ಹೊಸಕೋಟೆ: ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಎಂಟಿಬಿ ನಾಗರಾಜ್ ಮತ್ತೆ ಹೊಗಳಿದ್ದಾರೆ. ಹೊಸಕೋಟೆಯಲ್ಲಿ ಆಯೋಜಿಸಿದ್ದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಸಚಿವ ಸಂಪುಟ ನಡೆಸದೆಯೇ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದರು. ಅಲ್ಲಾ ಕ್ಷಮಿಸಲ್ಲ: ಕ್ಷೇತ್ರಕ್ಕೆ ಬಂದಾಗಿನಿಂದ ನಾನು ಸರ್ವಧರ್ಮದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಪ್ರಮುಖವಾಗಿ ಅಲ್ಪಸಂಖ್ಯಾತರ ಗ್ರಾಮಗಳಾದ ಕಟ್ಟಿಗೇನಹಳ್ಳಿ, ಬೈಲನರಸಾಪುರ, ಹಿಂಡಿಗನಾಳ, ಮೇಡಿ ಮಲ್ಲಸಂದ್ರ ಗ್ರಾಮಗಳಲ್ಲಿ ಶೇ. 10ರಷ್ಟುಮತ ಹಾಕಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಮ್ಮ ಬಳಿ ಹಣ, ಉಡುಗೊರೆ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಕುರಾನ್, ಅಲ್ಲಾ ಮೇಲೆ ಪ್ರಮಾಣ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೀರಿ. ಮೂರು ಬಾರಿ ಪ್ರಾರ್ಥನೆ ಮಾಡುವ ನಿಮ್ಮನ್ನು ಅಲ್ಲಾ ಎಂದಿಗೂ ಕ್ಷಮಿಸಲ್ಲ ಎಂದು ಅಲ್ಪಸಂಖ್ಯಾತರ ವಿರುದ್ಧ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದರು.
Author: Prajatv Kannada
ವಿಧಾನ ಸಭೆ, ವಿಧಾನ ಪರಿಷತ್ ಮಾದರಿಯಲ್ಲಿ ಗದಗ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಗದಗ ಜನತಾ ಸದನ ಹೆಸರಿನ ಏರ್ಪಡಿಸಲಾಗಿತ್ತು. ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಪರಿಕಲ್ಪನೆಯ ಜನತಾ ಸದನಕ್ಕೆ ಮಾಜಿ ಸಚಿವ ಸಿಸಿ ಪಾಟೀಲ ಚಾಲನೆ ನೀಡಿದ್ರು. ಗದಗ ನಗರದ ಗಾಣಿಗ ಭವನದಲ್ಲಿ ಸಂಸತ್ ಹೋಲುವ ಆಸನ ವ್ಯವಸ್ಥೆ ಮಾಡಲಾಗಿದ್ದು, ವಿರೋಧ ಪಕ್ಷದ ಸಾಲಿನಲ್ಲಿ ಮತ ಕ್ಷೇತ್ರದ ಹಿರಿಯರು, ಚಿಂತಕರನ್ನ ಕೂರಿಸಲಾಗಿತ್ತು.. ಆಡಳಿತ ಪಕ್ಷದ ಸಾಲಿನಲ್ಲಿ ಬಹುತೇಕ ಬಿಜೆಪಿ ಮುಖಂಡರು ಇದ್ದರು. ಸಭಾಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಕಾರ್ಯನಿರ್ವಹಿಸಿದ್ದು, ತಿಂಗಳ ನಾಲ್ಕನೆ ಶನಿವಾರ ಹಾಗೂ ಭಾನುವಾರ ಮತ ಕ್ಷೇತ್ರದ ವ್ಯಾಪ್ತಿಯ ಸಮಸ್ಯೆಗಳನ್ನ ಸದನದಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ..
