲಿ ಯಾವುದೇ ಉತ್ಖನನಗಳು ನಡೆಯುವುದಿಲ್ಲ. ಪ್ರಸ್ತುತ ಅಳತೆ ಪಡೆಯುವುದು, ಫೋಟೋ ತೆಗೆಯುವುದು ನಡೆಯುತ್ತಿದೆ. ಎಎಸ್‍ಐನ ಹೇಳಿಕೆಯಿಂದ ಯಾವುದೇ ಉತ್ಖನನವನ್ನು ನಡೆಸುತ್ತಿಲ್ಲ ಎಂದು ತೋರುತ್ತದೆ. ಮುಂದಿನ ಸೋಮವಾರದವರೆಗೆ ಮಸೀದಿ…
ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ರೀಲ್ಸ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.
ಮಡಿಕೇರಿ : ಕೊಡಗಿನಲ್ಲಿ ವರುಣಾರ್ಭಟ(Heavy Rain In Kodagu) ತೀವ್ರಗೊಂಡಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆರಿಯ ಪರಂಬು, ಕಲ್ಲುಮೊಟ್ಟೆ ಗ್ರಾಮಕ್ಕೆ ಜಲದಿಗ್ಬಂಧನ ಹಾಕಿದ್ದು, 70 ಕ್ಕೂ ಅಧಿಕ ಕುಟುಂಬಗಳು ನೆರೆಯಲ್ಲಿ ಸಿಲುಕಿಕೊಂಡಿವೆ. ಪರಿಸ್ಥಿತಿ ಹೀಗಿದ್ದರೂ ಜಿಲ್ಲಾಡಳಿತವು ದೋಣಿಗಳ ವ್ಯವಸ್ಥೆ ಕಲ್ಪಿಸಿಲ್ಲ. ಕನಿಷ್ಟ ರಕ್ಷಣಾ ಸಿಬ್ಬಂದಿಯನ್ನೂ ನೇಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದೆ. ಶಿಥಿಲಾವಸ್ಥೆಯ ತೆಪ್ಪದಲ್ಲೇ ಪ್ರವಾಹ ದಾಟಲು ಗ್ರಾಮಸ್ಥರು ಸಾಹಸ ಮಾಡುತ್ತಿದ್ದಾರೆ. ಸಾಹಸಿ ಯುವಕರು ಫ್ಲಾಸ್ಟಿಕ್ ಬುಟ್ಟಿ, ಮರದ ದೊಣ್ಣೆ ಸಹಾಯದಿಂದ ಗ್ರಾಮಸ್ಥರನ್ನು ಪ್ರವಾಹ ದಾಟಿಸುತ್ತಿದ್ದಾರೆ.
ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಘಟನೆಗಳು ಬಂದ್ ಗೆ ಕರೆನೀಡಿದ ಬೆನ್ನಲ್ಲೇ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈಗಾಗಲೇ ಜುಲೈ27 ರಂದು ಆಟೋ ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರು ರಾಜ್ಯಾದ್ಯಂತ ಬೃಹತ್ ಪ್ರಮಾಣದಲ್ಲಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಒಂದು ವೇಳೆ ಮುಷ್ಕರ ಹಮ್ಮಿಕೊಂಡಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಇದನ್ನರಿತ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಇಂದು ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಮತ್ತು ಖಾಸಗಿ ಬಸ್ ಮಾಲೀಕರ ಜತೆ ಸಭೆ ಮಾಡಲು ತೀರ್ಮಾನಿಸಿದ್ದಾರೆ. ಬೆಂಗಳೂರಿನ ಸಾರಿಗೆ ಇಲಾಖೆ ಕೇಂದ್ರ ಕಚೇರಿ ಶಾಂತಿನಗರದಲ್ಲಿ ಸಭೆ ಮಾಡುತ್ತಿದ್ದು, ಮುಷ್ಕರ ಕರೆಕೊಟ್ಟ ಮಾಲೀಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗೆ ಅಪಾರ ನಷ್ಟ ಉಂಟಾಗಿದೆ, ಇದರಿಂದಾಗಿ ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿರುವ ಖಾಸಗಿ ಸಂಘಟನೆಗಳು ಇದೇ ಜು. 27ರಂದು ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಘಗಳು…
ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಬಹುತೇಕ ಡಿಸೆಂಬರ್‌ನಿಂದ ಜಾರಿಯಾಗಲಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಚುನಾವಣೆ ಪ್ರಣಾಳಿಕೆಯಲ್ಲಿ ಐದನೇ ಗ್ಯಾರಂಟಿಯಾಗಿ ‘ಯುವನಿಧಿ’ ಘೋಷಿಸಲಾಗಿತ್ತು. ಅದರಂತೆ 202 – 223ರಲ್ಲಿ ಪದವೀದರರಾಗಿ ಹೊರಬಂದು ನಿರುದ್ಯೋಗಿಗಳಾದಲ್ಲಿ ಅವರಿಗೆ ಮೂರು ಸಾವಿರ ಭತ್ಯೆ, ಡಿಪ್ಲಮೋ ಪದವೀಧರರಿಗೆ ಒಂದೂವರೆ ಸಾವಿರ ರುಪಾಯಿ ಭತ್ಯೆ ನೀಡುವ ಯೋಜನೆಯನ್ನು ಘೋಷಿಸಿದ್ದೇವೆ. ಈ ಯೋಜನೆ ನಿರುದ್ಯೋಗಿಗಳಿಗೆ ಆಶಾದಾಯಕವಾಗಲಿದೆ. ಬಹುತೇಕ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಜೊತೆಗೆ ಕೌಶಲ್ಯ ಇಲಾಖೆಯಿಂದ ತರಬೇತಿ ನೀಡುವ ಕೆಲಸವನ್ನು ಮಾಡಲಾಗುವುದು ಎಂದರು. ಶೀಘ್ರವೇ ಕೈಗಾರಿಕೋದ್ಯಮಿಗಳ ಜೊತೆ ಸಭೆ ನಡೆಸಿ ಉದ್ಯಮಗಳಲ್ಲಿ ಪ್ರಸ್ತುತ ಮಾರುಕಟ್ಟೆಯ ಕಾಲಕ್ಕನುಗುಣವಾಗಿ ಯಾವ ರೀತಿ ಉದ್ಯೋಗಿಗಳು ಬೇಕಾಗುತ್ತಾರೆ ಎಂಬುದನ್ನು ತಿಳಿಯಲಾಗುವುದು. ಅದಕ್ಕೆ ಅನುಗುಣವಾದ ಪಠ್ಯವನ್ನು ಕಾಲೇಜು ಶಿಕ್ಷಣದಲ್ಲಿ ಅಳವಡಿಸಿ ಬೋಧನೆ ಮಾಡಲಾಗುವುದು. ಇದರಿಂದ ನಿರುದ್ಯೋಗವೂ ನಿಯಂತ್ರಣವಾಗಲಿದೆ,…
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಹೋಯ್ತು ಎನ್ನುವಷ್ಟರಲ್ಲಿ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸಿಎಂ ಸಿದ್ದು ವಿರುದ್ದ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಕೂಡ ಉಂಟಾಗಿತ್ತು. ಈ ನಡುವೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಎಂ ಸಿದ್ದು ವಿರುದ್ಧ ಬಿ ಕೆ ಹರಿಪ್ರಸಾದ್ ಅಸಮದಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಿ ಕೆ ಪರಿಪ್ರಸಾದ್ ಪರ ಬ್ಯಾಟ್ ಬೀಸಿದ್ದಾರೆ. ಅದು ಬೆಂಗಳೂರು ವರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪುಮಾ ರೋಟೋ ಜಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದವರು ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಇಲ್ಲ ಯಾವುದು ಇಲ್ಲ ಬಿಕೆ ಹರಿಪ್ರಸಾದ್ ಜನರಲ್ಲಾಗಿ ಮಾತಾಡಿದಾರೆ ಅಷ್ಟೆ. ಹಿಂದೆ 20 ವರ್ಷ ಎಐಸಿಸಿ ಕಾರ್ಯದರ್ಶಿ ಆಗಿದ್ರು, ಆಗಬೇರೆ ಬೇರೆ ರಾಜ್ಯಗಳಿಗೆ ಹೋಗ್ತಾ ಇದ್ರಲ್ಲ. ಆ ವಿಚಾರವನ್ನ ಹೇಳಿದ್ದಾರೆ ಅಷ್ಟೆ. ಅದು ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಅಲ್ಲ.ನಾನು ಪತ್ರಿಕೆಗಳಲ್ಲಿ ನೋಡಿದ್ದೇನೆ. ಅವರ ಬಳಿ ಕೇಳಿ ತಿಳಿದುಕೊಳ್ಳುತ್ತೆನೆ. ಅವ್ರು ಪಕ್ಷದ ನಿಷ್ಠಾವಂತ…