ಮೈಸೂರು: ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಕರ್ನಾಟಕ ರಾಜ್ಯ ಗೆದ್ದು ಬೀಗಿದ ಕಾಂಗ್ರೆಸ್ ಪಕ್ಷ ಈಗ ಲೋಕಸಭೆ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋತೇ ಸೋಲುತ್ತಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೆಲ್ಲುವುದಕ್ಕಾಗಿ ರಾಜ್ಯದಲ್ಲಿ ಉಚಿತ ಯೋಜನೆಗಳನ್ನು ನೀಡಿದಂತೆ ಕೇಂದ್ರದಲ್ಲಿ ರಸಗೊಬ್ಬರ, ಪೆಟ್ರೋಲ್- ಡೀಸೆಲ್ ಹಾಗೂ ಗ್ಯಾಸ್ ಬೆಲೆ ಇಳಿಸುವ ಭರವಸೆ ನೀಡಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿ 20 ಲೋಕಸಭಾ ಸ್ಥಾನ ಗೆಲ್ಲುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿಯರಿಗೆ 2000 ರೂ ಉಚಿತ, 200 ಯುನೀಟ್ ವಿದ್ಯುತ್ ಫ್ರೀ , ಯುವಕರಿಗೆ ನಿರುದ್ಯೋಗಿ ಭತ್ಯೆ, ೧೦ ಕೆಜಿ ಅಕ್ಕಿ …..ಹೀಗೆ ಹಲವು ಗ್ಯಾರಂಟಿಗಳನ್ನು ನೀಡಿ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಗದ್ದುಗೆ ಏರಿದ ಕಾಂಗ್ರೆಸ್ ಪಕ್ಷ ಈಗ ಲೋಕಸಭೆ ಗೆಲ್ಲಲು ಇನ್ನಿಲ್ಲದಂತೆ ಪ್ಲಾನ್ ಮಾಡುತ್ತಿದೆ. ಲೋಕಸಭಾ ಚುನಾವಣೆಗೆ ಉಚಿತ ಯೋಜನೆ…
ಬೆಳಗಾವಿ : ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆ ವರೆಗೆ ಕನಿಷ್ಠ ಶುಲ್ಕ 90 ರೂಪಾಯಿ ಇತ್ತು. ಮತದಾನ ಮರುದಿನವೇ KERC ಕನಿಷ್ಠ ಶುಲ್ಕ 140 ರೂ.ಗೆ ಏರಿಕೆ ಮಾಡಲಾಗಿದೆ. ಕೆಇಆರ್‌ಸಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ತಕ್ಷಣವೇ ತಡೆ ನೀಡಬೇಕು. ಹೆಚ್ಚಳವಾಗಿರುವ ಶುಲ್ಕ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಾಲಕ್ಕೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನೇಕಾರ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು. 10 ಎಚ್‌ಪಿವರೆಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಬಳ್ಳಾರಿ: ಗಣಿನಾಡು ಬಳ್ಳಾರಿ (Bellary) ಯಲ್ಲಿ ಬಿಜೆಪಿ (BJP) ಧೂಳಿಪಟವಾಗಿ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಹಿಂದೆ ಇದ್ದ ಬಿಜೆಪಿ ನಾಯಕರು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದಾರೆ. ಆದರೆ ಅದೊಂದು ಕಟ್ಟಡ ಇಬ್ಬರು ಪ್ರತಿಷ್ಠೆಯಾಗಿ ತೆಗೆದುಕೊಂಡ ಹಾಗೆ ಕಾಣುತ್ತದೆ. ಹೌದು. ಬಳ್ಳಾರಿಯ ಕೇಂದ್ರ ಭಾಗದಲ್ಲಿ ಬಿರುವ ಗಡಗಿ ಚೆಣಪ್ಪಾ ವೃತ್ತದಲ್ಲಿ ಬರುವ ಹಳೆಯ ಕಟ್ಟಡವನ್ನು ಬಿಜೆಪಿ ಮುಖಂಡ ಶ್ರೀರಾಮುಲು (Sriramulu) ಭಾರೀ ವಿರೋಧದ ನಡುವೆಯೂ ರಾತ್ರೋರಾತ್ರಿ ಕೆಡವಿ, ನೂತನ ಕಟ್ಟಡ ಕಟ್ಟಲು ಮುಂದಾಗಿದ್ದರು. ಸಾಕಷ್ಟು ವಿರೋಧದ ನಡುವೆಯೂ ಆ ಕಟ್ಟಡವನ್ನು ಕೆಡವಿ, ಅಲ್ಲಿ ಐಕಾನಿಕ್ ಟವರ್ (Iconic Tower) ನಿರ್ಮಾಣ ಮಾಡಲು ಸುಮಾರು 6 ಕೋಟಿ ಹಣ ಖರ್ಚು ಮಾಡಿ, ಈ ಕಟ್ಟಡ ಕಟ್ಟಲು, ಮುಂದಾಗಿದ್ದರು. ಆದರೆ ಅಂದು ವಿರೋಧ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಅವರದೇ ಸರ್ಕಾರ ಬಂದಿದೆ. ಹೀಗಾಗಿ ನಡೆಯುತ್ತಿರುವ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಕಳೆದ 6 ತಿಂಗಳಿಂದ ನಡೆಯುತ್ತಿದ್ದ, ಈ ಕಾಮಗಾರಿಯನ್ನು ಈಗ ಏಕಾಏಕಿ ನಿಲ್ಲಿಸಲಾಗಿದೆ.…
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೇವು. ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ, ಜೆಡಿಎಸ್ ಸ್ನೇಹಿತರು ಟೀಕೆಗಳ ಸುರಿಮಳೆ ಸುರಿಸ್ತಿದ್ದಾರೆ. ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಮಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದೇವು. ಬಹಳ ಚರ್ಚೆ ಮಾಡಿಯೇ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ರಾಜ್ಯ ದಿವಾಳಿ ಆಗುತ್ತೆ ಅಂತಾ ಬಿಜೆಪಿಯವರು ಹೇಳುತ್ತಿದ್ದಾರೆ ಎಂದರು.
ಬೆಂಗಳೂರು: ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ಹರಿಪ್ರಸಾದ್, ಸಿಎಸ್ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕೆಸ ಎಂಡಿ ಅನ್ಬುಕುಮಾರ್, ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.
ಮೈಸೂರು : ಕುಡಿಯಲು ನಮಗೇ ನೀರಿಲ್ಲದಿರುವಾಗ ತಮಿಳುನಾಡಿಗೆ ಎಲ್ಲಿಂದ ಕೊಡುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ನಮಗೆ ಕುಡಿಯುವ ನೀರು, ನಮ್ಮ ಬೆಳೆಗಳಿಗೆ ನೀರು ಕೊಡುವುದು ಮುಖ್ಯ. ನಮಗೇ ನೀರಿಲ್ಲದಿದ್ದರೆ ತಮಿಳುನಾಡಿಗೆ ಕೊಡುವ ಪ್ರಶ್ನೆಯೇ ಇಲ್ಲ. ನಮಗೆ ನೀರಿಲ್ಲ. ನಮ್ಮ ಬೆಳೆಗಳಿಗೂ ನೀರಿಲ್ಲ. ಹಾಗಾಗಿ, ನೀರು ಬಿಡುವ ಮಾತಿಲ್ಲ. ಹಾಗಂತ ತಮಿಳುನಾಡಿಗೆ ನೀರು ಕೊಡಬಾರದು ಅಂತೇನು ಇಲ್ಲ. ಸದ್ಯಕ್ಕೆ ನಮ್ಮಲ್ಲಿ ನೀರು ಇಲ್ಲ ಎಂದರು. ಜನ ಕೇಳಿದರೆ ವರುಣ ತಾಲೂಕು ಮಾಡುತ್ತೇವೆ: ಜನ ಕೇಳಿದರೆ ಮಾತ್ರ ವರುಣವನ್ನು ತಾಲೂಕು ಕೇಂದ್ರವಾಗಿ ಮಾಡುತ್ತೇವೆ. ಬೊಮ್ಮಾಯಿ ಕೇಳಿದ್ದಕ್ಕೆಲ್ಲ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ವರುಣ ಕ್ಷೇತ್ರಕ್ಕೆ ಆಗಮಿಸಿದ ಅವರು ಸುತ್ತೂರು ಹ್ಯಾಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ವಿಧಾನ ಸಭಾ ಚುನಾವಣೆಯ ಪ್ರಚಾರದ ವೇಳೆ ನಂಜನಗೂಡಲ್ಲಿ ಮಾತನಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯನವರು ಇಷ್ಟುವರ್ಷ ವರುಣವನ್ನು ಪ್ರತಿನಿಧಿಸಿದ್ದಾರೆ. ಆದರೆ, ಈವರೆಗೂ ವರುಣವನ್ನು…
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಜವಾಬ್ದಾರಿಯುತವಾಗಿ ವಿಕೆಟ್ ಒಪ್ಪಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ದಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಡಬ್ಲ್ಯುಟಿಸಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಪ್ರಥಮ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 469 ರನ್‌ಗಳಿಗೆ ಆಲೌಟ್ ಆಗಿದ್ದರೆ, ಟೀಮ್ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. ಸದ್ಯ ಭಾರತ 318 ರನ್‌ಗಳ ಹಿನ್ನಡೆಯಲ್ಲಿದ್ದು, ಕೈಯಲ್ಲಿ ಕೇವಲ ಐದು ವಿಕೆಟ್‌ಗಳಿವೆ. ಈ ಟೆಸ್ಟ್ ಪಂದ್ಯದಲ್ಲಿ ಸೋಲಿನಿಂದ ತಪ್ಪಿಸಿಕೊಳ್ಳಬೇಕೆಂದರೆ ಭಾರತ ತಂಡದ ಆಟಗಾರರು ಅಸಾಧಾರಣ ಪ್ರದರ್ಶನ ತೋರಬೇಕಾದ ಅಗತ್ಯವಿದೆ. ಏಕೆಂದರೆ ಶುಭಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ ಅವರು ಪ್ರಥಮ ಇನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಮೂರನೇ ದಿನವಾದ ಶುಕ್ರವಾರ ಅಜಿಂಕ್ಯ ರಹಾನೆ (29*) ಅವರಿಂದ ದೊಡ್ಡ ಇನಿಂಗ್ಸ್…
ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಮಕ್ಕಳು ಹಾಗೂ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ನಟನೆಯ ಸಿನಿಮಾದ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ನಟಿ ಇದೀಗ ಜಯಂರವಿಗೆ ಜೋಡಿಯಾಗಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಜಯಂರವಿ ಇತ್ತೀಚಿಗೆ ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ಸಕ್ಸಸ್ ನಂತರ ಮತ್ತೊಂದು ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ‘ಇರೈವನ್’ ಎಂದು ಹೆಸರಿಡಲಾಗಿದ್ದು, ಈ ಸಿನಿಮಾದಲ್ಲಿ ನಟಿ ನಯನತಾರಾಗೆ ಜೋಡಿಯಾಗಿ ಜಯಂರವಿ ಬಣ್ಣ ಹಚ್ಚಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದ ಸಕ್ಸಸ್ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ತಮಿಳು ನಟ ಜಯಂರವಿಗೆ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್‌ಗೆ ನಟ ಜಯಂರವಿ ಓಕೆ ಎಂದಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ‘ಇರೈವನ್’ ಎಂಬ ಟೈಟಲ್‌ನಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾದಲ್ಲಿ ಜಯಂರವಿಗೆ ನಾಯಕಿಯಾಗಿ ನಯನತಾರಾ ಸಾಥ್ ನೀಡ್ತಿದ್ದಾರೆ. ಈ ಸಿನಿಮಾಗೆ ಐ.ಅಹಮದ್…